ಕರಾವಳಿ

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕೆ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪುರಸ್ಕಾರವನ್ನು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಸಂಸ್ಥೆ ಮತ್ತು 25 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಂದ ಮುಕ್ತ ನಾಮಪತ್ರಗಳನ್ನು ವೆಬ್‍ಸೈಟ್‍ನಿಂದ ಪಡೆದು  ಜನವರಿ 7 ರೊಳಗೆ ಸಲ್ಲಿಸಬೇಕು. ಭಾರತ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಅರ್ಹ ನಾಮ ನಿರ್ದೇಶಿತರು ಪ್ರಸ್ತಾವನೆಗಳನ್ನು ಭಾರತ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು […]

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ದೋಣಿ ಮುಳುಗಡೆ; ಏಳು ಕಾರ್ಮಿಕರ ರಕ್ಷಣೆ

ಮಂಗಳೂರು, ಜ.2: ಮಂಗಳೂರಿನ ಹಳೆ ಬಂದರಿನಿಂದ ಕಟ್ಟಡ ಸಾಮಾಗ್ರಿಗಳನ್ನು ಲಕ್ಷ ದ್ವೀಪಕ್ಕೆ ಸಾಗಾಟ ಮಾಡುತ್ತಿದ್ದ ಬೃಹತ್ ದೋಣಿಯೊಂದು ಲಕ್ಷದ್ವೀಪದ ಕಿಲ್ತಾನ್ ದ್ವೀಪದ ಬಳಿ ಮುಳುಗಡೆಗೊಂಡಿದ್ದು, ದೋಣಿಯಲ್ಲಿದ್ದ ಏಳು ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಲಕ್ಷದ್ವೀಪ ಮೂಲದ ಜಾಬಿರ್ ಎಂಬವರಿಗೆ ಸೇರಿದ್ದ ‘ಫೈಸಲ್ ಹುಸೈನ್’ ಎಂಬ ಹೆಸರಿನ ಬೋಟ್ ಸೋಮವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಹಳೆ ಬಂದರಿನಿಂದ 700 ಚೀಲ ಸಿಮೆಂಟ್, ಸಿಮೆಂಟ್ನಿಂದ ತಯಾರಿಸಿದ 400 ಬ್ಲಾಕ್ಇಟ್ಟಿಗೆ, 1,000 ಚೀಲ ಜಲ್ಲಿ, ಎಂ-ಸ್ಯಾಂಡ್, ಸ್ಟೀಲ್

ಮಂಗಳೂರು: ದೋಣಿ ಮುಳುಗಡೆ; ಏಳು ಕಾರ್ಮಿಕರ ರಕ್ಷಣೆ Read More »

ಕರಾವಳಿ

ಬಂಟ್ವಾಳ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಬಂಟ್ವಾಳ, ಜ.2: ಯುವಕನೊಬ್ಬ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕಾಡುಮಠದಲ್ಲಿ ಬುಧವಾರ ನಡೆದಿದೆ. ಮೃತ ಪಟ್ಟವರನ್ನು ಕೊಳ್ನಾಡು ಗ್ರಾಮದ ಕಾಡುಮಠ ಜನತಾ ಕಾಲನಿ ನಿವಾಸಿ ಪ್ರಶಾಂತ್ (25)ಎಂದು ಗುರುತಿಸಲಾಗಿದೆ. ಕೊಡಂಗಾಯಿಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಬಯಲಾಟಕ್ಕೆ ಸ್ನೇಹಿತರೊಂದಿಗೆ ಹೋಗಿದ್ದು ಮರಳಿ ಬಾರದ ಕಾರಣ ಮನೆಯವರು ಆತಂಕಗೊಂಡು ಬುಧವಾರ ಬೆಳಗ್ಗೆ ಹುಡುಕಾಟ ನಡೆಸಿದಾಗ ಮನೆ ಸಮೀಪದ ಕಾಲು ದಾರಿ ಬದಿಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಶಾಂತ್‌ ಅವರು ಯಕ್ಷಗಾನ ಮುಗಿಸಿ ಬುಧವಾರ ಬೆಳಿಗ್ಗೆ ಸ್ನೇಹಿತನೊಂದಿಗೆ

ಬಂಟ್ವಾಳ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಸಿರಿ ತೋಟಗಾರಿಕೆ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 4 ರಂದು  ಗ್ರಾಪ್ಟಿಂಗ್, ಲೇಯರಿಂಗ್, ಬಡ್ಡಿಂಗ್, ಪಾಟಿಂಗ್, ರೀಪಾಟಿಂಗ್ ತರಬೇತಿ ಕಾರ್ಯಕ್ರಮವನ್ನು ಬಾಲಭವನ, (ಕದ್ರಿ ಉದ್ಯಾನವನದ ಹತ್ತಿರ) ಇಲ್ಲಿ ಆಯೋಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ 3 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ  ರುಕ್ಮಯ ದೂರವಾಣಿ ಸಂಖ್ಯೆ 9845523944 ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,  ರಾಜ್ಯವಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಸಿರಿ ತೋಟಗಾರಿಕೆ ತರಬೇತಿ ಕಾರ್ಯಕ್ರಮ Read More »

ಕರಾವಳಿ

ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ನೂರು ದಿನ ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಮಿನಿ ವಿಧಾನಸೌಧದಲ್ಲಿ ಮೂರು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರು ಬುಧವಾರ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ

ರಾಜ್ಯ ಸರ್ಕಾರದ  ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ Read More »

ಕರಾವಳಿ

ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಜಿಲ್ಲೆಯಲ್ಲಿ ಇಂದಿನಿಂದ 7 ನೇ ಆರ್ಥಿಕ ಗಣತಿ ಆರಂಭವಾಗಿದ್ದು, ಮೂರು ತಿಂಗಳುಗಳ ಕಾಲ ಜಿಲ್ಲೆಯಾದ್ಯಂತ ನಡೆಯಲಿರುವ ಗಣತಿಯಲ್ಲಿ ಸಂಘಟಿತ ಹಾಗೂ ಅಸಂಘಟಿತ ಆರ್ಥಿಕ ವಲಯಗಳ ಬಗ್ಗೆ ಮಾಹಿತಿಯನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು ಗಣತಿದಾರರಿಗೆ ನಿಖರವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರ್ಥಿಕ ಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತೀ 5 ವರ್ಷಕೊಮ್ಮೆ ಈ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು,

ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ಗುಲ್ಗೋಡಿಯಲ್ಲಿ ಅಯ್ಯಪ್ಪ ದೀಪೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.1  ಕಡಬ ತಾಲೂಕಿನ ಕೊೈಲ ಗ್ರಾಮದ ಗುಲ್ಗೋಡಿಯಲ್ಲಿ ಇಲ್ಲಿನ ಅಯ್ಯಪ್ಪ ಭಕ್ತವೃಂದ ಆಶ್ರಯದಲ್ಲಿ ಎರಡನೇ ವರ್ಷದ ಅಯ್ಯಪ್ಪ ದೀಪೋತ್ಸವ ಹಾಗೂ ಅಪ್ಪ ಸೇವೆ ಸೋಮವಾರ ರಾತ್ರಿ ನಡೆಯಿತು. ಬಾಬು ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ವೃತದಾರಿಗಳಿಗೆ ಅಪ್ಪ ಸೇವೆ ನಡೆಯಿತು. ಕುದಿಯುವ ಎಣ್ಣೆಯಿಂದ ಅಪ್ಪ ತೆಗೆಯುವ ಸೇವೆಯನ್ನು ಸುಮಾರು 25 ಕ್ಕೂ ಹೆಚ್ಚು ಮಾಲಾಧಾರಿಗಳು ನೇರವೇರಿಸಿದರು. ಇದೇ ವೇಳೆ ಪುತ್ತೂರು ಚಂದ್ರಶೇಖರ ಹೆಗ್ಡೆ ನಿರ್ದೆಶನದ ಪುನೀತ್ ಆರ್ಕೆಸ್ಟ್ರಾ ಅವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ

ಗುಲ್ಗೋಡಿಯಲ್ಲಿ ಅಯ್ಯಪ್ಪ ದೀಪೋತ್ಸವ Read More »

ಕರಾವಳಿ

ವಿವಿ ಕಾಲೇಜಿಗೆ 150 :  ಮುಕ್ತ ಛಾಯಾಗ್ರಹಣ ಸ್ಪರ್ಧೆ

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.1     ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮಾಚರಣೆಯ ಅಂಗವಾಗಿ  ಜನವರಿ 3 ರಂದು 4 ರಂದು ಮುಕ್ತ ಛಾಯಾಗ್ರಹಣ ಸ್ಪರ್ಧೆಯನ್ನು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ  ಹಮ್ಮಿಕೊಳ್ಳಲಾಗಿದೆ. ಛಾಯಾಗ್ರಹಣ ಸ್ಪರ್ಧೆಯ ವಿಷಯ : 150ರ ಸಂಭ್ರಮದಲ್ಲಿ ವಿವಿ ಕಾಲೇಜು (ಕಾಲೇಜಿನ ಆವರಣ).  ಛಾಯಾಚಿತ್ರ ಸಲ್ಲಿಸಲು ಕೊನೆಯ ದಿನ ಜನವರಿ 8 ರಂದು ಸಾಪ್ಟ್ ಕಾಪಿ ಮತ್ತು ಹಾರ್ಡ್ ಕಾಪಿ (8×12), ಚಿತ್ರದ ಕುರಿತಾಗಿ 50 ಪದಗಳು ಮೀರದಂತೆ

ವಿವಿ ಕಾಲೇಜಿಗೆ 150 :  ಮುಕ್ತ ಛಾಯಾಗ್ರಹಣ ಸ್ಪರ್ಧೆ Read More »

ಕರಾವಳಿ

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1   ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಸಹಯೋಗದಲ್ಲಿ  80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ 2020 ಜನವರಿ 2 ರಿಂದ 6 ರವರೆಗೆ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ Read More »

ಕರಾವಳಿ

ಸೇವಾ ನಿವೃತ್ತಿ : ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯ ಡಿ ಗ್ರೂಪ್ ಸಿಬ್ಬಂದಿ ವಿಶ್ವನಾಥ ಡಿ ಅವರು ಇಂದು ಸೇವಾ ನಿವೃತ್ತಿಯಾದ ಪ್ರಯುಕ್ತ ಅವರನ್ನು ಬೀಳ್ಕೊಡಲಾಯಿತು. ಅನಾರೋಗ್ಯ ನಿಮಿತ್ತ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ ಹಾಗೂ ಕಚೇರಿಯ ಸಿಬ್ಬಂದಿಗಳು,  ಯಕ್ಷಗಾನ ಕಲಾವಿದ ಗಿರೀಶ್ ನಾವಡ ಹಾಗೂ ವಿಶ್ವನಾಥ ಡಿ ಇವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಸೇವಾ ನಿವೃತ್ತಿ : ಬೀಳ್ಕೊಡುಗೆ Read More »

ಕರಾವಳಿ
Scroll to Top