ಕರಾವಳಿ

ಶಾಸಕರಿಂದ ಎಂಡೋ ಪೀಡಿತರು ಹಾಗೂ ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ

(ನ್ಯೂಸ್ ಕಡಬ)newskadaba.com ಕಡಬ. ಜೂ. 14, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಎಂಡೋ ಪೀಡಿತ ಕುಂಟುಂಬಕ್ಕೆ ಸುಳ್ಯ ಶಾಸಕ ಎಸ್.ಅಂಗಾರ ಆಹಾರಕಿಟ್ ವಿತರಣೆ ಮಾಡಿದರು. ಶಾಸಕರು ತಮ್ಮ ಸ್ವಂತ ಖರ್ಚಿನಿಂದ ಸುಮಾರು 400 ಕಿಟ್‍ಗಳನ್ನು ನೆಲ್ಯಾಡಿ ಶಕ್ತಿ ಕೇಂದ್ರದಲ್ಲಿರುವ ಎಂಡೋ ಪೀಡಿತರು ಹಾಗೂ ವಿಕಲಚೇತನರಿಗೆ ವಿತರಣೆ ಮಾಡಿದರು. ಶಾಸಕರು ಕೊಯಿಲ ಎಂಡೋ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಎಂಡೋ ಪೀಡಿತರ ಪೋಷಕರಿಗೆ ಕಿಟ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಜಯಂತಿ ಆರ್ […]

ಶಾಸಕರಿಂದ ಎಂಡೋ ಪೀಡಿತರು ಹಾಗೂ ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ Read More »

ಕರಾವಳಿ

ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಇತ್ತೀಚೆಗೆ ಮೃತಪಟ್ಟ ಮಲ್ಪೆ ಬಡಾನಿಡಿಯೂರು ಗ್ರಾಮದ ಮೀನುಗಾರರಾದ ಭಾಗ್ಯರಾಜ್ ರವರ ಮನೆಗೆ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಭೇಟಿ ನೀಡಿ ಮೀನುಗಾರರ ಸಂಕಷ್ಟ ನಿಧಿಯಿಂದ 2 ಲಕ್ಷ ಮೊತ್ತದ ಚೆಕ್ ವಿತರಿಸಿ ಮೃತರ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಬಡಾನಿಡಿಯೂರು

ಮೃತ ಮೀನುಗಾರ ಭಾಗ್ಯರಾಜ್ ಮನೆಗೆ ಸಚಿವ ಕೋಟ ಭೇಟಿ ➤ ಸಂಕಷ್ಟ ಪರಿಹಾರ ನಿಧಿಯಿಂದ ರೂ 2 ಲಕ್ಷ ವಿತರಣೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14:  ಮೃತರನ್ನು ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಎಂದು ತಿಳಿದುಬಂದಿದೆ. ಈತ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವನ್ನಪ್ಪಿದ್ದಾನೆ.ಈತನ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಪರೀಕ್ಷೆ ವೇಳೆ ಕೊರೊನಾ ಇರುವುದು ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ..! Read More »

ಕರಾವಳಿ, ಕರ್ನಾಟಕ

ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಕಡಬ ಪೇಟೆಯ ಒಂದು ಭಾಗ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಕಡಬದಲ್ಲಿ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಕಡಬ ಪೇಟೆಯ ಒಂದು ಪಾರ್ಶ್ವವನ್ನು ಸೀಲ್‌ಡೌನ್ ಮಾಡಲಾಗಿದೆ. ಕಡಬದ ಸಿ.ಎ. ಬ್ಯಾಂಕ್ ಉದ್ಯೋಗಿಗೆ ಕೊರೋನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬ್ಯಾಂಕ್ ನ ಪರಿಸರದ 100 ಮೀಟರ್ ವ್ಯಾಪ್ತಿಯನ್ನು ಸೀಲ್‌ಡೌನ್ ಮಾಡಲಾಗಿದೆ. ರಿಕ್ಷಾ ನಿಲ್ದಾಣವನ್ನು ಸ್ಥಳಾಂತರಿಸಲಾಗಿದೆ.

ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಕಡಬ ಪೇಟೆಯ ಒಂದು ಭಾಗ ಸೀಲ್‌ಡೌನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಂತ ಚಿಕಿತ್ಸೆಗಿದು ಸಮಯವಲ್ಲ!!!

ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಹಾವಳಿಯಿಂದಾಗಿ ಜನಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ವಿಶ್ವದ ಎಲ್ಲಾ ಆರ್ಥಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕøತಿಕ ಮತ್ತು ಕೌಟುಂಬಿಕ ಚಟುವಟಿಕೆಗಳು ಸ್ತಬ್ಧವಾಗಿದೆ. ಎಲ್ಲರೂ ಕೊರೋನಾ ಭಯದಿಂದ ಮನೆಯೊಳಗೆ ಬಂದಿಯಾಗಿದ್ದಾರೆ. ದಂತ ವೈದ್ಯರ ಪಾಡಂತೂ ಬಹಳ ಶೋಚನೀಯವಾಗಿದೆ. ಒಂದೆಡೆ ಹಲ್ಲುನೋವಿನಿಂದ ಬಳಲುತ್ತಿರುವ ರೋಗಿಗಳ ಒತ್ತಡ, ಇನ್ನೊಂದೆಡೆ ದಂತ ಚಿಕಿತ್ಸೆಯಿಂದ ಕೊರೋನಾ ರೋಗ ಹರಡುತ್ತದೆ ಎಂಬ ವೈಭವೀಕರಣದ ಹೇಳಿಕೆಗಳು. ಅತ್ತ ದರಿ ಇತ್ತ ಹುಲಿ ಎಂಬಂತೆ ದಂತ ವೈದ್ಯರ ಪಾಡು ಯಾರಿಗೂ ಬೇಡವಾಗಿದೆ. ಆದರೆ ಒಂದಂತೂ

ದಂತ ಚಿಕಿತ್ಸೆಗಿದು ಸಮಯವಲ್ಲ!!! Read More »

ಆರೋಗ್ಯ ಮಾಹಿತಿ, ಕರಾವಳಿ, ವಿಶೇಷ ಲೇಖನಗಳು

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಉಡುಪಿ ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ನಡುವೆ ಸದ್ದಿಲ್ಲದೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಣದಲ್ಲಿದೆ. ಆದರೂ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದೆ. 2020 ಜನವರಿ ತಿಂಗಳಿನಿಂದ ಮೇ ವರೆಗೆ ಒಟ್ಟು 72 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಇದೇ ಸಮಯಕ್ಕೆ 2018ರಲ್ಲಿ 41 ಪ್ರಕರಣ ಕಂಡುಬಂದಿದ್ದವು. ಈ ಬಾರಿ

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು. ಜೂ. 14, ವಿದ್ಯುತ್ ಶಾಕ್ ತಗುಲಿ ಯುವಕರೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೈಯೂರಿನಿಂದ ವರದಿಯಾಗಿದೆ. ಮೃತರನ್ನು ಕೈಯೂರು ಉದ್ದೋಳೆ ಕಾಂಪ್ಲೆಕ್ಸ್ ಮಾಲಕ ರಮೇಶ್ ಗೌಡ ಎಂದು ತಿಳಿದು ಬಂದಿದೆ. ಇವರು ತನ್ನ ತೋಟದಲ್ಲಿರುವ ಪಂಪ್ ಅನ್ನು ಚಾಲು ಮಾಡಲು ಸ್ವಿಚ್ ಹಾಕುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಇವರು ಕೈಯೂರು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರೂ ಆಗಿದ್ದರು.

ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬಕ್ಕೆ ಮತ್ತೊಂದು ಆಘಾತ ➤ ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಕಡಬದ ಜನತೆಗೆ ಮತ್ತೆ ಆಘಾತ ಉಂಟಾಗಿದ್ದು, ಮತ್ತೊಂದು ಕೊರೋನಾ ಪಾಸಿಟಿವ್ ವರದಿಯಾಗಿದೆ. ನೂಜಿಬಾಳ್ತಿಲ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಯಾರ ಸಂಪರ್ಕದಿಂದ ಸೋಂಕು ತಗಲಿದೆ ಎನ್ನುವುದು ತಿಳಿದುಬರಬೇಕಿದೆ.

ಕಡಬಕ್ಕೆ ಮತ್ತೊಂದು ಆಘಾತ ➤ ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.12: ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಸೊಮಣ್ಣ ವಿರಾಜ್ಪೇಟೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ನಲ್ಲಿ ಆಶ್ರಯ ಪಡೆದಿದ್ದ ಉಗ್ರರನ್ನು ಮಟ್ಟಹಾಕಲು ಆಪರೇಷನ್ ಬ್ಲೂ ಸ್ಟಾರ್ ನಡೆಸಿದ್ದ ವೇಳೆ 1984-85ರ ಅವಧಿಯಲ್ಲಿ ಸೋಮಣ್ಣ ಸೇನಾ ಸಿಬ್ಬಂದಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಅತ್ಯಂತ ಅನುಭವಿ ಸೇನಾಧಿಕಾರಿಗಳಲ್ಲಿ ಒಬ್ಬರಾಗಿದ್ದ ಸೋಮಣ್ಣ ಶೌರ್ಯಕ್ಕೆ ಹೆಸರಾಗಿದ್ದರು.ಮೃತರು ಪತ್ನಿ ರೇಣು ಸೋಮಣ್ಣ,

ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14: ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಇರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಬಂಧಿತ ಆರೋಪಿಗಳನ್ನ ಸಜೀಪನಡು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಮಸೂದ್ (20), ಮೊಹಮ್ಮದ್ ಅಜೀಮ್ (20), ಅಬ್ದುಲ್ ಲತೀಫ್ (20), ಮೊಹಮ್ಮದ್ ಅರ್ಫಾಜ್ (20) ಎಂದು ಗುರುತಿಸಲಾಗಿದೆ.  ಶನಿವಾರದಂದು ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿನ ಧಾರ್ಮಿಕ

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top