ಕರಾವಳಿ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

(ನ್ಯೂಸ್ ಕಡಬ) newskadaba.com ಹೇಮಳ ನ. 16:  ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ ಹೇಮಳ ಇದರ ಜೀರ್ಣೋದ್ದಾರ ಕಾರ್ಯವನ್ನು ಸಂಸದೆ ಹಾಗೂ ಜೀರ್ಣೋದ್ದಾರ ಗೌರವಾಧ್ಯಕ್ಷರಾದ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿ ವೀಕ್ಷಿಸಿದರು.       ಬಳಿಕ ಸರಕಾರ ನೀಡಿದ 50 ಲಕ್ಷ ರೂ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡುವಂತೆ ಊರವರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ಮನವಿ ನೀಡಿದರು. ಮನವಿ ತಕ್ಷಣವೇ ಸ್ಪಂದಿಸುವ ಭರವಸೆ […]

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 16. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗೋವುಗಳಿಗೆ ಗೋಪೂಜೆಯನ್ನು ಮಾಡಲಾಯಿತು. ಪೂಜಾ ಕಾರ್ಯವನ್ನು ಮಧುಸೂಧನ ಕಲ್ಲೂರಾಯ ಅವರು ನೆರವೇರಿಸಿದರು. ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ಕಛೇರಿ ಅಧೀಕ್ಷಕ ಬಾಲ ಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗದ ಗೋಪಿನಾಥ್ ನಂಬೀಶ ಮೊದಲಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ದೀಪಾವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ದೇವಾಲಯಗಳಿಗೆ ಶನಿವಾರ ಮತ್ತು ಭಾನುವಾರದಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಪ್ರವಾಸಿಗರು ಆಗಮಿಸಿ, ದೇವರ ದರ್ಶನ ಪಡೆದರು.   ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ತುಲಾಭಾರ‘ ಮತ್ತು ‘ಅನ್ನಪ್ರಾಶಾನ‘ ಆಚರಣೆಗಳನ್ನು ನವೆಂಬರ್ 15 ರಿಂದ ಆರಂಭಿಸಲಾಗಿದ್ದು, ಕೊರೋನಾ ಭೀತಿಯಿಂದಾಗಿ ಮುಚ್ಚಲಾಗಿದ್ದ ದೇವಾಲಯವು ಒಂದು ತಿಂಗಳ ಹಿಂದೆ ಮತ್ತೆ ತೆರೆಯಲಾಗಿದೆ. ಸುಮಾರು ಆರು ತಿಂಗಳು ಮುಚ್ಚಲಾಗಿದ್ದ ಉಡುಪಿ ಶ್ರೀ ಕೃಷ್ಣ ಮಠವು ಸೆಪ್ಟೆಂಬರ್

ಮಂಗಳೂರು: ದೀಪಾವಳಿ ಸಂಭ್ರಮ Read More »

ಕರಾವಳಿ, ಕರ್ನಾಟಕ

ಉಡುಪಿ: ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಭಾಪತಿಯಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 16.  ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ನೂತನ ಸಭಾಪತಿಯಾಗಿ ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಸಂಸ್ಥೆಯ ಅಧ್ಯಕ್ಷ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಅಜ್ಜರಕಾಡು ರೆಡ್‌ ಕ್ರಾಸ್ ಭವನದಲ್ಲಿ ನಡೆದ ಸಭೆಯಲ್ಲಿ, ಬಸ್ರುರು ರಾಜೀವ್ ಶೆಟ್ಟಿ ವಿರುದ್ಧದ ಅವಿಶ್ವಾಸ ಗೊತ್ತುವಳಿ 6-4ರ ಮತಗಳ ಅಂತರದಿಂದ ವಿಜಯ ಸಾಧಿಸಿತು. ಈ ಮೂಲಕ ಬಸ್ರೂರು ರಾಜೀವ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ತೆಗೆಯಲಾಯಿತು. ನಂತರ

ಉಡುಪಿ: ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಭಾಪತಿಯಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಎಸ್.ಸಿ.ಡಿ.ಸಿ.ಸಿ ಅಧ್ಯಕ್ಷ ರಾಜೇಂದ್ರ ಅವರಿಗೆ ಬಿಜೆಪಿ ಸೇರಲು ಮತ್ತೊಮ್ಮೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಗ್ರಾಮ ಪಂಚಾಯತ್ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳುವಂತೆ ದ.ಕ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಮಂಗಳೂರಿನಲ್ಲಿ ನಡೆದ 67 ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪಕ್ಷಕ್ಕೆ ಸೇರುವಂತೆ ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನವನ್ನು ನೀಡಿದರು. ಅಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಎತ್ತರದ ಸ್ಥಾನ ಪಡೆಯಲು ಇದು ರಹದಾರಿಯಾಗಲಿದೆ

ಎಸ್.ಸಿ.ಡಿ.ಸಿ.ಸಿ ಅಧ್ಯಕ್ಷ ರಾಜೇಂದ್ರ ಅವರಿಗೆ ಬಿಜೆಪಿ ಸೇರಲು ಮತ್ತೊಮ್ಮೆ ಆಹ್ವಾನ Read More »

ಕರಾವಳಿ, ಕರ್ನಾಟಕ

ಸುಳ್ಯ :ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ ನ. 16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಕಂದ ಮಹಿಳಾ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಜಾಲ್ಸೂರು ಗ್ರಾಮ ಮಟ್ಟದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನವು ಅಡ್ಕಾರು ಅರಣ್ಯ ಇಲಾಖಾ ಸಭಾಂಗಣದಲ್ಲಿ ನಡೆಯಿತು. ಕಿಶೋರಿ ಸಂಘದ ಅಧ್ಯಕ್ಷೆ ಕು.ಗೌತಮಿ ಬಿ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಷಾಪ್ರಸಾದ್ ರೈ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಕಂದ ಮಹಿಳಾ ಮಂಡಲ

ಸುಳ್ಯ :ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ತಾಲೂಕಿನಲ್ಲಿ ವಿವಿಧ ಇಲಾಖೆಗಳನ್ನು ತೆರೆಯುವಂತೆ ಕ್ರಮ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಕಡಬ, ನ. 16. ತಾಲೂಕಿಗೆ ಸೇರಬೇಕಾದ ಎಲ್ಲಾ ಇಲಾಖೆಗಳನ್ನು ಶಾಸಕರ  ಜೊತೆ ಚರ್ಚಿಸಿ ಬೇಕಾಗುವ ಮೂಲ ಸೌಕರ್ಯಗಳನ್ನು ಅಳವಡಿಸುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.   ಶನಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವರ ದರ್ಶನ ಪಡೆದ ಇವರು ಅಲ್ಲಿನ ಪ್ರಗತಿ ಪರಿಶೀಲನೆ ನಡೆಸಿ, ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವರ್ಷದೊಳಗಡೆ ಹೆಚ್ಚಿನ ಕಛೇರಿಗಳನ್ನು ತೆರೆಯಲಾಗುವುದು ಎಂದರು.

ಕಡಬ ತಾಲೂಕಿನಲ್ಲಿ ವಿವಿಧ ಇಲಾಖೆಗಳನ್ನು ತೆರೆಯುವಂತೆ ಕ್ರಮ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 16: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ದಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭಗೊಂಡಿವೆ. ಇದರಿಂದಾಗಿ ಕ್ಷೇತ್ರದಲ್ಲಿ ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಿವೆ.   ದೀಪಾವಳಿ ಪ್ರಯುಕ್ತ ಪಲ್ಲಕ್ಕಿ ಮತ್ತು ಬಂಡಿ ಉತ್ಸವ ನೆರವೇರಿದವು. ಕ್ಷೇತ್ರದಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಉತ್ಸವಾದಿಗಳು ಆರಂಭಗೊಳ್ಳಲಿವೆ. ಲಕ್ಷ ದೀಪೋತ್ಸವದ ನಂತರ ರಥ ಬೀದಿಯಲ್ಲಿ ರಥೋತ್ಸವಗಳೂ ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌. ತಿಳಿಸಿದ್ದಾರೆ.    

ಕುಕ್ಕೆ ಸುಬ್ರಹ್ಮಣ್ಯ: ತುಲಾಭಾರ,ಅನ್ನಪ್ರಾಶನ ಸೇವೆ ಆರಂಭ Read More »

ಕರಾವಳಿ
Scroll to Top