ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಬೆಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, ಮಂಗಳೂರು ಗಲಭೆಯಲ್ಲಿ ನಡೆದ ಗೋಲಿಬಾರ್ ನ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ತಲುಪಿತ್ತು. ಬಂದರ್ ಪೊಲೀಸ್ ಠಾಣೆಯ ಎದುರು ಹಿಂಸಾಚಾರದಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು  […]

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ Read More »

ಕರಾವಳಿ, ಕರ್ನಾಟಕ

ಕಾರ್ಕಳ: ಮಹಿಳೆಯನ್ನು ಅಪಹರಿಸಿ ಕೊಲೆ

ಕಾರ್ಕಳ, ಡಿ.23: ಮಹಿಳೆಯನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿ ಹಾಳೆಕಟ್ಟೆ ಎಂಬಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಬಾವಿಗೆ ಎಸೆದಿರುವ ಬಗ್ಗೆ ಡಿ. 22ರಂದು ವರದಿಯಾಗಿದೆ.   ಕೊಲೆಯಾದ ಮಹಿಳೆಯನ್ನು ಬೆಳ್ಮಣ್‌ನ ಬೃಂದಾವನ ಮನೆ ನಿವಾಸಿ ದಿವಂಗತ ಹರಿದಾಸ ಉಡುಪರವರ ಪತ್ನಿ ಬಿ.ಭರತ ಲಕ್ಷ್ಮೀ ಎಂದು ಗುುರುತಿಸಲಾಗಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆಗೈದು ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಿ ಹಾಳೆಕಟ್ಟೆ ಎಂಬಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಬಾವಿ ಎಸೆದಿದ್ದಾರೆನ್ನಲಾಗಿದೆ. ಡಿಸೆಂಬರ್ 2೦ರಂದು ಬೆಳಿಗ್ಗೆ 7ರಿಂದ ರಾತ್ರಿ 8ರ ಮಧ್ಯಾವಧಿಯಲ್ಲಿ ಇವರು

ಕಾರ್ಕಳ: ಮಹಿಳೆಯನ್ನು ಅಪಹರಿಸಿ ಕೊಲೆ Read More »

ಕರಾವಳಿ

ವಿಟ್ಲ: ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.22. ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕರೋಪಾಡಿ ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ವಿಟ್ಲದ ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ. ಅನ್ವರ್ ತನ್ನ ಸ್ಮೇಹಿತನೊಂದಿಗೆ ಬುಲ್ಲೆಟ್ ನಲ್ಲಿ ತೆರಳುತ್ತಿದ್ದ ವೇಳೆ ಕರ್ನಾಟಕದಿಂದ ಕೇರಳಕ್ಕೆ ಎಂ.ಸ್ಯಾಂಡ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ನಡುವೆ ಮುಗುಳಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಟ್ಲ: ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರನಿಗೆ ಗಾಯ Read More »

ಕರಾವಳಿ

ಗುಂಡೇಟಿಗೆ ಬಲಿಯಾದ ಜಲೀಲ್ ರ ಮಕ್ಕಳನ್ನು ಸಅದಿಯ್ಯದಿಂದ ದತ್ತು: ಬೇಕಲ್ ಉಸ್ತಾದ್

ಮಂಗಳೂರು, ಡಿ.22: ಪೊಲೀಸ್ ಗುಂಡೇಟಿಗೆ ಬಲಿಯಾದ ಕಂದಕ್ ನಿವಾಸಿ ಅಬ್ದುಲ್ ಜಲೀಲ್ ರ  ಎರಡು ಮಕ್ಕಳನ್ನು ಕಾಸರಗೋಡಿನ ಜಾಮಿಅ ಸಅದಿಯ್ಯ ಅರಬಿಯ್ಯ ದತ್ತು ಪಡೆದಿದೆ ಎಂದು ಪ್ರಾಂಶುಪಾಲ, ಖಾಝಿ ಬೇಕಲ ಇಬ್ರಾಹೀಂ ಮುಸ್ಲಿಯಾರ್ ತಿಳಿಸಿದ್ದಾರೆ. ಅವರು ಮೃತರ ಮನೆಗೆ ಭೇಟಿ ನೀಡಿದ ಸಂದರ್ಭ ದತ್ತು ಪಡೆದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸುನ್ನೀ ಕೋ ಆರ್ಡಿನೇಶನ್ ಸಮಿತಿಯ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ ಬಂಟ್ವಾಳ, ಕಾರ್ಯದರ್ಶಿ ಅಶ್ರಫ್ ಕಿನಾರ, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಳ್ ಯಾಕೂಬ್

ಗುಂಡೇಟಿಗೆ ಬಲಿಯಾದ ಜಲೀಲ್ ರ ಮಕ್ಕಳನ್ನು ಸಅದಿಯ್ಯದಿಂದ ದತ್ತು: ಬೇಕಲ್ ಉಸ್ತಾದ್ Read More »

ಕರಾವಳಿ

ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀನ್, ಜಲೀಲ್ ಮನೆಗೆ ಕುಮಾರಸ್ವಾಮಿ ಭೇಟಿ: 5 ಲಕ್ಷ ರೂ. ಚೆಕ್ ವಿತರಣೆ

ಮಂಗಳೂರು, ಡಿ.22: ಪೊಲೀಸ್ ಗೋಲಿಬಾರ್ ನಿಂದ ಮೃತಪಟ್ಟ ಕುದ್ರೋಳಿ ನಿವಾಸಿ ನೌಶೀನ್ ಹಾಗೂ ಕಂದಕ್ ನಿವಾಸಿ ಜಲೀಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ 5ಲಕ್ಷ ರೂ.ವಿನ ಚೆಕ್ ವಿತರಿಸಿ ಸಾಂತ್ವಾನ ಹೇಳಿದರು. ಈ ಸಂದರ್ಭ  ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡ, ಬಿಎಂ ಫಾರೂಕ್, ಜೆಡಿಎಸ್ ಮುಖಂಡ ವಿಟ್ಲ ಮುಹಮ್ಮದ್ ಕುಂಞಿ, ಎಂಬಿ ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀನ್, ಜಲೀಲ್ ಮನೆಗೆ ಕುಮಾರಸ್ವಾಮಿ ಭೇಟಿ: 5 ಲಕ್ಷ ರೂ. ಚೆಕ್ ವಿತರಣೆ Read More »

ಕರಾವಳಿ

ಸಹಜ ಸ್ಥಿತಿಯತ್ತ ಮಂಗಳೂರು

ಮಂಗಳೂರು, ಡಿ22: ನಗರದಲ್ಲಿ ಡಿ.19ರಿಂದ ವಿಧಿಸಲಾದ ಕಫ್ಯೂ೯ನಿಂದ ಅಸ್ತವ್ಯಸ್ತಗೊಂಡ ಜನಜೀವನ ಇಂದು ಅಲ್ಪಮಟ್ಟಿಗೆ ಸುಧಾರಿಸಿದೆ. ನಗರದಾದ್ಯಂತ ಅಂಗಡಿ ಮುಂಗಟ್ಟುಗಳು ತೆರೆಯಲ್ಪಟ್ಟಿವೆ. ಸಿಟಿ ಸಹಿತ ಸರಕಾರಿ ಬಸ್ ಸಂಚಾರ ಆರಂಭವಾಗಿದೆ. ಬಿಕೋ‌ ಎನ್ನುತ್ತಿದ್ದ ರಸ್ತೆಗಳಲ್ಲಿ‌ ವಾಹನ ಸಂಚಾರ, ಜನ ಸಂಚಾರ ಮತ್ತೆ ಪ್ರಾರಂಭವಾಗಿದೆ.  ಹಾಲು, ಆಹಾರ ಸಹಿತ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು  ಮುಗಿಬಿದ್ದಿದ್ದರು.  ಪೆಟ್ರೋಲ್ ಬಂಕ್ ಮುಂದೆ ಇಂಧನ ತುಂಬಿಸಲು ಸಾಲುಗಟ್ಟಿ ನಿಂತ ವಾಹನಿಗರ ದಂಡೆ ಇದ್ದವು.

ಸಹಜ ಸ್ಥಿತಿಯತ್ತ ಮಂಗಳೂರು Read More »

ಕರಾವಳಿ

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಮತ್ತೆ ಬೆಚ್ಚಿಬಿದ್ದ ತುಳುನಾಡು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಶನಿವಾರ ರಾತ್ರಿ ಮಂಗಳೂರಿನಲ್ಲಿ ನಡೆದಿದ್ದು, ಪೌರತ್ವದ ಕಿಚ್ಚಿನಿಂದ ತಲ್ಲಣಗೊಂಡಿದ್ದ ಮಂಗಳೂರು ಇದೀಗ ಮತ್ತೆ ಬೆಚ್ಚಿ ಬಿದ್ದಿದೆ. ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಅಂಬಿಕಾ ರೋಡ್ ಸಮೀಪ ತಂಡವೊಂದು ನಿಖಿಲ್ ಕೋಟ್ಯಾನ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿರುವ ನಿಖಿಲ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತನಿಖೆ ಕೈಗೊಂಡಿದ್ದಾರೆ.

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಮತ್ತೆ ಬೆಚ್ಚಿಬಿದ್ದ ತುಳುನಾಡು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕರ್ಫ್ಯೂ ಉಲ್ಲಂಘಿಸಿ ಸಿಪಿಐನಿಂದ ಪ್ರತಿಭಟನೆ

ಮಂಗಳೂರು, ಡಿ.21: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರವನ್ನು ಖಂಡಿಸಿ ಸಿಪಿಐ ಮುಖಂಡರು ಕರ್ಫ್ಯೂ ಉಲ್ಲಂಘಿಸಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು. ಮಹಾನಗರ ಪಾಲಿಕೆಯ ಗಾಂಧಿ ಪ್ರತಿಮೆಯ ಮುಂದೆ ಸ್ವಾತಂತ್ಯ ಹೋರಾಟಗಾರ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಅಂಬೇಡ್ಕರ್, ರಾಷ್ಟ್ರಪಿತ ಮಹಾತ್ಮ ಗಾಂದಿ ಛಾಯಾಚಿತ್ರಗಳನ್ನು ಹಿಡಿದ ಪ್ರತಿಭಟನಾಕಾರರು ಯಡಿಯೂರಪ್ಪ ಗೋ ಬ್ಯಾಕ್, ಸಂವಿಧಾನ ವಿರೋಧಿಗಳಿಗೆ ದಿಕ್ಕಾರ, ಸೇವ್ ಇಂಡಿಯಾ, ಸೇವ್ ಡೆಮೂಕ್ರಸಿ, ಇಂಕಿಲಾಬ್

ಮಂಗಳೂರು: ಕರ್ಫ್ಯೂ ಉಲ್ಲಂಘಿಸಿ ಸಿಪಿಐನಿಂದ ಪ್ರತಿಭಟನೆ Read More »

ಕರಾವಳಿ

ಮಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿರುವುದರಿಂದ ಗೋಲಿಬಾರ್: ಸಿಎಂ

ಮಂಗಳೂರು, ಡಿ.21: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ಪೊಲೀಸರ ಕೈಮೀರಿತ್ತು. ಇದರಿಂದ ಗೋಲಿಬಾರ್ ಅನಿವಾರ್ಯವಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಗೋಲಿಬಾರ್‌ನಲ್ಲಿ ಮೃತರಾದವರ ಕುಟುಂಬಗಳಿಗೆ ಜಿಲ್ಲಾಧಿಕಾರಿಗಳು ಪರಿಹಾರ ಘೋಷಿಸುತ್ತಾರೆ ಎಂದರು. ನಗರದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ತೆರವು ಮಾಡಲಾಗುವುದು.

ಮಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿರುವುದರಿಂದ ಗೋಲಿಬಾರ್: ಸಿಎಂ Read More »

ಕರಾವಳಿ

ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.20. ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಕಬ್ಬಿಣದ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು

ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top