ಕರಾವಳಿ

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 29. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಲಾಯಿಲ ಗ್ರಾಮದ ರಾಘವೇಂದ್ರ ಮಠದ ಬಳಿ ನಿವಾಸಿ ಸಂಜೀವ ಸಫಲ್ಯ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದು, ವಿಪರೀತ ಕುಡಿತದ‌ ಚಟ ಹೊಂದಿದ್ದರು. ಪೈನಾನ್ಸ್ ನಲ್ಲಿ ಸಾಲ ಮಾಡಿದ ಇವರು ಅದನ್ನು ತೀರಿಸಲಾಗದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಇದೇ ವಿಚಾರದಲ್ಲಿ ಮನನೊಂದು ತನ್ನ ಮನೆಯ ಕೋಣೆಯಲ್ಲಿ […]

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಶಂಭೂರು ನಿವಾಸಿ ಸಂಜೀವ (70) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲೆಂದು ನಿಂತಿದ್ದ ಸಂದರ್ಭ ಕಾರೊಂದು‌ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದರು. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ಇಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪತ್ರಿಕಾ ಗೋಷ್ಠಿಯನ್ನು ನಗರದ ಪತ್ರ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಹ್ವಾನ Read More »

ಕರಾವಳಿ, ಕರ್ನಾಟಕ

ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಜ.28. ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೋರ್ವ ರಸ್ತೆಗೆ ಎಸೆಯಲ್ಪಟ್ಟು ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ನಡೆದಿದೆ. ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿಯಿಂದ ಕಿನ್ನಿಗೋಳಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 28. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆಯನ್ನು ಇಂದು ಇಲ್ಲಿ‌ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಕಾರ್ಯಕ್ರಮದ ಧ್ವಜಾರೋಹಣವನ್ನು ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಭಾಷಾ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಿಡಿಯೋ ಮುಖಾಂತರ ರಾಜ್ಯಾಧ್ಯಕ್ಷರಾದ ಫಯಾಜ್ ದೊಡ್ಡಮನೆ ಅವರು ಸಂದೇಶ ಭಾಷಣವನ್ನು ಮಾಡಿದರು. ಕಳೆದ ವರ್ಷದ ವರದಿಯನ್ನು ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಂಡಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಖುಲಾಸೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ಸರಸ್ವತಿ ಸೌಹಾರ್ದ ಕ್ರೆಡಿಟ್ ಸೊಸೈಟಿ ಇದರ ಕಡಬದ ಶಾಖೆಯಿಂದ ವಾಹನ ಖರೀದಿ ಸಾಲವನ್ನು ಪಡೆದ ‌ದಿನೇಶ್ ಎ ಬಿ ಎಂಬವರು ಅದರ ಮರುಪಾವತಿಗೆಂದು ನೀಡಿದ ಚೆಕ್ ಅಮಾನ್ಯ ಗೊಂಡಿರುವ ಕುರಿತು ನ್ಯಾಯಾಲಯದಲ್ಲಿ ‌ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಪ್.ಸಿ ನ್ಯಾಯಲಯವು ಆರೋಪಿತನಿಂದ ಚೆಕ್ ನೀಡಲಾಗಿದೆ ಎಂದು ಸಂಸ್ಥೆ ಗೆ ಕಾನೂನಾತ್ಮಕವಾಗಿ ಆರೋಪಿತನಿಂದ ಚೆಕ್ ನಲ್ಲಿ ನಮೂದಿಸಿದ ಮೊತ್ತ

ಕಡಬ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಖುಲಾಸೆ Read More »

ಕರಾವಳಿ, ಕರ್ನಾಟಕ

ಜೇಸಿಐ ಕಡಬ ಕದಂಬ ಘಟಕದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ➤ ಅಧ್ಯಕ್ಷರಾಗಿ ತಿರುಮಲೇಶ್ ಭಟ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜ.28. ಜೇಸಿಐ ಕಡಬ ಕದಂಬ ಘಟಕದ ನೂತನ ಅಧ್ಯಕ್ಷರಾಗಿ ತಿರುಮಲೇಶ್ ಭಟ್ ಹೊಸ್ಮಠ ಹಾಗೂ ಕಾರ್ಯದರ್ಶಿಯಾಗಿ ಜೇಮ್ಸ್ ಕ್ರಿಶಾಲ್ ಡಿಸೋಜ ಅಧಿಕಾರ ಸ್ವೀಕರಿಸಿದರು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವಾಧ್ಯಕ್ಷ ಮೋಹನ ಕೋಡಿಂಬಾಳ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಉಪಾಧ್ಯಕ್ಷರಾಗಿ ಕಾಶೀನಾಥ ಗೋಗಟೆ, ಝಫೀರ್ ಮಹಮ್ಮದ್, ಡಾ| ರಾಮ ಪ್ರಕಾಶ್, ಪ್ರಸನ್ನ ಪುತ್ರಬೈಲು, ದಿವಾಕರ ಮುಂಡಾಲ, ಕೋಶಾಧಿಕಾರಿಯಾಗಿ ಅನೀಶ್ ಲೋಬೋ, ಜೊತೆ ಕಾರ್ಯದರ್ಶಿಯಾಗಿ ಜಯರಾಮ

ಜೇಸಿಐ ಕಡಬ ಕದಂಬ ಘಟಕದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ➤ ಅಧ್ಯಕ್ಷರಾಗಿ ತಿರುಮಲೇಶ್ ಭಟ್ ಅಧಿಕಾರ ಸ್ವೀಕಾರ Read More »

ಕರಾವಳಿ

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರ ಎಂಬಲ್ಲಿ ನಡೆದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಶ್ರೀನಿವಾಸ(20), ರಾಜು (20) ಹಾಗೂ ಅಭಿಷೇಕ್ (19) ಎಂಸು ಗುರುತಿಸಲಾಗಿದೆ. ಈ ಆರೋಪಿಗಳ ಮೇಲೆ ಈಗಾಗಲೇ ಎರಡು ಕೇಸು ದಾಖಲಾಗಿದ್ದವು. ಇವರು ಬುಧವಾರದಂದು ರಾತ್ರಿ 10.45 ರ ಸುಮಾರಿಗೆ ಕಾಟಿಪಳ್ಳದ ಏಳನೇ ಬ್ಲಾಕ್ ನಿವಾಸಿ ಜಾಬಿರ್ ಎಂಬಾತನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದರು. ಆರೋಪಿಗಳ ಜೊತೆಗೆ

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.31ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ‌.ಎಸ್. ಈಶ್ವರಪ್ಪರವರಿಂದ ಉದ್ಘಾಟನೆ ➤ ಪತ್ರಕರ್ತರ ಮೂರನೇ ಗ್ರಾಮ ವಾಸ್ತವ್ಯಕ್ಕೆ ಭರ್ಜರಿ ಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ,ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ’ ಜ.31ರಂದು ಕೊಂಬಾರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ. ಪತ್ರಕರ್ತರ ಸಂಘದ ಮೂರನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಯನ್ನೂ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ. ಪ್ರೆಸ್ ಕ್ಲಬ್

ಜ.31ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ‌.ಎಸ್. ಈಶ್ವರಪ್ಪರವರಿಂದ ಉದ್ಘಾಟನೆ ➤ ಪತ್ರಕರ್ತರ ಮೂರನೇ ಗ್ರಾಮ ವಾಸ್ತವ್ಯಕ್ಕೆ ಭರ್ಜರಿ ಸಿದ್ಧತೆ Read More »

ಕರಾವಳಿ, ಕರ್ನಾಟಕ

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಮಗುಚಿ ಬಿದ್ದಿದ್ದು, ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ‘ಸೌಮ್ಯ’ ಎಂಬ ಹೆಸರಿನ ನಾಡ ದೋಣಿಯೊಂದು ಗುರುವಾರ ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ಸಮದರ್ಭದಲ್ಲಿ ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿಗೆ ಹಾರಿ ಈಜಿ

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top