ನಿಧನ ನ್ಯೂಸ್
(ನ್ಯೂಸ್ ಕಡಬ) newskadaba.com, ಕಡಬ, ಜ.13 ಕಡಬ ತಾಲೂಕು ಆಲಂಕಾರು ಗ್ರಾಮದ ಬುಡೇರಿಯಾ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕುಕ್ಕ ಮುಗೇರ (67ವ) ಅಲ್ಪ ಕಾಲದ ಅಸೌಖ್ಯದಿಂದ ಸ್ವ-ಗೃಹದಲ್ಲಿ ಆದಿತ್ಯವಾರ ನಿಧನರಾದರು. ಮೃತರು ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
(ನ್ಯೂಸ್ ಕಡಬ) newskadaba.com, ಕಡಬ, ಜ.13 ಕಡಬ ತಾಲೂಕು ಆಲಂಕಾರು ಗ್ರಾಮದ ಬುಡೇರಿಯಾ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕುಕ್ಕ ಮುಗೇರ (67ವ) ಅಲ್ಪ ಕಾಲದ ಅಸೌಖ್ಯದಿಂದ ಸ್ವ-ಗೃಹದಲ್ಲಿ ಆದಿತ್ಯವಾರ ನಿಧನರಾದರು. ಮೃತರು ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
(ನ್ಯೂಸ್ ಕಡಬ) Newskadaba.com ಜ.12. ಕಡಬ. ಮುಬಾರಕ್ ಜುಮಾ ಮಸೀದಿ ಕುದ್ಲೂರು (ಆತೂರು) ಇದರ ಆಶ್ರಯದಲ್ಲಿ ನಡೆಸುತ್ತಿರುವ ಹಯಾತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸವು ಜ.14ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಮದರಸ ಕಟ್ಟಡದ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂ- ಇಯ್ಯತ್ತುಲ್ ಉಲಮಾ ಇದರ ಅಧ್ಯಕ್ಷರಾದ ಬಹು| ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ರವರು ನೆರವೇರಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುದ್ಲೂರು ಹಯಾತುಲ್ ಇಸ್ಲಾಂ ಮದ್ರಸ ಆತೂರು ➤ ನಾಳೆ(ಜ.14) ನೂತನ ಕಟ್ಟಡದ ಶಿಲಾನ್ಯಾಸ Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಸುಲ್ತಾನೇಟ್ ಆಫ್ ಒಮಾನ್ ದೇಶದ ಸುಲ್ತಾನರಾದ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ.10 ರಂದು ನಿಧನರಾಗಿದ್ದು, ಅವರ ಗೌರವಾರ್ಥ ಇಂದು (ಜ.13) ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ಳಾರೆ. ಜ.11. ಝಕರಿಯಾ ಜುಮಾಮಸೀದಿ ಬೆಳ್ಳಾರೆ ಇದರ ಅಧೀನದಲ್ಲಿ ನಡೆಯುತ್ತಿರುವ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ವಾರ್ಷಿಕೋತ್ಸವವು ಇಂದು ಶಾಲಾ ಸಂಚಾಲಕರಾದ ಬಶೀರ್ ಬಿ.ಎ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗದೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ.ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳಬೇಕಾದಲ್ಲಿ ಹೆತ್ತವರು, ಪೋಷಕರು ಅಧ್ಯಾಪಕರೊಡನೆ ನಿರಂತರ ಸಂಪರ್ಕ ಹಾಗೂ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುವುದು ಅತೀ ಅಗತ್ಯ
(ನ್ಯೂಸ್ ಕಡಬ) newskadaba.com, ಪುತ್ತೂರು, ಜ.11 ಪುತ್ತೂರು ಸಂಚಾರ ಠಾಣಾ ವತಿಯಿಂದ 31 ನೇ ರಸ್ತೆ ಸುರಕ್ಷತಾ ಸಪ್ತಾಹ -2020 ನೇದರ ಜಾಥಾ ಕಾರ್ಯಕ್ರಮಕ್ಕೆ ಹಾಗೂ ಹೊಸ ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ ಪುತ್ತೂರಿನ ದರ್ಬೆ ಜಂಕ್ಷನ್ ನಲ್ಲಿ ಇಂದು ನಡೆಯಿತು. ಮಾನ್ಯ ಶಾಸಕರಾದ ಶ್ರೀ ಸಂಜೀವ ಮಠಂದೂರು , ಪುತ್ತೂರು ಇವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ದಿನಕರ ಶೆಟ್ಟಿ ಹಾಗೂ
ರಸ್ತೆ ಸುರಕ್ಷತಾ ಸಪ್ತಾಹ -2020 ಮತ್ತು ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11 2019-20 ನೇ ಸಾಲಿನ ಕರಾವಳಿ ಉತ್ಸವ ಮೆರವಣಿಗೆಯಲ್ಲಿ ಭಾಗವಹಿಸುವ ಸಾಂಸ್ಕೃತಿಕ ತಂಡಗಳ ವಿವರ ಇಂತಿವೆ:- ಗಿರಿ-ಸಿರಿ ಜಾನಪದ ಕಲಾ ತಂಡ(ರಿ).,ಕನ್ಯಾನ, ಬಂಟ್ವಾಳ ತಂಡದಿಂದ ಕೊರಗರ ಡೋಲು-ಕೋಲು ಕುಣಿತ, ರಮೇಶ ಕನ್ಯಾನ, ಶಿವಗಿರಿ ಹೊೈಗೆಗದ್ದೆ, ಕನ್ಯಾನ ಗ್ರಾಮ, ಬಂಟ್ವಾಳ ತಂಡದಿಂದ ಕರಡಿ-ಸಿಂಹ ನೃತ್ಯ, ರಾಮನಗರ ತಂಡದಿಂದ ಪೂಜಾ ಕುಣಿತ, ಕಾರವಾರ ತಂಡದಿಂದ ಸುಗ್ಗಿ ಕುಣಿತ, ಹಾವೇರಿ ತಂಡದಿಂದ ಬೇಡರ ಕುಣಿತ, ಚಿಕ್ಕಮಂಗಳೂರು ತಂಡದಿಂದ ಮಹಿಳಾ ವೀರಗಾಸೆ, ಮಾಗಡಿ ತಂಡದಿಂದ ನಂದಿಧ್ವಜ,
ಕರಾವಳಿ ಉತ್ಸವದ ಮೆರವಣಿಗೆಯಲ್ಲಿ – ಸಾಂಸ್ಕೃತಿಕ ತಂಡಗಳು Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11 ದಕ್ಷಿಣ ಕನ್ನಡ ಜಿಲ್ಲೆಯು ವಿದ್ಯಾವಂತರ ಜಿಲ್ಲೆಯಾಗಿದ್ದು ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ನಮ್ಮ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಸಮಸ್ಯೆಯು ತುಂಬಾ ಕಡಿಮೆ ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ರವಿ ಎಮ್ ನಾಯಕ್ ಹೇಳಿದರು. ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘ, ದಕ್ಷಿಣ
ಬಾಲಕಾರ್ಮಿಕ ಕಾನೂನು ಅರಿವು ಕಾರ್ಯಾಗಾರ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11 ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಿದೆ. ಜನವರಿ 13 ರಂದು ಮಧ್ಯಾಹ್ನ 2 ಗಂಟೆಗೆ ಅಕಾಡೆಮಿ ಸಿರಿಚಾವಡಿಯಲ್ಲಿ ಹಿರಿಯ ಸಾಹಿತಿ ಮತ್ತು ಬಹುಭಾಷಾ ಕವಿ ಮಹಮ್ಮದ್ ಬಡ್ಡೂರು ಇವರನ್ನು ಸನ್ಮಾನಿಸಲಾಗುವುದು ಹಾಗೂ ‘ಸಿರಿದೊಂಪ – ತುಡರ್ ಎರಡು ಪುಸ್ತಕ’ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ತುಳು
ಸಿರಿದೊಂಪ-ತುಡರ್ ಎರಡು ಪುಸ್ತಕ ಬಿಡುಗಡೆ ಕಾರ್ಯಕ್ರಮ Read More »
ಕರಾವಳಿಮಂಗಳೂರು, ಜ.11: ದಾಖಲೆ ಇಲ್ಲದ ಸುಮಾರು 5,48,000 ರೂಪಾಯಿಯ ವಿದೇಶಿ ಕರೆನ್ಸಿಗಳನ್ನು ಹೊಂದಿದ್ದ ದುಬೈಗೆ ಸಂಚರಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಫ್‌ಎಸ್‌ಎಫ್ ಅಧಿಕಾರಿಗಳು ಶನಿವಾರ ಮುಂಜಾನೆ 6.30 ಗಂಟೆಗೆ ಪ್ರಯಾಣಿಕರ ಬ್ಯಾಗೇಜುಗಳ ತಪಾಸಣೆ ಮಾಡುತ್ತಿದ್ದ ವೇಳೆ ದುಬೈಗೆ ಸ್ಪಯ್ಸ್ ಜೆಟ್ ವಿಮಾನದ ಮೂಲಕ ತೆರಳಲಿದ್ದ ಪ್ರಯಾಣಿಕ ಶಾಹುಲ್ ಹಮೀದ್ ಎಂಬವರ ಕೈ ಚೀಲದಲ್ಲಿ ಅನುಮಾನಾಸ್ಪದ ಚಿತ್ರವನ್ನು ಗಮನಿಸಿದ್ದು ಪರಿಶೀಲನೆ ನಡೆಸಿ ವಿದೇಶಿ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಯಾಣಿಕನಿಂದ ಯುಎಸ್
ಮಂಗಳೂರು: ದಾಖಲೆ ಇಲ್ಲದ ವಿದೇಶಿ ಕರೆನ್ಸಿ ವಶ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11 ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ), ಮಂಗಳೂರು ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನ್ಯಾಕ್ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಉನ್ನತ ಶಿಕ್ಷಣದ ಸವಾಲುಗಳು – ಶಿಕ್ಷಕರ ತೊಡಗುವಿಕೆ ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದೆ.
ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ Read More »
ಕರಾವಳಿ