ಕರಾವಳಿ

ಸಚಿವ ಎಸ್. ಸುರೇಶ್ ಕುಮಾರ್ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ಇವರ ದ.ಕ ಜಿಲ್ಲಾಪ್ರವಾಸ ಮಾಡಲಿದ್ದಾರೆ. ಇಂದು ಬೆಳಿಗ್ಗೆ 8.45 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬೆಳಿಗ್ಗೆ 10 ಗಂಟೆಗೆ ಬಂಟ್ವಾಳದ ವಿದ್ಯಾಗಿರಿಯಲ್ಲಿ ಎಸ್‍ವಿಎಸ್ ಆಂಗ್ಲ ಮಾಧ್ಯಮ ಶಾಲೆಯ  ಅಟಲ್ ಟಿಂಕರಿಂಗ್ ಲ್ಯಾಬ್ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪ್ರಾಂಶುಪಾಲರ ಸಂಘದ ವತಿಯಿಂದ […]

ಸಚಿವ ಎಸ್. ಸುರೇಶ್ ಕುಮಾರ್ ಪ್ರವಾಸ Read More »

ಕರಾವಳಿ

ಹಳೆಯಂಗಡಿ ಗ್ರಾಮ ಪಂಚಾಯತ್‍ನ ವಿವಿಧ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17   ಹಳೆಯಂಗಡಿ ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ ಗ್ರಾಮ  ಸಭೆ ಡಿಸೆಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಸಸಿಹಿತ್ಲು ಗ್ರಾಮದ ಅಗ್ಗಿದಕಳಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ. ಮಕ್ಕಳ ಗ್ರಾಮ ಸಭೆಯು ಡಿಸೆಂಬರ್ 19 ರಂದು ಬೆಳಿಗ್ಗೆ 10.30 ಗಂಟೆಗೆ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಬೊಳ್ಳೂರು ಹಳೆಯಂಗಡಿಯಲ್ಲಿ ನಡೆಯಲಿದೆ. ಮಹಿಳಾಗ್ರಾಮ ಸಭೆಯು ಡಿಸೆಂಬರ್ 20 ರಂದು ಬೆಳಿಗ್ಗೆ

ಹಳೆಯಂಗಡಿ ಗ್ರಾಮ ಪಂಚಾಯತ್‍ನ ವಿವಿಧ ಗ್ರಾಮ ಸಭೆ Read More »

ಕರಾವಳಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಎಲ್ಲಾ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಇತರೆ ದಾಖಲಾತಿಗಳು ಸೇರಿದಂತೆ ನ್ಯೂನ್ಯತೆಗಳನ್ನು ಸರಿಪಡಿಸಲು ಅವಕಾಶವಿರುತ್ತದೆ. ಇದಲ್ಲದೆ ಅರ್ಹ ರೈತರು ಹೊಸದಾಗಿ ನೊಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿ ರೈತ ಸಂಪರ್ಕ ಕೇಂದ್ರ/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು  ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ  Read More »

ಕರಾವಳಿ

ಧಾರ್ಮಿಕ ಭಾವನೆಗೆ ದಕ್ಕೆ ಆರೋಪಿಸಿ ಕಲ್ಲಡ್ಕ ಶ್ರೀರಾಮ ಶಾಲೆಯ ವಿರುದ್ದ ದೂರು

ಬಂಟ್ವಾಳ, ಡಿ.17: ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಮಾಲಕತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಲಯದಲ್ಲಿ ಡಿ.17ರಂದು ನಡೆದ ಶಾಲೆಯ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ಧ್ವಂಸವನ್ನು ಮರುಸೃಷ್ಟಿ ಮಾಡಿಸಿದನ್ನು ಪ್ರಶ್ನಿಸಿ ಪಿಎಫ್ಐ ಕಲ್ಲಡ್ಕ ವಲಯದ ಅಬೂಬಕರ್ ಸಿದ್ದೀಕ್ ಬಂಟ್ವಾಳ ಪೊಲೀಸ್ ಠಾಣೆಗೆ ದಾಖಲಿಸಿದ್ದಾರೆ. ಧಾರ್ಮಿಕ ಭಾವನೆಗೆ ದಕ್ಕೆ ಉಂಟಾಗಿದೆ ಎಂದು ಆರೋಪಿಸಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಧಾರ್ಮಿಕ ಭಾವನೆಗೆ ದಕ್ಕೆ ಆರೋಪಿಸಿ ಕಲ್ಲಡ್ಕ ಶ್ರೀರಾಮ ಶಾಲೆಯ ವಿರುದ್ದ ದೂರು Read More »

ಕರಾವಳಿ

ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ. ಡಿಸೆಂಬರ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಡಿಸೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಡಿಸೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ

ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಅಂಚೆ ಕಚೇರಿಯಲ್ಲಿ ಮೆಸ್ಕಾಂ ಬಿಲ್ ಸ್ವೀಕಾರ 

(ನ್ಯೂಸ್ ಕಡಬ) newskadaba.com,ಮಂಗಳೂರು, ಡಿ.17    ಅಂಚೆ ಇಲಾಖೆ ಮೂಲಕ ಮೆಸ್ಕಾಂ ಬಿಲ್ ಸ್ವೀಕೃತಿಯ   ಒಪ್ಪಂದವು  ಎರಡು ವರ್ಷದ ಅವಧಿಗೆ ನವೀಕರಣಗೊಂಡಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮೆಸ್ಕಾಂ ಗ್ರಾಹಕರು ತಮ್ಮ  ವಿದ್ಯುಚ್ಛಕ್ತಿ ಬಿಲ್ ನ್ನು ತಮ್ಮ ಸಮೀಪದ ಯಾವುದೇ ಅಂಚೆ ಕಛೇರಿಯಲ್ಲಿ ಕಟ್ಟಬಹುದೆಂದು ಈ ಮೂಲಕ ತಿಳಿಸಲಾಗಿದೆ. ಕಳೆದ ವರ್ಷದಲ್ಲಿ ತಾಂತ್ರಿಕ ದೋಷಗಳಿಂದಾಗಿ, ಮೆಸ್ಕಾಂಗೆ ಕ್ಲಪ್ತ ಸಮಯದಲ್ಲಿ ಕೆಲವು ಬಿಲ್ಲಿನ ಮೊತ್ತವನ್ನು ಸಂದಾಯ ಮಾಡುವುದರಲ್ಲಿದ್ದ ಎಲ್ಲಾ ತೊಂದರೆಗಳು ಈಗ  ನಿವಾರಣೆ ಆಗಿದ್ದು,  ಗ್ರಾಹಕರು ಯಾವುದೇ

ಅಂಚೆ ಕಚೇರಿಯಲ್ಲಿ ಮೆಸ್ಕಾಂ ಬಿಲ್ ಸ್ವೀಕಾರ  Read More »

ಕರಾವಳಿ

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ  ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು, ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ Read More »

ಕರಾವಳಿ

ಜನವರಿ 3ರಿಂದ ಕರಾವಳಿ ಉತ್ಸವ- ಉಸ್ತುವಾರಿ ಸಚಿವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಈ ಸಾಲಿನ ಕರಾವಳಿ ಉತ್ಸವ ಜನವರಿ 3 ರಿಂದ ಮಂಗಳೂರಿನಲ್ಲಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಸೋಮವಾರ ಮಹಾನಗರಪಾಲಿಕೆ ಸಭಾಂಗಣದಲ್ಲಿ ಕರಾವಳಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ನಗರದ ಮಂಗಳಾ ಕ್ರೀಡಾಂಗಣ ಹಾಗೂ ಕದ್ರಿ ಉದ್ಯಾನವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ನಾಡಿನ ಸಂಸ್ಕೃತಿ, ಕಲೆ, ಜನಪದ, ಕ್ರೀಡೆಯ ಅತ್ಯುನ್ನತ ಪ್ರದರ್ಶನ ಈ ಕರಾವಳಿ ಉತ್ಸವದಲ್ಲಿ ಪ್ರತಿಬಿಂಬಿತವಾಗಬೇಕು. ಈ ನಿಟ್ಟಿನಲ್ಲಿ ಉತ್ಸವದ

ಜನವರಿ 3ರಿಂದ ಕರಾವಳಿ ಉತ್ಸವ- ಉಸ್ತುವಾರಿ ಸಚಿವ Read More »

ಕರಾವಳಿ

ಸ್ಮಾರ್ಟ್‍ಸಿಟಿ ಕಾಮಗಾರಿಗಳು : ಮಹಾನಗರಪಾಲಿಕೆ, ಎನ್‍ಐಟಿಕೆಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು  ಮಹಾನಗರಪಾಲಿಕೆ ಹಾಗೂ ಎನ್.ಐ.ಟಿ.ಕೆ. ಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆಗೊಳಪಡಿಸಲು ನಿರ್ಧರಿಸಲಾಗಿದೆ. ಸೋಮವಾರ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅನುಷ್ಠಾನ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಸಚಿವರು ಮಾತನಾಡಿ, ಸ್ಮಾರ್ಟ್‍ಸಿಟಿ ಒಂದು ನಿಗದಿತ ಅವಧಿಯ ಯೋಜನೆಯಾಗಿರುವುದರಿಂದ ಎಲ್ಲಾ ಕಾಮಗಾರಿಗಳು ಮುಕ್ತಾಯವಾದ ಬಳಿಕ ಮಹಾನಗರಪಾಲಿಕೆಗೆ ಹಸ್ತಾಂತರವಾಗಬೇಕಾಗುತ್ತದೆ. ನಂತರ ಯಾವುದೇ

ಸ್ಮಾರ್ಟ್‍ಸಿಟಿ ಕಾಮಗಾರಿಗಳು : ಮಹಾನಗರಪಾಲಿಕೆ, ಎನ್‍ಐಟಿಕೆಯಿಂದ ಪರಿಶೀಲನೆ Read More »

ಕರಾವಳಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೇರಳದಲ್ಲಿ ಹರತಾಳ

  (ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ17: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎಸ್ಡಿಪಿಐ, ವೆಲ್ಪೇರ್ ಪಾರ್ಟಿ ಹಾಗೂ ಇನ್ನಿತರ 30 ಕ್ಕೂ ಸಂಘಟನೆಗಳು ಇಂದು ಕೇರಳ ರಾಜ್ಯಾದ್ಯಂತ ಹರತಾಳಕ್ಕೆ ಕರೆ ನೀಡಿದೆ. ತುರ್ತು ವಾಹನ, ಶಬರಿ ಮಲೆಗೆ ತೆರಳುವ ವಾಹನಗಳಿಗೆ ಹರತಾಳದಿಂದ ವಿನಾಯಿತಿ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.        

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೇರಳದಲ್ಲಿ ಹರತಾಳ Read More »

ಕರಾವಳಿ
Scroll to Top