ಕರಾವಳಿ

ದೇಶಾದ್ಯಂತ ಇಂದಿನಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.12: ಇಂದಿನಿಂದ ದೇಶಾದ್ಯಂತ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ಈಗಾಗಲೇ 230 ರೈಲುಗಳು ಸಂಚಾರ ಪ್ರಾರಂಭಿಸಿವೆ. ಈ ನಡುವೆ ಇದೀಗ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮತ್ತೆ 80 ಹೊಸ ವಿಶೇಷ ರೈಲುಗಳನ್ನು ಬಿಡಲಾಗಿದೆ. ಇದರ ಸೀಟು ಕಾಯ್ದಿರಿಸುವಿಕೆ ಪ್ರಕ್ರಿಯೆಯೂ ಗುರುವಾರದಿಂದ ಪ್ರಾರಂಭವಾಗಿದೆ ಎನ್ನಲಾಗಿದೆ.     ಈ ಬಗ್ಗೆ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ.ಯಾದವ್ ತಿಳಿಸಿದ್ದಾರೆ. ಹಾಗೇ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಮತ್ತು ಸಾಮಾಜಿಕ ಅಂತರ […]

ದೇಶಾದ್ಯಂತ ಇಂದಿನಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ Read More »

ಕರಾವಳಿ, ಕರ್ನಾಟಕ

ಡ್ರಗ್ಸ್ ಸಾಗಾಟದ ಶಂಕೆ ➤ ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ತೀವ್ರ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12. ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ಶುಕ್ರವಾರ ಸಂಜೆ ಡ್ರಗ್ಸ್ ಜಾಲ ಸಾಗಾಟದ ಶಂಕೆಯಿಂದ ಉಡುಪಿ ಜಿಲ್ಲಾ ಪೊಲೀಸರು ಬಿಗು ತಪಾಸಣೆ ನಡೆಸಿದರು.     ಉಡುಪಿ ಜಿಲ್ಲೆಯ ಪೊಲೀಸರು ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ಮಂಗಳೂರು ಮತ್ತು ಉಡುಪಿ ಕಡೆಯಿಂದ ಸಂಚರಿಸುವ ಸಾವಿರಾರು ವಾಹನ ಗಳನ್ನು ಸಮಗ್ರ ತಪಾಸಣೆ ನಡೆಸಿದರು. ಎಸ್‍ಪಿ ವಿಷ್ಣುವರ್ಧನ್ ವಾಹನ ತಪಾಸಣೆಯ ನೇತೃತ್ವ ವಹಿಸಿದರು. ಸಾರ್ವಜನಿಕರು ವಾಹನ ತಪಾಸಣೆಗೆ ಅನುವು ಮಾಡಿಕೊಡುವ ಮೂಲಕ ಪೊಲೀಸರೊಂದಿಗೆ ಸಹಕರಿಸಿದರು. ಡ್ರಗ್ಸ್

ಡ್ರಗ್ಸ್ ಸಾಗಾಟದ ಶಂಕೆ ➤ ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ತೀವ್ರ ತಪಾಸಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಭಾರೀ ಮಳೆಯಿಂದಾಗಿ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳು ಜಲಾವೃತವಾಗಿವೆ. ಬಿಡದೇ ಸುರಿದ ಮಳೆಯಿಂದಾಗಿ ಮಂಗಳೂರಿನ ಕೊಂಚಾಡಿಯಲ್ಲಿ 12 ಅಂತಸ್ತಿನ ಎಸೆಲ್ ಹೈಟ್ಸ್ ಫ್ಲ್ಯಾಟ್ ಹಿಂಭಾಗದಲ್ಲಿ ಧರೆ ಕುಸಿದಿದೆ. ಧರೆ ಕುಸಿದು ಹಲವು ವಾಹನಗಳು ಜಖಂ ಆಗಿವೆ. ಮುಂಜಾಗ್ರತಾ ಕ್ರಮವಾಗಿ ಫ್ಲ್ಯಾಟ್​ನಲ್ಲಿದ್ದ ನೂರಾರು ಮಂದಿ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಫ್ಲಾಟ್ ಮುಂಭಾಗದ ರಸ್ತೆ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ

ಮಂಗಳೂರು: ಭಾರೀ ಮಳೆಯಿಂದಾಗಿ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ Read More »

ಕರಾವಳಿ, ಕರ್ನಾಟಕ

ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 12. ಸಾಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವ ಕಳೆಗಟ್ಟಲು ಕೆಲ ದಿನಗಳಷ್ಟೇ ಬಾಕಿ ಇದೆ. ಕೊವೀಡ್ ಆತಂಕದ ನಡುವೆಯೂ ನಾಡಹಬ್ಬಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೂ ಕೋವಿಡ್​ ಪರೀಕ್ಷೆ ಮಾಡಲಾಗುತ್ತದೆ.   ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರಲಿದ್ದಾನೆ. ಕಳೆದ ಬಾರಿಯ ಕ್ಯಾಪ್ಟನ್ ಅರ್ಜುನನಿಗೆ 60 ವರ್ಷ ದಾಟಿರುವ ಹಿನ್ನೆಲೆಯಲ್ಲಿ ದಸರಾದ ಯಾವುದೇ ಜವಾಬ್ದಾರಿಯನ್ನು ಅವನಿಗೆ ಕೊಡುತ್ತಿಲ್ಲ. ಅಲ್ಲದೆ ಈ ಬಾರಿ ಜಂಬೂ ಸವಾರಿಯಲ್ಲಿ

ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್ Read More »

ಕರಾವಳಿ, ಕರ್ನಾಟಕ

ಪ್ಲಾಸ್ಮಾ ದಾನಗೈದು ಜೀವ ರಕ್ಷಣೆ ಮಾಡಿದ ಜಿಲ್ಲೆಯ ಪ್ರಥಮ ಪೊಲೀಸ್ ➤ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಕೊರೋನಾ ಸೋಂಕಿಗೊಳಗಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವನಿಗೆ ಪೊಲೀಸ್‌ ಸಿಬಂದಿಯೊಬ್ಬರು ಪ್ಲಾಸ್ಮಾ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಜಿಲ್ಲಾ ಎಸ್‌ಪಿ ಕಚೇರಿಯ ಡಿ.ಆರ್‌. ವಿಭಾಗದಲ್ಲಿ ಹೆಡ್‌ ಕಾನ್ ಸ್ಟೇಬಲ್ ಆಗಿರುವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ತೆಗ್ಗು ನಿವಾಸಿ ರಂಜಿತ್‌ ಕುಮಾರ್‌ ರೈ ಪ್ಲಾಸ್ಮಾ ದಾನ ಮಾಡಿದವರು ಎನ್ನಲಾಗಿದೆ. ಬ್ರಹ್ಮಾವರ ಮೂಲದ ನಿವೃತ್ತ ಬ್ಯಾಂಕ್‌ ವ್ಯವಸ್ಥಾಪಕರಾದ ಪೂರ್ಣಾನಂದರವರು ಇಂತಹದೇ ಸಮಸ್ಯೆಯಿಂದ ಬಳಲುತ್ತಿದ್ದು, ಇದರ ಮಾಹಿತಿಯಂತೆ ರಂಜಿತ್‌ 0+

ಪ್ಲಾಸ್ಮಾ ದಾನಗೈದು ಜೀವ ರಕ್ಷಣೆ ಮಾಡಿದ ಜಿಲ್ಲೆಯ ಪ್ರಥಮ ಪೊಲೀಸ್ ➤ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ➤ ಬಳಿಕ ಮತ್ತೆ ಕಾಶಿಕಟ್ಟೆಯವರೆಗೆ ಮೆರವಣಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.12: ಕಡಬ ತಾಲೂಕಿನ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ದಿನ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯಿತು.     ಕಾಶಿಕಟ್ಟೆಯಲ್ಲಿ ಅಷ್ಟಮಿ ದಿನ ಪೂಜಿಸಲ್ಪಡುವ ಕೃಷ್ಣನ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಳಕ್ಕೆ ಆಗಮಿಸಿ ಬಳಿಕ ಮತ್ತೆ ಕಾಶಿಕಟ್ಟೆಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು.ಈ ವೇಳೆ ರಸ್ತೆಯುದ್ದಕ್ಕೂ ಮೊಸರು ಕುಡಿಕೆಗಳನ್ನು ಒಡೆದು ಕರಷ್ಣಾಷ್ಟಮಿ ಆಚರಿಸಲಾಯಿತು. ಪುರೋಹಿತ ಸನತ್‌ ನೂರಿತ್ತಾಯ, ದೇವಳದ ನಾಗೇಶ್‌ ಎ.ವಿ, ದಿನಕರ ಮತ್ತಿತರರು ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ➤ ಬಳಿಕ ಮತ್ತೆ ಕಾಶಿಕಟ್ಟೆಯವರೆಗೆ ಮೆರವಣಿ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಸರಳ ಶ್ರೀಕೃಷ್ಣಾಷ್ಟಮಿ

(ನ್ಯೂಸ್ ಕಡಬ) newskadaba.com ಶ್ರೀ ಸುಬ್ರಹ್ಮಣ್ಯ, ಸೆ. 12. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 11 ರಂದು ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯಿತು. ಈ ಪ್ರಯುಕ್ತ ಕಾಶಿಕಟ್ಟೆಯಲ್ಲಿ ಅಷ್ಟಮಿ ದಿನ ಪೂಜಿಸಲ್ಪಡುವ ಕೃಷ್ಣನ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಳಕ್ಕೆ ತಂದು ಬಳಿಕ ಮತ್ತೆ ಕಾಶಿಕಟ್ಟೆಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು. ಈ ವೇಳೆ ರಸ್ತೆಯುದ್ದಕ್ಕೂ ಮೊಸರು ಕುಡಿಕೆಗಳನ್ನು ಒಡೆದು ಕೃಷ್ಣಾ ಜನ್ಮಾಷ್ಟಮಿ ಆಚರಿಸಲಾಯಿತು. ಪುರೋಹಿತ ಸನತ್ ನೂರಿತ್ತಾಯ, ದೇವಳದ ನಾಗೇಶ್ ಎ.ವಿ ದಿನಕರ ಮತ್ತಿತರರು ಉಪಸ್ಥಿತರಿದ್ದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಸರಳ ಶ್ರೀಕೃಷ್ಣಾಷ್ಟಮಿ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಕಾವಲಕಟ್ಟೆ ವಲಯ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 12. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೂಮಲಿಕೆ, ಕಾವಳಕಟ್ಟೆ ಇದರ ವತಿಯಿಂದ ಪಕ್ಷಕ್ಕೆ ಹೊಸ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವು ದೂಮಲಿಕೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ದೂಮಲಿಕೆ ಬ್ರಾಂಚ್ ಅಧ್ಯಕ್ಷರಾದ ಮುಸ್ತಫಾ ಕಾವಳಕಟ್ಟೆ ವಹಿಸಿದ್ದರು. ಎಸ್ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿಯಾದ ಇಕ್ಬಾಲ್ ಬೆಳ್ಳಾರೆ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸುಮಾರು 44 ರಷ್ಟು ಹೊಸ ಕಾರ್ಯಕರ್ತರು ಪಕ್ಷದ

ಎಸ್ಡಿಪಿಐ ಕಾವಲಕಟ್ಟೆ ವಲಯ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12 : ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12. ತೆಂಕಮಿಜಾರು ಗ್ರಾಮದ ಗುಂಡೀರ್ ಗುಡ್ಡೆಯಲ್ಲಿ ಮನೆಯೊಂದರ ಆವರಣಗೋಡೆ ಭಾರೀ ಮಳೆಗೆ ಕುಸಿದಿದ್ದು, ಎರಡು ಮನೆಗಳು ಅಪಾಯದಂಚಿನಲ್ಲಿದೆ.   ಮಯ್ಯದ್ದಿ ಅವರ ಜಾಗದ ಆವರಣಗೋಡೆ ಬಿದ್ದಿದ್ದು, ಪಕ್ಕದಲ್ಲಿರುವ ಸಿರಾಜುದ್ದೀನ್ ಎಂಬವರ ಮನೆ ಕೂಡ ಅಪಾಯದ ಅಂಚಿನಲ್ಲಿದೆ. ಮಳೆಯಿಂದ ಕೃಷಿ ಭೂಮಿಗೂ ಹಾನಿಯಾಗಿದೆ. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪೊಲೀಸ್ ಉಪನಿರೀಕ್ಷಕ ವಿನಾಯಕ, ಗ್ರಾಮಕರಣಿಕರಾದ ದೀಪಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.    

ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆಗಳು Read More »

ಕರಾವಳಿ, ಕರ್ನಾಟಕ
Scroll to Top