ಕರಾವಳಿ

ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ. 31. ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತಲ ಮಂಜೇಶ್ವರದಿಂದ ತಿರುವನಂತಪುರಂ ವರೆಗೆ ಮುನ್ನಡೆಸುವ ಐಶ್ವರ್ಯ ಯಾತ್ರೆ ಗೆ ಮಂಜೇಶ್ವರದಲ್ಲಿ ಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಜಾಥದ ನೇತೃತ್ವ ವಹಿಸಿದ ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚನ್ನಿತಲರವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಡ್ವಕೇಟ್ ವಿಧ್ಯಾ […]

ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಮನೆಗೆ ನುಗ್ಗಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 31. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ನಡೆದಿದೆ. ನೇಲ್ಯಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯಿಂದ ಕಳ್ಳತನವಾಗಿದ್ದು, ಸುಮಾರು 22 ಪವನ್ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿದ್ದ ಸಿ.ಸಿ ಕ್ಯಾಮರಾ ಆಫ್ ಆಗಿದ್ದು, ಹಿಂಬಾಗಿಲನ್ನು ತೆಗೆಯಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ: ಮನೆಗೆ ನುಗ್ಗಿ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಅಕ್ರಮವಾಗಿ ಚಿನ್ನ‌ಸಾಗಿಸುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಮೂಲದ ಮಶ್ಕೂರ್ ಎಂದು ಗುರುತಿಸಲಾಗಿದೆ. ಈತನ ಬಳಿ ಸುಮಾರು 30 ಲಕ್ಷ ಮೌಲ್ಯದ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಸ್ಥಳೀಯರ ಸಂಭ್ರಮ

(ನ್ಯೂಸ್ ಕಡಬ) newskadaba.com ಕಡಬ, ಜ. 31. ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಆಯೋಜಿಸಲಾಗಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗ್ರತಿ ಶಿಬಿರವು ಸ್ಥಳೀಯರ ಸಂಭ್ರಮಕ್ಕೆ ಸಾಕ್ಷಿಯಾಯಿತು. ಕಳೆದ ಕೆಲ ದಿನಗಳಿಂದ ಸಿದ್ಧತೆಗಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಕೊಂಡಿದ್ದ ಸಿರಿಬಾಗಿಲು ಮತ್ತು ಕೊಂಬಾರು ಗ್ರಾಮಸ್ಥರು ಇಂದು ಜಾತ್ರೆ ಸಮಾರಂಭದಂತೆ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರು. ಕೊಂಬಾರಿನ ದ.ಕ.ಜಿ.ಪಂ. ಉನ್ನತ ಹಿ.ಪ್ರಾ. ಶಾಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಆರೋಗ್ಯ

ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಸ್ಥಳೀಯರ ಸಂಭ್ರಮ Read More »

ಕರಾವಳಿ, ಕರ್ನಾಟಕ

ಅಧಿಕಾರಿಗಳು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ➤ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ. ಗ್ರಾಮದ ಅಭಿವೃದ್ಧಿಗೆ ಸರಕಾರ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಹಾಗು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕುಮಟ್ಟದ ಹಾಗು

ಅಧಿಕಾರಿಗಳು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ➤ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಕರೆ Read More »

ಕರಾವಳಿ, ಕರ್ನಾಟಕ

ಕಡಬ: ತಾಲೂಕು ಪತ್ರಕರ್ತರ ಗ್ರಾಮ ವಾಸ್ತವ್ಯ ➤ ರಕ್ತದಾನ ಹಾಗೂ ಆರೋಗ್ಯ ಶಿಬಿರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ. 31. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಕೊಂಬಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರವನ್ನು ದಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು ಕೂಡಾ ಉದ್ಘಾಟಿಸಲಾಯಿತು. ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು

ಕಡಬ: ತಾಲೂಕು ಪತ್ರಕರ್ತರ ಗ್ರಾಮ ವಾಸ್ತವ್ಯ ➤ ರಕ್ತದಾನ ಹಾಗೂ ಆರೋಗ್ಯ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಂಗಳೂರು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 2 ರಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯನ್ನು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ತರಬೇತಿ ತರಗತಿಗಳು ವಾರದ ದಿನಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30 ರವರೆಗೆ ಹಾಗೂ ರಜಾ ದಿನಗಳಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ Read More »

ಕರಾವಳಿ, ಕರ್ನಾಟಕ

COTPA-2003 ಕಾಯಿದೆ ಉಲ್ಲಂಘನೆ – ಜಿಲ್ಲಾ/ತಾಲೂಕು ತನಿಖಾದಳ ವತಿಯಿಂದ ಕಾರ್ಯಚರಣೆ*

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ  ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಾಧ್ಯತೆ ಹೆಚ್ಚು ಈ ಕಾರಣದಿಂದ ಜಿಲ್ಲಾ/ತಾಲೂಕು ತನಿಖಾದಳ  ಹಾಗೂ ಪೊಲೀಸ್ ಇಲಾಖೆಯ ತಂಡವು ಜನವರಿ 29 ಮತ್ತು 30 ರಂದು ಸಾರ್ವಜನಿಕ ಸ್ಥಳಗಳಲ್ಲಿ COTPA-2003 ಕಾಯಿದೆ  ಉಲ್ಲಂಘನೆಯ ವಿರುದ್ಧ ಪಣಂಬೂರ್/ಬೈಕಂಪಾಡಿ ಪ್ರದೇಶ ವ್ಯಾಪ್ತಿಯಲ್ಲಿ  ಕಾರ್ಯಚರಣೆ ನಡೆಸಲಾಯಿತು. ಜನವರಿ 29 ರಂದು ಕಾರ್ಯಾಚರಣೆ ನಡೆಸಿ

COTPA-2003 ಕಾಯಿದೆ ಉಲ್ಲಂಘನೆ – ಜಿಲ್ಲಾ/ತಾಲೂಕು ತನಿಖಾದಳ ವತಿಯಿಂದ ಕಾರ್ಯಚರಣೆ* Read More »

ಕರಾವಳಿ, ಕರ್ನಾಟಕ

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ನಗರದ ಕೊಟ್ಟಾರ ಚೌಕಿ ಅಬ್ಬಕ್ಕ ನಗರದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ, ಕೇಂದ್ರ ಕಚೇರಿಯಲ್ಲಿ  ರೈತರಿಗೆ ಹಾಗೂ ನಿಗಮದ ಎಲ್ಲಾ ಸಿಬ್ಬಂದಿಗಳಿಗೆ ಇತ್ತೀಚೆಗೆ ಗೇರು ಕೃಷಿಯ ಬಗ್ಗೆ ಸಂವಾದ, ಪ್ರೇರಣಾ ಮತ್ತು ಮಾನವ ಸಂಪನ್ಮೂಲದ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ನಿಗಮದ ಅಧ್ಯಕ್ಷ ಬಿ. ಮಣಿರಾಜ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯ ಮಟ್ಟದಲ್ಲಿ ಗೇರು ಕೃಷಿ ವಿಸ್ತರಿಸುವ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗಣರಾಜ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ ತಾ.ಪಂ. – ಜಮಾಬಂದಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಫೆಬ್ರವರಿ 9 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾ.ಪಂ. – ಜಮಾಬಂದಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top