ಕರಾವಳಿ

ಮಹಿಳಾ ಸಂಪನ್ಮೂಲ ಕೇಂದ್ರ ಹಸ್ತಾಂತರ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಮಾ. 17. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರವನ್ನು  ಉದ್ಘಾಟಿಸಲಾಯಿತು. ಮುತ್ತೂಟ್ ಫೈನಾನ್ಸ್  ಸಂಸ್ಥೆಯ ಸಿ.ಎಸ್.ಆರ್ ಅನುದಾನದಲ್ಲಿ ಜಿಲ್ಲಾ ಮಹಿಳಾ ಸಂಪನ್ಮೂಲ ಕೇಂದ್ರವನ್ನು ಎಲ್ಲಾ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗಿದ್ದು, ಮಹಿಳಾ ದಿನಾಚರಣೆಯನ್ನು ಆಚರಿಸುವ ಮೂಲಕ ಲೋಕಾರ್ಪಣೆ ಮಾಡಲಾಯಿತು. ಮುತ್ತೂಟ್ ಫೈನಾನ್ಸ್, ಪ್ರಾದೇಶಿಕ ವ್ಯವಸ್ಥಾಪಕ ಪ್ರಶಾಂತ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಇಂದಿನ ಸಮಾಜದಲ್ಲಿ ಮಹಿಳೆಯರು […]

ಮಹಿಳಾ ಸಂಪನ್ಮೂಲ ಕೇಂದ್ರ ಹಸ್ತಾಂತರ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಕಸ ಸ್ವಚ್ಛಗೊಳಿಸುವಾಗ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಮಾ.17 ಕಸವನ್ನು ಸ್ವಚ್ಛಗೊಳಿಸುವ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯೋರ್ವರನ್ನು ರಕ್ಷಿಸಿದ ಘಟನೆ ಮಂಗಳೂರು ನಗರದ ಬೋಳಾರದ ಮುಳಿಹಿತ್ತಲು ಬಳಿ ನಡೆದಿದೆ. ಬೆಳಗಾವಿಯ ಸವದತ್ತಿ ತಾಲೂಕಿನ ಪಂಚಪ್ಪ(44) ಎಂಬುವವರು ಬಾವಿಯ ಸುತ್ತಮುತ್ತಲಿನ ಕಸವನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದಿದ್ದಾರೆ. ಬಳಿಕ ಅವರನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ ಹಾಗು ಸಿಬ್ಬಂದಿಯವರು ಬಾವಿಗೆ ಇಳಿದು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಗಳೂರು: ಕಸ ಸ್ವಚ್ಛಗೊಳಿಸುವಾಗ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ಮಾ. 17. ಕಡಬ ತಾಲೂಕಿನ ನೆಲ್ಯಾಡಿ ನಿವಾಸಿಯೊಬ್ಬರು ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣ ಸಮೀಪದ ವಸತಿ ಗೃಹದ ಬಾಡಿಗೆ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್‌ ಪಿ ಎಂ ಎಂದು ಗುರುತಿಸಲಾಗಿದೆ. ಮಂಗಳೂರು ಬರ್ಕೆಯ ಕೋಸ್ಟಲ್‌ ಗಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಜಿನ್ಸನ್‌ ಅವರು ಪತ್ನಿ ಇಬ್ಬರು ಮಕ್ಕಳ

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ

(ನ್ಯೂಸ್‌ ಕಡಬ) newskadaba.com,  ಮಾ.17 ಬಿಲ್ವಪತ್ರೆ-ಮಲ್ಲಿಗೆ ಭೂಸ್ಪರ್ಶ- ಬ್ರಹ್ಮರಥ ಕಟ್ಟುವ ಕೆಲಸ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಏ.೧೦ರಿಂದ ನಡೆಯಲಿರುವ ‘ಪುತ್ತೂರ್‍ದ ಜಾತ್ರೆಗೆ ಬ್ರಹ್ಮರಥೋತ್ಸವದ ಸಿದ್ಧತೆಗಾಗಿ ಸೋಮವಾರ ರಥಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತರುವ ಮುಹೂರ್ತ ನಡೆಯಿತು. ರಥಕಟ್ಟು ಸ್ಥಳದಲ್ಲಿ ಬಿಲ್ವಪತ್ರೆ ಮತ್ತು ಮಲ್ಲಿಗೆ ಭೂಸ್ಪರ್ಶಗೊಂಡು ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸುವುದರೊಂದಿಗೆ ಜಾತ್ರೆಯ ಕ್ಷಣಗಣನೆ ಆರಂಭಗೊಂಡಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ,

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರು ಬೈಕ್ ಢಿಕ್ಕಿ- 5 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್‌ ಕಡಬ) newskadaba.com ಮಾ. 17. ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ 5 ವರ್ಷದ ಬಾಲಕಿ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಸಮೀಪ ನಡೆದಿದೆ.   ತಣ್ಣೀರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್‌ ಎಂಬವರು ತಮ್ಮ ಮಗಳು ಸಾಜಿರಾ (33) ಹಾಗೂ ಮೊಮ್ಮಗಳು ಸುಹೈರಾ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದಾಗ ವಿರುದ್ದ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರು ಬೈಕ್ ಢಿಕ್ಕಿ- 5 ವರ್ಷದ ಬಾಲಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.17 ಬೆಂಗಳೂರು: ‘ಕಾನೂನು ಪ್ರಕಾರ ಬಾಲ್ಯವಿವಾಹ ನಿಷೇಧಿಸಲಾಗಿದೆ’ ಎಂಬ ಫಲಕಗಳನ್ನು ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಸೇರಿದಂತೆ ವಿವಾಹಗಳು ನಡೆಯುವ ಎಲ್ಲಾ ಸ್ಥಳಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ದೇವನಹಳ್ಳಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಎನ್. ಮಂಜುನಾಥ್ ಸೇರಿ ಐವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ನ್ಯಾಯಪೀಠವು ಬಾಲ್ಯವಿವಾಹ ಪ್ರಕರಣಗಳ ಏರಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ‘ಬಾಲ್ಯವಿವಾಹ ನಿರ್ಮೂಲನೆ

ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ‘ಬಾಲ್ಯವಿವಾಹ ನಿಷೇಧ’ ಫಲಕ ಕಡ್ಡಾಯ: ಹೈಕೋರ್ಟ್ ಕಠಿಣ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಸಮುದಾಯ ಸೇವೆ ವೈರಲ್ ಹಿನ್ನೆಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com  ಸುಳ್ಯ, ಮಾ. 17. ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ಎಂಬಾತನು, ನ್ಯಾಯಾಲಯದ ಆದೇಶದಂತೆ  ಮಾ.15ರಂದು ಸಮುದಾಯ ಸೇವೆಯ ಭಾಗವಾಗಿ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ನಿಯಂತ್ರಣ ಕಾರ್ಯವನ್ನು ನಿರ್ವಹಿಸಿದ್ದಾನೆ. ಇದಾದ ಬಳಿಕ, ತಾನು ನಡೆಸಿದ ಸಮುದಾಯ ಸೇವೆಯ ಕುರಿತ ಚಿತ್ರಗಳು ಮತ್ತು ಮಾಹಿತಿ ವಿವಿಧ ಸಾಮಾಜಿಕ

ಸುಳ್ಯ: ಸಮುದಾಯ ಸೇವೆ ವೈರಲ್ ಹಿನ್ನೆಲೆ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ

(ನ್ಯೂಸ್‌ ಕಡಬ) newskadaba.com,  ಮಾ.17 ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ೧೮ ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ ೧:೧೫ ರವರೆಗೆ ಪರೀಕ್ಷೆಗಳು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕಡಬ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com  ಕಡಬ, ಮಾ. 17. ದೀರ್ಘಕಾಲದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಪೆರಾಬೆ ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಪೆರಾಬೆ ಗ್ರಾಮದ ನಡ್ಡೋಟ್ಟು ಮನೆ ನಿವಾಸಿ ಸಂಜೀವ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಾರ್ಚ್ 13ರಂದು ಸಂಜೀವ ಪೂಜಾರಿಯವರ ಪತ್ನಿ ಪುಷ್ಪವತಿ ಅವರು ಪಡಿತರ ತರಲು

ಕಡಬ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸವಣೂರು ವಲಯದ ಸಭೆ

(ನ್ಯೂಸ್‌ ಕಡಬ) newskadaba.com,  ಮಾ.17 ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್(KSTA) ಸವಣೂರು ವಲಯದ ಸಾಮಾನ್ಯ ಸಭೆಯು ಸವಣೂರಿನಲ್ಲಿ ಸಮಿತಿಯ ಅಧ್ಯಕ್ಷರಾದ ಮೋಹನ್ ಕೆಡೆಂಜಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೊಸ ಸದಸ್ಯರ ಸೇರ್ಪಡೆ, ರಿನೀವಲ್‌ ಹಾಗೂ ಕಾರ್ಮಿಕ ಆಯುಕ್ತರ ಮುಖಾಂತರ NPS ಪಿಂಚಣಿ ಯೋಜನೆ ಹಾಗೂ ಸ್ಮಾರ್ಟ್ ಕಾರ್ಡ್ ಮಾಡುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಗನ್ನಾಥ ಅಮೈ ಬೇಬಿ ಕುಮಾರಮಂಗಲ, ಸರಸ್ವತಿ ಶುಭಲಕ್ಷ್ಮಿ ಪ್ರಮೀಳಾ ಇಡ್ಯಾಡಿ,ಜಯಂತಿ, ಮೋಹಿನಿ,ಗೌತಮಿ ಸುನಿತಾ,ನೇತ್ರಾವತಿ, ಬೇಬಿ

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸವಣೂರು ವಲಯದ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top