ಕರಾವಳಿ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸಹಿತ ಬೀಗ ಹಾಕಿಕೊಂಡು ಸಮುದ್ರದಲ್ಲಿ ಒಂದು ಕಿ.ಮೀ. ಈಜಿದ ಶಿಕ್ಷಕ ನಾಗರಾಜ್ ಖಾರ್ವಿಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಚುಗೋಡು ನಿವಾಸಿಯಾಗಿರುವ ನಾಗರಾಜ ಖಾರ್ವಿಯವರು ಬಂಟ್ವಾಳ ತಾಲೂಕಿನ ಕಲ್ಮಂಜದ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಶಿಕ್ಷಕರಾಗಿದ್ದಾರೆ.   ಈಜಿನ ಮೂಲಕ ಹಲವಾರು ಸಾಹಸವನ್ನು ಮಾಡಿರುವ ಶಿಕ್ಷಕ ನಾಗರಾಜ ಖಾರ್ವಿಯವರು ತಣ್ಣೀರು ಬಾವಿಯ ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಬೆಳಗ್ಗೆ […]

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ Read More »

ಕರಾವಳಿ

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 23. ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡವು ದಾಳಿ ನಡೆಸಿ ಅಕ್ರಮ ಮರ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿ ಮರ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಅಕ್ರಮ ಮರ ಸಾಗಾಟದ ಕುರಿತಂತೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಅರಣ್ಯ ಇಲಾಖಾ ಅಧಿಕಾರಿಗಳ ತಂಡವು ದಾಳಿ ನಡೆಸಿ ಪೆರಿಯಡ್ಕ ಎಂಬಲ್ಲಿ ಮರ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಇದರ ಒಟ್ಟು ಮೌಲ್ಯ 10 ಲಕ್ಷ ರೂ. ಎಂದು

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ ಮತ್ತು ಬೈಕ್‌ ಕಳ್ಳತನ ಪ್ರಕರಣ ➤ ಮೂವರು ಆರೋಪಿಗಳು ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ನಗರದ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸರಕಳ್ಳತನ ಮತ್ತು ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಗರ ಅಪರಾಧ ಪತ್ತೆದಳ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.   ಪೆರ್ಮನ್ನೂರು ಚೆಂಬುಗುಡ್ಡೆಯ ಬಿ.ಕೆ.ಕಾಟೇಜ್‌ ನಿವಾಸಿ ಹಬೀಬ್‌ ಹಸನ್‌ ಆಲಿಯಾಸ್‌ ಅಬ್ಬಿ(39), ಬಿ.ಸಿ.ರೋಡ್‌ ಪಲ್ಲಮಜಲು ನಿವಾಸಿ ಅಬ್ದುಲ್‌ ಮನ್ನಾನ್‌ ಆಲಿಯಾಸ್‌ ಅಬ್ದುಲ್‌ ಮುನಾಫ್‌(32) ಮತ್ತು ಉಡುಪಿ ಪೆರ್ಡೂರು ಗ್ರಾಮ ಹಿರಿಯಡಕ ಅಲಂಕಾರು ಮನೆಯ ಮೊಹಮ್ಮದ್‌ ತೌಸಿಫ್‌ ಆಲಿಯಾಸ್‌ ಶೈಲು ಆಲಿಯಾಸ್‌ ಮುನ್ನ(28) ಬಂಧಿತರು.ಬಂಧಿತರಿಂದ ಒಟ್ಟು ಅಂದಾಜು

ಸರ ಮತ್ತು ಬೈಕ್‌ ಕಳ್ಳತನ ಪ್ರಕರಣ ➤ ಮೂವರು ಆರೋಪಿಗಳು ಪೊಲೀಸರ ಬಲೆಗೆ Read More »

ಕರಾವಳಿ

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ 822 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.77.7 ಮತದಾನವಾಗಿದೆ. ಮಂಗಳವಾರ ಸಂಜೆ ಚುನಾವಣಾ ಶಾಖೆಯ ಕಂಟ್ರೋಲ್ ರೂಮ್ ನೀಡಿದ ಮಾಹಿತಿ ಪ್ರಕಾರ, ಒಟ್ಟು 2,77,133 ಮತದಾರರ ಪೈಕಿ 2,15,535 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 1,04,156 ಪುರುಷರು, 1,11,376 ಮಹಿಳೆಯರು ಹಾಗೂ 3 ಇತರರು. ಮತದಾನ ಪೂರ್ಣಗೊಂಡ ಕೂಡಲೇ ಮತಪೆಟ್ಟಿಗೆಗಳನ್ನು ಭದ್ರಪಡಿಸಿ, ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿರುವ ಮೂರು ಸ್ಟ್ರಾಂಗ್ ರೂಮ್ ಗಳಿಗೆ ತರಲಾಯಿತು.

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಾಸ್ಟೋರ್, ಅಶೋಕ ನಗರ ಅಂಚೆ, ಮಂಗಳೂರು ದೂ.ಸಂ:

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .   ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ರೋಗದ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆಯನ್ನು  ತಡೆಯಲು ಇಂಗ್ಲೆಂಡ್‍ ನಿಂದ ಭಾರತಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ ಜಿಲ್ಲೆಗೆ ಡಿಸೆಂಬರ್ 7 ರಿಂದ ಆಗಮಿಸಿರುವ ಎಲ್ಲಾ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು. ಜಿಲ್ಲೆಗೆ ಆಗಮಿಸಿರುವ

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ Read More »

ಕರಾವಳಿ

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ  ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ ➤ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬ್ರಿಟನ್ ನಲ್ಲಿ ಕೊರೊನಾ ಮಾದರಿಯ ಎರಡನೇ ಅಲೆ ಎದ್ದಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ಭೀತಿ ಹುಟ್ಟಿಸಿದೆ. ಬ್ರಿಟನ್ ಸಹಿತ ಹಲವು ದೇಶಗಳಿಂದ ಭಾರತೀಯರು ವಾಪಸಾಗುತ್ತಿದ್ದು, ಮಂಗಳೂರಿಗೂ 56 ಮಂದಿ ಬಂದಿದ್ದಾರೆ. ಇವರೆಲ್ಲರೂ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್‌ನೊಂದಿಗೆ ತಾಯ್ನಾಡು ಪ್ರವೇಶಿಸಿದ್ದಾರೆ. ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ

ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ Read More »

ಕರಾವಳಿ, ಕರ್ನಾಟಕ

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಬ್ರಿಟನ್ ನಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಬ್ರಿಟನ್ ಸೇರಿದಂತೆ ಹಲವು ದೇಶಗಳಿಂದ ಭಾರತೀಯರು ತಾಯ್ನಾಡಿಗೆ ವಾಪಸಾಗುತ್ತಿದ್ದು, 56 ಮಂದಿ ಮಂಗಳೂರಿಗೆ ಬಂದಿದ್ದಾರೆ. ಇವರೆಲ್ಲರೂ ತಾವು ವಾಸಿಸುತ್ತಿದ್ದ ದೇಶದಲ್ಲೇ ಕೊರೋನಾ ಪರೀಕ್ಷೆ ನಡೆಸಿ ಕೋವಿಡ್ ನೆಗೆಟಿವ್ ದೃಢೀಕರಣದೊಂದಿಗೆ ಆಗಮಿಸಿದ್ದು, ಬ್ರಿಟನ್ ನಲ್ಲಿ ಕೊರೋನಾ ಆರ್ಭಟ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top