ಕರಾವಳಿ

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಖಾಸಗಿ ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜ.19ರ ಮಂಗಳವಾರ ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದ ವೇಳೆ ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿ, ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, […]

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಎಸ್ಡಿಪಿಐ ಮಠ ಬ್ರಾಂಚ್ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.21. ಇಲ್ಲಿನ 6ನೇ ವಾರ್ಡ್ ಮಠದ ಹಿರ್ತಡ್ಕ ಎಂಬಲ್ಲಿ ಕುಡಿಯುವ ನೀರಿನ ಟ್ಯಾಂಕಿಯಲ್ಲಿ ನೀರು ಕಲುಷಿತವಾಗಿದೆ ಎಂಬ ದೂರಿನನ್ವಯ ನೂತನ ಪಂಚಾಯತ್ ಸದಸ್ಯ ರಶೀದ್ ಮಠರವರ ನೇತೃತ್ವದಲ್ಲಿ ಮೂರು ದಿನಗಳ ಹಿಂದೆ ಪರಿಶೀಲನೆ ನಡೆಸಿ ಸ್ವಚ್ಛಗೊಳಿಸುವುದಾಗಿ ಊರವರಿಗೆ ಭರವಸೆ ಕೂಟ್ಟಿದ್ದು, ವಾರದೊಳಗೆ ನೀಡಿದ ಭರವಸೆಯನ್ನು ಪೂರೈಸುವ ಹಠದೊಂದಿಗೆ ರಶೀದ್ ಮಠರವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ನೀರಿನ ಟ್ಯಾಂಕನ್ನು ತೊಳೆದು ಸ್ವಚ್ಛಗೊಳಿಸಿದ್ದಾರೆ. ಈ ಸಂಧರ್ಭದಲ್ಲಿ ಟ್ಯಾಂಕಿಯಲ್ಲಿರುವ ಕೆಸರು, ಕಸ ಕಡ್ಡಿಗಳು ಮತ್ತು

ಉಪ್ಪಿನಂಗಡಿ: ಎಸ್ಡಿಪಿಐ ಮಠ ಬ್ರಾಂಚ್ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಚತೆ Read More »

ಕರಾವಳಿ, ಕರ್ನಾಟಕ

ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ. 21. ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಾಂತಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಅನುಶ್ರೀ ಎಂದು ಗುರುತಿಸಲಾಗಿದೆ. ಅನುಶ್ರೀ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯ ಪುತ್ರಿಯಾಗಿದ್ದು, ಆಕೆ ಅದೇ ಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇಂದು ಸಂಜೆ ತಾಯಿ ಮನೆಗೆ ಬಂದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿದ್ದು, ಗಾಬರಿಗೊಂಡ ತಾಯಿಯು ಸಮೀಪದದಲ್ಲಿದ್ದ ನಿರ್ಮಾಣ ಕಟ್ಟಡದ ಕೂಲಿ

ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 21. ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಮಂಗಳೂರು ಬೆಂಗ್ರೆ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್ ನಲ್ಲಿ ಮಂಗಳೂರಿನಿಂದ ಕಲ್ಲಡ್ಕಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸವಾರರನ್ನು ಸ್ಥಳೀಯರ ಸಹಕಾರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಲಕಿದು ಬಂದಿದೆ.

ಬಂಟ್ವಾಳ: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ಪ್ರಕರಣ ➤ ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿಹಿಂಪ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಓವರ್ ಟೇಕ್ ಮಾಡುವ ನೆಪದಲ್ಲಿ ಖಾಸಗಿ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಯಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ, ಈ ಕೃತ್ಯವನ್ನು ಎಸಗಿದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿಹಿಂಪ ಬಜರಂಗದಳ ಮನವಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದೂಗಳ ಮೇಲೆ ಹಲ್ಲೆ ಮುಂತಾದ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಖಾಸಗಿ ಬಸ್ ಚಾಲಕರೋರ್ವರಿಗೆ

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ಪ್ರಕರಣ ➤ ಆರೋಪಿಯನ್ನು ಕೂಡಲೇ ಬಂಧಿಸುವಂತೆ ವಿಹಿಂಪ ಆಗ್ರಹ Read More »

ಕರಾವಳಿ, ಕರ್ನಾಟಕ

ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 21. ಬೈಕ್ ವೊಂದರಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಸಂದರ್ಭ ಗಸ್ತು ನಿರತ ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪೆರ್ನೆ ಕಾರ್ಲ ನಿವಾಸಿ ಪಿಯಾದ್ ಪಿಂಟೋ ಎಂದು ಗುರುತಿಸಲಾಗಿದೆ. ರಾತ್ರಿ ಕರ್ತವ್ಯ ನಿರತರಾಗಿದ್ದ ಅಬಕಾರಿ ಪೊಲೀಸರು ಎಪಿಎಂಸಿ ರೈಲ್ವೇ ಗೇಟ್ ಬಳಿ ತಪಾಸಣೆ ನಡೆಸಿದಾಗ ಬೈಕ್ ನ ಚೀಲವೊಂದರಲ್ಲಿ 280 ಎಂ.ಎಲ್ ನ48 ಬಾಟಲಿಯಲ್ಲಿ 8.640 ಲೀಟರ್ ಪ್ರೆಸ್ಟೇಜ್ ವಿಸ್ಕಿಯನ್ನು ವಶಕ್ಕೆ

ಪುತ್ತೂರು: ಎಪಿಎಂಸಿ ಬಳಿ ಅಕ್ರಮ ಮದ್ಯ ಸಾಗಾಟ ಪತ್ತೆ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ.20. ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಪ್ರಾಣಾಪಾಯ ತಪ್ಪಿದ ಘಟನೆ ಬುಧವಾರದಂದು ನಡೆದಿದೆ. ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ ಪಿಕ್-ಅಪ್ ವಾಹನದಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು‌ ಗ್ರಾಹಕರಿಗೆ ವಿತರಿಸುತ್ತಿದ್ದು, ವಾಹನವನ್ನು ಹಿಂತೆಗೆಯುವ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬವು

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ. 22 ರಂದು “ನಮ್ಮ ನಡಿಗೆ- ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಆಂದೋಲನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಚ ಭಾರತ್ ಮಿಷನ್”(ಗ್ರಾ) ಯೋಜನೆಯಡಿ ಪ್ರತಿಯೊಂದು ಗ್ರಾಮವನ್ನು ತ್ಯಾಜ್ಯ ಮುಕ್ತವನ್ನಾಗಿಸಲು “ನಮ್ಮ ನಡಿಗೆ-ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಜಿಲ್ಲಾ ಆಂದೋಲನಕ್ಕೆ ಜನವರಿ 22 ರಂದು ಬೆಳಿಗ್ಗೆ 9.30 ಗಂಟೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಬಳಿ ಇರುವ ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ಸಿಗಲಿದೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ  ಕೋಟ ಶ್ರೀನಿವಾಸ

ಜ. 22 ರಂದು “ನಮ್ಮ ನಡಿಗೆ- ತ್ಯಾಜ್ಯ ಮುಕ್ತ ಕಡೆಗೆ” ವಿಶೇಷ ಆಂದೋಲನಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಜ. 22 ರಂದು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ ವತಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನಾ ಸಮಾರಂಭವನ್ನು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಜನವರಿ 22ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ, ಕರ್ನಾಟಕ ಸರ್ಕಾರ ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಎಸ್.ಅಂಗಾರ ವಹಿಸಲಿದ್ದಾರೆ. ಅರಣ್ಯ ಸಚಿವರಾದ ಆನಂದ್ ಸಿಂಗ್, ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್

ಸುಬ್ರಹ್ಮಣ್ಯ: ಜ. 22 ರಂದು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಡಿ.ಎಲ್.ಸಿ.ಎಂ.ಸಿ ಹಾಗೂ ಡಿ.ಎಲ್.ಎಸ್.ಸಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸಹಾಯಕ ಮಹಾ ಪ್ರಬಂಧಕರು ಭಾರತೀಯ ರಿಸರ್ವ್ ಬ್ಯಾಂಕ್ ಇವರ ಅಧ್ಯಕ್ಷತೆಯಲ್ಲಿ  ಡಿ.ಎಲ್.ಸಿ.ಎಂ.ಸಿ ಸಭೆಯು ಜನವರಿ 21 ರಂದು ಮಧ್ಯಾಹ್ನ 2 ಗಂಟೆಗೆ ಹಾಗೂ ಡಿ.ಎಲ್.ಎಸ್.ಸಿ ಸಭೆಯು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.  ಎಂದು ಜಿಲ್ಲಾ ಲೀಡ್ ಬ್ಯಾಂಕ್‍ನ ಮುಖ್ಯ ಪ್ರಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ಎಲ್.ಸಿ.ಎಂ.ಸಿ ಹಾಗೂ ಡಿ.ಎಲ್.ಎಸ್.ಸಿ ಸಭೆ Read More »

ಕರಾವಳಿ, ಕರ್ನಾಟಕ
Scroll to Top