ಕರಾವಳಿ

ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 06: ಲಾರಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್‌ ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯಗಳಾಗಿದ್ದು,  ರಾ.ಹೆ 66 ರ ತಲಪಾಡಿ ಉಚ್ಚಿಲ ಬಳಿ ನಡೆದಿದೆ.     ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಕೇರಳ ಮೂಲದವರಾಗಿದ್ದು, ಒಬ್ಬರು ಮಂಜೇಶ್ವರ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯ ಬಗ್ಗೆ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ

ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರಮಬೈಲು ಸಮೀಪ ಕಳೆದ ದಿನ ಅಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲದ ಸಮಕ್ತ್ ಜೈನ್ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ. 05:  ಭಾರತೀಯ ಜೈನ್ ಮಿಲನ್ ವಲಯ 8ರ ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಶಾಖೆ ಮಂಗಳೂರು ಇದರ ಮಾಸಿಕ ಸಭೆಯಲ್ಲಿ ಕನ್ನಡ ಸಾರಸ್ವತ ಲೋಕದ ಉದಯೋನ್ಮುಖ ಯುವಪ್ರತಿಭೆಯಾಗಿ ರಾಜ್ಯ ಅಂತರ್ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಾಗೂ ಜಿನ ಭಜನೆಗಳ ರಚನೆಗಾರನಾಗಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹೊಸಂಗಡಿ ಬಸದಿ ಸಮ್ಯಕ್ತ್ ಎಚ್. ಜೈನ್ ಅವರನ್ನು ಜೈನ ಧರ್ಮದ ಹೆಮ್ಮೆಯ ಬಾಲ ಪ್ರತಿಭೆ ಎಂದು ಗೌರವಿಸಿ ಸನ್ಮಾನಿಸಲಾಯಿತು.   ಸಭೆಯು ಕುಪ್ಪೆಪದವು ಪದ್ಮಪ್ರಸಾದ್ ಅವರ

ನೂಜಿಬಾಳ್ತಿಲದ ಸಮಕ್ತ್ ಜೈನ್ ಅವರಿಗೆ ಸನ್ಮಾನ Read More »

ಕರಾವಳಿ

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿ ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಪುತ್ತೂರು ಪಾಣಾಜೆ ರಸ್ತೆಯ ಕೈಕಾರ ಎಂಬಲ್ಲಿ ನಡೆದಿದೆ.     ಲಾರಿಯಲ್ಲಿ ವಿವಿಧ ಜಾತಿಯ 62 ದಿಮ್ಮಿಗಳು ಹಾಗೂ ಒಟ್ಟು ರೂ.4 ಲಕ್ಷ ಅಂದಾಜಿನ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಯವರ ನಿರ್ದೇಶನದಂತೆ ಪುತ್ತೂರು

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ➤ ಓರ್ವ ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 05: ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ.   ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ದುರಸ್ತಿಗಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಓರ್ವರ ಸ್ಥಿತಿ ಚಿಂತಾಜನಕವಾಗಿದ್ದು, ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ➤ ಓರ್ವ ಪ್ರಯಾಣಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕೋವಿಡ್ ಲಸಿಕೆ ತೆಗೆದುಕೊಂಡಿದ್ದ ಸಚಿವ ಅನಿಲ್ ವಿಜ್ ಗೆ ಕೊರೋನಾ.!

(ನ್ಯೂಸ್ ಕಡಬ) newskadaba.com ಚಂಡೀಘಡ, ಡಿ. 05: ಈ ಹಿಂದೆ ಪ್ರಯೋಗಾರ್ಥ ಕೊರೋನಾ ಲಸಿಕೆಯನ್ನು ಹಾಕಿಸಿಕೊಂಡಿದ್ದ ಹರ್ಯಾಣದ ಸಚಿವರಿಗೇ ಕೊರೋನಾ ಸೋಂಕು ಕಂಡು ಬಂದಿದೆ .ಹರ್ಯಾಣ ಸಚಿವ ಅನಿಲ್ ವಿಜ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಕುರಿತಂತೆ ಅವರೇ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಕಳೆದ 10 ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ. ಕಳೆದ ನವೆಂಬರ್ 20ರಂದು ಕೋವ್ಯಾಕ್ಸಿನ್ ಕೊರೋನಾ ಲಸಿಕೆಯ 3ನೇ ಹಂತದ ಪರೀಕ್ಷೆಯಲ್ಲಿ

ಕೋವಿಡ್ ಲಸಿಕೆ ತೆಗೆದುಕೊಂಡಿದ್ದ ಸಚಿವ ಅನಿಲ್ ವಿಜ್ ಗೆ ಕೊರೋನಾ.! Read More »

ಕರಾವಳಿ

ಬಂಟ್ವಾಳದಲ್ಲಿ ಅಪರೂಪದ ಚಿಪ್ಪುಹಂದಿ ಪತ್ತೆ…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 05: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣ ಕೋಡಿ ಎಂಬಲ್ಲಿ ಪುರುಷೋತ್ತಮ ಎಂಬವರ ಮನೆಯ ಪಕ್ಕದ ತೋಟದಲ್ಲಿ ಅಳಿವಿನಂಚಿರುವ ಚಿಪ್ಪುಹಂದಿ ಕಂಡು ಬಂದಿದೆ.     ಚಿಪ್ಪು ಹಂದಿ ಇರುವುದರ ಬಗ್ಗೆ ಬಂಟ್ವಾಳ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಅಧಿಕಾರಿ ಸಹಿತ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಹಿಡಿದು ಬಳಿಕ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ

ಬಂಟ್ವಾಳದಲ್ಲಿ ಅಪರೂಪದ ಚಿಪ್ಪುಹಂದಿ ಪತ್ತೆ…! Read More »

ಕರಾವಳಿ

ಸಂಜನಾ ಜಾಮೀನು ಅರ್ಜಿ ವಿಚಾರಣೆ ಪೂರ್ಣ ➤ ಡಿಸೆಂಬರ್​ 7ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 05: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಡಿಸೆಂಬರ್​ 7ಕ್ಕೆ ಕಾಯ್ದಿರಿಸಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಸಂಜನಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಆರೋಪಿ ನಟಿ ಪರ ಹಿರಿಯ ವಕೀಲ ಹಸ್ಮತ್ ಪಾಷಾ ವಾದ ಮಂಡಿಸಿ, ಸಂಜನಾಗೆ ಅನಾರೋಗ್ಯ ಸಮಸ್ಯೆ ಇದೆ. ಅವರು ಇದಕ್ಕಾಗಿ 2018ರಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಸರ್ಜರಿಗೆ

ಸಂಜನಾ ಜಾಮೀನು ಅರ್ಜಿ ವಿಚಾರಣೆ ಪೂರ್ಣ ➤ ಡಿಸೆಂಬರ್​ 7ಕ್ಕೆ ತೀರ್ಪು Read More »

ಕರಾವಳಿ

ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಅಪಘಾತ ➤ ಗಾಯಗೊಂಡ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಡಿ.4ರ ಶುಕ್ರವಾರದಂದು ಸಂಜೆ ಐಯಾನ್‌‌ ತನ್ನ ಮನೆಯ ಮುಂದಿನ ರಸ್ತೆ ದಾಟುತ್ತಿದ್ದ ಸಂದರ್ಭ ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ರಿಟ್ಜ್‌‌ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿದ್ದು, ಬಳಿಕ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಇದೀಗ ಗಾಯಗೊಂಡಿದ್ದ ಬಾಲಕ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಬಶೀರ್ ಅಹ್ಮದ್ ಹಾಗೂ ರಿಯಾನ್ ದಂಪತಿಗಳ ಹಿರಿಯ ಪುತ್ರ ಐಯಾನ್(16)

ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಅಪಘಾತ ➤ ಗಾಯಗೊಂಡ ಬಾಲಕ ಮೃತ್ಯು Read More »

ಕರಾವಳಿ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನುರಾಧ ಮುತ್ತಪ್ಪ ರೈ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05: ಜಯಕರ್ನಾಟಕ ಸಂಘಟನೆಯ ಸ್ಥಾಪಕಾಧ್ಯಕ್ಷ ದಿ. ಮುತ್ತಪ್ಪ ರೈ ರವರ ಪತ್ನಿ ಅನುರಾಧ ಮುತ್ತಪ್ಪ ರೈ ರವರು ಇಂದು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸಾನಕ್ಕೆ ಭೇಟಿ ನೀಡಿದರು.  

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನುರಾಧ ಮುತ್ತಪ್ಪ ರೈ ಭೇಟಿ Read More »

ಕರಾವಳಿ
Scroll to Top