ಕರಾವಳಿ

ಕಾಸರಗೋಡು ಜಿಲ್ಲಾಧಿಕಾರಿಗೆ ಕ್ವಾರಂಟೈನ್

ಕಾಸರಗೋಡು, ಎ.29: ಜಿಲ್ಲೆಯಲ್ಲಿ ಬುಧವಾರದಂದು ಪತ್ರಕರ್ತರೊಬ್ಬರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿ ಮಾತ್ರವಲ್ಲದೆ, ಅವರ ಚಾಲಕ ಹಾಗೂ ಗನ್‌ಮ್ಯಾನ್ ಕೂಡ ನಿಗಾದಲ್ಲಿದ್ದಾರೆ. ಸೋಂಕು ಪತ್ತೆಯಾದ ಪತ್ರಕರ್ತ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಯ ಸಂದರ್ಶನ ನಡೆಸಿದ್ದರು. ಇದೀಗ ಪತ್ರಕರ್ತನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ನಿಗಾದಲ್ಲಿರಲು ತೀರ್ಮಾನಿಸಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿಗೆ ಕ್ವಾರಂಟೈನ್ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ

ಮಂಗಳೂರು, ಎ.29: ಕೊರೋನ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಚೈನಿ ಖೈನಿ ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೊರೋನ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ

ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಕ್‌ಡೌನ್ ನಡುವೆ ಕಡಬ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಕುಖ್ಯಾತ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ.29. ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಇತ್ತೀಚೆಗೆ ಎಸ್.ಬಿ.ಐ ಸೇವಾ ಕೇಂದ್ರ, ಮೊಬೈಲ್ ಅಂಗಡಿ, ಕಾಲೇಜು, ಪಂಚಾಯತ್ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಒಟ್ಟು 16 ಪ್ರಕರಣಗಳಲ್ಲಿ ಭಾಗವಹಿಸಿದ್ದ ಕುಖ್ಯಾತ ಕಳ್ಳನನ್ನು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಕಡಬ ಎಸ್.ಐ.ರುಕ್ಮ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕು ಸಜಿಪನಡು ಪೆರುವ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಉಮ್ಮರ್ ಫಾರೂಕ್(27ವ.) ಎಂದು ಗುರುತಿಸಲಾಗಿದೆ. ಬಂಧಿತನಿಂದ ಕಳ್ಳತನಕ್ಕೆ ಬಳಸಿದ ರಾಡ್, ಅಲ್ಲದೆ ಕೆಲವು ಸಾಮಾಗ್ರಿಗಳನ್ನು

ಲಾಕ್‌ಡೌನ್ ನಡುವೆ ಕಡಬ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಕುಖ್ಯಾತ ಕಳ್ಳನ ಬಂಧನ Read More »

ಕರಾವಳಿ

ಕಡಬ ಬಿಜೆಪಿ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಗ್ರಿ ವಿತರಣೆ ➤ ಡಿಸಿಸಿ ಬ್ಯಾಂಕ್ ನಿಂದಲೂ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.28. ಸ್ಥಳೀಯ ಆಗುಹೋಗುಗಳನ್ನು ಸಮಾಜಕ್ಕೆ ತಿಳಿಸುವ ಪತ್ರಕರ್ತರಿಗೆ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಕಡಬ ಮತ್ತು ಸೇವಾ ಭಾರತಿಯ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಕಡಬದ ಎಲ್ಲಾ ಮಾಧ್ಯಮ ಮಿತ್ರರಿಗೆ ಅಕ್ಕಿ, ದಿನಸಿ ಸಾಮಗ್ರಿಗಳನ್ನು ಕಡಬದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಕೃಷ್ಣ ಶೆಟ್ಟಿ ಅವರು ವಿತರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾದ ಪ್ರಕಾಶ್ ಎನ್.ಕೆ., ಕಡಬ ಸಿ.ಎ. ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ,

ಕಡಬ ಬಿಜೆಪಿ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಗ್ರಿ ವಿತರಣೆ ➤ ಡಿಸಿಸಿ ಬ್ಯಾಂಕ್ ನಿಂದಲೂ ಕಿಟ್ ವಿತರಣೆ Read More »

ಕರಾವಳಿ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.28. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಕೊಡ್ಯಕಲ್ಲು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಅನಿಲ ಸಾಗಾಟ ಮಾಡುತ್ತಿದ್ದ ಬುಲೆಟ್ ಟ್ಯಾಂಕರ್ ಕೊಡ್ಯಕಲ್ಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ Read More »

ಕರಾವಳಿ

ಕೊರೋನಾ ? ರೆಡ್ ಝೋನ್ ಆಗಿದ್ದ ದ.ಕ‌ ಜಿಲ್ಲೆ ಇದೀಗ ? ಆರೆಂಜ್ ಝೋನ್ ➤ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕು ? ಗ್ರೀನ್ ಝೋನ್

(ನ್ಯೂಸ್ ಕಡಬ) newskadaba.com ಮಂಗಳೂರು, ಎ.28. ಕೊರೋನಾ ಸೋಂಕಿನಿಂದಾಗಿ ರೆಡ್ ಝೋನ್ ಆಗಿ ಘೋಷಣೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಸದ್ಯ ಆರೆಂಜ್ ಝೋನ್ ಆಗಿದ್ದು, ಜನತೆಯ ಆತಂಕ ಸ್ವಲ್ಪ ಮಟ್ಟಿಗೆ ದೂರವಾದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳನ್ನು ವಿಂಗಡಿಸಲಾಗಿದ್ದು, ಮಂಗಳೂರು, ಬಂಟ್ವಾಳ ಹಾಗೂ ಪುತ್ತೂರು ತಾಲೂಕುಗಳನ್ನು ಆರೆಂಜ್ ಝೋನ್ ಆಗಿ ವಿಭಜಿಸಲಾಗಿದೆ. ಕಡಬ, ಸುಳ್ಯ, ಬೆಳ್ತಂಗಡಿ, ಉಳ್ಳಾಲ, ಮೂಡುಬಿದಿರೆ ತಾಲೂಕುಗಳಲ್ಲಿ ಯಾವುದೇ ಆಕ್ಟಿವ್ ಪ್ರಕರಣಗಳಿಲ್ಲದ ಹಿನ್ನಲೆಯಲ್ಲಿ ಗ್ರೀನ್ ಝೋನ್ ಆಗಿ ಘೋಷಿಸಲಾಗಿದೆ.

ಕೊರೋನಾ ? ರೆಡ್ ಝೋನ್ ಆಗಿದ್ದ ದ.ಕ‌ ಜಿಲ್ಲೆ ಇದೀಗ ? ಆರೆಂಜ್ ಝೋನ್ ➤ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕು ? ಗ್ರೀನ್ ಝೋನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶ ತಕ್ಷಣ ನಿಷೇಧ: ಸಚಿವ ಕೋಟ

ಮಂಗಳೂರು, ಎ.27: ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣದಿಂದ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಜಿಲ್ಲೆಯಲ್ಲಿ ಕೊರೋನ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ

ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶ ತಕ್ಷಣ ನಿಷೇಧ: ಸಚಿವ ಕೋಟ Read More »

ಕರಾವಳಿ

Breaking news ದ.ಕ.ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನ ಪಾಸಿಟಿವ್

ಮಂಗಳೂರು, ಎ.27: ದ.ಕ.ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 21 ಪ್ರಕರಣ ಪತ್ತೆಯಾದಂತಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತೆಯ ಸಂಪರ್ಕದಿಂದ 45 ವರ್ಷ ಪ್ರಾಯದ ಪುರುಷ ಮತ್ತು ಆತನ ತಾಯಿ 80 ವರ್ಷದ ಪ್ರಾಯದ ವೃದ್ಧೆಗೆ ಸೋಂಕು ತಗುಲಿರುವುದು ದೃಢಗೊಂಡಿದೆ.

Breaking news ದ.ಕ.ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ ➤ ಮೀನಾಡಿಯಲ್ಲಿ ಮನೆಗೆ ಸಿಡಿಲು ಬಡಿತ, ಇಚಿಲಂಪಾಡಿಯಲ್ಲಿ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಎ.26. ಭಾನುವಾರ ಸಂಜೆ ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿವೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಬೆಂಕಿಯ ಉಂಡೆಯೊಂದು‌ ಮನೆಗೆ ಅಪ್ಪಳಿಸಿದ್ದು, ಮನೆಯ ಒಂದು ಪಾರ್ಶ್ವ ಹಾನಿಗೀಡಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಇನ್ನೊಂದೆಡೆ ಭಾನುವಾರ ಸಂಜೆ‌ ಸುರಿದ ಮಳೆಗೆ ಇಚಿಲಂಪಾಡಿಯ ಪಾದೆ‌ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದೆ.

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ ➤ ಮೀನಾಡಿಯಲ್ಲಿ ಮನೆಗೆ ಸಿಡಿಲು ಬಡಿತ, ಇಚಿಲಂಪಾಡಿಯಲ್ಲಿ ಮನೆಗೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹೆಚ್ಚುತ್ತಿರುವ ಕೊರೋನ ಹಿನ್ನೆಲೆ: ಕಠಿಣ ಕ್ರಮಕ್ಕೆ ಸಚಿವ ಕೋಟ ಸೂಚನೆ

ಮಂಗಳೂರು, ಎ.26: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಂಟ್ವಾಳದಲ್ಲಿ ಕೊರೋನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ರವಿವಾರ ಸಚಿವರು ಹಾಗೂ ಸಂಸದರು ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್‌ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ. ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್

ಹೆಚ್ಚುತ್ತಿರುವ ಕೊರೋನ ಹಿನ್ನೆಲೆ: ಕಠಿಣ ಕ್ರಮಕ್ಕೆ ಸಚಿವ ಕೋಟ ಸೂಚನೆ Read More »

ಕರಾವಳಿ
Scroll to Top