ಕರಾವಳಿ

ಬೈಕ್ ಗಳ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ, ಡಿ.2.  ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕುಕ್ಕೋಟ್ಟು ಎಂಬಲ್ಲಿ ಆದಿತ್ಯವಾರದಂದು ನಡೆಯಿತು. ಢಿಕ್ಕಿ ಹೊಡದ ಪರಿಣಾಮ ಜಗದೀಶ ಅವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು ಎಡಕಾಲಿನ ಕಾಲಿಗೆ, ಎಡ ಬದಿಯ ಸೊಂಟಕ್ಕೆ ಗುದ್ದಿದ ಗಾಯಗೊಂಡು ಚಿಕಿತ್ಸೆ ಬಗ್ಗೆ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಗಳ ನಡುವೆ ಢಿಕ್ಕಿ Read More »

ಕರಾವಳಿ

ಗಂಡಿಬಾಗಿಲು ಮದ್ರಸದಲ್ಲಿ ಪ್ರಾರ್ಥನಾ ದಿನಾಚರಣೆ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.2.   ಹಿಮಾಯತುಲ್ ಇಸ್ಲಾಂ ಮದ್ರಸ ಗಂಡಿಬಾಗಿಲು ಇದರ ಆಶ್ರಯದಲ್ಲಿ ಸಮಸ್ತ ಪ್ರಾರ್ಥನಾ ದಿನಾಚರಣೆ ಕಾರ್ಯಕ್ರಮ ಭಾನುವಾರದಂದು ಜರುಗಿತು. ಗಂಡಿಬಾಗಿಲು ಮಸೀದಿ ಖತೀಬ್ ಸೆಯ್ಯದ್ ಅನಸ್ ತಂಙಳ್ ಕಾರ್ಯಕ್ರಮ ಉದ್ಘಾಟಿಸಿ ಪ್ರಾರ್ಥನಾ ದಿನಾಚರಣೆ ಮಹತ್ವದ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿದರು. ಸಮಾರಂಭದಲ್ಲಿ ಗಂಡಿಬಾಗಿಲು ಮಸೀದಿ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಉಪಾಧ್ಯಕ್ಷ ಎಸ್. ಆದಂ ಹಾಜಿ, ಮದ್ರಸದ ಮುಅಲ್ಲಿಂ ರಫೀಕ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿ ಅಬ್ದುಲ್ ರಜಾಕ್ ಮರ್ವೇಲ್, ಎಸ್.ಕೆ.ಎಸ್.ಎಸ್.ಎಫ್.

ಗಂಡಿಬಾಗಿಲು ಮದ್ರಸದಲ್ಲಿ ಪ್ರಾರ್ಥನಾ ದಿನಾಚರಣೆ Read More »

ಕರಾವಳಿ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.2.  ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಕಾಮರ್ಸ್ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಸಿಟಿ ಕ್ಯಾಂಪಸ್‍ನಲ್ಲಿ ಶನಿವಾರದಂದು ಬ್ಯಾಂಕಿಂಗ್, ನಿರ್ವಹಣೆ, ಐಟಿ, ಶಿಕ್ಷಣ, ಸಮಾಜ ವಿಜ್ಞಾನದಲ್ಲಿ ನವೀನ ಅಭ್ಯಾಸ (ಇನೋವೇಟಿವ್ ಪ್ರಾಕ್ಟೀಸ್ ಇನ್ ಬ್ಯಾಂಕಿಗ್, ಮ್ಯಾನೇಜ್‍ಮೆಂಟ್, ಐಟಿ, ಎಜುಕೇಶನ್ ಆ್ಯಂಡ್ ಸೋಶಿಯಲ್ ಸೈನ್ಸ್ ಎಂಬ ವಿಷಯದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಗಳಾಗಿ ಆಮಿಸಿದ ಮಂಗಳ ಗಂಗೋತ್ರಿಯ ವಾಣಿಜ್ಯ ನಿಕಾಯದ ಡೀನ್ ಡಾ. ಟಿ. ಎನ್ ಶ್ರೀಧರ್‍ರವರು ವಿವಿಧ ಕ್ಷೇತ್ರಗಳಲ್ಲಾಗುವ ಆವಿಷ್ಕಾರಗಳ ಬಗ್ಗೆ ತಿಳಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 01)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 01) ವೀಡಿಯೋ ಗಾಗಿ??ಕ್ಲಿಕ್ ಮಾಡಿ  

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 01) Read More »

ಕರಾವಳಿ

ರಿಕ್ಷಾಕ್ಕೆ ಢಿಕ್ಕಿಯಾಗಿ 200 ಮೀಟರ್ ಎಳೆದೊಯ್ದ ಲಾರಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಲಾರಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕದ್ರಿ ಕಂಬ್ಲ ರಸ್ತೆಯಲ್ಲಿ ಭಾನುವಾರದಂದು ನಡೆದಿದೆ. ಮೃತರನ್ನು ನಗರದ ಬಿಜೈ ನಿವಾಸಿ, ಪಣಂಬೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಶೈಲಜಾ ಎಂದು ಗುರುತಿಸಲಾಗಿದೆ. ಇವರು ಪ್ರಯಣಿಸುತ್ತಿದ್ದ ಆಟೋ ರಿಕ್ಷಾಕ್ಕೆ ಲಾರಿಯೊಂದು ಢಿಕ್ಕಿಹೊಡೆದು ಸುಮಾರು 200 ಮೀಟರ್ ದೂರದವರೆಗೆ ಎಳೆದುಕೊಂಡು ಬಂದಿದ್ದು, ಹೊರಗಡೆ ಎಸೆಯಲ್ಪಟ್ಟ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ರಿಕ್ಷಾಕ್ಕೆ ಢಿಕ್ಕಿಯಾಗಿ 200 ಮೀಟರ್ ಎಳೆದೊಯ್ದ ಲಾರಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಜೀಪ್ – ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಢಿಕ್ಕಿ ➤ ಏಳು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯಲ್ಲಿ ಭಾನುವಾರದಂದು ಸಂಭವಿಸಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳನ್ನು

ಜೀಪ್ – ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಢಿಕ್ಕಿ ➤ ಏಳು ಮಂದಿ ಗಂಭೀರ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಸಂದರ್ಶಕರಿಗೆ ವಿಶ್ರಾಂತಿ ಕೊಠಡಿಯ ಉದ್ಘಾಟಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪ ಪೂ ಕಾಲೇಜಿಗೆ ಆಗಮಿಸುವ ಸಂದರ್ಶಕರಿಗೆ ಸುಸಜ್ಜಿತವಾದ ವಿಶ್ರಾಂತಿಕೊಠಡಿಯ ವ್ಯವಸ್ಥೆಯನ್ನು ಶಕ್ತಿ ಶಾಲಾ ವಠಾರದಲ್ಲಿ ಕಲ್ಪಿಸಲಾಗಿದೆ. ಈ ವಿಶ್ರಾಂತಿಕೊಠಡಿಯನ್ನು ಶಕ್ತಿನಗರದ ಪದವು 21ನೇ ವಾರ್ಡ್‍ನ ಕಾರ್ಪೋರೇಟರ್ ಶ್ರೀಮತಿ ವನಿತಾ ಪ್ರಸಾದ್‍ ಗುರುವಾರದಂದು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಶಕ್ತಿ ಶಾಲೆಯು ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ವಿವಿಧ ರೀತಿಯ ಸುಸಜ್ಜಿತವಾದ ವ್ಯವಸ್ಥೆಯನ್ನು ಕಲ್ಪಿಸಿರುವುದು ಶ್ಲಾಘನೀಯವಾಗಿದೆ. ಇಂತಹ ಅದ್ಭುತವಾಗಿರುವ ಮೂಲಭೂತ ಸೌಕರ್ಯವನ್ನು

ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಸಂದರ್ಶಕರಿಗೆ ವಿಶ್ರಾಂತಿ ಕೊಠಡಿಯ ಉದ್ಘಾಟಣೆ Read More »

ಕರಾವಳಿ

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ

(ನ್ಯೂಸ್ ಕಡಬ) newskadaba.com ಕುಂತೂರು, ನ.30. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಕರ್ನಾಟಕ ಸರ್ಕಾರ, ಪದವಿ ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ “ಒಂದು ದೇಶ ಒಂದು ಸಂವಿಧಾನ” ಧ್ಯೇಯದಡಿ ನಡೆದ ಕಾರ್ಯಕ್ರಮದ ಅಂಗವಾಗಿ

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ Read More »

ಕರಾವಳಿ

ಜಶ್ನೇ ಮದೀನಾ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ನ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com, ಆತೂರು, ನ.30. ದಕ್ಷಿಣ ಕನ್ನಡ ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಆಶ್ರಯದಲ್ಲಿ ಮೀಲಾದ್ ಕ್ಯಾಂಪೈನ್ ಸಮಾರೋಪ ಜಶ್ನೇ ಮದೀನಾ ಎಂಬ ಹೆಸರಿನಲ್ಲಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಡಿಸೆಂಬರ್ 2 ಸೋಮವಾರದಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವುದು ಇದರ ಪೋಸ್ಟರ್ ಬಿಡುಗಡೆಯನ್ನು ಆತೂರು ರೇಂಜ್ ಮದ್ರಸ ಮೇನೇಜ್ಮೆಂಟ್ ಅಧ್ಯಕ್ಷ ಅಬ್ದುಲ್ ರಝಾಕ್ ಬಿ. ಕೆ ಆತೂರು ಜುಮಾ ನಮಾಜ್ ನಂತರ ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಆತೂರು ರೇಂಜ್

ಜಶ್ನೇ ಮದೀನಾ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ನ ಪೋಸ್ಟರ್ ಬಿಡುಗಡೆ Read More »

ಕರಾವಳಿ

ನೆಹರೂ ಯುವ ಕೇಂದ್ರ ಜೀವನ ಕೌಶಲ್ಯ ಶಿಕ್ಷಣ ಶಿಬಿರದ ಸಮಾರೋಪ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ಇಂದಿನ ಕಾಲದ ಹದಿಹರೆಯದವರು ಒಂದು ದಶಕಗಳ ಹಿಂದೆ ಯುವಜನತೆ ಎದುರಿಸುತ್ತಿದ್ದ ಸವಾಲುಗಳಿಂದ ವಿಭಿನ್ನವಾದ ಮತ್ತು ಕ್ಲಿಷ್ಟಕರವಾದ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ಅಭಿಪ್ರಾಯಪಟ್ಟಿದ್ದಾರೆ. ಅವರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ದೀನ್ ದಯಾಳ್ ಉಪಾಧ್ಯಾಯ ಕೌಶಲ ಕೇಂದ್ರದಲ್ಲಿ ನೆಹರೂ ಯುವ ಕೇಂದ್ರ ವತಿಯಿಂದ ಆಯೋಜಿಸಲಾಗಿದ್ದ ಒಂದು ವಾರದ ಜೀವನ ಕೌಶಲ್ಯ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹತ್ತು ವರ್ಷಗಳ

ನೆಹರೂ ಯುವ ಕೇಂದ್ರ ಜೀವನ ಕೌಶಲ್ಯ ಶಿಕ್ಷಣ ಶಿಬಿರದ ಸಮಾರೋಪ Read More »

ಕರಾವಳಿ
Scroll to Top