ಕರಾವಳಿ

ನೆಲ್ಯಾಡಿ: ಕೆಎಸ್ಸಾರ್ಟಿಸಿ – ಕಾರು ನಡುವೆ ಭೀಕರ ಅಪಘಾತ ? ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಡೆದಿದೆ. ಕೊಕ್ಕಡದ ಪಟ್ರಮೆ ನಿವಾಸಿಗಳಿದ್ದ ಆಲ್ಟೋ ಕಾರು ಹಾಗ ಬಸ್ ನಡುವೆ ಅಡ್ಡಹೊಳೆ ಎಂಬಲ್ಲಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ […]

ನೆಲ್ಯಾಡಿ: ಕೆಎಸ್ಸಾರ್ಟಿಸಿ – ಕಾರು ನಡುವೆ ಭೀಕರ ಅಪಘಾತ ? ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ “ಸಾಹಿತ್ಯ ರತ್ನ” ಪ್ರಶಸ್ತಿಗೆ ಸಮ್ಯಕ್ತ್ ಜೈನ್ ಆಯ್ಕೆ ➤ ಫೆ. 14ರಂದು ಸುಳ್ಯದಲ್ಲಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಫೆ. 13. ಫೆ. 14‌ರಂದು ಸುಳ್ಯದಲ್ಲಿ ನಡೆಯಲಿರುವ ‘ಕವಿ ಸಂಗಮ – ಕವಿ ಸಂಭ್ರಮ’ ಕಾರ್ಯಕ್ರಮದಲ್ಲಿ ನೀಡಲಿರುವ 2021 ನೇ ಸಾಲಿನ “ಸಾಹಿತ್ಯ ರತ್ನ” ರಾಜ್ಯ ಪ್ರಶಸ್ತಿಗೆ ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರು ಆಯ್ಕೆಗೊಂಡಿದ್ದಾರೆ. ಇದುವರೆಗೆ ಮೂರು ಕವನ ಸಂಕಲನವನ್ನು ಬರೆದು ಬಿಡುಗಡೆಗೊಳಿಸಿ ಸಾಹಿತ್ಯ ಲೋಕದಲ್ಲಿ ಮುಂದುವರೆಯುತ್ತಿರುವ ಇವರು ಈಗಾಗಲೇ ರಾಜ್ಯ, ಅಂತರ್ ರಾಜ್ಯಮಟ್ಟದ ಹಲವಾರು ಬಹುಮಾನಗಳಿಗೆ ಹಾಗು ಸನ್ಮಾನಗಳಿಗೆ ಭಾಜನರಾಗಿದ್ದು, ಪ್ರಸ್ತುತ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ನೆಲ್ಯಾಡಿ ಸಾಫಿಯೆನ್ಶಿಯಾ

ರಾಜ್ಯಮಟ್ಟದ “ಸಾಹಿತ್ಯ ರತ್ನ” ಪ್ರಶಸ್ತಿಗೆ ಸಮ್ಯಕ್ತ್ ಜೈನ್ ಆಯ್ಕೆ ➤ ಫೆ. 14ರಂದು ಸುಳ್ಯದಲ್ಲಿ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಕಡಬ: ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ ಹನೀಫ್ ಅವರ ಮೆಸೇಂಜರ್ ಹ್ಯಾಕ್ ➤ ಹಣ ಕಳುಹಿಸುವಂತೆ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 13. ಕಡಬ ಗ್ರಾ.ಪಂ ಮಾಜಿ ಅಧ್ಯಕ್ಷರಾಗಿರುವ ಹಾಜಿ ಕೆ.ಎಂ ಹನೀಫ್ ಅವರ ಮೆಸೇಂಜರ್ ಅನ್ನು ಹ್ಯಾಕ್ ಮಾಡಿ ಹಲವರಿಗೆ ಹಣ ಕಳುಹಿಸಿಕೊಡುವಂತೆ ಮೆಸೇಜ್ ರವಾನಿಸಲಾಗಿದ್ದು, ಇದರಿಂದ ಸಂಶಯಗೊಂಡ ಕೆಲವು ಗೆಳೆಯರು ಇದರ ನಿಜಾಂಶವನ್ನು ಅರಿಯಲು ಕೆ.ಎಂ ಹನೀಫ್ ಅವರನ್ನು ನೇರವಾಗಿ ಸಂಪರ್ಕಿಸಿದ್ದರು. ಇದರಿಂದ ಮೋಸದ ಕುತಂತ್ರವನ್ನು ತಿಳಿದ ಹನೀಫ್ ಅವರು ತಕ್ಷಣವೇ ಕಡಬ ಪೋಲೀಸರ ಗಮನಕ್ಕೆ ತಂದಿದ್ದು, ಜನರಲ್ಲಿ ಇಂತಹಾ ಮೋಸಜಾಲದ ಕುರಿತಾಗಿ ಎಚ್ಚರಿಕೆ ವಹಿಸುವಂತೆ ಕರೆ ನೀಡಿದ್ದಾರೆ.

ಕಡಬ: ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ ಹನೀಫ್ ಅವರ ಮೆಸೇಂಜರ್ ಹ್ಯಾಕ್ ➤ ಹಣ ಕಳುಹಿಸುವಂತೆ ಸಂದೇಶ ರವಾನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲುಗುಡ್ಡೆ: ಫೆ. 14 ಮತ್ತು 15 ರಂದು ಹುಲಿಚಾಮುಂಡಿ ಹಾಗು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಫೆ. 13.‌ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲಿನ ಹುಲಿಚಾಮುಂಡಿ ಹಾಗು ಪರಿವಾರ ದೈವ ದೈವಸ್ಥಾನದ ಭಕ್ತಾದಿಗಳ ಸಹಕಾರದಿಂದ ನವೀಕೃತಗೊಳ್ಳುತ್ತಿದ್ದು, ಇದೇ ಫೆ. 14 ಮತ್ತು 15 ರಂದು ದೈವಿಕ ವಿಧಿವಿಧಾನಗಳಿಂದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಪದ್ಮವಿಭೂಷಣ ರಾಜರ್ಷೀ ಡಾ। ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ಹಾಗು ಬ್ರಹ್ಮಶೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿದೆ. ಫೆ. 14 ರಂದು ಹಸಿರು ಹೊರೆ ಕಾಣಿಕೆ ಸಂಗ್ರಹಣೆಗಾಗಿ ವಾಹನದ ಸೌಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಕಲ್ಲುಗುಡ್ಡೆ: ಫೆ. 14 ಮತ್ತು 15 ರಂದು ಹುಲಿಚಾಮುಂಡಿ ಹಾಗು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಕರಾವಳಿ, ಕರ್ನಾಟಕ

ವಿಟ್ಲ: ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ‌ ➤ ಅಪಾರ ಪ್ರಮಾಣದ ಮರಗಳು ನಾಶ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 12. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ಮರಗಳು ಹೊತ್ತಿ ಉರಿದ ಘಟನೆ ವಿಟ್ಲ ಕನ್ಯಾನ ರಸ್ತೆಯ ಕಾನತ್ತಡ್ಕ ಎಂಬಲ್ಲಿ ನಡೆದಿದೆ. ಕನ್ಯಾನ ಎಂಬಲ್ಲಿನ ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ತಕ್ಷಣವೇ ಸ್ಥಳೀಯರು ಅಗ್ನಿಶಾಮಕದಳ ಹಾಗೂಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.‌ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಟ್ಲ: ರಕ್ಷಿತಾರಣ್ಯದಲ್ಲಿ ಬೆಂಕಿ ಅನಾಹುತ‌ ➤ ಅಪಾರ ಪ್ರಮಾಣದ ಮರಗಳು ನಾಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ನೆಲ್ಯಾಡಿ: ಕಾರು ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.12. ಮಹೀಂದ್ರಾ ಪಿಕಪ್ ಹಾಗೂ ಆಲ್ಟೋ‌ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಶುಕ್ರವಾರದಂದು ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯ ಸಣ್ಣಂಪಾಡಿ ಎಂಬಲ್ಲಿ ನಡೆದ ಅಪಘಾತದಲ್ಲಿ ಕಾರು ಚಾಲಕ ಗಡಿಯಾರ ಜುಮ್ಮಾ ಮಸೀದಿ ಖತೀಬರಾದ ಉಮರ್ ಫೈಝಿ ಎಂಬವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

? ನೆಲ್ಯಾಡಿ: ಕಾರು ಹಾಗೂ ಪಿಕಪ್ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?? ➤➤ Big Breaking News ಮರ್ಧಾಳ: ಟಿಪ್ಪರ್ ಹಾಗೂ ಮಹೀಂದ್ರಾ ಜೀತೋ ನಡುವೆ ಭೀಕರ ಅಪಘಾತ ➤ ಅರ್ಧತಾಸು ವಾಹನದೊಳಗೆ ಸಿಲುಕಿದ್ದ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಮರ್ಧಾಳ, ಫೆ. 12. ಟಿಪ್ಪರ್ ಹಾಗೂ ಕೋಳಿ ಸಾಗಾಟದ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾ.ಹೆದ್ದಾರಿಯ ಮರ್ಧಾಳದಲ್ಲಿ ಶುಕ್ರವಾರದಂದು ನಡೆದಿದೆ. ಕೋಳಿ ಸಾಗಾಟದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದು, ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘತಾದ ತೀವ್ರತೆಗೆ ಕೋಳಿ ಸಾಗಾಟದ ವಾಹನವು ಜಖಂ ಗೊಂಡಿದ್ದು, ಅರ್ಧತಾಸಿಗಿಂತಲೂ ಹೆಚ್ಚು ಸಮಯ ವಾಹನದೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಊರವರು ಹರಸಾಹಸಪಟ್ಟರು. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ

?? ➤➤ Big Breaking News ಮರ್ಧಾಳ: ಟಿಪ್ಪರ್ ಹಾಗೂ ಮಹೀಂದ್ರಾ ಜೀತೋ ನಡುವೆ ಭೀಕರ ಅಪಘಾತ ➤ ಅರ್ಧತಾಸು ವಾಹನದೊಳಗೆ ಸಿಲುಕಿದ್ದ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು: ಬೈಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 12. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಕಾಪುವಿನಲ್ಲಿ ನಡೆದಿದೆ. ಕಾಪು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಬೈಕ್‍ ಗೆ, ಕೇರಳದಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಟೂರಿಸ್ಟ್ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟೆಂಪೋ ಕಂದಕಕ್ಕೆ ವಾಲಿ ನಿಂತಿದ್ದು, ಘಟನಾ ಸ್ಥಳಕ್ಕೆ ಕಾಪು ಸಂಚಾರಿ

ಕಾಪು: ಬೈಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಟ್ರುಪಾಡಿ: ಗ್ರಾಮ ವಾಸ್ತವ್ಯದಲ್ಲಿ ಸಚಿವ ಎಸ್.ಅಂಗಾರ ಭಾಗಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 12. ಇಂದು ಕುಟ್ರುಪ್ಪಾಡಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವ ಎಸ್.ಅಂಗಾರ ಅವರು ಭಾಗಿಯಾದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ಉಪಸ್ಥಿತರಿದ್ದರು.  

ಕುಟ್ರುಪಾಡಿ: ಗ್ರಾಮ ವಾಸ್ತವ್ಯದಲ್ಲಿ ಸಚಿವ ಎಸ್.ಅಂಗಾರ ಭಾಗಿ Read More »

ಕರಾವಳಿ, ಕರ್ನಾಟಕ

ಕಡಬ: ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 12. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲಾಜೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಪೆರಾಜೆ ಗ್ರಾಮದ ಕುಂಬಳಚೇರಿಯ ಸಂಜಯ್ ಎಂದು ಗುರುತಿಸಲಾಗಿದೆ. ಇವರು ಪೆರಾಜೆಯಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತಿದ್ದ ಕಾರು ಕಲ್ಲಾಜೆ ಸೇತುವೆಯ ಬಳಿ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು

ಕಡಬ: ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top