ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18 ಮಂಗಳೂರು ಮಹಾನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ 7 ಮೀಟರ್ ನೀರು ನಿಲ್ಲಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ, ಕೂಡಲೇ ವರದಿ ನೀಡಲು ಕೆ.ಪಿ..ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚಿಸಿದ್ದಾರೆ. ಇವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. 7 ಮೀಟರ್ ನೀರು ನಿಲ್ಲಿಸುವುದರಿಂದ ಮುಳುಗಡೆಯಾಗುವ ಪ್ರದೇಶವನ್ನು ನಿಖರವಾಗಿ ಅಂದಾಜಿಸಿ, ಕಂದಾಯ ಮತ್ತು […]




