ತುಂಬು ಗರ್ಭಿಣಿ ಮಹಿಳಾ ಕಾನ್ಸ್‌ಟೇಬಲ್ ನ್ನು ಬಂದೋಬಸ್ತ್ ಗೆ ನಿಯೋಜನೆ ➤ ವರದಿ ಕೇಳಿದ ಮಂಗಳೂರು ಪೊಲೀಸ್ ಆಯುಕ್ತ ಡಾ| ಪಿ.ಎಸ್.ಹರ್ಷ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ತುಂಬು ಗರ್ಭಿಣಿ ಪೋಲಿಸ್ ಕಾನ್ಸ್‌ಟೇಬಲ್ ಓರ್ವರನ್ನು ಬಂದೋಬಸ್ತ್ ಕೆಲಸಕ್ಕೆ ನೇಮಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಡಾ| ಹರ್ಷ ಪಿ.ಎಸ್. ಮೂಲ್ಕಿ ಸರ್ಕಲ್ ಇನ್ಸ್‌ಪೆಕ್ಟರ್ ರವರಲ್ಲಿ ಈ ಬಗ್ಗೆ ಸ್ಪಷ್ಟೀಕರಣ ಕೇಳಿದ್ದಾರೆ. ಅಕ್ಟೋಬರ್ 25 ರಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಮೂಲ್ಕಿ ಬಸ್ ನಿಲ್ದಾಣದ ಬಳಿ ಬಂದೋಬಸ್ತ್ ಗಾಗಿ ತುಂಬು ಗರ್ಭಿಣಿ ಮಹಿಳಾ […]





