ಕರಾವಳಿ

ನಿವೃತ್ತ ಯೋಧ, ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.08. ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ, ನಿವೃತ್ತ ಯೋಧ, ನೆಟ್ಟಣ ವಾಲ್ತಾಜೆ ನಿವಾಸಿ ಬಾಲಕೃಷ್ಣ ಗೌಡ (50) ಅವರು ಇಂದು (ಜ.8) ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದರು. ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು, ಯುದ್ಧದ ವೇಳೆ ಅವರ ಒಂದು ಕಣ್ಣಿಗೆ ಹಾನಿಯಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ನಿವೃತ್ತ ಯೋಧ, ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ ನಿಧನ Read More »

ಕರಾವಳಿ

ಮಂಗಳೂರು: ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8    ಚೂಂತಾರೂ ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವೈಷ್ಣವಿ ನಾಟ್ಯಲಯ ಪೂತ್ತೂರು ಇದರ ಜಂಟಿ ಆಶ್ರಯದಲ್ಲಿ ವಿದುಷಿ ಶ್ರೀಮತಿ ಯೋಗೀಶ್ವರಿ ಜಯಪ್ರಕಾಶ್ ಇವರ ನೃತ್ಯ ನಿರ್ದೇಶನದಲ್ಲಿ ಬೆಳೆದ ಕುಮಾರಿ ಸ್ನೇಹ ಭಟ್ ಚೂಂತಾರು ಇವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿ ಯನ್ನು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷರಾದ ಶ್ರೀ ದಯನಂದ ಕತ್ತಲ್ ಸಾರ್ ದೀಪ ಬೆಳಗಿಸಿ ಉದ್ಘಾಟಿಸಿ ಕುಮಾರಿ ಸ್ನೇಹಳಿಗೆ ಸರಿಯಾದ ಗುರು ಸಿಕ್ಕಿದ್ದಾರೆ

ಮಂಗಳೂರು: ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿ ಉದ್ಘಾಟನೆ Read More »

ಕರಾವಳಿ

‘ರಾಮಕುಂಜದಲ್ಲಿ ಕಡಬ ತಾ| ಪ್ರಥಮ ಸಾಹಿತ್ಯ ಸಮ್ಮೇಳನ’ ➤ ಕಸಾಪ ಸಮಾಲೋಚನಾ ಸಭೆಯಲ್ಲಿ ನಿರ್ಧಾರ; ಸ್ವಾಗತ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com,  ಕಡಬ, ಜ.8    ಕಡಬ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿ ಕೊನೆಗೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ನಡೆಸಲು ಜ.7ರಂದು ರಾಮಕುಂಜ ಮಹಾವಿದ್ಯಾಲಯದಲ್ಲಿ ನಡೆದ ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಸಮಾಲೋಚನಾ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆ ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಐತ್ತಪ್ಪ ನಾಯ್ಕ್‍ರವರು

‘ರಾಮಕುಂಜದಲ್ಲಿ ಕಡಬ ತಾ| ಪ್ರಥಮ ಸಾಹಿತ್ಯ ಸಮ್ಮೇಳನ’ ➤ ಕಸಾಪ ಸಮಾಲೋಚನಾ ಸಭೆಯಲ್ಲಿ ನಿರ್ಧಾರ; ಸ್ವಾಗತ ಸಮಿತಿ ರಚನೆ Read More »

ಕರಾವಳಿ

ವೃತ್ತಿಪರ ಶ್ರೇಷ್ಠತೆ ಪ್ರಶಸ್ತಿ -2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8     ರೋಟರಿ ಕ್ಲಬ್ ಮಂಗಳೂರು ಉತ್ತರ ಇದರ ವತಿಯಿಂದ ರೋಟರಿ ಕ್ಲಬ್‍ನ ಅಧ್ಯಕ್ಷರಾದ ಶ್ರೀ ನಯನ್ ಕುಮಾರ್ ಸುವರ್ಣ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 07-01-2020ನೇ ಮಂಗಳವಾರದಂದು ರೋಟರಿ ಬಾಲಭವನ ಗಾಂಧಿನಗರದಲ್ಲಿ ನಡೆದ “ವೃತ್ತಿಪರ ಶ್ರೇಷ್ಠತೆ ಪ್ರಶಸ್ತಿ -2020” ಸನ್ಮಾನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮಂಗಳೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಸುರೇಶ್ ಶೇಟ್ ಇವರನ್ನು ಸನ್ಮಾನಿಸಲಾಯಿತು. ಇದರ ಜೊತೆ ಇತರೆ ಇಲಾಖೆಯ ಸಿಬ್ಬಂದಿಗಳಾದ ರವೀಂದ್ರ ಯು.,

ವೃತ್ತಿಪರ ಶ್ರೇಷ್ಠತೆ ಪ್ರಶಸ್ತಿ -2020 Read More »

ಕರಾವಳಿ

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆಗೈದ/ಸಾಧನೆಗೈದ ನಾಡಿನ ಜನತೆಯ ಮುಖದಲ್ಲಿ ಮುಗಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ ಪದ್ದತಿ, ನಾಗರಿಕ ಸ್ನೇಹಿ, ಗುಣಾತ್ಮಕ, ಭ್ರಷ್ಟಾಚಾರ ರಹಿತ ಕಾರ್ಯವೆಸಗಿದ ಅಧಿಕಾರಿ/ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರ ಯೋಜನೆಯನ್ನು ರೂಪಿಸಿದೆ. 2019-20ನೇ ಸಾಲಿನ ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅತ್ಯುನ್ನತ ಸೇವೆ ಸಲ್ಲಿಸಿದ/ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸರ್ವೋತ್ತಮಸೇವಾ ಪ್ರಶಸ್ತಿ –

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ Read More »

ಕರಾವಳಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – 25ನೇ ವರ್ಷದ ಬೆಳ್ಳಿ ಹಬ್ಬ 

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 25ನೇ ವರ್ಷದ ಬೆಳ್ಳಿ ಹಬ್ಬ ಕಾರ್ಯಕ್ರಮ  ಫೆಬ್ರವರಿ 22 ಮತ್ತು 23 ರಂದು ಕಾರ್ಕಳದ ವೆಂಕಟರಮಣ ದೇವಸ್ಥಾನ ಶಿಕ್ಷಣ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಜನವರಿ  5 ರಂದು ಮಧ್ಯಾಹ್ನ 3.30 ಗಂಟೆಗೆ ಕೊಂಕಣಿ ಭಾಷಿಕರಿಂದ ಕಾರ್ಯಕ್ರಮದ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಮಂಗಳೂರಿನ ಅಶೋಕ ನಗರದ ದೈವಜ್ಞ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ದತಾ ಸಭೆಯು ನಡೆಯಿತು. ಅಧ್ಯಕ್ಷ ಡಾ.ಕೆ.ಜಗದೀಶ್

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – 25ನೇ ವರ್ಷದ ಬೆಳ್ಳಿ ಹಬ್ಬ  Read More »

ಕರಾವಳಿ

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8   ಪಡಿತರ ಚೀಟಿದಾರರ ಇ ಕೆವೈಸಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರುಗಳ ಇ ಕೆವೈಸಿ ಪಡೆಯುವ ಪ್ರಕ್ರಿಯೆಯನ್ನು 2020ನೇ ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯ ಎಲ್ಲಾ ಸದಸ್ಯರು ಇ ಕೆವೈಸಿಗೆ ಒಟ್ಟಾಗಿ ಬರಬೇಕೆಂದು, ಇಲ್ಲದಿದ್ದರೆ ಪಡಿತರ ನಿಲ್ಲಿಸುವುದಾಗಿ ಮತ್ತು ಪಡಿತರ ರದ್ದಾಗುವುದಾಗಿ ದೂರುಗಳು ಬಂದಿರುತ್ತದೆ. ಪಡಿತರ ಚೀಟಿಯ

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ Read More »

ಕರಾವಳಿ

ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8   ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ಎನ್.ಎಸ್.ಎಸ್, ಮಾನವ ಹಕ್ಕುಗಳ ಸಂಘ, ಮಾನವಿಕ ಸಂಘ ಮತ್ತು ಮಾಧ್ಯಮ ವೇದಿಕೆಯ ಸಹಯೋಗದಲ್ಲಿ ‘ಹದಿಹರೆಯ ಮಾದಕ ವ್ಯಸನ ಮತ್ತು ಕಾನೂನುʼ ಎಂಬ ಕಾನೂನು ಅರಿವು ಕಾರ್ಯಕ್ರಮವನ್ನು ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ, ಅಪರಾಧ ಕೃತ್ಯಗಳ ಹೆಚ್ಚಳಕ್ಕೆ ಮಾನವೀಯ

ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ Read More »

ಕರಾವಳಿ

ಭಾರತ ಬಂದ್: ಮಂಗಳೂರು ಯಥಾಸ್ಥಿತಿ

ಮಂಗಳೂರು, ಜ.8: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಕರೆ ಕೊಟ್ಟಿದ ಭಾರತ ಬಂದ್‌ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಮತ್ತು ಸರಕಾರಿ ಬಸ್ ಗಳು, ಆಟೋಗಳು ಎಂದಿನಂತೆ ಓಡಾಡುತ್ತಿವೆ. ಜನಜೀವನದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಕೇರಳದಲ್ಲಿ ಬಂದ್ ಗೆ ಬೆಂಬಲ ನೀಡಿರುವ ಕಾರಣ ಕಾಸರಗೋಡಿಗೆ ಹೋಗುವ ಬಸ್ ಗಳು ಮಂಗಳೂರಿನಲ್ಲಿಯೇ ಮೊಕ್ಕಾಂ ಹೂಡಿವೆ. ಯಾವುದೇ ಬಸ್ ಗಳು ಕೇರಳ ರಾಜ್ಯಕ್ಕೆ ಸಂಚರಿಸುತ್ತಿಲ್ಲ.

ಭಾರತ ಬಂದ್: ಮಂಗಳೂರು ಯಥಾಸ್ಥಿತಿ Read More »

ಕರಾವಳಿ

ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ನಿಧನ

ಉಡುಪಿ, ಜ.8 : ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ಅವರು ಮಂಗಳವಾರ ತಡ ರಾತ್ರಿ ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಹೃದಯಘಾತದಿಂದ ನಿಧನ‌ ಹೊಂದಿದ್ದಾರೆ. ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅಸುನೀಗಿದ್ದಾರೆ. ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರ್ಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.  

ಹಿರಿಯ ಪತ್ರಕರ್ತ ರವಿರಾಜ್ ವಳಳಾಂಬೆ ನಿಧನ Read More »

ಕರಾವಳಿ
Scroll to Top