ಕರಾವಳಿ

ಕರಾವಳಿಯಲ್ಲಿ ಕೊರೋನಾ ರಣಕೇಕೆ ➤ ಒಂದೇ ದಿನ ಕರಾವಳಿಯಲ್ಲಿ 33 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ, ಮೇ.21. ಕರಾವಳಿಯಲ್ಲಿ ಕೊರೊನಾ ಅಟ್ಟಹಾಸಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 31 ಪ್ರಕರಣ ದೃಢವಾಗಿದ್ದು, ಕರಾವಳಿಗರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ರಾಜ್ಯ ಅರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ಈ ಶಾಕಿಂಗ್ ನ್ಯೂಸ್ ಹೊರಬಿದ್ದಿದ್ದು, ಉಡುಪಿ ಜಿಲ್ಲೆಯಲ್ಲಿ 27 ಪ್ರಕರಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿಯ 27 ಜನರಲ್ಲಿ ಪಾಸಿಟಿವ್ ಬಂದಿದ್ದು, ಈ ಪೈಕಿ ಮಹಾರಾಷ್ಟ್ರದಿಂದ ಬಂದ 23 ಜನರಲ್ಲಿ, ತೆಲಂಗಾಣದಿಂದ ಬಂದ ಮೂವರಲ್ಲಿ […]

ಕರಾವಳಿಯಲ್ಲಿ ಕೊರೋನಾ ರಣಕೇಕೆ ➤ ಒಂದೇ ದಿನ ಕರಾವಳಿಯಲ್ಲಿ 33 ಮಂದಿಗೆ ಕೊರೋನಾ ದೃಢ Read More »

ಕರಾವಳಿ

breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ

ಮಂಗಳೂರು, ಮೇ 18: ದ.ಕ. ಜಿಲ್ಲೆಯ ಇಬ್ಬರು ಹಾಗೂ ಉಡುಪಿಯ ಒಬ್ಬರಲ್ಲಿ ಸೋಮವಾರ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೇರಿಕೆಯಾಗಿದೆ. ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್‌ನಲ್ಲಿದ್ದ 30 ವರ್ಷದ ವ್ಯಕ್ತಿ ಹಾಗೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟ ತೊಂದರೆಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇನ್ನು ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ ಉಡುಪಿಯ ಕೊಲ್ಲೂರಿನ 28 ವರ್ಷದ ಮಹಿಳೆಗೂ ಕೊರೋನ ದೃಢವಾಗಿದೆ.

breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ಮೇ 18: ದ.ಕ. ಜಿಲ್ಲೆಯ ವಿವಿಧೆಡೆ ಸೋಮವಾರ ಮುಂಜಾನೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಮುಂಜಾನೆ ಸುಮಾರು 5 ಗಂಟೆಗೆ ಆರಂಭಗೊಂಡ ಮಳೆಯು ಬೆಳಗ್ಗೆ 9ರವರೆಗೂ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡ ಅಂಫಾನ್ ಚಂಡಮಾರುತದ ಪ್ರಭಾವದಿಂದ ಮೋಡ ಕವಿದ ವಾತಾವರಣದ ಮಧ್ಯೆ ಮಳೆ ಸುರಿದಿದೆ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕಡಬ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಬಿರುಗಾಳಿಯೂ ಬೀಸಿದ ಪರಿಣಾಮ ಅಲ್ಲಲ್ಲಿ ಮರಗಳು ಉರುಳಿದ್ದು, ವಿದ್ಯುತ್

ದ.ಕ. ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಕಡಬ, ಬೆಳ್ಳಾರೆಯಲ್ಲಿ ಸಂಜೆಯವರೆಗೆ ಅಂಗಡಿಗಳು ಓಪನ್

(ನ್ಯೂಸ್ ಕಡಬ) newskadaba.com ಕಡಬ, ಮೇ.17. ಕಡಬ ಹಾಗೂ ಬೆಳ್ಳಾರೆ ಪೇಟೆಯಲ್ಲಿ ಕಳೆದ ಕೆಲವು ದಿನಗಳಿಂದ ಮಧ್ಯಾಹ್ನದವರೆಗೆ ಇರುತ್ತಿದ್ದ ವಿವಿಧ ವ್ಯಾಪಾರಗಳು, ನಾಳೆಯಿಂದ (ಮೇ.18) ಬೆಳಗ್ಗೆ 7 ರಿಂದ ಸಂಜೆ 7 ರ ತನಕ ಅಂಗಡಿ ಮುಂಗಟ್ಟುಗಳು ತೆರೆಯಲಿವೆ. ಕಡಬದಲ್ಲಿ ವರ್ತಕರು ಸ್ವಯಂ ನಿರ್ಧಾರದಿಂದ ಅಂಗಡಿಗಳನ್ನು ಮಧ್ಯಾಹ್ನದ ನಂತರ ಅಂಗಡಿಗಳನ್ನು ಬಂದ್ ಮಾಡಿದ್ದರು‌. ಇದೀಗ ಸಂಜೆಯವರೆಗೂ ತೆರೆದು ವ್ಯಾಪಾರ ನಡೆಸುವುದಾಗಿ ವರ್ತಕ ಬಳಗದ ವತಿಯಿಂದ ತೀರ್ಮಾನಿಸಲಾಗಿದೆ. ಅದೇ ರೀತಿ ಬೆಳ್ಳಾರೆ ಪೇಟೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಕಟ್ಟುನಿಟ್ಟಿನ

ಇಂದಿನಿಂದ ಕಡಬ, ಬೆಳ್ಳಾರೆಯಲ್ಲಿ ಸಂಜೆಯವರೆಗೆ ಅಂಗಡಿಗಳು ಓಪನ್ Read More »

ಕರಾವಳಿ

ಹೆಚ್ಚಿದ ಕೊರೋನಾ ಅಟ್ಟಹಾಸ ➤ ದ.ಕ ಜಿಲ್ಲೆ 2, ಉಡುಪಿಯ ಒಬ್ಬರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು. ಮೇ. 17, ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲೇ ಇದ್ದು ಮೇ.17ರಂದು 2 ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮೇ.16 ರಂದು ಯಾವುದೇ ಪಾಸಿಟಿವ್ ಪ್ರಕರಣಗಳು ಇರದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕಾರಿಯಾಗಿದೆ. ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದ ಶಂಕಿತ ಯುವಕ ಕೋವಿಡ್ ಆಸ್ಪತ್ರೆಗೆ ಬಂದು ಸ್ವಯಂ ಪರೀಕ್ಷೆಗೆ ಒಳಗಾಗಿದ್ದ ಮಂಗಳೂರಿನ ಜಪ್ಪಿನಮೊಗರು ನಿವಾಸಿ 31 ವರ್ಷದ ಪುರುಷ ಹಾಗೂ ಮಂಗಳೂರಿನ ಯೆಯ್ಯಾಡಿ ಮೂಲದ 35 ವರ್ಷದ

ಹೆಚ್ಚಿದ ಕೊರೋನಾ ಅಟ್ಟಹಾಸ ➤ ದ.ಕ ಜಿಲ್ಲೆ 2, ಉಡುಪಿಯ ಒಬ್ಬರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ

ಉಡುಪಿ, ಮೇ 16: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14ರಂದು ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ಬಂದ ಮೃತ ವ್ಯಕ್ತಿಯ ಪರೀಕ್ಷಾ ವರದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮೃತ 54 ವರ್ಷದ ವ್ಯಕ್ತಿ ಕುಂದಾಪುರ ತಾಲೂಕಿನವರಾಗಿದ್ದು, ಈಚೆಗೆ ಮಹಾರಾಷ್ಟ್ರದಿಂದ ಬಂದಿದ್ದರು. ಮೇ 13ರಂದು ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ Read More »

ಕರಾವಳಿ

ಉಡುಪಿ: ಕ್ವಾರೆಂಟೈನ್‌ನಲ್ಲಿದ್ದ ವ್ಯಕ್ತಿ ಸಾವು, ಕೊರೋನ ಶಂಕೆ

ಉಡುಪಿ, ಮೇ 16: ಮಹಾರಾಷ್ಟ್ರದಿಂದ ಮೇ 5ರ ಬಳಿಕ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ಕ್ವಾರಂಟೈನ್‌ನಲ್ಲಿದ್ದ 53 ವರ್ಷದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಅಸ್ವಸ್ಥತೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಎರಡು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತಪಟ್ಟರಿಗೆ ಕೊರೋನ ಸೋಂಕು ತಗುಲಿರಬಹುದು ಎಂಬ ಸಂಶಯದ ಹಿನ್ನೆಲೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ನರ್ಸ್ ಹಾಗೂ ಆಸ್ಪತ್ರೆಯ ಸ್ವಚ್ಚತಾ

ಉಡುಪಿ: ಕ್ವಾರೆಂಟೈನ್‌ನಲ್ಲಿದ್ದ ವ್ಯಕ್ತಿ ಸಾವು, ಕೊರೋನ ಶಂಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೊರೋನ ಟೆಸ್ಟ್ ಲ್ಯಾಬ್‌ಗೆ ಅನುಮತಿ

ಉಡುಪಿ, ಮೇ 16: ಕೊರೋನ ಸೋಂಕು ಶಂಕಿತ ವ್ಯಕ್ತಿಗಳ ಗಂಟಲು ದ್ರವದ ಮಾದರಿಗಳ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಪ್ರಯೋಗಾಲಯದ ಆರಂಭಕ್ಕೆ ಕೇಂದ್ರ ಸರಕಾರ ಕೊನೆಗೂ ಗ್ರೀನ್‌ಸಿಗ್ನಲ್ ನೀಡಿದೆ. ಈಗಾಗಲೇ ಕೆಎಂಸಿಯಲ್ಲಿ ಸುಸಜ್ಜಿತವಾದ, ಅತ್ಯಂತ ಆಧುನಿಕವಾದ ವೈರಾಲಜಿ ಪರೀಕ್ಷಾ ಪ್ರಯೋಗಾಲಯವಿದ್ದು, ಇದರಲ್ಲಿ ಕೊರೋನ ವೈರಸ್‌ನ ಪರೀಕ್ಷೆ ಮಾಡಲು ಇದೀಗ ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ಅನುಮತಿ ನೀಡಿದೆ. ಐಸಿಎಂಆರ್‌ನಿಂದ ಕಳೆದ ಗುರುವಾರ ಅಧಿಕೃತವಾದ ಪರವಾನಿಗೆ ಪತ್ರ ಬಂದಿದೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೊರೋನ ಟೆಸ್ಟ್ ಲ್ಯಾಬ್‌ಗೆ ಅನುಮತಿ Read More »

ಕರಾವಳಿ

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ➤ 40 ಕೆಜಿ ದನದ ಮಾಂಸ ವಶಕ್ಕೆ- ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.15. ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬೆಳ್ಳಾರೆ ಪೊಲೀಸರು ದನದ ಮಾಂಸ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ಸುಮಾರು 40 ಕೆ.ಜಿ.ದನದ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿದ ಕತ್ತಿ, ಚೂರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಹಾರಿಸ್,

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರಿಂದ ದಾಳಿ ➤ 40 ಕೆಜಿ ದನದ ಮಾಂಸ ವಶಕ್ಕೆ- ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.15. ಗ್ಯಾಸ್ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶುಕ್ರವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ 75ರ ಗುಂಡ್ಯ ಸಮೀಪದಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರಠಾಣೆಯ ಪೋಲೀಸರು, ಅಗ್ನಿಶಾಮಕ ದಳದವರು, ಗ್ಯಾಸ್ ತುರ್ತುಸ್ಥಿತಿ ನಿವಾರಣೆ ವಾಹನ ಆಗಮಿಸಿದ್ದು ತೆರವು ಕಾರ್ಯಚರಣೆ ನಡೆಯುತ್ತಿದೆ‌.

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top