ಕರಾವಳಿ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.15: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ, ಸಡಗರಕ್ಕೆ ತೆರೆ ಬಿದ್ದಿದೆ.ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಾನಾ ವಿಷಯ ಮಂಥನದ 88ನೇ ಸಾಹಿತ್ಯ ಸಮ್ಮೇಳನವೂ ನಡೆಯಿತು.   ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಹಿರಿಯ ವಿದ್ವಾಂಸ, ವೇದಭೂಷಣ ಡಾ.ಎಸ್. ರಂಗನಾಥ್ ಉದ್ಘಾಟಿಸಿದರು.ಲಕ್ಷದೀಪೋತ್ಸವ ಈ ಬಾರಿ ಕೊರೊನಾ ಆತಂಕದ ನಡುವೆಯೂ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ […]

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ Read More »

ಕರಾವಳಿ

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ

(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ Read More »

ಕರಾವಳಿ

ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಅನಾರೋಗ್ಯದಿಂದ ಬಳಲುತ್ತಿದ್ದ ಸುದ್ದಿ ಬಿಡುಗಡೆ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಅನಾರೋಗ್ಯಕ್ಕೊಳಗಾದ ಇವರು ಸೋಮವಾರ ರಾತ್ರಿ

ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ.14: ಮಧ್ಯಪ್ರದೇಶ ಹೈಕೋರ್ಟ್​ನ ಇಂದೋರ್ ಪೀಠದ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​-19 ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 60 ವರ್ಷದ ಕಸಾರೇಕರ್ ಅವರು ಬಹಳ ಹಿಂದಿನಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಕೋವಿಡ್​-19ಜಿಲ್ಲಾ ನೋಡಲ್

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು Read More »

ಕರಾವಳಿ

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.14: ಗುತ್ತಿಗಾರಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದ ಹಿನ್ನಲೆಯಲ್ಲಿ ಮೃತ ಪಟ್ಟಿದ್ದಾರೆ. ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರವರ ಪುತ್ರಿ ಯಶಸ್ವಿನಿ ಇಂದು ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದು ಬಂದಿದ್ದು, ಮೃತಳು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ.

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ.13ರ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಕಾರ್ಯದಲ್ಲಿ ಸೂರ್ಯಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಆವನೀಶ್ ಭಟ್, ರತನ್, ಅಭಿಷೇಕ್ ಕಾರ್ತಿಕ್ ರಾವ್, ನಾಗೇಶ್ ಮಣಿಯಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ Read More »

ಕರಾವಳಿ

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿದರು.   ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.ವೆನ್ಲಾಕ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಕರಾವಳಿ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ , ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಬಳಿ ನಡೆದ ಅಪಘಾತದಲ್ಲಿ ಮಹಿಳೆ ಮೃತ ಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹೆಜಮಾಡಿ ಕೊಕ್ರಾಣಿ ನಿವಾಸಿ ಅಪ್ಪಿ ಸಾಲ್ಯಾನ್(85) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅಪಘಾತದಿಂದ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಡಿ.13ರ ರವಿವಾರ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮೂಡಬಿದಿರೆ ಘಟಕದ ಗೃಹಕ್ಷಕರ ಪದೋನ್ನತಿ ಹಾಗೂ ಸನ್ಮಾನ ಕಾರ್ಯಕ್ರಮವು ಮೂಡಬಿದಿರೆಯ ಅಮರಾವತಿ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುದೀಪ್ ಎಂ.ವಿ., ಮೂಡಬಿದ್ರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಕಾನೂನು ಸುವ್ಯವಸ್ಥಾಪಕರು, ದಯಾನಂದ ಪೈ ಮಾಜಿ ಘಟಕಾಧಿಕಾರಿಗಳು, ಪಡುಮಾರ್ನಾಡು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಡಾ|| ಮುರಳೀಕೃಷ್ಣ ಆರ್.ವಿ. ಮಕ್ಕಳ ತಜ್ಞರು, ಅಧ್ಯಕ್ಷರು ರೋಟರಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು Read More »

ಕರಾವಳಿ
Scroll to Top