ಕರಾವಳಿ

ಮಂಗಳೂರು: ಜ. 16 ರಿಂದ ಕೋವಿಡ್ ಲಸಿಕೆ ಅಧಿಕೃತವಾಗಿ ಆರಂಭ ➤ ಪೂರ್ವಸಿದ್ದತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಕೋವಿಡ್ 19 ಸೊಂಕು ನಿರೋಧಕ ಲಸಿಕೆಯು ಜನವರಿ 16 ರಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು. ತಾಲೂಕು ಚಾಲನಾ ಸಮಿತಿ ಸಭೆಯನ್ನು ಮಿನಿ ವಿಧಾನಸೌಧ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಉಪ ತಹಶೀಲ್ದಾರ್ ಜಯಂತ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ ಮಾತನಾಡಿ,  ಈಗಾಗಲೇ ಡ್ರೈರನ್‍ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲಿ ವೆನ್‍ಲಾಕ್ ಆಸ್ಪತ್ರೆ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ […]

ಮಂಗಳೂರು: ಜ. 16 ರಿಂದ ಕೋವಿಡ್ ಲಸಿಕೆ ಅಧಿಕೃತವಾಗಿ ಆರಂಭ ➤ ಪೂರ್ವಸಿದ್ದತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ ಬೈಕ್ ಸವಾರ…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿ, ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪಣೋಲಿಬೈಲು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅತಿ ವೇಗದಿಂದ ಚಲಿಸುತ್ತಿದ್ದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಗಾಳಿಯಲ್ಲಿ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ

ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ ಬೈಕ್ ಸವಾರ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಅಕ್ರಮ ಗೋಸಾಗಾಟ ➤ ತಡೆಹಿಡಿದ ಹಿಂದೂ ಸಂಘಟನೆ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13. ಹಿಂದೂಪರ ಸಂಘಟನೆ ಕಾರ್ಯಕರ್ತರು ಅಕ್ರಮ ಜಾನುವಾರ ಸಾಗಾಟವನ್ನು ತಡೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.   6 ಹಸುಗಳು ಹಾಗೂ ಒಂದು ಕರುವನ್ನು ಕೋಟೆಕಾರು ಡೈರಿಯಿಂದ ಬಾಕ್ರಬೈಲು ಡೈರಿಗೆ ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಗೋವು ಸಾಗಾಟಗಾರರು ಗೋವುಗಳನ್ನು ಸಾಕುವ ಉದ್ದೇಶದಿಂದ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದ್ದು, ಇನ್ನು ಗೋಸಾಗಾಟಕ್ಕೆ ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಉಳ್ಳಾಲ: ಅಕ್ರಮ ಗೋಸಾಗಾಟ ➤ ತಡೆಹಿಡಿದ ಹಿಂದೂ ಸಂಘಟನೆ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿಯನ್ನು ಪಡೆದ ಪೊಲೀಸರು ದಾಳಿ ನಡೆಸಿ ನಾಲ್ಕು ಯುವತಿಯರನ್ನು ರಕ್ಷಣೆ ಮಾಡಿ ಆರೋಪಿಗಳನ್ನು ಬಂಧಿಸಿದ ಘಟನೆ ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹಿಂದುಸ್ತಾನ್ ಲಾಡ್ಜ್ ನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಲಾಡ್ಜ್ ಮಾಲಿಕ ಮೋಹನ್, ಮ್ಯಾನೇಜರ್ ಅಬ್ದುಲ್ ರಶೀದ್, ರೂಂ ಬಾಯ್ ಉದಯ ಶೆಟ್ಟಿ, ಗಿರಾಕಿಗಳಾದ ಭರತ್ ಮತ್ತು ಬಾಲಕೃಷ್ಣ ಎಂದು ಗುರತಿಸಲಾಗಿದೆ. ವೇಶ್ಯಾವಾಟಿಕೆಗೆಂದು ಮಹಿಳೆಯರನ್ನು ಕರೆತಂದಿದ್ದ ಆರೋಪಿ ಸುನಿಲ್ ಎಂಬಾತ ಪರಾರಿಯಾಗಿದ್ದಾನೆ.

ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ತಾಲೂಕಿನ ಮಾರ್ನಬೈಲು ಸಮೀಪ ಪೆಲತ್ತಕಟ್ಟೆ ಎಂಬಲ್ಲಿ ಸೋಮವಾರದಂದು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಬೊಳ್ಳಾಯಿ ನಿವಾಸಿ ಇಮ್ರಾನ್(22) ಹಾಗೂ ಮುಬಶ್ಶಿರ್ (12) ಎಂದು ಗುರುತಿಸಲಾಗಿದೆ. ಮೂಲತಃ ಕಾಸರಗೋಡು ನಿವಾಸಿಯಾಗಿರುವ ಇಮ್ರಾನ್ ತನ್ನ ಸಂಬಂಧಿ ಹುಡುಗ ಮುಬಶ್ಶಿರ್ ಜೊತೆ ಡಿಯೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆ ಎಂಬಲ್ಲಿ ಎರಡು ಆಕ್ಟಿವಾ ವಾಹನಗಳ ನಡುವೆ ಸರಣ ಅಪಘಾತ ಸಂಭವಿಸಿದ್ದು,

ಬಂಟ್ವಾಳ: ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ಹಿರಿಯ ಮುಖಂಡ, ಮಾಜಿ ತಾ.ಪಂ. ಸದಸ್ಯ ಸೀತಾರಾಮ ಗೌಡ ಕೋಡಿಂಬಾಳ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.12. ಬಿಜೆಪಿ ಹಿರಿಯ ಮುಖಂಡ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೀತಾರಾಮ ಗೌಡ ಕೋಡಿಂಬಾಳ ಅವರು ಮಂಗಳವಾರ ರಾತ್ರಿ ನಿಧನ ಹೊಂದಿದರು. ರಾಜಕೀಯ ಕ್ಷೇತ್ರದಲ್ಲಿ ಪ್ರಭಾವಿಯಾಗಿದ್ದ ಅವರಿಗೆ 70 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.

ಬಿಜೆಪಿ ಹಿರಿಯ ಮುಖಂಡ, ಮಾಜಿ ತಾ.ಪಂ. ಸದಸ್ಯ ಸೀತಾರಾಮ ಗೌಡ ಕೋಡಿಂಬಾಳ ನಿಧನ Read More »

ಕರಾವಳಿ

ಮೊದಲ ಬಾರಿಗೆ ಸುಳ್ಯಕ್ಕೆ ಒಲಿದ ಸಚಿವ ಸ್ಥಾನ ➤ ಶಾಸಕ ಎಸ್‌.ಅಂಗಾರರಿಗೆ ಮಂತ್ರಿಗಿರಿ ಫಿಕ್ಸ್

(ನ್ಯೂಸ್ ಕಡಬ) newskadaba.com ಸುಳ್ಯ, ಜ.12. ಹಿರಿಯ ಶಾಸಕ ಎಸ್.ಅಂಗಾರರವರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದ್ದು, ಮಾಹಿತಿ ತಿಳಿದ ಸುಳ್ಯ ಮಂಡಲ ಬಿಜೆಪಿಯಲ್ಲಿ ಸಂತೋಷ ಮನೆ ಮಾಡಿದೆ. ಆರು ಬಾರಿ ಗೆದ್ದು ಸುಳ್ಯದ ಶಾಸಕರಾಗಿರುವ ಎಸ್. ಅಂಗಾರರು ನಾಳೆ ಬಿಎಸ್ ಯಡಿಯೂರಪ್ಪ ಸಂಪುಟಕ್ಕೆ ಸೇರುವುದಕ್ಕಾಗಿ ಖುದ್ದು ಮುಖ್ಯಮಂತ್ರಿಯೇ ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಕರೆಸಿದ್ದಾರೆ. ಇನ್ನು ಅಂಗಾರರು ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ಸುಳ್ಯ ಮಂಡಲ ಬಿಜೆಪಿ ಖಚಿತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಹೊರಡಿಸಿದೆ.

ಮೊದಲ ಬಾರಿಗೆ ಸುಳ್ಯಕ್ಕೆ ಒಲಿದ ಸಚಿವ ಸ್ಥಾನ ➤ ಶಾಸಕ ಎಸ್‌.ಅಂಗಾರರಿಗೆ ಮಂತ್ರಿಗಿರಿ ಫಿಕ್ಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಕೊರೋನಾ ಲಸಿಕೆ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ವಿಶ್ವದಾದ್ಯಂತ ಹಬ್ಬಿದ್ದ ಕೊರೊನಾ ಸೋಂಕನ್ನು ಹೋಗಲಾಡಿಸಲು ದೇಶದಲ್ಲಿ ಜನವರಿ 16 ರಿಂದ ಬೃಹತ್ ಕೊರೋನಾ ಲಸಿಕಾ ಅಭಿಯಾನ ನಡೆಯಲಿದ್ದು, ಇದಕ್ಕಾಗಿ ದೇಶದ ಪ್ರಮುಖ ನಗರಗಳಿಗೆ ಕರೋನಾ ಲಸಿಕೆಯನ್ನು ವಿಮಾನದ ಮೂಲಕ ರವಾನಿಸಲಾಯಿತು. ಪುಣೆಯ ಸೆರಂ ಇನ್ಸ್ಟಿಟ್ಯೂಟ್ ನಿಂದ ಹೊರಟ ಕೊರೋನಾ ಲಸಿಕೆಯು ಪುಣೆ ವಿಮಾನದ ನಿಲ್ದಾಣದ ಮೂಲಕ ದೇಶದ ವಿವಿಧ ನಗರಗಳಿಗೆ ಕಳುಹಿಸಲಾಯಿತು. ಏರ್ ಇಂಡಿಯಾ, ಸ್ಪೈಸ್ ಜೆಟ್, ಗೋ ಏರ್, ಇಂಡಿಗೋ ಸೇರಿದಂತೆ ಒಟ್ಟು 9 ವಿಮಾನಗಳು ದೇಶದ

ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಕೊರೋನಾ ಲಸಿಕೆ ರವಾನೆ Read More »

ಕರಾವಳಿ

ಎಲ್ಲರ ಚಿತ್ತ ಸಂಪುಟ ವಿಸ್ತರಣೆಯತ್ತ..‼️ ➤ ಸುಳ್ಯದ ಬಂಗಾರ ಎಸ್. ಅಂಗಾರರಿಗೆ ಸಚಿವ ಸ್ಥಾನ..⁉️

(ನ್ಯೂಸ್ ಕಡಬ) newskadaba.com ಸುಳ್ಯ, ಜ.11. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿರುವುದರ ನಡುವೆಯೇ ಕರಾವಳಿ ಕರ್ನಾಟಕದ ಹಿರಿಯ ಶಾಸಕ ಎಸ್. ಅಂಗಾರರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಕುತೂಹಲ ಮನೆಮಾಡಿದೆ. ಬಿಜೆಪಿಯ ಭದ್ರಕೋಟೆ ಕರಾವಳಿಯಲ್ಲಿ ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂಬ ಅಸಮಾಧಾನ ಎದುರಾಗಿದ್ದು, ಸತತ 6 ಬಾರಿ ಗೆದ್ದಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರರವರಿಗೆ ಈ

ಎಲ್ಲರ ಚಿತ್ತ ಸಂಪುಟ ವಿಸ್ತರಣೆಯತ್ತ..‼️ ➤ ಸುಳ್ಯದ ಬಂಗಾರ ಎಸ್. ಅಂಗಾರರಿಗೆ ಸಚಿವ ಸ್ಥಾನ..⁉️ Read More »

ಕರಾವಳಿ, ಕರ್ನಾಟಕ

ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 11. ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನ ಜಡ್ಕಲ್ ಗ್ರಾಮದ ಹಾಲ್ಕಲ್ ಚಿಕ್ಕಪೇಟೆ ಎಂಬಲ್ಲಿ ನಡೆದಿದೆ. ಮೃತರನ್ನು ವೆಂಕಟೇಶ್ ಕಿಣಿ(62) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top