ಕರಾವಳಿ

ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ಪ್ರಕೃತಿ ವಿಕೋಪದ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಪತ್ತು ನಿರ್ವಹಣೆಯ ಕುರಿತು ವಿವಿಧ ಇಲಾಖೆ ಅಧಿಕಾರಿಗಳ  ಜೊತೆ ಸಭೆ ನಡೆಸಿದರು. ತುರ್ತು ಪ್ರವಾಹ ಅಣುಕು ಪ್ರದರ್ಶನ, ಆರೋಗ್ಯ ಇಲಾಖೆಯಿಂದ ತುರ್ತು ಪ್ರವಾಹ ನಿರ್ವಹಣೆ, ತಾಲೂಕು ಮಟ್ಟದಲ್ಲಿ […]

ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ Read More »

ಕರಾವಳಿ

ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ಜನವರಿ 26 ರಂದು ನೆಹರೂ ಮೈದಾನದಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖ್ಯಸ್ಥರಿಗೆ ನಿಗದಿಪಡಿಸಿದ ಹೊಣೆಯನ್ನು ಪರಸ್ಪರ ಸಮನ್ವಯದಿಂದ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹೇಳಿದರು. ನೆಹರೂ ಮೈದಾನ ಸಜ್ಜುಗೊಳಿಸುವಿಕೆ, ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ,

ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ Read More »

ಕರಾವಳಿ

ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಶ್ರಮದಾನ

(ನ್ಯೂಸ್ ಕಡಬ) newskadaba.com, ಕಡಬ, ಜ.24   ಶತಮಾನೋತ್ಸವ ಸಂಭ್ರಮದಲ್ಲಿರುವ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಪೋಷಕರ ಶ್ರಮದಾನ ನಡೆಯಿತು. ಶಾಲಾ ಆವರಣ ಸ್ವಚ್ಚ ಮಾಡುವುದರ ಮೂಲಕ ಸಮಾರಂಭಕ್ಕೆ ಪೂರ್ವ ಸಿದ್ದತೆ ಮಾಡಿಕೊಳ್ಳಲಾಯಿತು. ಬಳಿಕ ಶಾಲಾ ಮುಖ್ಯ ಶಿಕ್ಷಕ ಕೆ.ಪಿ. ನಿಂಗರಾಜು ನೇತೃತ್ವದಲ್ಲಿ ಶತಮಾನೋತ್ಸವ ಸಮಾರಂಭದ ದಿನದಂದು ಪೊಷಕರ ಜವಾಬ್ದಾರಿಯ ಬಗ್ಗೆ ಸಮಾಲೋಚನೆ ಹಾಗೂ ಪೊಷಕರೊಂದಿನ ಚರ್ಚೆ, ವಿಚಾರ ವಿನಿಮಯದ ಸಭೆಯು ನಡೆಯಿತು. ಈ ಸಂಧರ್ಭದಲ್ಲಿ ಶಾಲಾಭಿವೃದ್ದಿಯ ಅಧ್ಯಕ್ಷ ಅಬೂಬಕ್ಕರ್ ನೆಕ್ಕರೆ, ಉಪಾಧ್ಯಕ್ಷ ಜನಾರ್ಧನ

ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಶ್ರಮದಾನ Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ

ಮಂಗಳೂರು, ಜ.24: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ. ಶುಕ್ರವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಘಟನೆಗೆ ಸಂಬಂಧಪಟ್ಟಂತೆ ಹಲವಾರು ಊಹಾಪೋಹಗಳು ಎದ್ದಿದ್ದವು. ಈಗ ಪ್ರಕರಣ ತಿರುವು ಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಂತರ ವರದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಪ್ಲಟೂನ್ ಕಮಾಂಡರ್ ಸುಬ್ರಾಯ ಪೈ ಇವರಿಗೆ ಶ್ರಧ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಇತ್ತೀಚೆಗೆ ನಿಧನ ಹೊಂದಿದ ಮಂಗಳೂರು ಘಟಕದ ಮಾಜಿ ಘಟಕಾಧಿಕಾರಿ ಸುಬ್ರಾಯ ಪೈ. ಇವರಿಗೆ ಇಂದು ಬೆಳಿಗ್ಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಸಮಾದೇಷ್ಟರು ಮಾತನಾಡಿ, ಸುಬ್ರಾಯ ಪೈ ಇವರು ದಿನಾಂಕ 06-09-1984 ರಂದು ಗೃಹರಕ್ಷಕ ದಳಕ್ಕೆ ಸೇರ್ಪಡೆಗೊಂಡು ದಿನಾಂಕ 23-03-2009 ರಂದು ಗೃಹರಕ್ಷಕ ಸಂಸ್ಥೆಯಿಂದ ನಿವೃತ್ತಿ ಹೊಂದಿ ಸುಮಾರು 25 ವರ್ಷಗಳ

ಮಾಜಿ ಪ್ಲಟೂನ್ ಕಮಾಂಡರ್ ಸುಬ್ರಾಯ ಪೈ ಇವರಿಗೆ ಶ್ರಧ್ದಾಂಜಲಿ ಸಭೆ Read More »

ಕರಾವಳಿ

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2019-20ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ವಿದ್ಯಾರ್ಥಿಗಳ ನೇರ ಪಾಲ್ಗೊಳ್ಳುವಿಕೆ ಹಾಗೂ ಅಂಬಿಗರ ಚೌಡಯ್ಯನವರ ವಚನಗಳನ್ನು ಓದಿ ವಿವೇಚಿಸುವಂತೆ ಉತ್ತೇಜನ ನೀಡುವ ಮತ್ತು ವಚನಗಳು ಪ್ರತಿಪಾದಿಸುವ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಮತ್ತು ಕನ್ನಡ ವಿಭಾಗ ಆಳ್ವಾಸ್ ಕಾಲೇಜು, ಮೂಡುಬಿದಿರೆ ಸಹಯೋಗದಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮವನ್ನು ಜನವರಿ  24ರಂದು  ಡಾ. ಶಿವರಾಮ

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು ಸ್ಫೋಟಕ ಪ್ರಕರಣ: ಆರೋಪಿ ಆದಿತ್ಯ ರಾವ್ ವಿರುದ್ಧ ಮತ್ತೊಂದು ದೂರು ದಾಖಲು

ಮಂಗಳೂರು, ಜ.23: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇಟ್ಟಿದ್ದ ಆರೋಪಿ ಆದಿತ್ಯರಾವ್ ಸದ್ಯ ಮಂಗಳೂರು ಪೊಲೀಸರ ವಶದಲ್ಲಿದ್ದು ಎಸಿಪಿ ಬೆಳ್ಯಪ್ಪ ತಂಡದಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಇದೀಗ ಆರೋಪಿ ಆದಿತ್ಯರಾವ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಸ್ಫೋಟಕ ಇಟ್ಟ ಬಳಿಕ ಅದೇದಿನ ಜ.20ರಂದು ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಿದ್ದಾಗಿ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಇಂಡಿಗೋ ಅಧಿಕಾರಿಗಳು ಈ ದೂರು ನೀಡಿದ್ದಾರೆ. ಅಂದು ಮಧ್ಯಾಹ್ನ 3:15ಕ್ಕೆ

ಮಂಗಳೂರು ಸ್ಫೋಟಕ ಪ್ರಕರಣ: ಆರೋಪಿ ಆದಿತ್ಯ ರಾವ್ ವಿರುದ್ಧ ಮತ್ತೊಂದು ದೂರು ದಾಖಲು Read More »

ಕರಾವಳಿ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಗಳೂರು ನಗರ  ಉತ್ತರ ವಿಧಾನ ಸಭಾ ಕ್ಷೇತ್ರ ಸದಸ್ಯ ಡಾ.ಭರತ್ ಶೆಟ್ಟಿ ವೈ ಇವರ 2018-19ನೇ ಸಾಲಿನ ಅನುದಾನದಲ್ಲಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮ ಪಡ್ಡಾಯಿ ಬೆಟ್ಟು ಕಜೆ ದಡ್ಡು ರಸ್ತೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ರೂ. 2 ಲಕ್ಷ, ಮಂಗಳೂರು ತಾಲೂಕು ಮೂಡುಪೆರಾರ ಕೊಳಪಿಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.2 ಲಕ್ಷ.   2019-20 ನೇ ಸಾಲಿನ

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜನವರಿ 27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ. ಜನವರಿ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ. ಜನವರಿ 29

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ Read More »

ಕರಾವಳಿ

ಬೆಳ್ತಂಗಡಿ ತಾ.  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬೆಳ್ತಂಗಡಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 11. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ವಿವರ ; ಬಾರ್ಯ ಗ್ರಾಮದ ಬೇಂಗಿಲ ಅಂಗನವಾಡಿ ಕೇಂದ್ರ (ಇತರೆ), ತೆಕ್ಕಾರು ಗ್ರಾಮದ ಸರಳೀಕಟ್ಟೆ ಅಂಗನವಾಡಿ ಕೇಂದ್ರ (ಇತರೆ), ಕಣಿಯೂರು ಗ್ರಾಮದ ಅಡೆಂಜ ಅಂಗನವಾಡಿ ಕೇಂದ್ರ

ಬೆಳ್ತಂಗಡಿ ತಾ.  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top