ಕರಾವಳಿ

ಉಡುಪಿ: ನಾಳೆಯಿಂದ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆ

ಉಡುಪಿ, ಮೇ 4: ಜಿಲ್ಲೆಯಲ್ಲಿ ಮಂಗಳವಾರದಿಂದ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆಯಾಗಲಿದ್ದು, ಖರೀದಿಗೆ ಹೆಚ್ಚಿನ ಸಮಯ ಸಿಗಲಿದ್ದು, ಬೆಳಗ್ಗೆ 7ರಿಂದ ಸಂಜೆ 7ರ ತನಕ ಅಂಗಡಿಗಳು ಕಾರ್ಯಾಚರಿಸಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಐದು ಶಾಸಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೋಮವಾರದಂದು ಜನರ ಪ್ರತಿಕ್ರಿಯೆಗಳನ್ನು ಗಮನಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಗಳವಾರದಂದು ವೈನ್‌ಶಾಪ್ ಮಾತ್ರ ಕಾರ್ಯಾಚರಣೆ ನಡೆಸಲಿದ್ದು, ಬಾರ್ ಓಪನ್ ಇಡಲು ಅವಕಾಶಗಳಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉಡುಪಿ: ನಾಳೆಯಿಂದ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಪರಿಸರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ *➤ ಹಲವು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು ➤ ಅಪಾರ ಕೃಷಿ ನಾಶ, ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಭಾನುವಾರ ಸಂಜೆ ಸುರಿದ‌ ಗುಡುಗು ಸಹಿತ ಭಾರೀ ಮಳೆಗೆ ಕಡಬ ತಾಲೂಕಿನ ವಿವಿಧೆಡೆ ಹಲವು ಮನೆಗಳಿಗೆ, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪಟ್ರೋಡಿ‌ ಎಂಬಲ್ಲಿ ಬೀಸಿದ ಭಾರೀ ಮಳೆಗೆ ಹಲವು ಮರಗಳು ಧರಾಶಾಯಿಯಾಗಿದ್ದು, ತಂಗಪ್ಪ ಮೇಸ್ತ್ರಿ ಎಂಬವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮೇಲ್ಛಾವಣಿಗೆ ಹಾನಿಯಾಗಿದೆ. ಪಕ್ಕದಲ್ಲೇ ಇದ್ದ ವಿಕ್ರಂ ಎಂಬವರ ಮನೆಗೂ ಹಾನಿಯಾಗಿದ್ದು, ಹುಕ್ರ‌

ಕಡಬ ಪರಿಸರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ *➤ ಹಲವು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು ➤ ಅಪಾರ ಕೃಷಿ ನಾಶ, ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ.ದಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ರಾತ್ರಿ 7ರ ವರೆಗೆ ಲಾಕ್‌ಡೌನ್ ಸಡಿಲಿಕೆ ➤ ಏನೆಲ್ಲಾ ಇರುತ್ತೆ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.03. ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ನ್ನು ಬೆಳಿಗ್ಗೆ 7 ರಿಂದ ರಾತ್ರಿ 7ರವರೆಗೆ ಸಡಿಲಿಸಿ ಜಿಲ್ಲಾಧಿಕಾರಿ ಸಿಂಧೂ.ಬಿ‌.ರೂಪೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬೈಕಿನಲ್ಲಿ ಒಬ್ಬರಿಗಷ್ಟೇ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಸ್ಥಳೀಯ ಅಂಗಡಿಗಳು,

ದ.ಕ.ದಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ರಾತ್ರಿ 7ರ ವರೆಗೆ ಲಾಕ್‌ಡೌನ್ ಸಡಿಲಿಕೆ ➤ ಏನೆಲ್ಲಾ ಇರುತ್ತೆ ಎಂದು ತಿಳಿಯಬೇಕೇ..? Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಗಣಿ ಹಾಗೂ ಕಂದಾಯ ಅಧಿಕಾರಿಗಳಿಂದ ದಾಳಿ ➤ ಅಕ್ರಮವಾಗಿ ಶೇಖರಿಸಿಟ್ಟಿದ್ದ 40 ಲೋಡ್ ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ,‌ಮೇ.02. ಕಡಬ ತಾಲೂಕಿನ ಬಂಟ್ರ ಗ್ರಾಮದ ಅಳೇರಿಮಜಲು ಎಂಬಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಿರುವ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಅಧಿಕಾರಿಗಳು ಸುಮಾರು 40 ಲೋಡ್‌ ಮರಳನ್ನು ವಶಪಡಿಸಿಕೊಂಡಿದ್ದಾರೆ‌. ಖಚಿತ ಮಾಹಿತಿಯ ಮೇರೆಗೆ ದಾಳಿ‌ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ವಸುಧಾ ಹಾಗೂ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ಬಂಟ್ರ ಗ್ರಾಮದ ಸಜಿ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಸುಮಾರು 40

ಕಡಬ: ಗಣಿ ಹಾಗೂ ಕಂದಾಯ ಅಧಿಕಾರಿಗಳಿಂದ ದಾಳಿ ➤ ಅಕ್ರಮವಾಗಿ ಶೇಖರಿಸಿಟ್ಟಿದ್ದ 40 ಲೋಡ್ ಮರಳು ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಂತೂರು: ರಸ್ತೆ ಅಪಘಾತ ➤ ಮರ್ಧಾಳ ಪಂಚಾಯತ್ ಪಿಡಿಓ ಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಬೈಕೊಂದು ಸ್ಕಿಡ್ ಆಗಿ‌ ಉರುಳಿ ಬಿದ್ದ ಪರಿಣಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯ ಕುಂತೂರು ಎಂಬಲ್ಲಿ ಶನಿವಾರದಂದು ಸಂಭವಿಸಿದೆ. ಮರ್ಧಾಳ ಹಾಗೂ ಐತ್ತೂರು ಗ್ರಾಮ ಪಂಚಾಯತ್ ನ ಪಿಡಿಒ ಶೇಖರ್ ಅವರು ತನ್ನ ಮನೆಯಿಂದ ಮರ್ಧಾಳ ಕಡೆಗೆ ಆಗಮಿಸುತ್ತಿದ್ದ ವೇಳೆ ಕುಂತೂರು ಪದವು ಎಂಬಲ್ಲಿ ಬೈಕ್ ಸ್ಕಿಡ್ ಆಗಿದೆ. ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆ ಗೆ ಕರೆದೊಯ್ಯಲಾಗಿದೆ.

ಕುಂತೂರು: ರಸ್ತೆ ಅಪಘಾತ ➤ ಮರ್ಧಾಳ ಪಂಚಾಯತ್ ಪಿಡಿಓ ಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದ ಎಂ.ಜೆ. ವೆಜಿಟೆಬಲ್ಸ್ ನಲ್ಲಿ ವಿಶೇಷ ದರ ಕಡಿತ ಮಾರಾಟ ➤ ಈರುಳ್ಳಿ, ಟೊಮ್ಯಾಟೊ ಪ್ರತೀ ಕೆಜಿಗೆ 10 ರೂ. ಮಾತ್ರ

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಕೊರೋನಾ ಮಹಾಮಾರಿಯಿಂದಾಗಿರುವ ಲಾಕ್‌ಡೌನ್ ನಿಂದ ಕಂಗೆಟ್ಟಿರುವ ಕಡಬದ ಜನತೆಗೆ ತರಕಾರಿ ಖರೀದಿಗೆ ಸುವರ್ಣಾವಕಾಶವೊಂದಿದ್ದು, ಕಡಬದ ಬಸ್ ನಿಲ್ದಾಣದ ಮುಂಭಾಗದ ಶ್ರೀದೇವಿ ಇಲೆಕ್ಟ್ರಾನಿಕ್ಸ್ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಎಂ.ಜೆ. ತರಕಾರಿ ಮತ್ತು ಹಣ್ಣುಹಂಪಲು ಮಳಿಗೆಯಲ್ಲಿ ವಿಶೇಷ ದರಕಡಿತ ಮಾರಾಟ ಏರ್ಪಡಿಸಲಾಗಿದೆ. ಟೊಮ್ಯಾಟೊ, ಈರುಳ್ಳಿ (ದೊಡ್ಡದು) ಕ್ಯಾಬೇಜ್, ಕಿಲೋವೊಂದಕ್ಕೆ 10 ರೂ., ಬೀಟ್ರೋಟ್, ಸೌತೆಕಾಯಿ, ಮುಳ್ಳುಸೌತೆ, ಬದನೆಕಾಯಿ, ಸಿಹಿ ಗೆಣಸು, ಕಿಲೋಗೆ 15 ರೂ., ಮೂಲಂಗಿ, ಕೇನೆ, ಹೂಕೋಸು, ಮರಗೆಣಸು, ತೊಂಡೆಕಾಯಿ ಪ್ರತೀ ಕೆಜಿಗೆ

ಕಡಬದ ಎಂ.ಜೆ. ವೆಜಿಟೆಬಲ್ಸ್ ನಲ್ಲಿ ವಿಶೇಷ ದರ ಕಡಿತ ಮಾರಾಟ ➤ ಈರುಳ್ಳಿ, ಟೊಮ್ಯಾಟೊ ಪ್ರತೀ ಕೆಜಿಗೆ 10 ರೂ. ಮಾತ್ರ Read More »

ಕರಾವಳಿ

BREAKING NEWS ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೂರನೇ ಬಲಿ

ಮಂಗಳೂರು, ಎ.30: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಬಂಟ್ವಾಳ ವೃದ್ಧೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನ ವೈರಸ್ ಮೂರನೇ ಬಲಿ ಪಡೆದಿದೆ. ಬಂಟ್ವಾಳದ ಕೊರೋನಾ ಪೀಡಿತ ವೃದ್ದೆ ಚಿಕಿತ್ಸೆ ಫಲಿಸದೇ ಗುರುವಾರ ಸಂಜೆ ಮೃತಪಟ್ಟಿದ್ದಾರೆ. ಬಂಟ್ವಾಳ ಕಸಬಾದ 69 ವರ್ಷದ ಮೃದ್ಧೆ ಎ.21ರಂದು ಕೊರೋನ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಎ.19ರಂದು ಬಂಟ್ವಾಳ ಪೇಟೆಯ ಸಾವನ್ನಪ್ಪಿದ್ದ ಮಹಿಳೆಯಿಂದ ಸೋಂಕು ತಗುಲಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

BREAKING NEWS ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೂರನೇ ಬಲಿ Read More »

ಕರಾವಳಿ

ಆರೆಂಜ್‌ನಿಂದ ಮತ್ತೆ ರೆಡ್ ವಲಯಕ್ಕೆ ದ.ಕ. ಜಿಲ್ಲೆ

ಮಂಗಳೂರು, ಎ.30: ರಾಜ್ಯ ಆರೋಗ್ಯ ಇಲಾಖೆ ಹೊಸ ಮಾನದಂಡಗಳೊಂದಿಗೆ ಜಿಲ್ಲಾವಾರು ಕೆಂಪು, ಕಿತ್ತಳೆ ಹಾಗೂ ಹಸಿರು ವಲಯವನ್ನು ಪಟ್ಟಿಮಾಡಿದ್ದು, ರಾಜ್ಯದ 15 ಜಿಲ್ಲೆಗಳನ್ನು ಕೆಂಪು ವಲಯಗಳನ್ನಾಗಿ ಘೋಷಿಸಿದೆ. ರೆಡ್ ಝೋನ್ ಪಟ್ಟಿಯಲ್ಲಿ ಈ ಮೊದಲು ಆರೆಂಜ್ ಝೋನ್‌ನಲ್ಲಿದ್ದ ದ.ಕ.ವೂ ಸೇರಿಕೊಂಡಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರಿಂದ ಮತ್ತೆ ರೆಡ್ ರೆನ್‌ಗೆ ಇಳಿಯಲ್ಪಟ್ಟಿದೆ. ಕೊರೋನ ವೈರಸ್ ಸೋಂಕು ಪ್ರಕರಣಗಳನ್ನು ಆಧರಿಸಿ ಈ ವಲಯಗಳನ್ನು ಗುರುತಿಸಲಾಗಿದೆ. ಕಳೆದ 14 ದಿನಗಳಲ್ಲಿ ಸೋಂಕು ದೃಢಪಟ್ಟ ಜಿಲ್ಲೆಯನ್ನು ಕೆಂಪು

ಆರೆಂಜ್‌ನಿಂದ ಮತ್ತೆ ರೆಡ್ ವಲಯಕ್ಕೆ ದ.ಕ. ಜಿಲ್ಲೆ Read More »

ಕರಾವಳಿ

ಕಾಸರಗೋಡು: ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್

ಕಾಸರಗೋಡು, ಎ.29: ಓರ್ವ ಪತ್ರಕರ್ತ ಸೇರಿದಂತೆ ಬುಧವಾರ ಕಾಸರಗೋಡಿನಲ್ಲಿ ಇಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಖಾಸಗಿ ಚಾನೆಲ್‌ವೊಂದರ ವರದಿಗಾರನಿಗೆ ಸೋಂಕು ದೃಢಪಟ್ಟಿದೆ. ಕೇರಳದಲ್ಲಿ ಪ್ರಥಮ ಬಾರಿಗೆ ಪತ್ರಕರ್ತರೋರ್ವರಿಗೆ ಸೋಂಕು ದೃಢಪಟ್ಟಿದೆ. ಇದರಿಂದ ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ 178ಕ್ಕೇರಿದೆ. ಇಬ್ಬರಿಗೆ ಸೋಂಕಿತರ ಸಂಪರ್ಕ ದಿಂದ ಸೋಂಕು ತಗಲಿದ್ದು, ಬುಧವಾರ ಮೂವರು ಗುಣಮುಖರಾಗಿದ್ದಾರೆ. ಕೇರಳದಲ್ಲಿ ಇಂದು 10 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 1,990 ಮಂದಿ ನಿಗಾದಲ್ಲಿದ್ದು, ಈ ಪೈಕಿ 29 ಮಂದಿ ಐಸೋಲೇಶನ್ ವಾರ್ಡ್‌ನಲ್ಲಿದ್ದಾರೆ. 695 ಮಂದಿಯ ಸ್ಯಾಂಪಲ್ ಪರೀಕ್ಷಾ

ಕಾಸರಗೋಡು: ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ಬಂಟ್ವಾಳ: ಮಲಗಿದ್ದಲ್ಲೇ ಮಾಜಿ ಸೈನಿಕ ನಿಧನ; ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ

ಬಂಟ್ವಾಳ, ಎ.29: ಮಾಜಿ ಸೈನಿಕರೊಬ್ಬರು ಮನೆಯಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದು, 5 ದಿನಗಳ ಬಳಿಕ ವಿಚಾರ ಬೆಳಕಿಗೆ ಬಂದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಕಲ್ಲು ಗ್ರಾಮದ ಪಲ್ಲೊಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಮಾಜಿ ಸೈನಿಕ ಅವಿವಾಹಿತ ರಿಚಾರ್ಡ್ ಫೆರ್ನಾಂಡಿಸ್(50) ಎಂದು ಗುರುತಿಸಲಾಗಿದೆ. ದಿನ ನಿತ್ಯ ಇವರು ಹತ್ತಿರದ ಹಾಲಿನ ಡೈರಿಗೆ ಹಾಲು ಕೊಂಡುಹೋಗುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಹಾಲಿನ ಡೈರಿಗೆ ಬರದೇ ಇರುವುದನ್ನು ಗಮನಿಸಿ ಮನೆಯತ್ತ ಸ್ಥಳೀಯರು ಬಂದು ಗಮನಿಸಿದ ಸಂದರ್ಭದಲ್ಲಿ ಮೃತಪಟ್ಟಿರುವ

ಬಂಟ್ವಾಳ: ಮಲಗಿದ್ದಲ್ಲೇ ಮಾಜಿ ಸೈನಿಕ ನಿಧನ; ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ Read More »

ಕರಾವಳಿ
Scroll to Top