ಕರಾವಳಿ

ಪಿಯುಸಿ ಪರೀಕ್ಷೆಯ ಭಯದಿಂದ ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು

(ನ್ಯೂಸ್‌ ಕಡಬ) newskadaba.com,  ಮಾ.04 : ರಾಜ್ಯದಲ್ಲಿ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲಿ ರಾಜಧಾನಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಣ್ಮರೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ 1ನೇ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆಯಲ್ಲಿ ಎಕ್ಸಾಮ್ ಭಯದಿಂದ ಸೀನಿಯರ್ ವಿದ್ಯಾರ್ಥಿನಿ ತನ್ನ ಜೂನಿಯರ್ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. […]

ಪಿಯುಸಿ ಪರೀಕ್ಷೆಯ ಭಯದಿಂದ ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

(ನ್ಯೂಸ್‌ ಕಡಬ) newskadaba.com,  ಮಾ.04 : ಆರಂಭಿಕ ವಹಿವಾಟಿನಲ್ಲೇ ರೂಪಾಯಿ ಮೌಲ್ಯ ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತಗೊಂಡಿದೆ. ಇರಾನ್ ವಿರುದ್ಧ ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ನಡೆಸುತ್ತಿರುವ ಪರಿಣಾಮ ಈಗ ಜಾಗತಿಕ ಮಾರುಕಟ್ಟೆಯಲ್ಲಿ ಗೋಚರವಾಗತೊಡಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟ 92.17ಕ್ಕೆ ತಲುಪಿದ್ದು, ಆರಂಭಿಕ ವಹಿವಾಟಿನಲ್ಲಿ 68 ಪೈಸೆ ಕುಸಿತಗೊಂಡಿತ್ತು. ಈ ಹಿಂದೆ ಜನವರಿ ಅಂತ್ಯದಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು 91.9875 ಗೆ ಕುಸಿತವಾಗಿತ್ತು. ಇದು ಈ

ಮತ್ತೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಬ್ದದ ವೇಗ ಮೀರಿ ಹಾರಿದ ಜೆಟ್ ವಿಮಾನ ಪುತ್ತೂರು ಜನರಲ್ಲಿ ಮೂಡಿದ್ದ ಆತಂಕ ನಿವಾರಣೆ

(ನ್ಯೂಸ್‌ ಕಡಬ) newskadaba.com,  ಮಾ.04 : ನಗರದಲ್ಲಿ ಮಾ.03ರಂದು ಮಧ್ಯಾಹ್ನ ಜೆಟ್ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂವೈಜ್ಞಾನಿಕಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಜನರು‌ ನಿಟ್ಟುಸಿರು ಬಿಟ್ಟಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಜೆಟ್ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು, ಪದೇ ಪದೇ ನಗರದ

ಶಬ್ದದ ವೇಗ ಮೀರಿ ಹಾರಿದ ಜೆಟ್ ವಿಮಾನ ಪುತ್ತೂರು ಜನರಲ್ಲಿ ಮೂಡಿದ್ದ ಆತಂಕ ನಿವಾರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮಾ.04 : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ

ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಸಿದ ಚಿನ್ನ -ಬೆಳ್ಳಿ ದರ

(ನ್ಯೂಸ್‌ ಕಡಬ) newskadaba.com,  ಮಾ.04 : ಅಮೆರಿಕಾ-ಇರಾನ್ ಸಂಘರ್ಷದ ನಡುವೆ ಬೆಲೆಯಲ್ಲಿ ಭಾರಿ ಏರಿಳಿಕೆ ಆಗುತ್ತಿದೆ. ಮಂಗಳವಾರ ಚಿನ್ನದ ಬೆಲೆ 1.70 ಲಕ್ಷಕ್ಕೆ ತಲುಪಿತ್ತು ಬುಧವಾರ 1.64 ಲಕ್ಷಕ್ಕೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯೂ 2,85,00 ಕ್ಕೆ ಇಳಿದಿದೆ. ಶುದ್ಧ ಚಿನ್ನದ ಇಂದಿನ ದರ ಮಾರ್ಚ್ 4, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,110 ರೂ ಇಳಿಕೆ ಆಗಿ,1,64,510 ಕ್ಕೆ ಇಳಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 311 ರೂ ಇಳಿಕೆ ಕಂಡಿದ್ದು, 16,451

ಕುಸಿದ ಚಿನ್ನ -ಬೆಳ್ಳಿ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮಾ.04 : ಬೈಕ್‌ನಲ್ಲಿ ಬಂದ ಸವಾರ ದರ್ಬೆ ಸಮೀಪ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ದೂರುದಾರರು. ಅವರು ದರ್ಬೆಯಲ್ಲಿ ಕಾರು ನಿಲ್ಲಿಸಿ ರಿಕ್ಷಾ ಚಾಲಕರ ಮಧ್ಯೆ ನಡೆದ ಮಾತಿನ ಚಕಮಕಿಯನ್ನು ಸಮಾಧಾನಿಸಿ ಹಿಂದಿರುಗಿ ಹೊರಡುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ವ್ಯಕ್ತಿ ಪಿಸ್ತೂಲ್ ತೋರಿಸಿ ಬೆದರಿಸಿದಾಗ ಹಕೀಂ ಮತ್ತು ಇತರರು ಸೇರಿ ಆತನನ್ನು ಹಿಡಿಯಲು

ಪುತ್ತೂರು: ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕಿ ಭಾಗೀರಥಿ ಮುರುಳ್ಯರವರಿಂದ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ದಿಢೀರ್ ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.04 : ನೆಟ್ಟಣ ರೈಲು ನಿಲ್ದಾಣದ ಬಗ್ಗೆ ಹಲವಾರು ವಿಚಾರದಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯರವರು ರೈಲ್ವೆ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಸ್ಟೇಷನ್ ಮಾಸ್ಟರ್ ಮತ್ತು ಸಿಬಂದಿಗಳಿಗೆ ಸರಿಯಾದ ವ್ಯವಸ್ಥೆಯನ್ನು ಶೀಘ್ರವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಕೃಷ್ಣ ಶೆಟ್ಟಿ ಕಡಬ,ಸಿ.ಎ.ಬ್ಯಾಂಕ್ ಬಿಳಿನೆಲೆ ಇದರ ಅಧ್ಯಕ್ಷ ವಾಡ್ಯಪ್ಪ ಗೌಡ, ಕೊಂಬಾರು ಗ್ರಾಮ ಪಂಚಾಯತ್ ಮಾಜಿ

ಶಾಸಕಿ ಭಾಗೀರಥಿ ಮುರುಳ್ಯರವರಿಂದ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ದಿಢೀರ್ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಚರಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ

(ನ್ಯೂಸ್‌ ಕಡಬ) newskadaba.com,  ಮಾ.04 : ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಸಮೀಪ ಇಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗೆ ಸೇರಿದ ಚಿಕ್ಕಮಗಳೂರು ಡಿಪೋ ಬಸ್ ಜಿಲ್ಲಾ ಕೇಂದ್ರದಿಂದ ಹಾಸನ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಬಳಿ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ದಟ್ಟ ಹೊಗೆ

ಸಂಚರಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಆನೆ ದಾಳಿಯಿಂದ ಅಪಾರ ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,  ಮಾ.04 : ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯ ನೆಕ್ಕರೆ ಎಂಬಲ್ಲಿ ಫೆ.2ರ ರಾತ್ರಿ ಕಾಡಾನೆಗಳು ದಾಳಿ ಕೃಷಿ ನಾಶ ಪಡಿಸಿದ ಘಟನೆ ವರದಿಯಾಗಿದೆ. ಇಲ್ಲಿಯ ದಾಸಪ್ಪ ಎಂಬರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ,ತೆಂಗಿನ ಮರಗಳನ್ನು ನಾಶ ಪಡಿಸಿದೆ ಎಂದು ತಿಳಿದು ಬಂದಿದೆ. ಅಡ್ತಲೆ ಭಾಗದಲ್ಲಿ ಇದು ಕಳೆದ ಅನೇಕ ಸಮಯಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿ ನಾಶ ಮಾಡಿ ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ.

ಸುಳ್ಯ : ಆನೆ ದಾಳಿಯಿಂದ ಅಪಾರ ಕೃಷಿ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.04 : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top