ಕರಾವಳಿ

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2019” ರ ಕಾರ್ಯಕ್ರಮಕ್ಕೆ ಆಗಸ್ಟ್ 14 ರಂದು ಚಾಲನೆ ನೀಡಿದೆ. ಸರ್ಕಾರದಿಂದ ನಿಯೋಜಿತ `ಇಪಿಸೋಸ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್’ ತಂಡವು ಗ್ರಾಮಗಳಿಗೆ ಭೇಟಿ ನೀಡಿ ನಿಗದಿಗೊಳಿಸಿದ ಮಾನದಂಡಗಳ ಅನ್ವಯ ಪರಿಶೀಲಿಸಿ, ನೈರ್ಮಲ್ಯದ ಬಗ್ಗೆ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದ್ದಾರೆ. ಉತ್ತಮ ಶ್ರೇಣಿ ಪಡೆದ ರಾಜ್ಯ […]

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ Read More »

ಕರಾವಳಿ

ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದ (26)ವರ್ಷದ ಯುವಕ ➤ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆಗಸ್ಟ್.27.ಬಾಳಿಲದ ರಾಮಣ್ಣ ಮಡಿವಾಳ್‌ ಅವರ ಪುತ್ರ ಮುರಳೀಧರ (26) ಎಂಬವರು ಕೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿರುವ ಇವರು ಒಂದು ವಾರದ ಹಿಂದೆ ಕಟ್ಟಡವೊಂದರಲ್ಲಿ ವೆಲ್ಡಿಂಗ್‌ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದು ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿವೆ. ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.  ಅವರ ಚಿಕಿತ್ಸೆಯ ವೆಚ್ಚ ಭರಿಸಲು ಕುಟುಂಬವು ಪರದಾಡುತ್ತಿದ್ದು, ದಾನಿಗಳ ನೆರವಿಗೆ ಮನವಿ ಮಾಡಿದೆ. ಜಾರಿ ಬಿದ್ದು ಹೊಟ್ಟೆ ಹಾಗೂ ತಲೆಗೆ

ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಜಾರಿ ಬಿದ್ದ (26)ವರ್ಷದ ಯುವಕ ➤ ಚಿಕಿತ್ಸೆಗೆ ನೆರವು ನೀಡುವಂತೆ ಮನವಿ Read More »

ಕರಾವಳಿ

ವಿಶ್ವವಿದ್ಯಾನಿಲಕಾಲೇಜು ಮಂಗಳೂರು,ಹಂಪನಕಟ್ಟೆವತಿಯಿಂದ ➤ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಸಂಗ್ರಹಿಸಲಾದ ಸಹಾಯ ನಿಧಿ ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ನೆರೆ ಸಂತ್ರಸ್ತರ ಪುನರ್ವಸತಿಗಾಗಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಹಂಪನಕಟ್ಟೆ ವತಿಯಿಂದ ಧನ ಸಂಗ್ರಹಿಸಲಾಗಿತ್ತು. ಈ ಸಂಗ್ರಹಿಸಲಾದ ರೂ. 42,000/- ಮೊತ್ತವನ್ನು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ರೂಪಾ ಜೆ. ಅವರಿಗೆ ಶನಿವಾರ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಡಾ.ಎ. ಕುಮಾರಸುಬ್ರಹ್ಮಣ್ಯ ಭಟ್, ಸುಬ್ರಹ್ಮಣ್ಯ ಭಟ್ ಎಸ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂಪತ್ ಬಿ, ಕಾರ್ಯದರ್ಶಿ ಮಯೂರ್ ಎಮ್.ಬಿ, ಜೊತೆ ಕಾರ್ಯದರ್ಶಿ ವರ್ಷಿತಾ

ವಿಶ್ವವಿದ್ಯಾನಿಲಕಾಲೇಜು ಮಂಗಳೂರು,ಹಂಪನಕಟ್ಟೆವತಿಯಿಂದ ➤ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಸಂಗ್ರಹಿಸಲಾದ ಸಹಾಯ ನಿಧಿ ಹಸ್ತಾಂತರ Read More »

ಕರಾವಳಿ

ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು, ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಮತ್ತು ಕೃಷಿ ಉತ್ಪನ್ನಗಳು ಪೋಲಾಗುವುದನ್ನು ತಡೆಯಲು ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. CFTRI/ IIMR /ICRISAT /NIFTEM/ DFRL ಸಂಸ್ಥೆಗಳ ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ

ಆಹಾರ ಸಂಸ್ಕರಣೆ ಕ್ಷೇತ್ರಕ್ಕೆ ಪ್ರೋತ್ಸಾಹಧನಕ್ಕೆ ➤ ಅರ್ಜಿ ಆಹ್ವಾನ Read More »

ಕರಾವಳಿ

ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ತ್ವರಿತಗತಿಯಿಂದ ದುರಸ್ತಿ ಕಾಮಗಾರಿಯನ್ನು ಮಾಡಿ, ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಕಾಮಗಾರಿ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ, ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಇದರ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಯಿಂದಾಗಿ ಸಣ್ಣಪುಟ್ಟ ಹಾನಿಗೊಂಡಿರುವ ಆಸ್ಪತ್ರೆಯ ಕಟ್ಟಡದ ದುರಸ್ತಿ ಕಾಮಗಾರಿ ತುರ್ತಾಗಿ

ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಕೆಲಸಕ್ಕೆಂದು ಹೈದರಾಬಾದ್‍ಗೆ ಹೋದ ನಗರದ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕೃಷ್ಣರಾಜ್  (45) ಕಾಣೆಯಾದ ವ್ಯಕ್ತಿ. ಇವರು 7 ತಿಂಗಳ ಹಿಂದೆ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದು, ಅಲ್ಲಿಂದ ಹೈದರಾಬಾದ್‍ಗೆ ಹೋಗಿದ್ದರು. ನಂತರ ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ಪತ್ನಿ ದೂರು ನೀಡಿದ್ದಾರೆ. ಇವರು ಬಿಳಿ ಮೈಬಣ್ಣ, ಸಪೂರ ಶರೀರ, ಎತ್ತರ 5.10 ಅಡಿ ಹೊಂದಿದ್ದು,ಕನ್ನಡ, ಹಿಂದಿ, ತುಳು, ಬ್ಯಾರಿ ಭಾಷೆ ಮಾತನಾಡಬಲ್ಲರು. ಧರಿಸಿದ್ದ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ಕೇಂದ್ರದ ಆಯುಷ್ ಮತ್ತು ರಕ್ಷಣಾ ಸಚಿವರಾದ ಶ್ರೀಪಾದ್ ಯಸ್ಕೋ ನಾಯಕ್‍ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆ ಪ್ರಯುಕ್ತ ಆಗಸ್ಟ್ 29 ರಂದು ಸಂಜೆ 4 ಗಂಟೆಗೆ ಜಿಲ್ಲಾ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಯುಷ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಡಾ ಆಶಾ ಜ್ಯೋತಿ ರೈ ಮಾಲಾಡಿ ವಹಿಸಲಿದ್ದಾರೆ.

ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಎನ್‍ಎಸ್‍ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಡಾ. ದಯಾನಂದ ನಾಯ್ಕ್, ವಿದ್ಯಾರ್ಥಿಗಳು ಅಜ್ಞಾನವೆಂಬ ಕತ್ತಲಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ಸಾಗಬೇಕು. ಸೇವೆಯಲ್ಲೇ ಸಾರ್ಥಕತೆ ಬೆಳೆಸಿಕೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು, ಎಂದರು. ಮುಖ್ಯ ಅತಿಥಿ

ಜ್ಞಾನವೆಂಬ ಬೆಳಕಿನೆಡೆಗೆ ಸಾಗೋಣ ➤ ಡಾ. ದಯಾನಂದ ನಾಯ್ಕ್ Read More »

ಕರಾವಳಿ

ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27. ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, 2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ಇಂದು ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಸ್ಟ್ 28 ರಂದು ಬೆಳಿಗ್ಗೆ 10.30 ಗಂಟೆಗೆ ಮುಂದೂಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ Read More »

ಕರಾವಳಿ

ಕೇವಲ 4999 ರೂ. ಪಾವತಿಸಿ, ಹೊಸ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ‘ಶ್ರೀ ಮೋಟಾರ್ಸ್’ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಆ.24. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದೆ. ಕೇವಲ 4999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ಫ್ಯಾಸಿನೋ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. 95 ಶೇಕಡದವರೆಗೆ ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ

ಕೇವಲ 4999 ರೂ. ಪಾವತಿಸಿ, ಹೊಸ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ‘ಶ್ರೀ ಮೋಟಾರ್ಸ್’ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್ Read More »

ಕರಾವಳಿ
Scroll to Top