ಕರಾವಳಿ

ಅರಂತೋಡು: ಶಿಕಾರಿಗೆಂದು ಹೊರಟಿದ್ದ ನಾಲ್ವರ ಪೈಕಿ ಓರ್ವನಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 05. ಶಿಕಾರಿಗೆಂದು ಹೋಗಿದ್ದ ನಾಲ್ವರು ಯುವಕರ ಪೈಕಿ ಓರ್ವನಿಗೆ ಗುಂಡು ತಗುಲಿ ಗಾಯಗೊಂಡ ಘಟನೆ ನಡೆದಿದೆ. ಅರಂತೋಡಿನ ನಾಲ್ವರು ಯುವಕರು ಗುರುವಾರ ರಾತ್ರಿ ಶಿಕಾರಿಗೆಂದು ಪೂಮಲೆ ಕಾಡಿಗೆ ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇವರೆಲ್ಲರೂ ಬೇರೆ ಬೇರೆ ಕಡೆ ಕುಳಿತು ಕಾಡುಪ್ರಾಣಿಗಳ ನಿರೀಕ್ಷೆಯಲ್ಲಿದ್ದಾಗ ಶಬ್ದ ಬಂದ ಕಡೆಗೆ ಓರ್ವ ಗುಂಡು ಹಾರಿಸಿದ್ದು, ಅದು ಆ ಕಡೆ ಕುಳಿತಿದ್ದ ಸತ್ಯಮೂರ್ತಿ ಎಂಬ ಯುವಕನಿಗೆ ತಾಗಿತ್ತು. ಗುಂಡೇಟಿಗೆ ಒಳಗಾದ ಸತ್ಯಮೂರ್ತಿಯನ್ನು ಸುಳ್ಯದ […]

ಅರಂತೋಡು: ಶಿಕಾರಿಗೆಂದು ಹೊರಟಿದ್ದ ನಾಲ್ವರ ಪೈಕಿ ಓರ್ವನಿಗೆ ಗುಂಡೇಟು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು, ಕೊಣಾಜೆ ಹಾಗೂ ಉಳ್ಳಾಲ‌ ಸೇರಿದಂತೆ‌ ಹಲವು ದೇವಾಲಯಗಳ ಕಳ್ಳತನ‌ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 05. ದೇವಸ್ಥಾನಗಳ ಕಾಣಿಕೆ ಹುಂಡಿಯನ್ನು ಕದ್ದು ದುಷ್ಕೃತ್ಯವೆಸಗುತ್ತಿದ್ದ ದುಷ್ಕರ್ಮಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಸುಹೈಲ್ ಹಾಗೂ ಸಿರಾಜುದ್ದೀನ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಮಂಗಳೂರಿನ ಹಲವು ಕಡೆಗಳಲ್ಲಿ ಕೊರಗಜ್ಜ ಸ್ವಾಮಿ ದೈವಸ್ಥಾನ, ಅಯ್ಯಪ್ಪಸ್ವಾಮಿ ದೇವಸ್ಥಾನ ಸೇರಿದಂತೆ ಮಂಗಳೂರು, ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ದೇವಾಲಯಗಳಲ್ಲಿ ಕಳ್ಳತನ ನಡೆದಿತ್ತು. ಅಲ್ಲದೇ ಆರೋಪಿಗಳು ಕಾಣಿಕೆ ಹುಂಡಿಯನ್ನು ಕದ್ದ ಬಳಿಕ ಕಾಣಿಕೆ ಹುಂಡಿಗೆ ಬಳಸಿದ ಕಾಂಡೋಮ್ ಹಾಕುತ್ತಿದ್ದರಲ್ಲದೇ

ಮಂಗಳೂರು, ಕೊಣಾಜೆ ಹಾಗೂ ಉಳ್ಳಾಲ‌ ಸೇರಿದಂತೆ‌ ಹಲವು ದೇವಾಲಯಗಳ ಕಳ್ಳತನ‌ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಣಾಜೆ: ಮರಕ್ಕೆ ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಫೆ. 05. ಅವಿವಾಹಿತ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ‌ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ನೆತ್ತಿಲಪದವು ಸೈಟ್ ನಿವಾಸಿ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಣಾಜೆ: ಮರಕ್ಕೆ ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್ – ಸಿಮೆಂಟ್ ಮಿಕ್ಸರ್ ಲಾರಿ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.05. ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ಸಂಬಂಧಿಸಿದ ಪರಿಣಾಮ ಸಹ ಸವಾರೆಯೋರ್ವರು ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಮಹಿಳೆಯನ್ನು ಸರಳಿಕಟ್ಟೆ ನಿವಾಸಿ ರಫೀಕ್ ಎಂಬವರ ಪತ್ನಿ ಸಕೀನಾ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ನಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಬೈಕ್‌ ಮಧ್ಯೆ ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಢಿಕಯಾಗಿ ಈ ಸಂಭವಿಸಿದೆ. ಘಟನೆಯಲ್ಲಿ

ಉಪ್ಪಿನಂಗಡಿ: ಬೈಕ್ – ಸಿಮೆಂಟ್ ಮಿಕ್ಸರ್ ಲಾರಿ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಸ್ ಪಾಸ್ ಅವ್ಯವಸ್ಥೆ ➤ ಜಿಲ್ಲಾದ್ಯಂತ ಸಿಎಫ್ಐ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 05. ಈ ಸಾಲಿನ ಬಸ್ಸು ಪಾಸ್‌ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಗೊಂದಲದ ಗೂಡಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸೇವಾ ಸಿಂಧುವಿನಲ್ಲಿ ನೋಂದಾಯಿಸಿ, ನಂತರ ಅದನ್ನು ಶಾಲಾ – ಕಾಲೇಜಿನ ಸಹಿ ಪಡೆದು ಮತ್ತೆ ಬಸ್ಸು ಡಿಪೋ‌ಗೆ ತಲುಪಿಸಿ ನಂತರ ಬಸ್ಸು ಪಾಸ್ ಪಡೆಯುವಂತೆ ಪ್ರಕ್ರಿಯೆ ಇದೀಗ ನಡೆಯುತ್ತಿದೆ, ಸೇವಾ ಸಿಂದು ಯಾವಾಗ ನೋಡಿದರೂ ಸರ್ವರ್ ಸಮಸ್ಯೆ ಉಂಟಾಗುತ್ತಿದ್ದು‌ ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಬಸ್ ಪಾಸ್

ಬಸ್ ಪಾಸ್ ಅವ್ಯವಸ್ಥೆ ➤ ಜಿಲ್ಲಾದ್ಯಂತ ಸಿಎಫ್ಐ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಣಿಪಾಲ: ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 05. ಆಟೋ ರಿಕ್ಷಾವೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಮಣಿಪಾಲ ಪೊಲೀಸರು ಇಂದು ಶೀಂಬ್ರಾ ಸೇತುವೆ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ(30), ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ (38) ಹಾಗೂ ಬ್ರಹ್ಮಾವರ ಕೊಳಲಗಿರಿಯ ಕೃಷ್ಣ ಜಲಗಾರ್ (40)ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋ

ಮಣಿಪಾಲ: ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಸ್ನಾನಘಟ್ಟದ ಬಳಿ ಅಪರಿಚಿತ ಮಹಿಳೆಯರ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ. 05. ಅಪರಿಚಿತ ಮಹಿಳೆಯರಿಬ್ಬರ ಮೃತದೇಹವು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ. ಮೃತ ಇಬ್ಬರು ಮಹಿಳೆಯರು ಸುಮಾರು 45 ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ. ನದಿ ತೀರಕ್ಕೆ ಸ್ನಾನಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು ಮೃತದೇಹವನ್ನು ಮೊದಲು ನೋಡಿದ್ದು, ಇದರ ಮಾಹಿತಿಯಂತೆ ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಮೃತದೇಹಗಳು ಕವುಚಿ ಮಲಗಿದ ಸ್ಥಿತಿಯಲ್ಲಿ ನೀರಿನಲ್ಲಿ ಕಂಡುಬಂದಿದ್ದವು.

ಧರ್ಮಸ್ಥಳ ಸ್ನಾನಘಟ್ಟದ ಬಳಿ ಅಪರಿಚಿತ ಮಹಿಳೆಯರ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಹಾರಿಸ್ ನಲಪಾಡ್ ಆಯ್ಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 04. ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮುಹಮ್ಮದ್ ಹ್ಯಾರಿಸ್ ನಲಪಾಡ್ ಆಯ್ಕೆಯಾಗಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ನಾಳೆ ಅಧಿಕೃತವಾಗಿ ಹೊರಬೀಳಲಿದ್ದು, ಈಗ ದೊರಕಿರುವ ಮಾಹಿತಿಗಳ ಪ್ರಕಾರ ಮುಹಮ್ಮದ್ ಹ್ಯಾರಿಸ್ ನಲಪಾಡ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಮುಹಮ್ಮದ್ ಹ್ಯಾರಿಸ್ ಅವರು 64,203 ಮತಗಳನ್ನು ಪಡೆದಿದು ಅಧ್ಯಕ್ಷರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭವ್ಯಾ ಕೆ.ಆರ್. ಮತ್ತು ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆಯಾಗಿದ್ದಾರೆ.

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಹಾರಿಸ್ ನಲಪಾಡ್ ಆಯ್ಕೆ..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಯುವತಿಯ ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 04. ಬಲವಂತ ದೈಹಿಕ ಸಂಪರ್ಕ ಬೆಳೆಸಿ ಜೀವ ಬೆದರಿಕೆ ಒಡ್ಡಿರುವ ಪ್ರಕರಣದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.   ಸವಣೂರು ಇಡ್ಯಾಡಿಯ ಪೂವಣಿ ಗೌಡ ಎಂಬವರ ಪುತ್ರ ಬಾಲಕೃಷ್ಣ ಎಂಬವರು ದಿನಾಂಕ 8.19.2020ರಂದು ಯುವತಿಯೋರ್ವಳು ಕೆಲಸದಿಂದ ಹಿಂದಿರುಗುತ್ತಿದ್ದ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಸರ್ವೆ ಎಂಬಲ್ಲಿ ನಿಲ್ಲಿಸಿ ಯುವತಿಯ ಮೊಬೈಲನ್ನು ಬಿಸಾಡಿ ಬೊಬ್ಬೆ ಹೊಡೆದರೆ ನಿನ್ನನ್ನು, ನಿನ್ನ ತಂದೆ ತಾಯಿಯನ್ನು ಸಾಯಿಸಿ ಬಿಡುತ್ತೇನೆ ಎಂದು ಜೀವ ಬೆದರಿಕೆ ನೀಡಿದ್ದಾನೆ.

ಪುತ್ತೂರು: ಯುವತಿಯ ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡ ಪುಸ್ತಕ ಸೊಗಸು-2020 ಬಹುಮಾನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020 ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ “ಕನ್ನಡ ಪುಸ್ತಕ ಸೊಗಸು-2020” ಬಹುಮಾನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು  ಇಲಾಖೆಯ ವೆಬ್‍-ಸೈಟ್ www.dkc.mangaluru.com ನಲ್ಲಿ ಫೆಬ್ರವರಿ 20 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ  ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ತುಳು ಭವನ,

ಕನ್ನಡ ಪುಸ್ತಕ ಸೊಗಸು-2020 ಬಹುಮಾನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top