ಕರಾವಳಿ

ದ.ಕ ಜಿಲ್ಲೆಯಲ್ಲಿ ಜರುಗುವ ಹಬ್ಬ ಹರಿದಿನಗಳಲ್ಲಿ ➤ ಪ್ರಾಣಿ ಬಲಿ – ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದ.ಕ ಜಿಲ್ಲೆಯಲ್ಲಿ ಜರುಗುವ ಬಕ್ರೀದ್ ಹಾಗೂ ಇತರೆ ಹಬ್ಬ ಹರಿದಿನಗಳಲ್ಲಿ ಪೂಜಾ ಸ್ಥಳಗಳಲ್ಲಿ/ಮಂದಿರಗಳಲ್ಲಿ ಸಾಮೂಹಿಕ ಪ್ರಾಣಿ ಹತ್ಯೆಯನ್ನು ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ನಿಯಮದಂತೆ ಪ್ರಾಣಿ/ಕೋಳಿ ಬಲಿ ಕೊಡುವುದು ನಿಷೇಧಿಸಲ್ಪಟ್ಟಿದೆ ಹಾಗೂ ಪ್ರಾಣಿಗಳನ್ನು ಬಲಿ ಕೊಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಕರ್ನಾಟಕ ಗೋವಧೆ ಪ್ರತಿಬಂದಕ ಕಾಯ್ದೆ ಹಾಗೂ ಜಾನುವಾರು ಪರಿರಕ್ಷಣಾ ಅಧಿನಿಯಮ 64ರ ಸೆಕ್ಷನ್-4 ರ ಪ್ರಕಾರ ಗೋವು ಅಥವಾ ಎಮ್ಮೆಯ ಕರುವಿನ ವಧೆಯನ್ನು ನಿಷೇಧಿಸಿದೆ.ಈ ಎಲ್ಲಾ ಆದೇಶಗಳು […]

ದ.ಕ ಜಿಲ್ಲೆಯಲ್ಲಿ ಜರುಗುವ ಹಬ್ಬ ಹರಿದಿನಗಳಲ್ಲಿ ➤ ಪ್ರಾಣಿ ಬಲಿ – ನಿಷೇಧ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ➤ ಮಳೆ ನೀರು ಡ್ರೈನೇಜ್ಗೆ ಸಂಪರ್ಕ ಕಲ್ಪಿಸದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ಮಹಾನಗರ ಪಾಲಿಕೆಯ ನಗರದ ಭೂಗತ ಒಳಚರಂಡಿ ಯೋಜನೆಯ ದೈನಂದಿನ ನಿರ್ವಹಣೆಯನ್ನು ನಿರ್ವಹಿಸುತ್ತಿದೆ. ನಗರದಾದ್ಯಂತ ಹಮ್ಮಿಕೊಂಡಿರುವ ಒಳಚರಂಡಿ ವ್ಯವಸ್ಥೆಗೆ ವಸತಿ ಸಂಪರ್ಕವನ್ನು ಪಾಲಿಕೆಯಿಂದ ಇತ್ತೀಚಿನ ದಿನಗಳಲ್ಲಿ ಒಳಚರಂಡಿ ಬಳಕೆದಾರರುಗಳು ಒಳಚರಂಡಿ ಜೋಡಣೆಗೆ ತಮ್ಮ ಹಿತ್ತಲಿನ ಮತ್ತು ಮನೆಯ ಸುತ್ತಮುತ್ತ ಬೀಳುವ ಮಳೆಯ ನೀರನ್ನು ಒಳಚರಂಡಿ ಆಳುಗುಂಡಿಗೆ ನೀಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ಈ ಕಾರಣದಿಂದಾಗಿ ನಗರದ ರಸ್ತೆಗಳಲ್ಲಿ ಹಾಕಲಾಗಿರುವ ಆಳುಗುಂಡಿಗಳಿಂದ ತ್ಯಾಜ್ಯ ನೀರು ಮಳೆಯ ಸಂದರ್ಭದಲ್ಲಿ ಉಕ್ಕಿ ಹರಿದು ರಸ್ತೆಯಲ್ಲಿ ಮತ್ತು

ಮಂಗಳೂರು ಮಹಾನಗರ ಪಾಲಿಕೆ ➤ ಮಳೆ ನೀರು ಡ್ರೈನೇಜ್ಗೆ ಸಂಪರ್ಕ ಕಲ್ಪಿಸದಂತೆ ಸೂಚನೆ Read More »

ಕರಾವಳಿ

ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ➤ ಮಂಗಳೂರಿನಲ್ಲಿ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಆಟವಾಡುತ್ತಿದ್ದ ಮಗುವೊಂದು ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟ ಘಟನೆ ನಗರದ ಹೊರವಲಯದ ಕುಳಾಯಿ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ಮಗುವನ್ನು ಕುಳಾಯಿ ನಿವಾಸಿ ಶಂಕರಪ್ಪ ಎಂಬವರ ಒಂದೂವರೆ ವರ್ಷ ಪ್ರಾಯದ ಪುತ್ರ ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ್ ತನ್ನ ಅಕ್ಕನ ಜೊತೆ ಮನೆಯಲ್ಲಿ ಆಟವಾಡುತ್ತಿದ್ದಾಗ ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ➤ ಮಂಗಳೂರಿನಲ್ಲಿ ನಡೆದ ಘಟನೆ Read More »

ಕರಾವಳಿ

ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ

ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ

ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ/ಬೆಂಗಳೂರು, ಆಗಸ್ಟ್.7.ಬಿಎಸ್ ಯಡಿಯೂರಪ್ಪ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೈಕಮಾಂಡ್ ಮುಖಂಡರನ್ನು ಭೇಟಿಯಾಗಿ, ಸಚಿವ ಸಂಪುಟ ರಚನೆ ಕುರಿತು ಚರ್ಚಿಸಿದ್ದರು. ಆದರೆ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ವರದಿ ತಿಳಿಸಿದೆ.ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಮುಂದೂಡಿಕೆಯಾಗಿದ್ದು, 2 ದಿನಗಳ ಬಳಿಕ ದೆಹಲಿಗೆ ವಾಪಸ್ ಬನ್ನಿ ಎಂದು ಬಿಜೆಪಿ ಹೈಕಮಾಂಡ್ ಬಿಎಸ್ ವೈಗೆ ಸೂಚನೆ ನೀಡಿದೆ.ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ

ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ Read More »

ಕರಾವಳಿ

ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.07. ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಬುಧವಾರದಂದು ನಡೆದಿದೆ. ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ನೇತೃತ್ವದಲ್ಲಿ ಸಾರ್ವಜನಿಕರು

ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕರಾವಳಿ

ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆಗಸ್ಟ್.7.ಉಪ್ಪಿನಂಗಡಿಯಲ್ಲಿ ಆ. 6ರಿಂದ ಭಾರೀ ಮಳೆಯಿಂದಾಗಿ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ನಿಚ್ಚಳವಾಗಿದೆ. ನೇತ್ರಾವತಿ ನದಿಯ ನೀರಿನ ಮಟ್ಟ 24 ಮೀಟರ್‌ಗೇರಿದೆ. ಕುಮಾರಧಾರಾ ನದಿಯಲ್ಲೂ ನೀರು ರಭಸವಾಗಿ ಹರಿಯುತ್ತಿದೆ. ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ಹರಿವಿಗೆ ತಡೆಯಾಗುತ್ತಿದೆ. ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ನಸುಕಿನ ಜಾವ ಮೂರು ಗಂಟೆಗೆ 6 ಮೆಟ್ಟಿಲುಗಳು ಮಾತ್ರ

ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು Read More »

ಕರಾವಳಿ

ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆ: ಸಾರ್ವಜನಿಕರಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆ ಕ್ರಮ➤ಬೆಳ್ಳಾರೆ ಪೊಲೀಸ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕಳೆದ ಒಂದು ವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಮುಂಜಾಗೃತೆವಹಿಸುವಂತೆ ಬೆಳ್ಳಾರೆ ಪೋಲೀಸ್ ಠಾಣಾಧಿಕಾರಿಯವರು ಸೂಚನೆ ನೀಡಿದ್ದಾರೆ. ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು , ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು, ನೈಸರ್ಗಿಕ ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ಮನವಿ ಮಾಡಿದ್ದಾರೆ. ಅಂತಹ ಘಟನೆಗಳು

ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆ: ಸಾರ್ವಜನಿಕರಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆ ಕ್ರಮ➤ಬೆಳ್ಳಾರೆ ಪೊಲೀಸ್ ಸೂಚನೆ Read More »

ಕರಾವಳಿ

ಅಪಾಯದಲ್ಲಿ ಕುಂಡಡ್ಕ ಸೇತುವೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ -ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ಮೂಲಕ ಕುಮಾರಧಾರ ತಲುಪುವ ಗೌರಿ ಹೊಳೆ ತನ್ನ ಹರಿವು ಹೆಚ್ಚಿಸಿಕೊಂಡಿದೆ. ಕಡಬ ತಾಲೂಕಿನ ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮವನ್ನು ಜೋಡಿಸುವಲ್ಲಿ ಗೌರಿಹೊಳೆಗೆ ಅಡ್ಡಲಾಗಿರುವ ಕುಂಡಡ್ಕ ಕಿರು ಸೇತುವೆಯಲ್ಲಿ ನೀರು ಅಪಾಯಕಾರಿ ಮಟ್ಟದಲ್ಲಿ ಇದೆ. ಸೇತುವೆ ತೀರಾ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಹಂತಕ್ಕೆ ಬಂದಿರುವ ಸೇತುವೆಯೂ ಕೊಚ್ಚಿಹೋಗುವ ಭೀತಿಯನ್ನು ಜನತೆ ಎದುರಿಸುತ್ತಿದ್ದಾರೆ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ

ಅಪಾಯದಲ್ಲಿ ಕುಂಡಡ್ಕ ಸೇತುವೆ Read More »

ಕರಾವಳಿ

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಡಬ ಭಾಗದಲ್ಲಿ ಮಳೆಗಾಲ ಪ್ರಾರಂಭವಾಗಿದ್ದರೂ ಕಳೆದ ಭಾನುವಾರ ತನಕ ಮಳೆಯ ಆರ್ಭಟ ಕಂಡು ಬಂದಿರಲಿಲ್ಲ, ಆದರೆ ಭಾನುವಾರ ರಾತ್ರಿಯಿಂದ ಆಷಾಡ ಮಳೆ ಅಬ್ಬರಿಸುತ್ತಿದ್ದು, ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ, ಜೀವನದಿ ಕುಮಾರಧಾರ ಸೋಮವಾರ ದುಮ್ಮಿಕ್ಕಿ ಹರಿಯಲಾರಂಭಿಸಿದೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿ ಜುಲೈ ತಿಂಗಳ ಅಂತ್ಯದವರೆಗೂ ನಿರೀಕ್ಷಿತ ಮಳೆಯಾಗಿರಲಿಲ್ಲ. ಈ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆ ಎಂದೇ ಹೇಳಲಾಗುತ್ತಿತ್ತು. ಇದಕ್ಕೆ ಪೂರಕವೆಂಬಂತೆ ಸರಿಸುಮಾರು ಅರ್ಧ ಮಳೆಗಾಲ ಕಳೆದರೂ ನದಿ, ಹೊಳೆ,

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ Read More »

ಕರಾವಳಿ
Scroll to Top