ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಹಿಂಸಾಚಾರದಲ್ಲಿ 78 ಪೊಲೀಸರಿಗೆ ಗಾಯ; ಡಿಸಿಪಿ ಅರುಣಾಂಶುಗಿರಿ

ಮಂಗಳೂರು, ಮಾ.9: ಡಿ.19ರಂದು ಮಂಗಳೂರಿನಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಹಾಜರಾದ ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಶುಗಿರಿ ಘಟನೆಯಲ್ಲಿ 78 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಾಯಗಳಾಗಿವೆ ಎಂದು ಹೇಳಿಕೆ ನೀಡಿದ್ದಾರೆ. ವಿಚಾರಣೆಯು ಹಂಪನಕಟ್ಟೆಯ್ಲಲಿರುವ ಮಿನಿ ವಿಧಾನಸೌಧದ ಉಪ ವಿಭಾಗಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು. ಐಪಿಎಸ್ ಅಧಿಕಾರಿ ಅರುಣಾಂಶುಗಿರಿ ವಿಚಾರಣಾಧಿಕಾರಿ ಎದುರು ಹಾಜರಾಗಿದ್ದು, ಲಿಖಿತ ಹೇಳಿಕೆ ಹಾಗೂ ದಾಖಲೆಗಳನ್ನು ಸಲ್ಲಿಸಿದರು. ನಾನು ಡಿ.19ರಂದು ಪೊಲೀಸ್ ಸಿಬ್ಬಂದಿಯೊಂದಿಗೆ ಕರ್ತವ್ಯದಲ್ಲಿದ್ದೆ. […]

ಮಂಗಳೂರು ಗೋಲಿಬಾರ್ ಪ್ರಕರಣ: ಹಿಂಸಾಚಾರದಲ್ಲಿ 78 ಪೊಲೀಸರಿಗೆ ಗಾಯ; ಡಿಸಿಪಿ ಅರುಣಾಂಶುಗಿರಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ

ಭಯ ಪಡುವ ಅಗತ್ಯವಿಲ್ಲ ಮಂಗಳೂರು, ಮಾ.9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರ ಅವರು ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹಾಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರ ನೀಡಲಿಲ್ಲ. ಇದರ ಬಗ್ಗೆ

ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ!

ಮಂಗಳೂರು, ಮಾ.9: ಶಂಕಿತ ಕೊರೊನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸೋಮವಾರ ಮಂಗಳೂೂರಿನಲ್ಲಿ ನಡೆದಿದೆ. ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ರವಿವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವಿಶೇಷ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸದ್ಯ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಈತ ಉಳ್ಳಾಲದ ವ್ಯಕ್ತಿಯೆಂದು ವರದಿಯಾಗಿದೆ. ಮಂಗಳೂರು ಉತ್ತರ ಪೊಲೀಸ್

ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ! Read More »

ಕರಾವಳಿ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.08. ಕೆಎಸ್ಸಾರ್ಟಿಸಿ ಬಸ್ ಹಾಗೂ ಮಾರುತಿ ಸುಝುಕಿ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ದಯೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಮುದ್ರದಲ್ಲಿ ಪತ್ರಕರ್ತರ ನೌಕಾ ವಿಹಾರ

ಮಂಗಳೂರು, ಮಾ.8:ನಗರದಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಂಡ ವಿವಿಧ ಜಿಲ್ಲೆಗಳ ನೂರಾರು ಪತ್ರಕರ್ತರು ಶನಿವಾರ ಸಮುದ್ರ ಅಲೆಗಳ ಮಧ್ಯೆ ನೌಕಾ ವಿಹಾರ ನಡೆಸಿದರು. ಸುಮಾರು 800ಕ್ಕೂ ಅಧಿಕ ಪತ್ರಕರ್ತರಿಗೆ ರಾಣಿ ಅಬ್ಬಕ್ಕ ನೌಕೆಯಲ್ಲಿ ಸಮುದ್ರ ವಿಹಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪತ್ರಕರ್ತರು ಸಮುದ್ರ ಅಲೆಗಳ ತೇಲುತ್ತಾ ಸಾಗಿದ ನೌಕೆಯಲ್ಲಿ ಸಂಭ್ರಮಿಸಿದರು. ನೌಕಾ ವಿಹಾರದ ಕುರಿತು ಪ್ರತಿನಿಧಿಗಳು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಮುದ್ರ ವಿಹಾರದ ಸೊಬಗನ್ನು ಆಸ್ವಾದಿಸಿದರು.  

ಸಮುದ್ರದಲ್ಲಿ ಪತ್ರಕರ್ತರ ನೌಕಾ ವಿಹಾರ Read More »

ಕರಾವಳಿ

ಕಾಸರಗೋಡು: ಪಿಸ್ತೂಲ್, ಸಜೀವ ಗುಂಡುಗಳು ಚರಂಡಿಯಲ್ಲಿ ಪತ್ತೆ

ಕಾಸರಗೋಡು, ಮಾ.7: ನಗರದ ರಸ್ತೆ ಬದಿಯ ಚರಂಡಿಯೊಂದರಲ್ಲಿ ಎರಡು ಪಿಸ್ತೂಲ್ ಹಾಗೂ ಆರು ಸಜೀವ ಗುಂಡುಗಳು ಪತ್ತೆಯಾಗಿವೆ. ಕಾಸರಗೋಡು ರೈಲು ನಿಲ್ದಾಣ ಮುಂಭಾಗದ ರಸ್ತೆಬದಿಯ ಚರಂಡಿಯನ್ನು ಸ್ವಚ್ಛತೆಗೊಳಿಸುತ್ತಿದ್ದಾಗ ಪಿಸ್ತೂಲು ಮತ್ತು ಗುಂಡುಗಳು ಪತ್ತೆಯಾಗಿವೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಕಾಸರಗೋಡು ನಗರ ಠಾಣಾ ಪೊಲೀಸರು ರಿವಾಲ್ವರ್ ಮತ್ತು ಗುಂಡುಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಪಿಸ್ತೂಲುಗಳು ಮತ್ತು ಗುಂಡುಗಳು ತುಕ್ಕು ಹಿಡಿದಿದೆ. ವರ್ಷಗಳ ಹಿಂದೆಯೇ ಇದನ್ನು ಇಲ್ಲಿ ಎಸೆದು

ಕಾಸರಗೋಡು: ಪಿಸ್ತೂಲ್, ಸಜೀವ ಗುಂಡುಗಳು ಚರಂಡಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ

ಮಂಗಳೂರು, ಮಾ.7: ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು. ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆಯಲ್ಲಿ ಪತ್ರಕರ್ತರು ವೃತ್ತಿಪರ ಮೌಲ್ಯವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ ಎಂದವರು ಹೇಳಿದರು. ನಗರದ

ಮಂಗಳೂರು: 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ Read More »

ಕರಾವಳಿ

ಕಾರ್ಕಳದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇಲ್ಲ: ಆಸ್ಪತ್ರೆಗೆ ತಲುಪಿದ ನೆಗೆಟಿವ್ ರಿಪೋರ್ಟ್

ಕಾರ್ಕಳ, ಮಾ.7: ಶಂಕಿತ ಕೊರೋನ ವೈರಸ್ ಹಿನ್ನಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿರುವ ಕಾರ್ಕಳ ಮುನಿಯಾಲು ವ್ಯಕ್ತಿಯ ವೈದ್ಯಕೀಯ ಪರೀಕ್ಷಾ ವರದಿ ಆಸ್ಪತ್ರೆ ತಲುಪಿದ್ದು, ವರದಿಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿರುವುದು ಆತಂಕ ದೂರವಾಗಿದೆ. ಇಸ್ರೇಲ್ ಪ್ರವಾಸ ಮುಗಿಸಿ ತಮ್ಮೂರಿಗೆ ವಾಪಾಸ್ ಆಗಿದ್ದ 75 ವರ್ಷದ ವ್ಯಕ್ತಿ ಕೆಮ್ಮು ಹಾಗೂ ಶೀತದ ತೊಂದರೆಯಿಂದ ಬಳಲುತ್ತಿದ್ದರು. ವಿದೇಶ ಪ್ರವಾಸದ ಹಿನ್ನಲೆ ಹಾಗೂ ಕೊರೋನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ರೋಗಿಯ ಗಂಟಲಿನ ದ್ರವ (ಥ್ರೋಟ್ ಸ್ವಾಬ್) ವನ್ನು

ಕಾರ್ಕಳದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇಲ್ಲ: ಆಸ್ಪತ್ರೆಗೆ ತಲುಪಿದ ನೆಗೆಟಿವ್ ರಿಪೋರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಮಂಗಳೂರು, ಮಾ.6: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಹೈ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.

ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೈಂದೂರು: ಬೈಕುಗಳ ಢಿಕ್ಕಿ; ಓರ್ವ ಮೃತ್ಯು

ಕುಂದಾಪುರ, ಮಾ.6: ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊಬ್ಬ ಸವಾರ ಮತ್ತು ಇಬ್ಬರು ಸಹಸವಾರರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಕೊಲ್ಲೂರು ರಸ್ತೆಯ ಗೋಳಿಹೊಳೆ ಮಸೀದಿ ಸಮೀಪ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಬೈಕ್ ಸವಾರನನ್ನು ಸಾರ್ಕಲ್ಲು ತೊಂಡ್ಳೆ ನಿವಾಸಿ ಸುಧೀರ್ ಗೌಡ(25) ಎಂದು ಗುರುತಿಸಲಾಗಿದೆ. ಸುಧೀರ್ ಗೌಡ ಹಾಗೂ ಆತನ ಸ್ನೇಹಿತ ಸುರೇಂದ್ರ ಗೌಡ ಇಬ್ಬರು ತೊಂಡ್ಳೆಯಿಂದ ಗೋಳಿಹೊಳೆ ಮೂರುಕೈಗೆ ಬೈಕಿನಲ್ಲಿ ಹೋಗಿದ್ದರೆನ್ನಲಾಗಿದೆ. ಇದೇ

ಬೈಂದೂರು: ಬೈಕುಗಳ ಢಿಕ್ಕಿ; ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top