14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ➤ ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ*
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ ತಿಳಿಸಿದರು. ಅವರು ಫೆಬ್ರವರಿ 5 ರಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ 41ನೇ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಉದ್ಯೋಗ ಹಾಗೂ ಪ್ರಕ್ರಿಯೆಗಳಲ್ಲಿ 14ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು […]










