ಕರಾವಳಿ

ಕಳಂಜಕ್ಕೆ ಬಂತು ಹೆಬ್ಬಾವು ➤ ಗ್ರಾಮಸ್ಥರ ಸಹಕಾರದಿಂದ ಬೇಂಗಮಲೆ ಕಾಡಿಗೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.22. ಮನೆಯ ವರಾಂಡಕ್ಕೆ ಆಗಮಿಸಿದ ಹೆಬ್ಬಾವನ್ನು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಬೆಳ್ಳಾರೆ ಸಮೀಪದ ಕಳಂಜದ ಕೆ.ಪಿ. ಅಬ್ದುಲ್ಲಾರ ಮನೆಗೆ ಭಾನುವಾರ ರಾತ್ರಿ ಹೆಬ್ಬಾವೊಂದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಳಂಜದ ಶಿವಪ್ರಸಾದ್, ಸತೀಶ್ ಆರ್ಟ್ ರೂಟ್, ವಿಶ್ವ ಕಳಂಜ, ಸುಧೀರ್ ಮೊದಲಾದವರು ಸೇರಿ ಹೆಬ್ಬಾವನ್ನು ಹಿಡಿದಿದ್ದಾರೆ. ತದನಂತರ ಕಳಂಜದ ನಝೀರ್ ಗ್ಯಾಲಕ್ಸಿ ಹಾಗೂ ಇಸ್ಮಾಯಿಲ್ ಬೇಂಗಮಲೆ ಕಾಡಿಗೆ ಬಿಡುವಲ್ಲಿ ಸಹಕರಿಸಿದ್ದಾರೆ.

ಕಳಂಜಕ್ಕೆ ಬಂತು ಹೆಬ್ಬಾವು ➤ ಗ್ರಾಮಸ್ಥರ ಸಹಕಾರದಿಂದ ಬೇಂಗಮಲೆ ಕಾಡಿಗೆ Read More »

ಕರಾವಳಿ

ಉಪ್ಪಿನಂಗಡಿ: ಕಮರಿಗೆ ಉರುಳಿದ ಟೆಂಪೋ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.22. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಸೋಮವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಗುಂಡ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋವು ನೀರಕಟ್ಟೆ ಬಳಿ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆಯ ಬಲ‌ಬದಿಯ ಕಮರಿಗೆ ಉರುಳಿದ್ದು, ಅದೃಷ್ಟವಶಾತ್ ಬೃಹತ್ ಹೊಂಡದ ಮೇಲೆ ನಿಂತಿದೆ.‌ ಟೆಂಪೋದಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ: ಕಮರಿಗೆ ಉರುಳಿದ ಟೆಂಪೋ Read More »

ಕರಾವಳಿ

ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜೂ.22, ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮ ಕೋಡಪದವು ಮಾಳ ಎಂಬಲ್ಲಿ ನಡೆದಿದೆ. ಮೃತರನ್ನು ಕೋಡಪದವು ನಿವಾಸಿ ನಾರಾಯಣ ಎಂಬವರ ಪುತ್ರ ಭುವನೇಶ್ (16) ಎಂದು ಗುರುತಿಸಲಾಗಿದೆ. ಈತ ವಿಟ್ಲದ ಖಾಸಗಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಭುವನೇಶ್  ಸುಮಾರು 6 ತಿಂಗಳ ಹಿಂದಿನಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ  ಫಿಟ್ಸ್ ನಿಂದ ಬಿದ್ದು ನರಳುತ್ತಿದ್ದ ಈತನನ್ನು   ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮೃತಪಟ್ಟಿದ್ದ ಎನ್ನಲಾಗಿದೆ. ಈ

ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

Workplace 2024 Activation free of Charge With .TXT Activator [2024 Information]

Microsoft Workplace is a great suite for virtually everyone throughout varied domains. From college students utilizing Word, Excel, and PowerPoint for assignments and presentations to professionals leveraging these tools and more to automate their workflow. Its versatility is just not solely its strength but in addition the allure of related workplace suites. Whereas these programs

Workplace 2024 Activation free of Charge With .TXT Activator [2024 Information] Read More »

ಕರಾವಳಿ

ಬಜಾಲ್ ವಾರ್ಡಿನ ಅಭಿವೃದ್ದಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.22, ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಕೋರ್ದಬ್ಬು ದೈವಸ್ಥಾನದಿಂದ ಮುಂದಕ್ಕೆ ರಸ್ತೆ ಅಭಿವೃದ್ಧಿಪಡಿಸುವ‌ ಕುರಿತು ಸ್ಥಳೀಯ ಮುಖಂಡರ ಮೂಲಕ ಇಲ್ಲಿನ ಸಾರ್ವಜನಿಕರು ಮನವಿ ಸಲ್ಲಿಸಿದ್ದರು. ಹಾಗಾಗಿ 7 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯ ಗುದ್ದಲಿಪೂಜೆ ಸಾರ್ವಜನಿಕರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕಳೆದ 2 ವರ್ಷದಲ್ಲಿ ಬಜಾಲ್ ವಾರ್ಡಿನ ಅಭಿವೃದ್ಧಿಗೆ ಕೋಟಿಗೂ

ಬಜಾಲ್ ವಾರ್ಡಿನ ಅಭಿವೃದ್ದಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ Read More »

ಕರಾವಳಿ

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್

(ನ್ಯೂಸ್ ಕಡಬ) newskadaba.com ,ಜೂ.22: 1980ರ ಕಾಲಘಟ್ಟ. ನಾನಾಗ ಎರಡನೇ ತರಗತಿಯಲ್ಲಿ ಓದುತ್ತಿದ್ದ. 1973ರಲ್ಲಿ ಹುಟ್ಟಿದ ನನಗೆ ಆಗ 7 ವರ್ಷವಾಗಿತ್ತು. ನಮ್ಮೂರು ಚೂಂತಾರು ಸಮೀಪದ, ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೆ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನೆಲ್ಯಾಡಿ: ಎಸ್ಡಿಪಿಐ ಸಂಸ್ಥಾಪನಾ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜೂ.22, 2009 ರ ಜೂನ್ 21 ರಂದು ಈ ದೇಶದ ಜನತೆಯ ಆಶಾಕಿರಣವಾಗಿ ಸಮರ್ಪಿಸಲ್ಪಟ್ಟ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ತನ್ನ ಹೋರಾಟವನ್ನು ರಾಜಕೀಯದ ಮೂಲಕ ಜನ ಮನ್ನಣೆ ಗಳಿಸುತ್ತಾ 11 ವರ್ಷಗಳನ್ನು ಪೂರೈಸಿ 12 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಈ ಸಂಧರ್ಭದಲ್ಲಿ ಪಕ್ಷವು ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 21 (ಆದಿತ್ಯವಾರ) ರಂದು ದೇಶಾದ್ಯಂತ ತನ್ನ “ಸಂಸ್ಥಾಪನಾ ದಿನ” ವನ್ನು ಆಚರಿಸುವ, ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು

ನೆಲ್ಯಾಡಿ: ಎಸ್ಡಿಪಿಐ ಸಂಸ್ಥಾಪನಾ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ

ಕಡಬದ ಜನತೆಗೆ ಸಿಹಿ ಸುದ್ದಿ ➤ 35 ಜನರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.22, ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಕಡಬದ ಸಿ.ಎ. ಬ್ಯಾಂಕ್ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದ ಎಲ್ಲಾ 35 ಜನರ ವರದಿಯೂ ನೆಗೆಟಿವ್ ಬಂದಿದೆ. ಗಂಟಲು ದ್ರವ ಮಾದರಿಯ ಪ್ರಯೋಗಾಲಯ ವರದಿಯು ನೆಗೆಟಿವ್ ಬಂದಿದೆ ಎಂದು ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ಅವರು ತಿಳಿಸಿದ್ದಾರೆ. ಈ ಮೂಲಕ ಕಡಬದ ಜನತೆ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

ಕಡಬದ ಜನತೆಗೆ ಸಿಹಿ ಸುದ್ದಿ ➤ 35 ಜನರ ವರದಿ ನೆಗೆಟಿವ್ Read More »

ಕರಾವಳಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.22: ಮುಂಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿಗೆ ಕೊರೊನಾ ಸೋಂಕು ತಗುಲಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ.   ಸೋಂಕಿತರು ವಾಸವಾಗಿದ್ದ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್ಡೌನ್ ಮಾಡಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಖಚಿತವಾಗಿದೆ. ಸೋಂಕಿತರಿಬ್ಬರನ್ನು ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ
Scroll to Top