ಕರಾವಳಿ

ಕೋರಿಯಾರ್: ಮುಂದುವರಿದ ಅಕ್ರಮ ಮರಳುಗಾರಿಕೆ ➤ ಟಿಪ್ಪರ್ ವಶಪಡಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕೋಡಿಂಬಾಳ ಸಮೀಪದ ಕೋರಿಯಾರಿನಲ್ಲಿ ಅಕ್ರಮ ಮರಳುಗಾರಿಕೆಯು ರಾಜರೋಷವಾಗಿ ನಡೆಯುತ್ತಿದ್ದು, ಮಂಗಳವಾರದಂದು ದಾಳಿ ನಡೆಸಿದ ಸುಬ್ರಹ್ಮಣ್ಯ ಪೋಲಿಸರು ಒಂದು ಮರಳು ತುಂಬಿದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಕೇನ್ಯ ಭಾಗದಲ್ಲಿ ಮರಳು ತೆಗೆದು ಅದನ್ನು ಕೋಡಿಂಬಾಳ ಗ್ರಾಮದ ಕೋರಿಯಾರ್ ಮೂಲಕ ಸಾಗಿಸಲಾಗುತ್ತಿದೆ. ವಾರದ ಹಿಂದೆ ಖಾಸಗಿ ಚಾನೆಲ್ ನವರು ಅಕ್ರಮ ಮರಳು ದಂದೆಯ ಬಗ್ಗೆ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದಾಗ ಅಕ್ರಮ ಮರಳು ದಂದೆಯಲ್ಲಿ ತೊಡಗಿದ್ದ ತಂಡವೊಂದು […]

ಕೋರಿಯಾರ್: ಮುಂದುವರಿದ ಅಕ್ರಮ ಮರಳುಗಾರಿಕೆ ➤ ಟಿಪ್ಪರ್ ವಶಪಡಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು Read More »

ಕರಾವಳಿ

ಬಂಟ್ವಾಳ: ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು ➤ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ‌.11. ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ವಾಮದಪದವು ಸಮೀಪದ ಬಾರಕಿನಡಿ ನಿವಾಸಿ ಗೋಪಾಲಕೃಷ್ಣ (63), ಹಾಗೂ ಅವರ ಪುತ್ರಿ ದಿವ್ಯಾಶ್ರೀ (32) ಎಂದು ಗುರುತಿಸಲಾಗಿದೆ. ತಂದೆ ತನ್ನ ಮಗಳೊಂದಿಗೆ ಹುಲ್ಲು ತರಲೆಂದು ಮಂಗಳವಾರ ಸಂಜೆ ತೋಟಕ್ಕೆ ತೆರಳಿದ್ದು, ಈ ವೇಳೆ ತೋಟದಲ್ಲಿ

ಬಂಟ್ವಾಳ: ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು ➤ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ದುರ್ಘಟನೆ Read More »

ಕರಾವಳಿ

ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.11. ಅಶ್ವತ್ಥ ಮರದ ಕೊಂಬೆಯೊಂದು ತುಂಡಾಗಿ ಬಿದ್ದ ಪರಿಣಾಮ ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲೆಂದು ಬಸ್ಸಿಗಾಗಿ ಕಾಯುತ್ತಿದ್ದ ಬಿಳಿನೆಲೆ ನಿವಾಸಿ ಹರೀಶ್ಚಂದ್ರ ಎಂಬವರ ಹಣೆ, ಭುಜಕ್ಕೆ ಗಾಯಗಳಾಗಿದ್ದು, ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಘಟನೆಯ ವೇಳೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಡಬ – ಸುಬ್ರಹ್ಮಣ್ಯ ಮಧ್ಯೆ ಸರ್ವಿಸ್ ನಡೆಸುವ ಬೊಲೆರೋ

ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ Read More »

ಕರಾವಳಿ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2019- 20 ನೇ ಶೈಕ್ಷಣಿಕ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಧ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ ಓ ಸಿ, ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2019-20 ನೇ ಸಾಲಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳೂ 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ ಜೂನ್ 30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋದನಾ ಶುಲ್ಕ ರಸೀದಿ ಅಥವಾ ಶಾಲಾ/ ಕಾಲೇಜಿನ ಗುರುತಿನ ಚೇಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ Read More »

ಕರಾವಳಿ

ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11. ಜೂನ್ 12 ರಂದು ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಗೆ ಫಲಾನುಭವಿಗಳನ್ನು ನೋಂದಾಯಿಸಲು ಜಿಲ್ಲೆಯ ಎಲ್ಲಾ 2104 ಅಂಗನವಾಡಿ ಕೇಂದ್ರಗಳಲ್ಲಿ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆದ್ಯತಾ ಕುಟುಂಬದಲ್ಲಿರುವ ಗರ್ಭಿಣಿಯರು ತಮಗೆ ಹತ್ತಿರವಿರುವ ಅಂಗನವಾಡಿ ಕೇಂದ್ರಕ್ಕೆ ಹೋಗಿ ಮಾತೃಶ್ರೀ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು. ಅರ್ಹ ಗರ್ಭಿಣಿಯರಿಗೆ ಹೆರಿಗೆ ಪೂರ್ವ ರೂ. 3,000/- ಹಾಗೂ ಹೆರಿಗೆ ನಂತರ ರೂ. 3,000/- ಒಟ್ಟು ರೂ. 6,000/- ಗಳನ್ನು ತಮ್ಮ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ

ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ Read More »

ಕರಾವಳಿ

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣಅವಕಾಶ ➤ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್‍ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಮುಂದಿನ ತಿಂಗಳುಗಳಲ್ಲಿ ತರಬೇತಿಗಳು ನಡೆಯಲಿದೆ. ಈ ತರಬೇತಿಗಳ ವಿವರಗಳು: ಕಂಪ್ಯೂಟರ್ ಡಿ.ಟಿ.ಪಿ 45 ದಿನಗಳು ಜೂನ್ 27ರಿಂದ ಆಗಸ್ಟ್ 10

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣಅವಕಾಶ ➤ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗಳು Read More »

ಕರಾವಳಿ

ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವರೇ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ತೆರವಾಗಿರುವ ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆ ಅರ್ಜಿಆಹ್ವಾನಿಸಲಾಗಿದೆ. ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) ಹಾಗೂ 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನ ರೂ.10,000/-ಆಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 17 .ಹೆಚ್ಚಿನ ವಿವರಗಳಿಗೆ ಉಪ

ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ Read More »

ಕರಾವಳಿ

ರೇಷನ್ ಕಾರ್ಡ್ ವಿತರಣೆಗೆ ಸಮಯ ಮಿತಿಯೊಳಗೆ ಕ್ರಮಕೈಗೊಳ್ಳಿ➤ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಒಂದು ತಿಂಗಳೊಳಗಾಗಿ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಕೋರಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥಪಡಿಸುವುದರ ಜೊತೆಗೆ ಹೊಸದಾಗಿ ಅರ್ಜಿ ಹಾಕುವವರಿಗೆ 15 ದಿವಸಗಳೊಳಗಾಗಿ ರೇಷನ್ ಕಾರ್ಡ್ ಕೊಡಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯಲ್ಲಿ 5,186 ಅರ್ಜಿಗಳು ಬಾಕಿ ಇದ್ದು, ಇವರಿಗೆ ರೇಷನ್ ಕಾರ್ಡ್

ರೇಷನ್ ಕಾರ್ಡ್ ವಿತರಣೆಗೆ ಸಮಯ ಮಿತಿಯೊಳಗೆ ಕ್ರಮಕೈಗೊಳ್ಳಿ➤ಯು ಟಿ ಖಾದರ್ Read More »

ಕರಾವಳಿ

ಮುಂಗಾರು ವಿಕೋಪ ತಡೆಗೆ ಸನ್ನದ್ಧರಾಗಿ➤ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ರಾಜ್ಯದಲ್ಲಿ ಮುಂಗಾರು ವೇಳೆ ಕಡಲ್ಕೊರೆತ ಸೇರಿದಂತೆ ಭೂಕುಸಿತ, ಕೃತಕ ನೆರೆಯನ್ನು ನಿಭಾಯಿಸಲು ಈಗಾಗಲೇ ಜಿಲ್ಲಾಡಳಿತ ಸಜ್ಜಾಗಿದ್ದು, ಎನ್ ಎಂಪಿಟಿಯಲ್ಲಿ ಎನ್ ಡಿ ಆರ್ ಎಫ್ ಪಡೆ ಈಗಾಗಲೇ ಆಗಮಿಸಿದೆ. ಪ್ರಾಕೃತಿಕ ವಿಕೋಪ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ

ಮುಂಗಾರು ವಿಕೋಪ ತಡೆಗೆ ಸನ್ನದ್ಧರಾಗಿ➤ಯು ಟಿ ಖಾದರ್ Read More »

ಕರಾವಳಿ
Scroll to Top