ಕರಾವಳಿ

ಅರಂತೋಡು: ಸಯ್ಯದ್ ಪಾಣಕ್ಕಾಡ್ ತಂಙಳ್ ತೆಕ್ಕಿಲ್ ಪ್ರತಿಷ್ಠಾನಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 12. ಅರಂತೋಡು ತೆಕ್ಕಿಲ್ ಪ್ರತಿಷಾನದ ಅಧ್ಯಕ್ಷರೂ ಕೆಪಿಸಿಸಿ ಮಾಜಿ ಕಾರ್ಯದರ್ಶಿಯೂ ಆದ ಟಿ.ಎಮ್.ಶಹೀದ್ ತೆಕ್ಕಿಲ್ ಅವರ ನಿವಾಸಕ್ಕೆ ಕೇರಳ ರಾಜ್ಯ ಮುಸ್ಲಿಂ ಲೀಗ್ ಉಸ್ತುವಾರಿ ಸಮಿತಿ ಸದಸ್ಯರಾದ ಬಹು।ಪಾಣಕ್ಕಾಡ್ ಸಯ್ಯದ್ ಸಾದಿಕಾಲಿ ಶಿಹಾಬ್ ತಂಙಳ್ ಭೇಟಿ ನೀಡಿ ತೆಕ್ಕಿಲ್ ಪ್ರತಿಷ್ಠಾನದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅವರನ್ನು ಟಿ.ಎಮ್ .ಶಹೀದ್ ರವರು ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು।ಅಲ್ಹಾಜ್ ಇಸ್ಹಾಖ್ ಬಾಖವಿ, […]

ಅರಂತೋಡು: ಸಯ್ಯದ್ ಪಾಣಕ್ಕಾಡ್ ತಂಙಳ್ ತೆಕ್ಕಿಲ್ ಪ್ರತಿಷ್ಠಾನಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಕಂಬಳದಲ್ಲಿ ಶ್ರೀನಿವಾಸ ಗೌಡರ ದಾಖಲೆ ಮುರಿದ ಬೈಂದೂರಿನ ವಿಶ್ವನಾಥ್..! ➤ 9.15 ಸೆಕೆಂಡ್ ಗಳಲ್ಲಿ 100 ಮೀಟರ್ ಓಡಿ ದಾಖಲೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಕರಾವಳಿಯ ಜನಪದ ಕ್ರೀಡೆಯಾದ ಕಂಬಳದಲ್ಲಿ ಬೈಂದೂರಿನ ವಿಶ್ವನಾಥ್ ಎಂಬವರು ಓಡಿಸಿದ ಕೋಣಗಳು 9.15 ಸೆಕೆಂಡ್ ಗಳಲ್ಲಿ 100 ಮೀಟಲ್ ಓಡಿ ಹೊಸ ದಾಖಲೆ ಸೃಷ್ಟಿಸುವ ಮೂಲಕ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿಯನ್ನು ಹೊಂದಿದ್ದ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮುರಿದಿದ್ದಾರೆ. ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳ ಎಂಬಲ್ಲಿ ಏರ್ಪಡಿಸಲಾಗಿದ್ದ ಕಂಬಳದಲ್ಲಿ ಬೈಂದೂರಿನ‌ ವಿಶ್ವನಾಥ್ ದೇವಾಡಿಗ (23) ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಈ

ಕಂಬಳದಲ್ಲಿ ಶ್ರೀನಿವಾಸ ಗೌಡರ ದಾಖಲೆ ಮುರಿದ ಬೈಂದೂರಿನ ವಿಶ್ವನಾಥ್..! ➤ 9.15 ಸೆಕೆಂಡ್ ಗಳಲ್ಲಿ 100 ಮೀಟರ್ ಓಡಿ ದಾಖಲೆ ನಿರ್ಮಾಣ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಸಮರ್ಪಣಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 12. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪುಣ್ಯಸ್ಮರಣೆಯ ಅಂಗವಾಗಿ ಸಮಾರ್ಪಣಾ ದಿನವನ್ನು ಆಚರಿಸಲಾಯಿತು. ಇದರ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಲಳಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಶಿವಪ್ರಸಾದ್, ಮಾಧವ ಚಾಂತಾಳ ಮೊದಲಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ಸಮರ್ಪಣಾ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಕಡಬ: ದಂಪತಿಯ ಮೇಲೆ ದಾಳಿ‌ ಮಾಡಿ ಮರದ ಮೇಲೇರಿದ ಚಿರತೆ ? ಚಿರತೆಯ ಬಂಧನಕ್ಕೆ ಕಾರ್ಯಾಚರಣೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ದಂಪತಿಗೆ ದಾಳಿ ಮಾಡಿದ ಚಿರತೆಯು ಮರದ ಮೇಲೆ ಏರಿ ಕುಳಿತಿದ್ದು, ಚಿರತೆಯ ಬಂಧನಕ್ಕೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ‌. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂಬವರು ಶುಕ್ರವಾರ ಬೆಳಗಿನ ಜಾವ ತೋಟಕ್ಕೆ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿತ್ತು ತಕ್ಷಣವೇ ಇಬ್ಬರನ್ನೂ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಪಿಲಿಕುಲದ ನುರಿತ ಶೂಟರ್ ಡಾ| ಯಶಸ್, ಸುಳ್ಯ

ಕಡಬ: ದಂಪತಿಯ ಮೇಲೆ ದಾಳಿ‌ ಮಾಡಿ ಮರದ ಮೇಲೇರಿದ ಚಿರತೆ ? ಚಿರತೆಯ ಬಂಧನಕ್ಕೆ ಕಾರ್ಯಾಚರಣೆ ಆರಂಭ Read More »

ಕರಾವಳಿ

ಕಡಬ: 108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಕಡಬದ 108 ಅಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರದಂದು ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ ನಿವಾಸಿ ಲಲಿತಾ ಎಂಬಾಕೆ ಹೆರಿಗೆ ನೋವು ಬಂದ ಕಾರಣ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದರು. ತಿಂಗಳ ಮೊದಲೇ ಹೆರಿಗೆ ನೋವು ಬಂದ ಹಿನ್ನೆಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲು ವೈದ್ಯಾಧಿಕಾರಿ ಸೂಚಿಸಿದ್ದು, ಅದರಂತೆ ಕಡಬದ 108 ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿಗೆ ಕರೆದೊಯ್ಯವ ವೇಳೆ ಆಲಂಕಾರು ಸಮೀಪದ

ಕಡಬ: 108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯ ತುಳು ಲಿಪಿ ನಾಮಫಲಕ ಅನಾವರಣ

(ನ್ಯೂಸ್ ಕಡಬ) newskadaba.com ಬಾಳಿಲ, ಫೆ. 12. ತುಳುವನ್ನು 8 ನೇ ಪರಿಚ್ಛೇದಕ್ಕೆ ಸೇರಿಸಬೇಕು, ತುಳು ರಾಜ್ಯದ ಅಧಿಕೃತ ಭಾಷೆ ಆಗಬೇಕು ಇದು ಪ್ರತಿಯೊಬ್ಬ ತುಳುವನ ದೊಡ್ಡ ಕನಸು, ಅದಕ್ಕಾಗಿ ತುಳುವರು ಹೋರಾಡುತ್ತಿದ್ದಾರೆ. ಈ ನಡುವೆ ತುಳು ಲಿಪಿಯ ಬೆಳವಣಿಗೆಗೂ ದುಡಿಯುತ್ತಿದ್ದಾರೆ. ಪ್ರತಿಯೊಂದು ಊರಿನಲ್ಲಿಯೂ ತುಳು ಲಿಪಿ ಕಲಿಕಾ ತರಗತಿ ನಡೆಸುತ್ತಿದ್ದಾರೆ. ಅಲ್ಲಲ್ಲಿ ತುಳು ಲಿಪಿ ನಾಮ ಫಲಕ ಹಾಕುತ್ತಿದ್ದಾರೆ, ಇದಕ್ಕೆ ಬೆಂಬಲವಾಗಿ ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ತುಳು ಲಿಪಿಯ

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯ ತುಳು ಲಿಪಿ ನಾಮಫಲಕ ಅನಾವರಣ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಬಿಯರ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಲ್ಲುಗುಂಡಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ಬಿಯರ್ ಬಾಕ್ಸ್ ಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯು ಜೋಡುಪಾಲ ಎಂಬಲ್ಲಿ ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ವಿರುದ್ದ ಎಸ್ಡಿಪಿಐ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಫೆ. 12. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಜನವರಿ 31 ರಂದು ಬಿಜೆಪಿ ಪಕ್ಷದ ಬಹಿರಂಗ ಕಾರ್ಯಕ್ರಮವೊಂದರಲ್ಲಿ ಕೋಮುಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ಎಸ್‌ಡಿಪಿಐ ಪಕ್ಷದ ಮುಸ್ತಫಾ ಎಂಬುವವರು ಭಾಷಣ ವಿಡಿಯೋ ಸಿಡಿಯ ಲಗತ್ತಿಸಿದ ದಾಖಲೆಯೊಂದಿಗೆ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ತನ್ನ ಕಾರ್ಯಕರ್ತರಲ್ಲಿ ಗೋವನ್ನು ಮುಟ್ಟುವವರ ಕೈಕಾಲು ಕಡಿಯಿರಿ ನಾಲಗೆ

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ವಿರುದ್ದ ಎಸ್ಡಿಪಿಐ ದೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ತೋಟಕ್ಕೆ ತೆರಳಿದವರ ಮೇಲೆ ಚಿರತೆ ದಾಳಿ ? ಇಬ್ಬರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಚಿರತೆ ದಾಳಿಯಿಂದಾಗಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗಾಯಗೊಂಡವರನ್ನು ರೆಂಜಿಲಾಡಿಯ ಹೇರ  ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ. ಇವರಿಬ್ಬರು ತೋಟದಲ್ಲಿ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ತಕ್ಷಣವೇ ಇಬ್ಬರನ್ನೂ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಚಿರತೆಯು ಸ್ಥಳದಲ್ಲಿದ್ದು, ಸ್ಥಳಕ್ಕೆ

ಕಡಬ: ತೋಟಕ್ಕೆ ತೆರಳಿದವರ ಮೇಲೆ ಚಿರತೆ ದಾಳಿ ? ಇಬ್ಬರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಇಲ್ಲಿನ ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮೃತರನ್ನು ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top