ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು ಇವರು ಧ್ವಜಾರೋಹಣ ನೆರವೇರಿಸಿ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಮಹಾತ್ಮಾಗಾಂಧಿ, ಸರ್ದಾರ್ ಪಟೇಲ್, ಸುಭಾಸ್‍ಚಂದ್ರ ಬೋಸ್ ಮುಂತಾದ ಮಹನೀಯರ ತ್ಯಾಗ ಬಲಿದಾನದಿಂದ ನಮಗೆ 73 ವರ್ಷಗಳ ಹಿಂದೆ ಬ್ರಿಟಿಷರಿಂದ ಸ್ವಾತಂತ್ರ್ಯ ದೊರಕಿದೆ. ನಮಗೆ ದೊರೆತ ಸ್ವಾತಂತ್ರ್ಯವನ್ನು ಸ್ವೇಚ್ಛಾಚಾರ ಎಂದು ಯುವಜನರು ತಿಳಿದುಕೊಂಡು ತಪ್ಪು ದಾರಿ ಹಿಡಿಯಬಾರದು. […]

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಅರಂತೋಡು: ಅನ್ವಾರುಲ್ ಹುದಾ ಅಸೋಸಿಯೇಷನ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.15, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಹಾಗೂ ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್‌ಮೆಂಟ್ ವತಿಯಿಂದ 74 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಬದ್ರಿಯಾ ಜಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಧ್ವಜಾರೋಹಣ ಗೈದರು. ಮಸೀದಿ ಖತೀಬರಾದ ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೇರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ವೀರ ಪುರುಷರನ್ನು ಸ್ಮರಿಸಬೇಕಾದದ್ದು ಪ್ರತಿ ಭಾರತೀಯ ಪ್ರಜೆಯ ಕರ್ತವ್ಯ ಎಂದು

ಅರಂತೋಡು: ಅನ್ವಾರುಲ್ ಹುದಾ ಅಸೋಸಿಯೇಷನ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಅಕ್ಷರದಾಸೋಹ ಆಹಾರ ಸಾಮಾಗ್ರಿಗಳ ಸಾಗಾಣಿಕೆ – ಇ-ಟೆಂಡರ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, ಆಗಸ್ಟ್ 2020 ರಿಂದ ಜುಲೈ 2021 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆ.ಎಫ್. ಮತ್ತು ಸಿ.ಎಸ್.ಸಿ ಸಗಟು ಮಳಿಗೆಯಿಂದ ಆಯಾ ತಾಲ್ಲೂಕಿನ ಅಕ್ಷರದಾಸೋಹ ಶಾಲಾ ಅಡುಗೆ ಕೇಂದ್ರಗಳಿಗೆ ಪೂರಕ ಆಹಾರ ಸಾಮಾಗ್ರಿಗಳನ್ನು ಸಾಗಾಣಿಕೆ ಮಾಡಲು ಅರ್ಹ ಟೆಂಡರ್‍ದಾರರಿಂದ ಅಲ್ಪಾವಧಿ ಇ-ಟೆಂಡರ್ ಕರೆಯಲಾಗಿದೆ. ಆಸಕ್ತ ಟೆಂಡರುದಾರರು ಅರ್ಜಿ ಫಾರಂಗಳನ್ನು ಸೆಪ್ಟೆಂಬರ್ 1 ರೊಳಗೆ ಇ-ಪ್ರೊಕ್ಯೂರ್‍ಮೆಂಟ್ ಪೋರ್ಟಲ್ www.eproc.karnataka.gov.in ನಿಂದ ಡೌನ್‍ಲೋಡ್ ಮಾಡಿ ಸೆಪ್ಟೆಂಬರ್ 2 ರೊಳಗೆ

ಅಕ್ಷರದಾಸೋಹ ಆಹಾರ ಸಾಮಾಗ್ರಿಗಳ ಸಾಗಾಣಿಕೆ – ಇ-ಟೆಂಡರ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕ್ರೀಡಾ  ಪ್ರೋತ್ಸಾಹಧನಕ್ಕೆ  ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 14, 2020-21ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ   ಮತ್ತು  ಕ್ರೀಡಾ  ಇಲಾಖೆಯು  ಜಿಲ್ಲಾ ಪಂಚಾಯತ್ ಅನುದಾನದ ಅಡಿಯಲ್ಲಿ ಕ್ರೀಡಾ ಪ್ರೋತ್ಸಾಹಧನಕ್ಕೆ 30 ವರ್ಷಕ್ಕೆ ಒಳಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕ, ಬಾಲಕಿ ಹಾಗೂ ಪರುಷ, ಮಹಿಳಾ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಕ್ರೀಡಾಪಟುಗಳು 2019-20 ನೇ ಸಾಲಿನಲ್ಲಿ (2019 ಎಪ್ರಿಲ್ 1 ರಿಂದ 2020 ಮಾರ್ಚ್ 31 ವರೆಗೆ) ಸರಕಾರದಿಂದ, ಕ್ರೀಡಾ ಇಲಾಖೆಯಿಂದ, ಅಧಿಕೃತ ನೊಂದಾಯಿತ ಕ್ರೀಡಾ ಸಂಘ

ಕ್ರೀಡಾ  ಪ್ರೋತ್ಸಾಹಧನಕ್ಕೆ  ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಡಬದ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವದ ವಿಶೇಷ ಆಫರ್ ➤ ಕೇವಲ 999 ರೂ.ನಲ್ಲಿ ಜನರಲ್ ಹೆಲ್ತ್ ಚೆಕಪ್

(ನ್ಯೂಸ್ ಕಡಬ) newskadaba.com ಕಡಬ, ಆ.14. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಒಂದು ವಾರಗಳ ಕಾಲ ವಿಶೇಷ ಆಫರ್ ಘೋಷಿಸಲಾಗಿದೆ. ಜನರಲ್ ಹೆಲ್ತ್ ಚೆಕಪ್ ಕೇವಲ 999 ರೂ. ನ ವಿಶೇಷ ಪ್ಯಾಕೇಜ್ ನಲ್ಲಿ FBS/PPBS, Lipid profile, Blood urea/creatinine, Serum Electrolytes, Complete Blood count, TSH, SGOT/SGPT/ALP (Liver Function Test) Complete Urine analysis ಒಳಗೊಂಡಿದೆ. ಈ ಆಫರ್ ಕೇವಲ ಒಂದು ವಾರಗಳ ಕಾಲ ಮಾತ್ರವಾಗಿದ್ದು, ಹೆಚ್ಚಿನ

ಕಡಬದ ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಸ್ವಾತಂತ್ರ್ಯೋತ್ಸವದ ವಿಶೇಷ ಆಫರ್ ➤ ಕೇವಲ 999 ರೂ.ನಲ್ಲಿ ಜನರಲ್ ಹೆಲ್ತ್ ಚೆಕಪ್ Read More »

ಕರಾವಳಿ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ಸಾಲ ಮತ್ತು ಸಹಾಯಧನ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, 2020-21ನೇ ಉಪ್ಪಾರ ಮತ್ತು ಅದರ ಉಪಜಾತಿಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ. ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಈ ಮೇಲ್ಕಂಡ ಜನಾಂಗದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪೋಟೋ ಮತ್ತು

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ಸಾಲ ಮತ್ತು ಸಹಾಯಧನ ಸೌಲಭ್ಯ Read More »

ಕರಾವಳಿ

ಬೀಡಾಡಿ ಜಾನುವಾರುಗಳಿಗೆ ಮೇವು ಮತ್ತು ಆಹಾರ ಒದಗಿಸಲು ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, ಕೋವಿಡ್-19 ಅವಧಿಯಲ್ಲಿ ಬೀಡಾಡಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬೀಡಾಡಿ ಜಾನುವಾರುಗಳಿಗೆ ಮೇವು ಮತ್ತು ಪೌಷ್ಠಿಕ ಆಹಾರವನ್ನು ಒದಗಿಸಲು ಪಶುಪಾಲನಾ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುತ್ತದೆ. ಸಾರ್ವಜನಿಕರು, ಪ್ರಾಣಿ ಪ್ರಿಯರು, ಸಂಘ ಸಂಸ್ಥೆಗಳು ಬೀಡಾಡಿ ಜಾನುವಾರುಗಳಿಗೆ ಮೇವು, ಪೌಷ್ಠಿಕ ಆಹಾರ ನೀಡುತ್ತಿರುವ ಫೋಟೋ, ಮೇವು, ಪೌಷ್ಠಿಕ ಆಹಾರ ಖರೀದಿಸಿದ ರಶೀದಿ ಹಾಗೂ ಸ್ಥಳೀಯ ಪಶುವೈದ್ಯಾಧಿಕಾರಿಗಳ ಶಿಫಾರಸ್ಸು ಪತ್ರವನ್ನು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ದ.ಕ. ಮಂಗಳೂರು

ಬೀಡಾಡಿ ಜಾನುವಾರುಗಳಿಗೆ ಮೇವು ಮತ್ತು ಆಹಾರ ಒದಗಿಸಲು ಅನುದಾನ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)- ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 100% ಉದ್ಯೋಗಾವಕಾಶವುಳ್ಳ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಡಿಪ್ಲೋಮ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಜಿಟಿಟಿಸಿ ಸಂಸ್ಥೆಯ ವಿಶಾಲ ಕ್ಯಾಂಪಸ್ ಇದ್ದು, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಜಿಟಿಟಿಸಿ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)- ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿಲಿಕುಳ ಮೃಗಾಲಯ – ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14,  ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಆಕರ್ಷಣೆಗಳ ಪೈಕಿ ಜೈವಿಕ ಉದ್ಯಾನವನ್ನು (ಮೃಗಾಲಯ) ಮಾತ್ರ ಆಗಸ್ಟ್ 16 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರತೀ ಸೋಮವಾರ ವಾರದ ರಜೆ ಇರುತ್ತದೆ. ಆದುದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆಯಲು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪಿಲಿಕುಳ ಮೃಗಾಲಯ – ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ Read More »

ಕರಾವಳಿ, ಕರ್ನಾಟಕ

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,14:  ಈ ಬಾರಿಯ SSLc  ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್ ಎ.ಎಲ್ ಇವರಿಗೆ ಕಡಬ ರೋಟರಿ ಕ್ಲಬ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನುಷ ಎ.ಎಲ್ ರವರ ತಂದೆ ಲೋಕೇಶ್ ಎಣ್ಣೆ ಮಜಲು ರವರು ಸೇರಿದಂತೆ, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀ ವಿ.ಯಂ ಕುರಿಯನ್, ಕಾರ್ಯದರ್ಶಿ ಇ.ಕೆ. ತೋಮಸ್, ಪ್ರಮುಖರಾದ ಹಾಜಿ ಮಹಮ್ಮದ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ Read More »

ಕರಾವಳಿ
Scroll to Top