ಕರಾವಳಿ

ಕಳಿಯ: ಸಿಡಿಲು ಬಡಿದು ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಳಿಯ, ಜ. 18. ಇಲ್ಲಿನ ಪಾಳ್ಯ ನಿವಾಸಿ ಸುಂದರ ಪೂಜಾರಿ ಎಂಬವರ ಮೆನಗೆ ಸಿಡಿಲು ಬಡಿದು ಮನೆಯ ವಿದ್ಯುಚ್ಛಕ್ತಿ ಉಪಕರಣಗಳ ವಯರ್ ಗಳು ಸುಟ್ಟು ಹೋಗಿದ್ದಲ್ಲದೇ ಸಿಡಿಲಿನ ಬಡಿತಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಮನೆಯ ಹಿಂಬಾಗದ ಗೋಡೆಗೆ ಸಿಡಿಲು ಬಡಿದಿದ್ದು, ಗೋಡೆಗೆ ಹಾನಿಯಾಗಿದೆ‌. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್.ಬಿ, ಮೆರಿಟಾ ಪಿಂಟೋ, ಸ್ಥಳೀಯ ಗ್ರಾಮ ಕರಣಿಕ ರವಿ.ಎಂ.ಎನ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಳಿಯ: ಸಿಡಿಲು ಬಡಿದು ಮನೆಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಿಯಾಲ್ ಬೈಲು: ಗೋಮಾಳಕ್ಕೆ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಇಲ್ಲಿನ ಎಂಜಿಎಂ ಪ್ರೌಢಶಾಲೆಯ ಬಳಿಯಿರುವ ಗೋಮಾಳಕ್ಕೆ ಬೆಂಕಿ ಆವರಿಸಿ ಗಾಂಧಿವನದ ಗಿಡಗಳಿಗೂ ಹಾನಿಯಾದ ಘಟನೆ ಇಂದು ನಡೆದಿದೆ. ಬೆಂಕಿ ಆವರಿಸಿಕೊಂಡ ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿದ್ದು, ಅವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಡಿಯಾಲ್ ಬೈಲು: ಗೋಮಾಳಕ್ಕೆ ಆಕಸ್ಮಿಕ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಲಂಕಾರು: ಅಪಾಯವನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಅಟೋರಿಕ್ಷಾ

(ನ್ಯೂಸ್ ಕಡಬ) newskadaba.com ಆಲಂಕಾರು, ಜ. 18. ಆಟೋ ರಿಕ್ಷಾವೊಂದು ಅಪಘಾತವನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿದ್ದ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದ ಆಟೋ ರಿಕ್ಷಾವೊಂದು ವಿರುದ್ದ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ವಾಹನದಿಂದ ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

ಆಲಂಕಾರು: ಅಪಾಯವನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಅಟೋರಿಕ್ಷಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಪೆರಾಬೆ, ಜ. 18. ಇಲ್ಲಿನ ಮನೆಯೊಂದರಲ್ಲಿ ಕೆಲ ದಿನಗಳ ಹಿಂದೆ ಮೃತಪಟ್ಟ ವ್ಯಕ್ತಿಯೊಬ್ಬರ ಕೊಳೆತ ಮೃತ ದೇಹವೊಂದು ಕುಂತೂರು ಗ್ರಾಮದ ಎರ್ಮಾಳು ಎಂಬಲ್ಲಿ ಪತ್ತೆಯಾಗಿದೆ. ಮೃತರನ್ನು ಬಾಲು ಕೊರಗ ಎಂದು ಗುರುತಿಸಲಾಗಿದೆ. ಇಲ್ಲಿನ ಮನೆಯೊಂದರಲ್ಲಿ ದುರ್ವಾಸನೆ ಬೀರುತ್ತಿದ್ದ ಕಾರಣ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಬಾಲು ಕೊರಗ ಎಂಬುವವರು ಮಲಗಿದಲ್ಲಿಯೇ ಮೃತ ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಬಳಿಕ ಪೊಲೀಸರ ನೇತೃತ್ವದಲ್ಲಿ ಮೃತ ಸಂಬಂಧಿಕರ ಉಪಸ್ಥಿತಿಯಲ್ಲಿ ಸ್ಥಳೀಯರು ಸೇರಿ

ಕುಂತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಬಸ್ ನಲ್ಲಿ ಬಿಟ್ಟುಹೋದ ಬ್ಯಾಗನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಸಾರ್ಟಿಸಿ ಚಾಲಕ ಮತ್ತು ನಿರ್ವಾಹಕ

(ನ್ಯೂಸ್ ಕಡಬ) newskadaba.com ಸುಬ್ರಮಣ್ಯ, ಜ. 18. ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಮರೆತು ಹೋಗಿದ್ದ ಬ್ಯಾಗನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಕೆಎಸ್​.ಆರ್​.ಟಿಸಿ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಜನವರಿ 16 ರಂದು ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಿಂದ ಧರ್ಮಸ್ಥಳಕ್ಕೆತೆರಳುತ್ತಿದ್ದ ಪ್ರಯಾಣಿಕರೋರ್ವರು ಬೆಲೆಬಾಳುವ ಲ್ಯಾಪ್​-ಟಾಪ್​ ಇದ್ದ ಬ್ಯಾಗನ್ನು ಬಸ್ಸಿನಲ್ಲಿಯೇ ಮರೆತು ಹೋಗಿದ್ದರು. ಇದನ್ನು ಗಮನಿಸಿದ ಚಾಲಕ ಈಸುಬ್​ ಅಲಿ ಮತ್ತು ನಿರ್ವಾಹಕ ಮಂಜು ತಕ್ಷಣವೇ ಪ್ರಯಾಣಿಕನನ್ನು ಹುಡುಕಲು ಆರಂಭಿಸಿದ್ದಾರೆ. ಇವರಿಬ್ಬರ ಪ್ರಯತ್ನದ ಫಲವಾಗಿ ಕೊನೆಗೂ ಬ್ಯಾಗ್​ ಬಿಟ್ಟು ಹೋಗಿದ್ದ

ಸುಬ್ರಹ್ಮಣ್ಯ: ಬಸ್ ನಲ್ಲಿ ಬಿಟ್ಟುಹೋದ ಬ್ಯಾಗನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಸಾರ್ಟಿಸಿ ಚಾಲಕ ಮತ್ತು ನಿರ್ವಾಹಕ Read More »

ಕರಾವಳಿ, ಕರ್ನಾಟಕ

ಉಗ್ರರನ್ನು ಸದೆಬಡಿದ ವೀರ ಯೋಧ ಝುಬೇರ್ ಹಳೆನೇರಂಕಿ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಉಗ್ರಗಾಮಿಗಳು ನಡೆಸಿದ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಇಬ್ಬರು ಉಗ್ರಗಾಮಿಗಳನ್ನು ಕೊಂದ ವೀರಯೋಧ ಆತೂರು ಸಮೀಪದ ಹಳೆನೇರಂಕಿಯ ಝುಬೇರ್ ನೇರಂಕಿ ಅವರನ್ನು ಟೀಮ್ ಬಿ ಹ್ಯೂಮನ್ ಹಾಗೂ ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ನಿಂದ ಕಂಕನಾಡಿಯ ವಿಶ್ವಾಸ್ ಕ್ರೌನ್ ನ ಟ್ಯಾಲೆಂಟ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು 2018 ಫೆಬ್ರವರಿಯ ಘಟನೆ ಬಹಳ ಮಹತ್ವದ್ದು, ಒಂದೂವರೆ ದಿನಗಳ ಕಾಲ ಕಾರ್ಯಾಚರಣೆ ನಡೆಸಿ, ವೈರಿಗಳನ್ನು ಸದೆಬಡಿಯುವಲ್ಲಿ ಯಶಸ್ವಿಯಾದವು ಎಂದರು. ಯುವಕರು

ಉಗ್ರರನ್ನು ಸದೆಬಡಿದ ವೀರ ಯೋಧ ಝುಬೇರ್ ಹಳೆನೇರಂಕಿ ಅವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ನಿಗಮದಿಂದ ಯುವಕರಿಗೆ ಬೈಕ್ ಖರೀದಿಗೆ ಸಾಲ -ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳು ಮನೆ ಬಾಗಿಲಿಗೆ ತಮ್ಮ ಉತ್ಪನ್ನಗಳನ್ನು ತಲುಪಿಸುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ  (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ

ನಿಗಮದಿಂದ ಯುವಕರಿಗೆ ಬೈಕ್ ಖರೀದಿಗೆ ಸಾಲ -ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಂಗಳೂರು: ವೀರ ಹನುಮಾನ್ ವ್ಯಾಯಾಮ ಶಾಲೆಯ ಸುವರ್ಣ ಮಹೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ದಿ. ಉಸ್ತಾದ್ ಮೋಹನ್ ದಾಸ್ ಮಾಸ್ಟರ್ ರವರು ಸ್ಥಾಪಿಸಿದ  ಶ್ರೀ ವೀರ ಹನುಮಾನ್ ವ್ಯಾಯಾಮ ಶಾಲೆ (ರಿ), ಉರ್ವ, ಮಂಗಳೂರು ಇದರ ಸುವರ್ಣ ಮಹೋತ್ಸವ ಇತ್ತೀಚಿಗೆ ಉರ್ವ ಮೈದಾನದಲ್ಲಿ ನಡೆಯಿತು. ಶಾಸಕ ವೇದವ್ಯಾಸ ಕಾಮತ್ ಅವರು ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಮೇಯರ್ ದಿವಾಕರ್ ಪಾಂಡೇಶ್ವರ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪ್ರದಾನ ಅರ್ಚಕರಾದ ಕೆ.ರಾಮ ಭಟ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ.

ಮಂಗಳೂರು: ವೀರ ಹನುಮಾನ್ ವ್ಯಾಯಾಮ ಶಾಲೆಯ ಸುವರ್ಣ ಮಹೋತ್ಸವ Read More »

ಕರಾವಳಿ, ಕರ್ನಾಟಕ

ರೆಂಜಿಲಾಡಿ ಶಾಲೆಯಲ್ಲಿ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜ. 18. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿ-ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಜ.17ರಂದು ಶ್ರಮದಾನ ನಡೆಯಿತು. ನೂಜಿ ರೆಂಜಿಲಾಡಿ ಶಾಲೆಯಲ್ಲಿ ಸುವರ್ಣ ಮಹೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ  ಅಭಿವೃದ್ಧಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಯುವಕ ಮಂಡಲದ ಸದಸ್ಯರು ಶಾಲೆಯ ಗೋಡೆಗೆ ಬಣ್ಣ ಬಳಿಯುವುದು, ವಠಾರ ಸ್ವಚ್ಚತೆ, ಹುಲ್ಲು ತೆರವು ಸೇರಿದಂತೆ ಇತರೆ ಕೆಲಸ ಕಾರ್ಯಗಳನ್ನು ನಡೆಸಿದರು. ಸುವರ್ಣ ಮಹೋತ್ಸವ ಸಮಿತಿ

ರೆಂಜಿಲಾಡಿ ಶಾಲೆಯಲ್ಲಿ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಶ್ರಮದಾನ Read More »

ಕರಾವಳಿ, ಕರ್ನಾಟಕ

ಕಿನ್ನಿಗೋಳಿ: ನವಜಾತ ಶಿಶುವಿನ ಕೊಳೆತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಲ್ಕಿ, ಜ. 18. ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವವೊಂದು ಕಿನ್ನಿಗೋಳಿ ಪರಿಸರದಲ್ಲಿ ಕಂಡುಬಂದಿದೆ. ಮುಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಬ್ಯಾಗೊಂದು ಪತ್ತೆಯಾಗಿದ್ದು, ಯಾರೋ ಪಾಪಿಗಳು ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವು ಸಂಪೂರ್ಣ ಕೊಳೆತು ಹೋಗಿದ್ದು ಗುರುತು ಸಿಗದಂತಾಗಿದೆ. ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭ

ಕಿನ್ನಿಗೋಳಿ: ನವಜಾತ ಶಿಶುವಿನ ಕೊಳೆತ ಮೃತದೇಹ ಪತ್ತೆ Read More »

ಕರಾವಳಿ
Scroll to Top