ಕರಾವಳಿ

ಸುಬ್ರಹ್ಮಣ್ಯ ದೇಗುಲದ ಆಸ್ತಿಯ ರಕ್ಷಣೆ ಮಾಡುವಂತೆ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 11. ರಾಜ್ಯದ ಪ್ರಮುಖ ಶ್ರದ್ದಾಕೇಂದ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ  ಜಾಗವನ್ನು ಯಾವುದೇ ಇಲಾಖೆ ಅಥವಾ ಸಂಸ್ಥೆಗಳಿಗೆ ಪರಭಾರೆ ಮಾಡುವುದು ಸರಿಯಲ್ಲ. ದೇವಸ್ಥಾನದ ಜಾಗವನ್ನು ಉಳಿಸಿಕೊಂಡು ದೇವಸ್ಥಾನದ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಒತ್ತಾಯಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿಯವರು ಮನವಿ ಮಾಡಿದ್ದಾರೆ.     ಯಾವುದೇ ಇಲಾಖೆಗೆ ಪರಭಾರೆ ಮಾಡಿದರೂ ಅದು ದೇವಸ್ಥಾನದ ಆಸ್ತಿಯಾಗಿ ಇರುವುದಿಲ್ಲ, ಆದ್ದರಿಂದ ದೇವಾಲಯದ ಅಭಿವೃದ್ದಿಗೆ ಮುಂದಿನ […]

ಸುಬ್ರಹ್ಮಣ್ಯ ದೇಗುಲದ ಆಸ್ತಿಯ ರಕ್ಷಣೆ ಮಾಡುವಂತೆ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಮನವಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಕಾಲು ಜಾರಿಗೆ ಕೆರೆಗೆ ಬಿದ್ದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜ. 11. ತೋಟದಲ್ಲಿ ಇತರ ಮಕ್ಕಳ ಜೊತೆ ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.   ಮೃತ ಬಾಲಕಿಯನ್ನು ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎ ಅವರ ಪುತ್ರಿ ಸರಪುನ್ನಿಸಾ (೪) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಜೊತೆ ಈಕೆ ಅಬ್ಬಾಸ್‌ ಬಾಕಿಮಾರು ಎಂಬವರ ತೋಟಕ್ಕೆ ಆಟ ಆಡಲು ತೆರಳಿದ್ದು, ಈ ವೇಳೆ

ವಿಟ್ಲ: ಕಾಲು ಜಾರಿಗೆ ಕೆರೆಗೆ ಬಿದ್ದು ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಟ್ಟಂಪಾಡಿ: ಭಾರೀ ಮಳೆಗೆ ಮನೆ ಮೇಲೆ ಬಿದ್ದ ಮರ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 10. ಕಳೆದ ಎರಡು ಮೂರು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಣಾಮ ಬೆಟ್ಟಂಪಾಡಿಯ ಮಿತ್ತಡ್ಕ ಎಂಬಲ್ಲಿ ಕುಸುಮಾ ಎಂಬವರ ಮನೆ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಬೆಟ್ಟಂಪಾಡಿ: ಭಾರೀ ಮಳೆಗೆ ಮನೆ ಮೇಲೆ ಬಿದ್ದ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಯುವ ಕಾಂಗ್ರೆಸ್ ಚುನಾವಣಾ ಕಣದಿಂದ ಹಿಂದೆ ಸರಿದ ಮಿಥುನ್ ರೈ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ನಡೆಯಲಿರುವ ಚುನಾವಣಾ ಕಣದಿಂದ ಮಿಥುನ್ ರೈ ಹಿಂದೆ ಸರಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆಯಿಂದ ಹಿಂದೆ ಸರಿದಿದ್ದೇನೆ. ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಚುನಾವಣಾ ಕಣದಿಂದ ಹಿಂದೆ ಸರಿದ ಮಿಥುನ್ ರೈ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೂಜಿಬಾಳ್ತಿಲ ಪಂಚಾಯತ್ ಸಿಬ್ಬಂದಿ ತಮ್ಮಯ್ಯ ಗೌಡ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.09. ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮ್ಮಯ್ಯ ಗೌಡ (51) ರವರು ಶನಿವಾರದಂದು ನಿಧನ ಹೊಂದಿದರು. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತಿಯಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಗಾಣದ ಕೊಟ್ಟಿಗೆ ನಿವಾಸಿಯಾಗಿದ್ದ ತಮ್ಮಯ್ಯ ಗೌಡರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ನೂಜಿಬಾಳ್ತಿಲ ಪಂಚಾಯತ್ ಸಿಬ್ಬಂದಿ ತಮ್ಮಯ್ಯ ಗೌಡ ನಿಧನ Read More »

ಕರಾವಳಿ

ಪಂಜ: ಬಿಜೆಪಿ ವತಿಯಿಂದ ಪ್ರತಿಜ್ಞಾ ಸಮಾವೇಶ

(ನ್ಯೂಸ್ ಕಡಬ) newskadaba.com ಪಂಜ, ಜ. 09. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಸುಳ್ಯ ಮಂಡಲ ಸಮಿತಿ ವತಿಯಿಂದ ಇಂದು ಪ್ರತಿಜ್ಞಾ ಸಮಾವೇಶವು ಪಂಜದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಜಿಲ್ಲಾ ತಾ.ಪಂ. ಹಾಗೂ ತಾಲೂಕು

ಪಂಜ: ಬಿಜೆಪಿ ವತಿಯಿಂದ ಪ್ರತಿಜ್ಞಾ ಸಮಾವೇಶ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಅಕ್ರಮ ಗಣಿಗಾರಿಕೆಗೆ ಜಿಲ್ಲಾಧಿಕಾರಿಗಳ ದಿಢೀರ್ ದಾಳಿ ➤ ಯಂತ್ರಗಳ ವಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 09. ಬೆಂಜನಪದವು ಎಂಬಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡವು ಯಂತ್ರಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಈ ಮೊದಲು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಾದರೂ ಗಣಿಗಾರಿಕೆ ಮುಂದುವರಿಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರಿಂದ ದೂರು ದಾಖಲಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಹಾಗೂ ತಾಲೂಕು ತಹಶೀಲ್ದಾರ್ ರಶ್ಮಿಎಸ್. ಆರ್

ಬಂಟ್ವಾಳ: ಅಕ್ರಮ ಗಣಿಗಾರಿಕೆಗೆ ಜಿಲ್ಲಾಧಿಕಾರಿಗಳ ದಿಢೀರ್ ದಾಳಿ ➤ ಯಂತ್ರಗಳ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಓಮ್ನಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 09. ಓಮ್ನಿ ಕಾರೊಂದು ಪಲ್ಟಿಯಾದ ಘಟನೆ ಕಟ್ಟತ್ತಾರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಪುತ್ತೂರು: ಓಮ್ನಿ ಕಾರು ಪಲ್ಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಫಝಲ್ ಕೋಡಿಂಬಾಳ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜ. 09. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕಡಬ ತಾ.ಪಂ.ಮಾಜಿ ಸದಸ್ಯ ಫಝಲ್ ಕೋಡಿಂಬಾಳ ಅವರನ್ನು ನೇಮಕಗೊಳಿಸಿ ಅದೇಶ ಹೊರಡಿಸಲಾಗಿದೆ. ಎನ್. ಎಸ್.ಯು.ಐ ಮೂಲಕ ರಾಜಕೀಯ ಪ್ರವೇಶಿಸಿ ಸತತ ಮೂರು ಬಾರಿ ಕಡಬ‌ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿರುವ ಇವರು, ಕಡಬ ಗ್ರಾ.ಪಂ. ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಳೆದ ಬಾರಿ ಕಡಬ ತಾ.ಪಂ. ಸದಸ್ಯರಾಗಿ, ಬಳಿಕ ಕಡಬ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದಾಗ ತಾಲೂಕು ಪಂಚಾಯತ್ ಸದಸ್ಯ ಸ್ಥಾನ ಕಳೆದುಕೊಂಡಿದ್ದರು. ಮಂಗಳೂರು

ಕಡಬ: ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಫಝಲ್ ಕೋಡಿಂಬಾಳ ನೇಮಕ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನ ಗ್ರಾಮಗಳ ವಿವರ ಪಂಚಮಿತ್ರ ವೆಬ್ ತಾಣದಲ್ಲಿ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಕಡಬ, ಜ. 09. ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಮಿತ್ರ ವೆಬ್ ತಾಣದಲ್ಲಿ ನೂತನ ಕಡಬ ತಾಲೂಕು ಕೂಡಾ ಸೇರ್ಪಡೆಯಾಗಿದೆ. ತಾಲೂಕಿನ ನಕ್ಷೆಯ ಮೇಲೆ ಕ್ಲಿಕ್ ಮಾಡಿದಾಗ ಎಲ್ಲಾ 21 ಗ್ರಾ.ಪಂ ಗಳ ವಿವರ ಪ್ರಸ್ತುತ ಲಭ್ಯವಾಗುತ್ತಿದೆ. ಈ ವೆಬ್ ತಾಣದಲ್ಲಿ ಆಯಾ ತಾಲೂಕಿನ ನಕ್ಷೆಯ ಮೇಲೆ ಕ್ಲಿಕ್ ಮಾಡಿದ ಕೂಡಲೇ ತಾಲೂಕಿಗೆ ಸಂಬಂಧಿಸಿದ ಗ್ರಾ.ಪಂ ಗಳ ಸಂಪೂರ್ಣ ಮಾಹಿತಿ ಸಿಗಲಿದೆ.

ಕಡಬ ತಾಲೂಕಿನ ಗ್ರಾಮಗಳ ವಿವರ ಪಂಚಮಿತ್ರ ವೆಬ್ ತಾಣದಲ್ಲಿ ಸೇರ್ಪಡೆ…! Read More »

ಕರಾವಳಿ, ಕರ್ನಾಟಕ
Scroll to Top