ಕರಾವಳಿ

ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಯ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.‌ 02. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಎಂಬವರ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರು ಕಳೆದ ಆರು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದು, ಜಯರಾಜ್ ಅವರ ಕಾಪಿಕಾಡ್ ಎಂಬಲ್ಲಿರುವ ಮನೆಗೆ ಹಾಗೂ ಕಛೇರಿಗೆ ದಾಳಿ ನಡೆಸಿದ್ದಾರೆ. ಇವರ ಪತ್ನಿ ಕೊಚ್ಚಿಯ ಕೇಂದ್ರಾಡಳಿತ ಪ್ರದೇಶವಾದ ಮಾಹೆಯಲ್ಲಿ ಕೇಂದ್ರ ಸರಕಾರಿ ಇಲಾಖೆಯ ವೈದ್ಯೆಯಾಗಿದ್ದು, ಅಲ್ಲಿ ಅವರು […]

ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಯ ಮನೆ ಹಾಗೂ ಕಛೇರಿ ಮೇಲೆ ಎಸಿಬಿ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 02. ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಇಲ್ಲಿನ ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನಡೆದಿದೆ. ಮೃತ ಯುಕನನ್ನು ಮಾಲಾಡಿ ಗ್ರಾಮದ ನಿವಾಸಿ ರವೀಂದ್ರ (26) ಎಂದು ಗುರುತಿಸಲಾಗಿದೆ. ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಫೆ. 02. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜ್ಯ ಧರ್ಮದರ್ಶಿಗಳಾದ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಭೇಟಿಯ ಸಮಯದಲ್ಲಿ ಶ್ರೀಗಳೊಂದಿಗೆ ಚರ್ಚಿಸುತ್ತಾ, ರಾಜ್ಯ ಸರ್ಕಾರವು ಅಚ್ಚುಕಟ್ಟು ಪ್ರದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿನಿಯಮ 1980ರ ಕಾಯ್ದೆಯಡಿ  ಕಾಡ ಪ್ರಾಧಿಕಾರವು 1979ನೇ ಇಸವಿಯಲ್ಲಿ ಸ್ಥಾಪನೆ ಮಾಡಿತು.   ಈ ಒಂದು

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಧರ್ಮಸ್ಥಳಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 01. ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಕರಾಳ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವೃದ್ಧ ತಾಯಿಗೆ 5 ಜನ ಮಕ್ಕಳಿದ್ದು, ಇದರ ಪೈಕಿ ಒಬ್ಬ ಪುತ್ರಿ ಆಶಾ ಕಾರ್ಯಕರ್ತೆಯಾಗಿದ್ದು, ಮತ್ತೋರ್ವ ಪುತ್ರಿ ಗೃಹಿಣಿಯಾಗಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತೋರ್ವ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ. ಬೀದಿ ಬದಿಯಲ್ಲಿದ್ದ ಈ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ

ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಎರಡನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎನ್.ಕೇಶವ ಭಟ್ ನಿಡುಗಳ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 01. ಫೆ.24 ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿರುವ ಎರಡನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎನ್. ಕೇಶವ ಭಟ್ ನಿಡುಗಳ್ ಅವರು ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಮ್ಮೆಳನದ ಸ್ವಾಗತ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಸುಬ್ರಹ್ಮಣ್ಯದ ಎಸ್.ಎಸ್.ಪಿ ಯು ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದ ಇವರು 31 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಮೂಲತಃ ಇವರು ಕಾಸರಗೋಡು ನಿರ್ಚಾಲು ನಿಡುಗಳ್ ನವರಾಗಿದ್ದು, ಪ್ರಸ್ತುತ ಸುಬ್ರಹ್ಮಣ್ಯದ ಅಗ್ರಹಾರದ ನಿವಾಸಿ. ಸಾಹಿತ್ಯ

ಕಡಬ: ಎರಡನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎನ್.ಕೇಶವ ಭಟ್ ನಿಡುಗಳ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ | ಮಾಣಿ – ಕಲ್ಲಡ್ಕ ಹೆದ್ದಾರಿ ಬ್ಲಾಕ್ ➤ ಪರಿಸರದಲ್ಲಿ ಬೆಂಕಿ ಉರಿಸದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.02. ಚಾಲಕನ ನಿಯಂತ್ರಣ ತಪ್ಪಿದ ಬುಲೆಟ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಸೂರಿಕುಮೇರು ಮಸೀದಿಯ ಸಮೀಪದ ತಿರುವಿನಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಘಟನೆಯಿಂದ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ‌. ಅನಿಲ ಸೋರಿಕೆ

ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ | ಮಾಣಿ – ಕಲ್ಲಡ್ಕ ಹೆದ್ದಾರಿ ಬ್ಲಾಕ್ ➤ ಪರಿಸರದಲ್ಲಿ ಬೆಂಕಿ ಉರಿಸದಂತೆ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಾಣಿ: ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದ ಬುಲೆಟ್ ಟ್ಯಾಂಕರ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.02. ಚಾಲಕನ ನಿಯಂತ್ರಣ ತಪ್ಪಿದ ಬುಲೆಟ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಸೂರಿಕುಮೇರು ಮಸೀದಿಯ ಸಮೀಪದ ತಿರುವಿನಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಘಟನೆಯಿಂದ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಮಾಣಿ: ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದ ಬುಲೆಟ್ ಟ್ಯಾಂಕರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದ ಕೃಪಾ ಟ್ರೇಡರ್ಸ್ ಕಳಾರದ ಅನೋಲ್ಡಾ ಕಾಂಪ್ಲೆಕ್ಸ್ ಗೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕಡಬ, ಜ.30. ಇಲ್ಲಿನ ಬಾಬು ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಕೃಪಾ ಟ್ರೇಡರ್ಸ್ ಸಂಸ್ಥೆಯು ಕಳಾರ ಮಾಂಡವಿ ಮೋಟಾರ್ಸ್ ಬಳಿಯ ಅನಾಓಲ್ಡಾ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ನೂತನ ಸಂಸ್ಥೆಯಲ್ಲಿ ದೈನಂದಿನ ಬಳಕೆಯ ದಿನಸಿ ಸಾಮಾಗ್ರಿಗಳು, ಫ್ಯಾನ್ಸಿ ವಸ್ತುಗಳು, ಗಿಫ್ಟ್ ಐಟಂಗಳು, ಪ್ಲಾಸ್ಟಿಕ್ ಐಟಂಗಳು, ಚಪ್ಪಲಿ, ಶೂ ಸೇರಿದಂತೆ ವಿವಿಧ ರೀತಿಯ ಫೂಟ್ ವೇರ್ ಗಳು, ಅಂತ್ಯಕ್ರಿಯೆಗೆ ಬೇಕಾಗುವಂತಹ ವಸ್ತುಗಳು ಅತೀ ಕಡಿಮೆ ದರದಲ್ಲಿ ಗ್ರಾಹಕರಿಗೆ ದೊರೆಯಲಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬದ ಕೃಪಾ ಟ್ರೇಡರ್ಸ್ ಕಳಾರದ ಅನೋಲ್ಡಾ ಕಾಂಪ್ಲೆಕ್ಸ್ ಗೆ ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ಪುತ್ತೂರು: ಗೃಹರಕ್ಷಕದಳ ಘಟಕದ ನೂತನ ಕಛೇರಿ ಉದ್ಘಾಟನೆ ➤ ನಿಮ್ಮೊಂದಿಗೆ ನಾವಿದ್ದೇವೆ- ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 01. ಮಂಗಳೂರಿನಲ್ಲಿ ಸ್ವಂತ ಕಟ್ಟಡ ಹೊಂದಿರುವ ಜಿಲ್ಲಾ ಗೃಹರಕ್ಷಕ ದಳದ ಪುತ್ತೂರು ಘಟಕಕ್ಕೆ ಮತ್ತು ಜಿಲ್ಲೆಯ ಉಳಿದ 14 ಘಟಕಗಳಿಗೆ ಜಿಲ್ಲೆಯ ಬೇರೆಲ್ಲೂ ಸ್ವಂತ ಕಛೇರಿಯಿಲ್ಲ. ಘಟಕಗಳಿಗೆ ಬಾಡಿಗೆ ಕಟ್ಟಡದಲ್ಲಿ ಇರಲು ಇಲಾಖೆಯಿಂದ ಅನುದಾನ ಇಲ್ಲ. ಇಂತಹ ಸಂದರ್ಭದಲ್ಲಿ ಪುತ್ತೂರಿನ ಜನಪ್ರಿಯ ವೈದ್ಯ ಡಾ|| ಎಂ. ಕೆ. ಪ್ರಸಾದ್ ಅವರು ಮುಂದೆ ಬಂದು ಕಟ್ಟಡಕ್ಕೆ ಠೇವಣಿ ಮತ್ತು ಬಾಡಿಗೆಯನ್ನು ನೀಡುವ ಮೂಲಕ ಹಾರಾಡಿಯಲ್ಲಿ ಜನವರಿ 31 ರಂದು ಜಿಲ್ಲಾ ಗೃಹರಕ್ಷಕದಳ

ಪುತ್ತೂರು: ಗೃಹರಕ್ಷಕದಳ ಘಟಕದ ನೂತನ ಕಛೇರಿ ಉದ್ಘಾಟನೆ ➤ ನಿಮ್ಮೊಂದಿಗೆ ನಾವಿದ್ದೇವೆ- ಸಂಜೀವ ಮಠಂದೂರು Read More »

ಕರಾವಳಿ, ಕರ್ನಾಟಕ

ಮಂಗಳೂರು: ಹೋಟೆಲ್ ನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 01. ಇಲ್ಲಿನ ಹೋಟೆಲೊಂದರಲ್ಲಿ ಯುವತಿ ಹಾಗೂ ಆಕೆಯ ಪ್ರಿಯಕರನ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೊಕ್ಕಪಟ್ಟಣದ ತ್ರಿಶೂಲ್ ಸಾಲಿಯಾನ್, ಕೋಡಿಕಲ್ ನ ಸಂತೋಷ್ ಪೂಜಾರಿ ಹಾಗೂ ಅಶೋಕ್ ನಗರದ ದ್ಯಾನೇಶ್ ಎಂದು ಗುರುತಿಸಲಾಗಿದೆ. ಇಲ್ಲಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಮತ್ತು ಆರೋಪಿ ತ್ರಿಶೂಲ್ ನಡುವೆ ಫೇಸ್ ಬುಕ್ ಮೂಲಕ ಪರಿಚಯವಾಗಿ ಬಳಿಕ ಪ್ರೇಮಕ್ಕೆ ತಿರುಗಿದ ನಂತರ ವೈಮನಸ್ಸಿನಿಂದಾಗಿ ಆತನಿಂದ ದೂರವಾಗಲು ನಿರ್ಧರಿಸಿದ್ದಾಳೆ.

ಮಂಗಳೂರು: ಹೋಟೆಲ್ ನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top