ಕರಾವಳಿ

ಸಿಇಟಿ ಕೌನ್ಸೆಲಿಂಗ್ ಅವಧಿ ಜ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01.  ರಾಜ್ಯದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ.15ರ ತನಕ ಕಾಲಾವಕಾಶವನ್ನು ವಿಸ್ತರಣೆ ಮಾಡಿ ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌‌.ಅಶ್ವತ್ಥ್‌‌‌‌ ನಾರಾಯಣ ಹೇಳಿದ್ದಾರೆ.     “ಈ ಹಿನ್ನೆಲೆ ಇನ್ನೊಂದು ಸುತ್ತಿನ ಕೌನ್ಸೆಲಿಂಗ್‌‌‌ ನಡೆಸಲಾಗುವುದು. ಇದರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೌನ್ಸೆಲಿಂಗ್‌  ಶೀಘ್ರದಲ್ಲೇ ಪ್ರಕಟಿಸಲಿದೆ” ಎಂದಿದ್ದಾರೆ.  

ಸಿಇಟಿ ಕೌನ್ಸೆಲಿಂಗ್ ಅವಧಿ ಜ.15ರ ವರೆಗೆ ವಿಸ್ತರಣೆ Read More »

ಕರಾವಳಿ

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜ.01. 17 ವರ್ಷದ ಬಾಲಕಿಯೋರ್ವಳ ವಿವಾಹ ನಡೆಸಲು ಮುಂದಾದ ಸಂದರ್ಭದಲ್ಲಿ  ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮದುವೆಯನ್ನು ತಡೆದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ ಗ್ರಾಮದ 17 ವರ್ಷದ ಬಾಲಕಿಯನ್ನು 28 ವರ್ಷದ ಹುಡುಗನೊಂದಿಗೆ ವಿವಾಹ ಮಾಡಲು ಎರಡೂ ಕಡೆಯ ಸಂಬಂಧಿಕರೂ ಕೂಡಾ ಒಪ್ಪಿದ್ದು, ಸಮಾರಂಭಕ್ಕೆ 200ಕ್ಕೂ ಅಧಿಕ ಮಂದಿ ಸೇರಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಜಿಲ್ಲಾ ಮಹಿಳಾ

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಬೈಕ್ ಪರಾರಿ

(ನ್ಯೂಸ್ ಕಡಬ) newskadaba.com ಕೋಡಿಂಬಾಡಿ, ಜ.  01. ಪಾದಚಾರಿ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ನಡೆದಿದೆ.   ಗಾಯಗೋಡವರನ್ನು ಸೇಡಿಯಾಪು ನಿವಾಸಿ ದಿ. ದೇವಣ್ಣ ಎಂಬವರ ಪತ್ನಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅಪಘಾತ ರಭಸಕ್ಕೆ  ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಪುತ್ತೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಬೈಕ್ ಪರಾರಿ Read More »

ಕರಾವಳಿ

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬೀಳುತ್ತಲೇ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹಾಗೂ ಮಂಗಳೂರು ಎ.ಸಿ.ಪಿ ರಂಜಿತ್ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಲ್ಕಿ: ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮುಲ್ಕಿಯಲ್ಲಿ ಗುರುವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಆರ್ತಿಲ ನಿವಾಸಿ ಜಯರಾಮ ಗೌಡ(41) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ಗುರುವಾರದಂದು ಮಂಗಳೂರಿಗೆ ತೆರಳಿದ್ದು, ಮುಲ್ಕಿ ಸಮೀಪದ ಸಸಿಹಿತ್ಲು ಬೀಚ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರು ಸಾಮಾಜಿಕ, ಧಾರ್ಮಿಕ ರಂಗದಲ್ಲಿ ಗುರುತಿಸಿಕೊಂಡಿದ್ದು, ಜೇಸಿಐ ಕಡಬ ಕದಂಬ ಘಟಕದ ಪೂರ್ವಾಧ್ಯಕ್ಷರಾಗಿದ್ದರು‌.

ಮುಲ್ಕಿ: ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ಈ ಬಾರಿಯ ಪಂಚಾಯತ್ ಚುನಾವಣೆ ಒಂದಲ್ಲ ಒಂದು ರೀತಿಯಿಂದ ವಿಶೇಷವಾಗಿತ್ತು. ಅದರಲ್ಲಿ ತೆಕ್ಕಾರು ಪಂಚಾಯತ್ ವ್ಯಾಪ್ತಿಯ ವಾರ್ಡ್-2 ರಲ್ಲಿ ಈ ಬಾರಿ ಮತದಾರರು 3 ಪಕ್ಷದ ಒಂದೊಂದು ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ.   ಕಾಂಗ್ರೆಸ್ ನ ಭದ್ರ ಕೋಟೆ ಎಂದು ಹೇಳುತ್ತಿದ್ದ ತೆಕ್ಕಾರು-2 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಐಸಮ್ಮರವರು 7 ಮತಗಳ ಅಂತರದಿಂದ ಜಯಶಾಲಿಯಾದರೆ, ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ಅನ್ವರ್ ನೆಲ್ಲಿಪಳಿಕೆ 10 ಮತಗಳ ಅಂತರದಿಂದ

ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು Read More »

ಕರಾವಳಿ, ಕರ್ನಾಟಕ

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಜಿರೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ ➤ ಆರು ಮಂದಿ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 31. ‌ತಾಲೂಕಿನ ಉಜಿರೆ‌ ಎಂಬಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ‌ ಮತ‌ಎಣಿಕೆ ಸಂದರ್ಭದಲ್ಲಿ ಪಾಕಿಸ್ಥಾನ ಪರವಾಗಿ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಗುರುವಾಯನಕೆರೆ‌‌ ಸಮೀಪದ ಪಿಲಿಚಂಡಿಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಕೂಡ ಕೆಲವರನ್ನು ಬಂಧಿಸುವ ಸಾಧ್ಯತೆ ಇದೆ. ಎಸ್ಪಿ ಬಿ.ಎಂ.

ಉಜಿರೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ ➤ ಆರು ಮಂದಿ ಕಾರ್ಯಕರ್ತರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಮಂಗಳೂರಿಗೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರು 72 ಗಂಟೆಯ ಒಳಗೆ ಕೊರೋನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೋನಾ ವೈರಸ್‌ನ ಎರಡನೇ ಅಲೆಯು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮವನ್ನು ಕೈಗೊಳ್ಳಲಾಗುತ್ತಿದೆ. ವಿದೇಶಿ ಪ್ರಯಾಣಿಕರು ತಮ್ಮ ಕೊರೊನಾ ಪರೀಕ್ಷೆಯನ್ನು ಮಾಡದಿದ್ದಲ್ಲಿ ಆರ್‌.ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು

ಮಂಗಳೂರು: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಬಿದ್ದು ಸಿಕ್ಕಿದ ಚಿನ್ನವನ್ನು ಹಿಂತಿರುಗಿಸಿ ಮಾನವೀಯತೆ ➤ ಕಡಬ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಗೋವಿಂದರಾಜುಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com  ಕಡಬ, ಡಿ.28. ಗ್ರಾಮ ಪಂಚಾಯತ್ ಚುನಾವಣೆಯ ನಿಮಿತ್ತ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೋರ್ವರಿಗೆ ಸಿಕ್ಕಿದ ಎರಡು ಚಿನ್ನದ ಉಂಗುರಗಳನ್ನು ಪ್ರಾಮಾಣಿಕವಾಗಿ ವಾರಸುದಾರರಿಗೆ ಹಿಂತಿರುಗಿಸಿದ ಘಟನೆ ಕುಂತೂರಿನಲ್ಲಿ ನಡೆದಿದೆ. ಕುಂತೂರು ಹಿರಿಯ ಪ್ರಾಥಮಿಕ ಶಾಲೆಯ ಕುಂತೂರು ಪದವು ಎಂಬಲ್ಲಿ ಕರ್ತವ್ಯದಲ್ಲಿದ್ದ ಕಡಬ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಗೋವಿಂದರಾಜುರವರಿಗೆ ಶಾಲಾ ಆವರಣದಲ್ಲಿ ಎರಡು ಚಿನ್ನದ ಉಂಗುರಗಳು ಸಿಕ್ಕಿದ್ದು, ಉಂಗುರಗಳನ್ನು ಕಡಬ ಠಾಣೆಗೆ ತಂದು ಒಪ್ಪಿಸಿದ್ದರು. ಇದು ಕುಂತೂರಿನ ಬಾಬುಗೌಡ ಎಂಬವರ ಪುತ್ರ ಸನತ್ ಎಂಬವರಿಗೆ ಸೇರಿದ್ದೆಂದು ಖಚಿತ

ಬಿದ್ದು ಸಿಕ್ಕಿದ ಚಿನ್ನವನ್ನು ಹಿಂತಿರುಗಿಸಿ ಮಾನವೀಯತೆ ➤ ಕಡಬ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಗೋವಿಂದರಾಜುಗೆ ವ್ಯಾಪಕ ಪ್ರಶಂಸೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top