ಕರಾವಳಿ

ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ಕಾರು ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಾಳಾದ ಘಟನೆ ಮಾಣಿ-ಮೈಸೂರು ರಾ.ಹೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ರಾ.ಹೆ ಪರ್ಲಡ್ಕ ರಸ್ತೆಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ‌. ಘಟನೆಯಿಂದ ಓಮ್ನಿ ಕಾರಿನಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 28. ಹಲವು ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗಾಂಜಾ ಪ್ರಕರಣದಲ್ಲಿ ಭಾಗಿಯಾದ ಮಂಜೇಶ್ವರ ಕುಂಜತ್ತೂರಿನ ಮುಹಮ್ಮದ್ ಫತಮುದ್ದೀನ್(24), ಕೃಷ್ಣ(43), ಕೊಲೆ ಪ್ರಕರಣದ ಆರೋಪಿ ಸೆನೋಹರ್(23) ಹಾಗೂ ಶಸ್ತ್ರ ಕಾಯ್ದೆ ಪ್ರಕರಣಾದ ಆರೋಪಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾದ ಇವರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರು. ಇದೀಗ ಆರೋಪಿಗಳ ಸುಳಿವು ದೊರೆತ ಮೇರೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ➤ ಪುತ್ತೂರು ಮೂಲದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 28. ಸಹಕಾರಿ‌ ಸಂಸ್ಥೆಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಗ್ರಾಹಕನಂತೆ ವರ್ತಿಸಿ, ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕೇರಳ ನೋಂದಾವಣೆಯ ಕಾರಿನಲ್ಲಿ ಬಂದ ಈತ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕೊಂದರಲ್ಲಿ ಚಿನ್ನವನ್ನು ಅಡವಿಟ್ಟು, ತಾನು ಬಿಝಿಯಿರುವುದರಿಂದ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು, ಸಿಬ್ಬಂದಿಗಳು ಚಿನ್ನವನ್ನು ಪರಿಶೀಲಿಸುವ

ಉಪ್ಪಿನಂಗಡಿ: ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ➤ ಪುತ್ತೂರು ಮೂಲದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು, ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಫೆಬ್ರವರಿ 2 ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ 3 ರಂದು ಬೆಳಗ್ಗೆ 10 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ

ಮಂಗಳೂರು: ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿ.ವಿ ಕಾಲೇಜಿನಲ್ಲಿ ಒಂದು ದಿನದ ಶ್ರಮದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಮತ್ತು ಮಾನವಿಕ ಸಂಘದ ಸದಸ್ಯರು ಜಂಟಿಯಾಗಿ ಮಂಗಳವಾರ ಕಾಲೇಜಿನಲ್ಲಿ ‘ಕ್ಯಾಂಪಸ್ ಕ್ಲೀನ್ ಡ್ರೈವ್ʼ ಹಮ್ಮಿಕೊಂಡಿದ್ದರು. ಕೊರೋನಾ ಬಳಿಕ ಶಾಲೆಗಳು ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳಲ್ಲಿ ಉತ್ಸಾಹ ಮೂಡಿಸುವ ಸಲುವಾಗಿ, ಜೊತೆಗೆ ಆರೋಗ್ಯಕರ ಪರಿಸರ ನಿರ್ಮಾಣಕ್ಕಾಗಿ ಒಂದು ದಿನದ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಮಾನವಿಕ ಸಂಘದ ಸಂಚಾಲಕರಾದ ಡಾ. ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ನಡೆದ

ಮಂಗಳೂರು: ವಿ.ವಿ ಕಾಲೇಜಿನಲ್ಲಿ ಒಂದು ದಿನದ ಶ್ರಮದಾನ Read More »

ಕರಾವಳಿ, ಕರ್ನಾಟಕ

ಕಡಬ: ಗ್ರಾ.ಪಂ.ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ತಾಲೂಕಿನ 21 ಗ್ರಾಮ ಪಂಚಾಯತ್‌ ಗಳ ಚುನಾವಣೆಯ ಬಳಿಕ ಇದೀಗ ಪಂಚಾಯತ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೂವತ್ತು ತಿಂಗಳುಗಳ ಆಡಳಿತ ಅವಧಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಪುತ್ತೂರು ಪುರಭವನದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರ ನೇತೃತ್ವದಲ್ಲಿ ನಡೆದ ಈ ಮೀಸಲಾತಿ ಪ್ರಕ್ರಿಯೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಸಹಾಯಕ ಆಯುಕ್ತ ಡಾ| ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು ಮೊದಲಾದವರು ಉಪಸ್ಥಿತರಿದ್ದರು.

ಕಡಬ: ಗ್ರಾ.ಪಂ.ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ- ವಾರಸುದಾರರು ಸಂಪರ್ಕಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ತೋಟಬೆಂಗ್ರೆಯ ಅಳಿವೆಬಾಗಿಲಿನ ಬಳಿ ಫಲ್ಗುಣಿ ನದಿ ಸೇರುವ ಸ್ಥಳದ ನದಿ ಕಿನಾರೆಯಲ್ಲಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೃತ ವ್ಯಕ್ತಿಯು ಸುಮಾರು 5 ಅಡಿ 6 ಇಂಚು ಇದ್ದು, ದುಂಡು ಮುಖ, ಕಪ್ಪು ತಲೆ ಕೂದಲು, ದೃಢಕಾಯ ಶರೀರ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟನ್ನು ಹೊಂದಿರುತ್ತಾರೆ. ಕಪ್ಪು ನೀಲಿ ಹಾಗೂ ಬಿಳಿ ಮಿಶ್ರಿತವಾದ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ- ವಾರಸುದಾರರು ಸಂಪರ್ಕಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: 35 ಲಕ್ಷದ ಗಿಫ್ಟ್ ನಂಬಿ 1.35 ಲಕ್ಷ ಕಳೆದುಕೊಂಡ ವ್ಯಕ್ತಿ…! ➤ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ವ್ಯಕ್ತಿಯೋರ್ವ 35 ಲಕ್ಷದ ಉಡುಗೊರೆಯ ಆಸೆಗಾಗಿ ಒಂದು ಲಕ್ಷದ ಮೂವತ್ತೈದು ಸಾವಿರ ರೂ.ಗಳನ್ನು ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜ.3 ರಂದು ರೆನಾಲ್ಡ್ ಪ್ರಿನ್ಸ್ ಕ್ರಿಸ್ಟಪರ್ ಎಂಬಾತ ಮಂಗಳೂರಿನ ವ್ಯಕ್ತಿಗೆ ಫೇಸ್ಬುಕ್ ಮೂಲಕ ಚಾಟಿಂಗ್ ನಲ್ಲಿ ತೊಡಗಿ, ಆತ್ಮೀಯತೆಯಿಂದ ವರ್ತಿಸಿ, ಚಿನ್ನ ಹಾಗೂ ವಜ್ರಾಭರಣಗಳನ್ನು ಕಳುಹಿಸಿಕೊಡುವುದಾಗಿ ನಂಬಿಸಿದ್ದ. ಬಳಿಕ ಜ.18ರಂದು ದೆಹಲಿ ಕಸ್ಟಮ್ಸ್ ಅಧಿಕಾರಿ ಎಂದು ಓರ್ವ ಮಹಿಳೆ ಕರೆ ಮಾಡಿ ನಿಮಗ್ ಏರ್ಪೋರ್ಟ್ ಗೆ ಪಾರ್ಸೆಲ್ ಬಂದಿದ್ದು,

ಮಂಗಳೂರು: 35 ಲಕ್ಷದ ಗಿಫ್ಟ್ ನಂಬಿ 1.35 ಲಕ್ಷ ಕಳೆದುಕೊಂಡ ವ್ಯಕ್ತಿ…! ➤ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಸ್ ನಿರ್ವಾಹಕನಿಗೆ ಚೂರಿ ಇರಿತ ➤ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 28. ಬಸ್ ನಿರ್ವಾಹಕನೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ಸುರತ್ಕಲ್ ಬಳಿಯ ಕಾಟಿಪಳ್ಳ ಸಮೀಪ ಬುಧವಾರದಂದು ತಡರಾತ್ರಿ ನಡೆದಿದೆ. ಗಾಯಾಳುವನ್ನು ಕೃಷ್ಣಾಪುರ ನಿವಾಸಿ ಜಾಬಿರ್ (20) ಎಂದು ಗುರುತಿಸಲಾಗಿದೆ. ಬೈಕ್ ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳಿಂದ ಈ ಕೃತ್ಯ ಎಸಗಲಾಗಿದ್ದು, ಪರಿಣಾಮ ಜಾಬಿರ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ ಹಾಗೂ ಕೈಕಂಬ ಪರಿಸರದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸ್

ಮಂಗಳೂರು: ಬಸ್ ನಿರ್ವಾಹಕನಿಗೆ ಚೂರಿ ಇರಿತ ➤ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಬಂಟ್ವಾಳ ತಾಲೂಕು ಪಂಚಾಯತ್‍ ನ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯು ಫೆಬ್ರವರಿ 5 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ಕೆಡಿಪಿ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ, ಕರ್ನಾಟಕ
Scroll to Top