ಕರಾವಳಿ

ತ್ಯಾಜ್ಯ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರದಲ್ಲೇ ಮಧ್ಯಂತರ ಪರಿಹಾರ ➤ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಪಚ್ಚನಾಡಿ ಘನತ್ಯಾಜ್ಯ ಲ್ಯಾಂಡ್‍ ಫಿಲ್ ಘಟಕದ ತ್ಯಾಜ್ಯ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರವನ್ನು ಶೀಘ್ರದಲ್ಲಿಯೇ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ತಿಳಿಸಿದರು.   ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪಚ್ಚನಾಡಿ ಘನತ್ಯಾಜ್ಯ ಲ್ಯಾಂಡ್‍ ಫಿಲ್ ಘಟಕದ ತ್ಯಾಜ್ಯ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತ ಸಭೆಯಲ್ಲಿ ಚರ್ಚಿಸಿ ಮಾತನಾಡುತ್ತಿದ್ದರು. ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನ […]

ತ್ಯಾಜ್ಯ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರದಲ್ಲೇ ಮಧ್ಯಂತರ ಪರಿಹಾರ ➤ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ Read More »

ಕರಾವಳಿ, ಕರ್ನಾಟಕ

ಅನಿಲ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆಗೆ ಕಡಿವಾಣ ಹಾಕಬೇಕು ➤ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04.   ಮಂಗಳೂರು, ಹೆದ್ದಾರಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಗ್ಯಾಸ್ ಅನಿಲ ಟ್ಯಾಂಕರ್‍ ಗಳ ಅಸುರಕ್ಷಿತ ಚಾಲನೆಯಿಂದ ತೊಂದರೆಯಾಗುತ್ತಿದೆ, ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕೆಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ  ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡುತ್ತಿದ್ದರು. ಅನಿಲ ಟ್ಯಾಂಕರ್‍ ಗಳ ಅಪಘಾತದಿಂದಾಗಿ ಹೆಚ್ಚಿನ ಅನಾಹುತಗಳಾಗುವ ಸಾಧ್ಯತೆ

ಅನಿಲ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆಗೆ ಕಡಿವಾಣ ಹಾಕಬೇಕು ➤ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ Read More »

ಕರಾವಳಿ, ಕರ್ನಾಟಕ

ಉಳ್ಳಾಲ ಸಮುದ್ರತೀರದಲ್ಲಿ ತಿಮಿಂಗಿಲ ಪ್ರಭೇದದ ಕಡಲು ಹಂದಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 04. ಕಡು ನೀಲಿ ಬಣ್ಣದ ತಿಮಿಂಗಿಲ ಮಾದರಿಯ ಬೃಹತ್ ಕಡಲು ಹಂದಿಯು ಉಳ್ಳಾಲ ಮೊಗವೀರ ಪಟ್ಣದ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಮಿಂಗಿಲದ್ದೇ ಒಂದು ಪ್ರಭೇದವಾಗಿರುವ ಈ ಕಡಲಂದಿಗಳು ಸಾಧಾರಣವಾಗಿ ತಿಮಿಂಗಿಲಗಳನ್ನೇ ಹೋಲುತ್ತಿದ್ದು, ಆಡು ಭಾಷೆಯಲ್ಲಿ ಕಡಲು ಹಂದಿ ಎಂದು ಕರೆಯುತ್ತಾರೆ.

ಉಳ್ಳಾಲ ಸಮುದ್ರತೀರದಲ್ಲಿ ತಿಮಿಂಗಿಲ ಪ್ರಭೇದದ ಕಡಲು ಹಂದಿ ಪತ್ತೆ Read More »

ಕರಾವಳಿ, ಕರ್ನಾಟಕ

ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ, ಉಪಾಧ್ಯಕ್ಷರಾಗಿ ಗಿರೀಶ್ ಆಳ್ವ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ತಿಂಗಳ ಹಿಂದೆ ನಡೆದಿದ್ದ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ ಜಿಲ್ಲಾಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ. ಚುನಾವಣೆಯು ಪಾರದರ್ಶಕವಾಗಿರಬೇಕು ಎಂಬ ನಿಟ್ಟಿನಲ್ಲಿ ಜನವರಿ 10, 11 ಹಾಗೂ 12ನೇ ತಾರೀಕಿನಂದು ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಚುನಾವಣೆಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ನಡೆಸಲಾಗಿತ್ತು. ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5573 ಮತ ಗಳಿಸಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಆಳ್ವಾ 4169 ಮತಗಳನ್ನು ಪಡೆದಿದ್ದಾರೆ. ಪ್ರಧಾನ

ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ, ಉಪಾಧ್ಯಕ್ಷರಾಗಿ ಗಿರೀಶ್ ಆಳ್ವ ಆಯ್ಕೆ Read More »

ಕರಾವಳಿ, ಕರ್ನಾಟಕ

ಉಡುಪಿ: 12ನೇ ಶತಮಾನದ ಭಗ್ನ ವಿಷ್ಣುಮೂರ್ತಿ ಶಿಲ್ಪ ಪತ್ತೆ

(ನ್ಯೂಸ್ ಕಡಬ) newskadaba.com ಶಿರ್ವ, ಫೆ. 04. ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದಿಂದ, ಜನವರಿ 24 ಮತ್ತು 31 ರ ಭಾನುವಾರಗಳಂದು ನಡೆಸಿದ ಪುರಾತತ್ವ ಅನ್ವೇಷಣೆಯಲ್ಲಿ ಸುಮಾರು 12 ನೇ ಶತಮಾನಕ್ಕೆ ಸೇರಿದ ಅತ್ಯಾಕರ್ಷಕ ಜನಾರ್ಧನ/ವಿಷ್ಣುಮೂರ್ತಿಯ ಶಿಲ್ಪ ಪತ್ತೆಯಾಗಿದೆಯೆಂದು ಪ್ರೊ. ಟಿ.ಮುರುಗೇಶಿಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ಉಡುಪಿ ಜಿಲ್ಲೆ, ಉಡುಪಿ ತಾಲೂಕಿನ ಬಡಗಬೆಟ್ಟು ಪಂಚಾಯಿತಿಯ ಹಿಂಭಾಗದಲ್ಲಿರುವ ಕಾಡಿನಲ್ಲಿ ಪಾಳು ಬಿದ್ದ ದೇಗುಲವಿದೆ,

ಉಡುಪಿ: 12ನೇ ಶತಮಾನದ ಭಗ್ನ ವಿಷ್ಣುಮೂರ್ತಿ ಶಿಲ್ಪ ಪತ್ತೆ Read More »

ಕರಾವಳಿ, ಕರ್ನಾಟಕ

ಕ್ಯಾನ್ಸರ್ ಚಿಕಿತ್ಸೆಗೆ ಸ್ಪಂದಿಸುತ್ತದೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಹೆಚ್ಚಿನ ಎಲ್ಲಾ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಮಾರಣಾಂತಿಕ ರೋಗಗಳ ಪಟ್ಟಿಯಲ್ಲಿ ಹೃದಯಘಾತದ ನಂತರ ಎರಡನೇ ಸ್ಥಾನಪಡೆದಿದೆ. ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಕ್ಯಾನ್ಸರ್ ರೋಗ ಬಂದವರೆಲ್ಲ ಸಾಯುವುದಿಲ್ಲ. ಹೆಚ್ಚಿನ  ಎಲ್ಲಾ ಕ್ಯಾನ್ಸರ್‍ ಗಳು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತದೆ ಎಂದು ಡಾ|| ಮುರಲಿ ಮೋಹನ ಚೂಂತಾರು ಅಭಿಪ್ರಾಯ ಪಟ್ಟರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ

ಕ್ಯಾನ್ಸರ್ ಚಿಕಿತ್ಸೆಗೆ ಸ್ಪಂದಿಸುತ್ತದೆ ➤ ಡಾ|| ಚೂಂತಾರು Read More »

ಕರಾವಳಿ, ಕರ್ನಾಟಕ

ಕಡಬ: ಫೆ. 22ರಿಂದ ಫೆ. 24ರ ವರೆಗೆ ಪರಪ್ಪು ಧರ್ಮ ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಫೆ. 04. ತಾಲೂಕಿನ ಕಡಬ ಗ್ರಾಮದ ಪರಪ್ಪು ಎಂಬಲ್ಲಿ ಹಚ್ಚ ಹಸುರಿನ ತನ್ಮದ್ಯದಲ್ಲಿ ಶ್ರೀ ಆದಿನಾಗಬ್ರಹ್ಮ ಹಾಗೂ ಗುರು ಅಣ್ಣಪ್ಪ ಪಂಜುರ್ಲಿ ಮತ್ತು ಕೊರಗಜ್ಜ ಸ್ವಾಮಿ ವಿರಾಜಮಾನರಾಗಿ ನೆಲೆಸಿದ್ದು, ಇದರ ಧರ್ಮ ನೇಮೋತ್ಸವವು ಫೆ. 22ರಿಂದ ಫೆ.24ರ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಪುಣ್ಯ ಕ್ಷೇತ್ರವು ಪುರಾತನವನ್ನು ಹೊಂದಿದ್ದು, ಅಷ್ಟೇ ಕಾರಣಿಕತೆಯನ್ನೂ ಹೊಂದಿದೆ. ಇಲ್ಲಿ ಭಕ್ತರ ಅನೇಕ ಇಷ್ಟಾರ್ಥಗಳು ನೆರವೇರಿದ ಸನ್ನಿವೇಶಗಳಿವೆ.

ಕಡಬ: ಫೆ. 22ರಿಂದ ಫೆ. 24ರ ವರೆಗೆ ಪರಪ್ಪು ಧರ್ಮ ನೇಮೋತ್ಸವ Read More »

ಕರಾವಳಿ, ಕರ್ನಾಟಕ

ಪುತ್ತೂರು: ದೇವಸ್ಯದ ಕಿರುಸೇತುವೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ➤ ಬದಲಿ ರಸ್ತೆ ಉಪಯೋಗಿಸುವಂತೆ ಲೋಕೋಪಯೋಗಿ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 04. ತಾಲೂಕಿನ ಆರ್ಯಾಪು ಗ್ರಾಮ ವ್ಯಾಪ್ತಿಯ ದೇವಸ್ಯ ಎಂಬಲ್ಲಿ ಕಿರಿದಾದ ಸೇತುವೆಯ ಅಗಲೀಕರಣದ ಹಿನ್ನೆಲೆ 11 ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯ ದೇವಸ್ಯ ಎಂಬಲ್ಲಿ ಸೇತುವೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಫೆಬ್ರವರಿ 5 ರಿಂದ 15 ರ ವರೆಗೆ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಲೋಕೋಪಯೋಗಿ ಇಲಾಖೆಯು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್‍ ಗೆ ಪತ್ರ ಬರೆದಿದ್ದು, ‘ಸೇತುವೆ ಅಗಲೀಕರಣ

ಪುತ್ತೂರು: ದೇವಸ್ಯದ ಕಿರುಸೇತುವೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ➤ ಬದಲಿ ರಸ್ತೆ ಉಪಯೋಗಿಸುವಂತೆ ಲೋಕೋಪಯೋಗಿ ಇಲಾಖೆ ಸೂಚನೆ Read More »

ಕರಾವಳಿ, ಕರ್ನಾಟಕ

ಪಂಜ: ವರ್ಷಾವಧಿ ಜಾತ್ರೋತ್ಸವ ಹಸಿರು ಕಾಣಿಕೆ ಮೆರವಣಿಗೆಯ ಮೂಲಕ ಸಮಾಪ್ತಿ

(ನ್ಯೂಸ್ ಕಡಬ) newskadaba.com ಪಂಜ, ಫೆ. 04. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಮಹೋತ್ಸವ ಆರಂಭಗೊಂಡು ಫೆ. 03 ರಂದು ಹಸಿರು ಕಾಣಿಕೆ ಮೆರವಣಿಗೆಯು ಕಟ್ಟೆಯಿಂದ ಆರಂಭಗೊಂಡು ದೇವಳಕ್ಕೆ ಸಮರ್ಪಣೆ ಗೊಂಡಿತು. ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ತಿಮ್ಮಪ್ಪಗೌಡ ಪುತ್ಯ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ದೇವಳದ ಮಾಜಿ ಆಡಳಿತಾಧಿಕಾರಿಗಳು ಡಾ. ದೇವಿಪ್ರಸಾದ್ ಕಾನತ್ತೂರ್, ತಾಲೂಕು

ಪಂಜ: ವರ್ಷಾವಧಿ ಜಾತ್ರೋತ್ಸವ ಹಸಿರು ಕಾಣಿಕೆ ಮೆರವಣಿಗೆಯ ಮೂಲಕ ಸಮಾಪ್ತಿ Read More »

ಕರಾವಳಿ, ಕರ್ನಾಟಕ

ಕಾಪು: ಮಂದಿರದ ಕಾಣಿಕೆ ಹುಂಡಿಯಿಂದ ಕಳವು

(ನ್ಯೂಸ್ ಕಡಬ) newskadaba.com ಕಾಪು, ಫೆ. 04. ಮೂಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿರುವ ನಾರಾಯಣಗುರು ಮಂದಿರಕ್ಕೆ ನುಗ್ಗಿದ ಕಳ್ಳರು ಕಾಣಿಕೆಹುಂಡಿಯನ್ನು ದೋಚಿದ ಘಟನೆ ನಡೆದಿದೆ. ಎಂದಿನಂತೆ ಪೂಜೆಗಾಗಿ ಅರ್ಚಕರು ಇಂದು ಬೆಳಗ್ಗಿನ‌ ಜಾವ ಮಂದಿರಕ್ಕೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು, ಮಂದಿರದ ಬಾಗಿಲಿನ ಚಿಲಕ ಮುರಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ಕಳವು ಮಾಡಿದ್ದಾರೆ. ಅಲ್ಲದೆ ಕಪಾಟಿನ ಬೀಗ ಮುರಿದಿದ್ದಾರೆ. ಈ ಕುರಿತು ಕಾಪು ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

ಕಾಪು: ಮಂದಿರದ ಕಾಣಿಕೆ ಹುಂಡಿಯಿಂದ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top