ಕರಾವಳಿ

ಏಷ್ಯಾದ ನಂ.1 ‘ನಿಪ್ಪೋನ್ ಪೈಂಟ್’ ಇದೀಗ ಕಡಬದಲ್ಲಿ ➤ ಅಧಿಕೃತ ವಿತರಕ ಸಂಸ್ಥೆ ಎಂ.ಎಚ್. ಟ್ರೇಡರ್ಸ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಇಲ್ಲಿನ ಕಡಬ – ಪಂಜ ರಸ್ತೆಯಲ್ಲಿನ ಮಧುರಾ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಂಡಿರುವ ನಿಪ್ಪೋನ್ ಪೈಂಟ್ಸ್ ನ ಅಧಿಕೃತ ವಿತರಕ ಸಂಸ್ಥೆ ಪೈಂಟ್ಸ್ ಹಾಗೂ ಪೈಂಟಿಂಗ್ ಸಾಮಾಗ್ರಿಗಳ ಮಳಿಗೆ ಎಂ.ಎಚ್ ಟ್ರೇಡರ್ಸ್‍ನ ಉದ್ಘಾಟನಾ ಸಮಾರಂಭವು ಗುರುವಾರದಂದು ನಡೆಯಿತು. ಸಂಸ್ಥೆಯನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಉದ್ಯಮ ವ್ಯವಹಾರಗಳು ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡುತ್ತಿವೆ. ಉತ್ತಮ ತಂತ್ರಜ್ಞಾನ, ಆಧುನಿಕ ವ್ಯವಸ್ಥೆಯೊಂದಿಗೆ ಉದ್ಯಮ ಸಂಸ್ಥೆಗಳು ಕಡಬ ಭಾಗದ […]

ಏಷ್ಯಾದ ನಂ.1 ‘ನಿಪ್ಪೋನ್ ಪೈಂಟ್’ ಇದೀಗ ಕಡಬದಲ್ಲಿ ➤ ಅಧಿಕೃತ ವಿತರಕ ಸಂಸ್ಥೆ ಎಂ.ಎಚ್. ಟ್ರೇಡರ್ಸ್ ಶುಭಾರಂಭ Read More »

ಕರಾವಳಿ

ಬಲ್ಯ: ಕಾರುಗಳೆರಡರ ಮಧ್ಯೆ ಮುಖಾಮುಖಿ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಮಾರುತಿ ಸುಝುಕಿ ಸ್ವಿಫ್ಟ್ ಹಾಗೂ ಮಹೀಂದ್ರಾ ಕೆಯುವಿ 100 ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ವಿಫ್ಟ್ ಕಾರಿ‌ನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್ ನಲ್ಲಿ ನಡೆದಿದೆ. ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ(55) ಹಾಗೂ ಅವರ ಪತ್ನಿ ಪೂರ್ಣ ಗೋಖಲೆ(53) ಎಂದು ಗುರುತಿಸಲಾಗಿದೆ. ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ

ಬಲ್ಯ: ಕಾರುಗಳೆರಡರ ಮಧ್ಯೆ ಮುಖಾಮುಖಿ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ

ಗುಂಡ್ಯ: ಮೋರಿಗೆ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು ➤ ಚಾಲಕ ಮೃತ್ಯು, ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.19. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಓರ್ವ ಗಾಯಗೊಂಡ ಘಟನೆ ಗುರುವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರಿನ ಜಾಲಹಳ್ಳಿ ನಿವಾಸಿ ನಾಗರಾಜ್(60) ಎಂದು ಗುರುತಿಸಲಾಗಿದೆ. ನಾಗರಾಜ್ ಗುರುವಾರದಂದು ತನ್ನ ಸ್ವಿಫ್ಟ್ ಕಾರಿನಲ್ಲಿದ್ದ ಬೆಂಗಳೂರಿನಿಂದ ಪುತ್ತೂರಿಗೆಂದು ಆಗಮಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ

ಗುಂಡ್ಯ: ಮೋರಿಗೆ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು ➤ ಚಾಲಕ ಮೃತ್ಯು, ಓರ್ವನಿಗೆ ಗಾಯ Read More »

ಕರಾವಳಿ

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ) ಕಬ್ಬನ್ ಉದ್ಯಾನವನ, ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ 2019 ನೇ ಸಾಲಿನ ಎಸ್.ಎಸ್.ಎಲ್.ಸಿ/ ಪಿ.ಯು.ಸಿ (State/CBSE/ICSE) ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಇದಕ್ಕೆ ಅರ್ಹರಾದವರು ಮಾಹಿತಿಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಅವರಿಗೆ ನೇರವಾಗಿ ಸಲ್ಲಿಸಬೇಕು. ಪ್ರತಿಭಾ ಪುರಸ್ಕಾರ ಅರ್ಜಿಯನ್ನು ಮಂಗಳೂರು

ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ➤ಅರ್ಜಿ ಆಹ್ವಾನ Read More »

ಕರಾವಳಿ

ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಸಂಸ್ಥಾಪನಾ ದಿನಾಚರಣೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಉದ್ಯಮಿ ಮತ್ತು ಲೆಕ್ಕಪರಿಶೋಧಕ ನಂದಗೋಪಾಲ್ ಶೆಣೈ ಜಿ. ಭಾಗವಹಿಸಲಿದ್ದು, ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು Read More »

ಕರಾವಳಿ

ಪುತ್ತೂರು: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಒಬ್ಬಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೋರ್ವರ ಮೃತದೇಹವು ಮನೆಯ ಒಳಗಡೆ ಕೊಳೆತ ಸ್ಥಿತಿಯಲ್ಲಿ ಬುಧವಾರ ಸಂಜೆ ಪುತ್ತೂರಿನ ಪಾಂಗಳಾಯಿ ಎಂಬಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪಾಂಗಳಾಯಿ ನಿವಾಸಿ ದಿ. ಬಾಬು ಬಂಗೇರ ಎಂಬವರ ಪುತ್ರ ಚಂದ್ರಶೇಖರ್(57) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಟೈಲರ್ ಆಗಿದ್ದ ಚಂದ್ರಶೇಖರ್ ಅವಿವಾಹಿತರಾಗಿದ್ದು, ಕಳೆದ ಕೆಲವು ವರ್ಷಗಳಿಂದ ವೃತ್ತಿಯನ್ನು ಬಿಟ್ಟು ತಮ್ಮ ಮೂಲ ಮನೆಯಲ್ಲಿ ಏಕಾಂಗಿಯಾಗಿಯೇ ಇದ್ದರು. ಮನೆಯಿಂದ ಹೊರಬರದ ಅವರು ಯಾವುದೇ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದೆ ಮನೆಯಲ್ಲಿಯೇ ಇರುತ್ತಿದ್ದು, ಮಾನಸಿಕ

ಪುತ್ತೂರು: ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ಇನ್ಮುಂದೆ ಕಡಬದಲ್ಲಿ ಪ್ರತೀ ತಿಂಗಳು ಲೋಕಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ ➤ ಕಡಬದಲ್ಲಿ ಅಹವಾಲು ಸ್ವೀಕರಿಸಿ ಲೋಕಾಯುಕ್ತ ಡಿವೈಎಸ್ಪಿ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ನೂತನವಾಗಿ ಉದ್ಘಾಟನೆಗೊಂಡ ಕಡಬ ತಾಲೂಕಿನಲ್ಲಿ ಇನ್ಮುಂದೆ ಪ್ರತೀ ತಿಂಗಳು ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕ ದೂರುಗಳ ಸ್ವೀಕಾರ ಸಭೆ ನಡೆಯಲಿದೆ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ಹೇಳಿದರು.   ಅವರು ಮಂಗಳೂರು ವಿಭಾಗದ ಲೋಕಾಯುಕ್ತ ಪೋಲಿಸರಿಂದ ಬುಧವಾರದಂದು ಕಡಬದ ಅಂಬೇಡ್ಕರ್ ಭವನದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ದೂರುಗಳನ್ನು ಸ್ವೀಕರಿಸಿ ಮಾತನಾಡಿದರು. ಕಡಬ ತಾಲೂಕು ನೂತನವಾಗಿ ಅನುಷ್ಠಾನಕ್ಕೆ ಬಂದಿರುವುದರಿಂದ ಇಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ ನಡೆದಿರಲಿಲ್ಲ.

ಇನ್ಮುಂದೆ ಕಡಬದಲ್ಲಿ ಪ್ರತೀ ತಿಂಗಳು ಲೋಕಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ ➤ ಕಡಬದಲ್ಲಿ ಅಹವಾಲು ಸ್ವೀಕರಿಸಿ ಲೋಕಾಯುಕ್ತ ಡಿವೈಎಸ್ಪಿ ಹೇಳಿಕೆ Read More »

ಕರಾವಳಿ

ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ ➤ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ

(ನ್ಯೂಸ್ ಕಡಬ) newskadaba.com ಪಂಜ ,ಸಪ್ಟೆಂಬರ್.18. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ರ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಿ

ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ ➤ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಕಸ್ತೂರಿ ಪಂಜ Read More »

ಕರಾವಳಿ

ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಕಟೌಟ್, ಪ್ಲೆಕ್ಸ್ ಬ್ಯಾನರು ಮತ್ತು ಬಂಟಿಂಗ್ಸ್ ಗಳನ್ನು ಅಳವಡಿಸುತ್ತಿರುವುದು ಕಂಡುಬಂದಿದೆ. ಅನಧಿಕೃತವಾಗಿ ಕಟೌಟ್, ಪ್ಲೆಕ್ಸ್‍ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸದಂತೆ ಹಲವಾರು ಬಾರಿ ಪ್ರಕಟಣೆ ನೀಡಿದ್ದರೂ ನಾಗರಿಕರು ಈ ಬಗ್ಗೆ ಸ್ಪಂದಿಸದೇ ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತದೆ. ಮಂಗಳೂರು ನಗರವನ್ನು ಬ್ಯಾನರು ಮುಕ್ತ ನಗರವನ್ನಾಗಿ ಪರಿವರ್ತಿಸುವ ಹಿನ್ನೆಲೆಯಲ್ಲಿ ಮುಂಬರುವ ದಸರಾ ಮತ್ತು ಇನ್ನಿತರ ಹಬ್ಬ ಹರಿದಿನಗಳಲ್ಲಿ ಯಾವುದೇ ಅನಧಿಕೃತ ಫಲಕ, ಪ್ಲೆಕ್ಸ್,

ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ Read More »

ಕರಾವಳಿ

ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಮಂಗಳೂರು ವಿಶ್ವವಿದ್ಯಾನಿಲಯ , ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಸ್ನಾತಕ ಮತ್ತು ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗವು ಆಯೋಜಿಸುತ್ತಿರುವ ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಫ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದು, ಇತಿಹಾಸ ಸಂಶೋಧಕ ಪುಂಡಿಕಾೈ ಗಣಪಯ್ಯ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸೆ.18ರಂದು ಇತಿಹಾಸ ಪರಂಪರೆ ಉಳಿಸಿ ಕಾರ್ಯಕ್ರಮ ➤ವಿಶ್ವವಿದ್ಯಾಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣ Read More »

ಕರಾವಳಿ
Scroll to Top