ಬೆಳ್ತಂಗಡಿ ಐಟಿಐ ಶಿಕ್ಷಕನ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ➤ ಕೊಲೆ ನಡೆದು 24 ಗಂಟೆಗಳಲ್ಲಿ ಆರೋಪಿಗಳಿಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28. ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ, ಮಾಲಾಡಿ ಐಟಿಐನ ಉಪನ್ಯಾಸಕ ವಿಕ್ರಮ್ ಜೈನ್ ರನ್ನು ರಸ್ತೆ ಮಧ್ಯದಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಆರೋಪಿಗಳನ್ನು ಘಟನೆ ನಡೆದು 24 ಗಂಟೆಗಳೊಳಗಾಗಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮುಂಡೂರು ನಿವಾಸಿಗಳಾದ ರವಿ ಪೂಜಾರಿ ಎಂಬವರ ಪುತ್ರ ನಾಗೇಶ್ ಪೂಜಾರಿ(32) ಹಾಗೂ ಡೊಂಬ ಎಂಬವರ ಪುತ್ರ ಡೀಕಯ್ಯ(39) ಎಂದು ಗುರುತಿಸಲಾಗಿದೆ. ಆರೋಪಿಗಳು ರೈಲಿನಲ್ಲಿ ಮುಂಬಯಿಗೆ ಪರಾರಿಯಾಗುತ್ತಿರುವ ವೇಳೆ ಬೈಂದೂರು ರೈಲ್ವೇ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು. […]

