ಕರಾವಳಿ

ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಲು ಮಹಿಳಾ ಕಲಾ ತಂಡಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ತಂಡದಲ್ಲಿ ಪರಿಶಿಷ್ಟ ಜಾತಿ ಅಥವಾ […]

ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅತಿಸಾರ ಭೇದಿ ತಡೆ ➤ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ ಜಿಲ್ಲೆಯಲ್ಲಿ ಜೂನ್ 3 ರಿಂದ 17ರವರೆಗೆ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಆರ್. ವಂಕಟಾಚಲಪತಿ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅತಿಸಾರ ಭೇದಿ ನಿಯಂತ್ರಣ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿಸಾರ ಭೇದಿಯಿಂದ ಸಂಭವಿಸಿದ ದುರಂತಗಳ ಮಾಹಿತಿ ಪಡೆದರು. ಕಾರ್ಯಕ್ರಮಗಳ ಆಯೋಜನೆಯ ಉದ್ದೇಶ

ಅತಿಸಾರ ಭೇದಿ ತಡೆ ➤ ಪೂರ್ವಭಾವಿ ಸಭೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ➤ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು. ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ➤ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ Read More »

ಕರಾವಳಿ

ಪಣಂಬೂರ್ ಬೀಚ್ ಕಿಕ್ಕಿರಿದ ಪ್ರವಾಸಿಗರು ➤ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಮಂದಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ರವಿವಾರ ಪಣಂಬೂರ್‌ ಬೀಚ್‌ಗೆ ಸುಮಾರು 20,000ಕ್ಕೂ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದಾರೆ.ಶಾಲಾ ವಿದ್ಯಾರ್ಥಿಗಳಿಗೆ ಇನ್ನೇನು ರಜೆ ಕೊನೆಗೊಳ್ಳುತ್ತಿದ್ದು, ವಿವಿಧ ಜಿಲ್ಲೆ, ರಾಜ್ಯಗಳಿಂದ ಬೀಚ್‌ಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆ ಬಂದರೂ, ಬೇಸಗೆಯ ಸೆಕೆ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ನಗರದ ಬೀಚ್‌ಗಳಿಗೆ ಆಗಮಿಸುವ ಮಂದಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ.ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಮಳೆ ಬಾರದ ಕಾರಣಕ್ಕೆ ಸಮುದ್ರ ಕೂಡ ಶಾಂತವಾಗಿದೆ. ಇದರಿಂದಾಗಿ ಹೆಚ್ಚಿನ ಮಂದಿ ಪ್ರವಾಸಿಗರು ನೀರಿನಲ್ಲಿಆಡಲು ಇಷ್ಟಪಡುತ್ತಿದ್ದಾರೆ.

ಪಣಂಬೂರ್ ಬೀಚ್ ಕಿಕ್ಕಿರಿದ ಪ್ರವಾಸಿಗರು ➤ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಮಂದಿ..! Read More »

ಕರಾವಳಿ

ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.27. ಪಾಶ್ಚಾತ್ಯ ಆಹಾರಗಳಿಗೆ ಮಾರುಹೊಗಿ ಭಾರತೀಯ ಆಹಾರ ಸಂಸ್ಕೃತಿಯನ್ನು ಜನ ಮರೆತಿರುವುದು ವಿಷಾದ‌ನೀಯ.ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ವತಿಯಿಂದ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ರವಿವಾರ ಸಿರಿಧಾನ್ಯ ಕೆಫೆ ಉದ್ಘಾಟಿಸಿ ಈ ಭಾರತೀಯ ಅಹಾರ ಪದ್ದತಿಯನ್ನು ಉಳಿಸುವ ಸಲುವಾಗಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಮರೆಯಾದ ನಮ್ಮ ಪಾರಂಪರಿಕ ಆಹಾರ ಪದ್ಧತಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಟ್ರಸ್ಟಿ ಶ್ರದ್ಧಾ

ಪಾಶ್ಚಾತ್ಯ ಆಹಾರಗಳಿಗೆ ಮಾರುಹೋಗುತ್ತಿದೆ ಭಾರತ ➤ಮರೆಯಾಗುತ್ತಿದೆ ಭಾರತೀಯ ಆಹಾರ ಪದ್ದತಿ Read More »

ಕರಾವಳಿ

ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ಪ್ರಾಕೃತಿಕ ವಿಕೋಪ ವೇಳೆ ತುರ್ತು ಪರಿಸ್ಥಿತಿಯ ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಮುಂಗಾರು ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವು ಮುಂಜಾಗರೂಕತಾ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಈ ಹಿಂದಿನ ವರ್ಷಗಳಲ್ಲಿ ಸಂಭವಿಸಿದ ಅನಾಹುತಗಳನ್ನು ಗಮನದಲ್ಲಿರಿಸಿ ಪ್ರತೀ ಪ್ರದೇಶಗಳನ್ನು ಗುರುತಿಸಲಾಗಿದೆ. ಪ್ರತೀ ತಾಲೂಕಿಗೆ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ತಾಲೂಕು ಗಳಲ್ಲಿ ಗುರುತಿಸಲಾದ ಪ್ರದೇಶಗಳ

ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ Read More »

ಕರಾವಳಿ

ದ.ಕ ಜಿಲ್ಲಾ ಪೊಲೀಸ್ ಘಟಕದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿರುವ ಹಳೆಯ ಮತ್ತು ನಿರುಪಯುಕ್ತ ಸಾಮಾಗ್ರಿಗಳಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿರುವ ವೈರ್‍ಲೆಸ್ ಗೆ ಸಂಬಂಧಿಸಿದ ಹಳೆಯ ಮತ್ತು ನಿರುಪಯುಕ್ತ ಸಾಮಾಗ್ರಿಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಜೂನ್ 10 ರಂದು ಪೂರ್ವಾಹ್ನ 11 ಗಂಟೆಗೆ ಹರಾಜು ಏರ್ಪಡಿಸಲಾಗಿದೆ. ಆಸಕ್ತ ಬಿಡ್‍ದಾರರು ಹರಾಜಿಗೆ ಒಂದು ಗಂಟೆಗೆ ಮುಂಚಿತವಾಗಿ ಇ.ಎಂ.ಡಿ ಮೊತ್ತ ರೂ 3000/ ದೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್

ದ.ಕ ಜಿಲ್ಲಾ ಪೊಲೀಸ್ ಘಟಕದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿರುವ ಹಳೆಯ ಮತ್ತು ನಿರುಪಯುಕ್ತ ಸಾಮಾಗ್ರಿಗಳಬಹಿರಂಗ ಹರಾಜು Read More »

ಕರಾವಳಿ

ವಿಶ್ವ ರಕ್ತದಾನಿಗಳ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ರಕ್ತದಾನ ಅತ್ಯಂತ ಪವಿತ್ರವಾದ ದಾನ. ಇದು ಸಾವಿರಾರು ಜನರ ಪ್ರಾಣವನ್ನು ನಿತ್ಯವೂ ಉಳಿಸುತ್ತಿದೆ. ಜಿಲ್ಲೆಯಲ್ಲಿ ಸಹಸ್ರಾರು ಯುವಕ ಯುವತಿಯರು ಪ್ರತಿನಿತ್ಯ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ರೋಗಿಗಳ ಜೀವಕ್ಕೆ ಆಶಾಕಿರಣವಾಗಿರುತ್ತಾರೆ. ಅಂತಹ ರಕ್ತದಾನಿಗಳ ಸ್ವಯಂಪ್ರೇರಿತ ಸೇವೆಯನ್ನು ಸ್ಮರಿಸುವ ದಿನ ವಿಶ್ವ ರಕ್ತದಾನಿಗಳ ದಿನ ಜೂನ್ 14 ರಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ವತಿಯಿಂದ ಪುರಭವನದಲ್ಲಿ ಆಚರಿಸಿ, ರಕ್ತದಾನಿಗಳನ್ನು ಗೌರವಿಸಲಾಗುವುದು. 15 ಬಾರಿಗಿಂತ ಮೇಲ್ಪಟ್ಟು ರಕ್ತದಾನ ಮಾಡಿದ ವ್ಯಕ್ತಿಗಳು ದಾಖಲೆಗಳೊಂದಿಗೆ ಮಾಹಿತಿ

ವಿಶ್ವ ರಕ್ತದಾನಿಗಳ ದಿನಾಚರಣೆ Read More »

ಕರಾವಳಿ

ಬಾಹ್ಯಾಕಾಶ ಅನ್ವೇಷಣೆ -ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ಪಿಲಿಕುಳದ ಸ್ವಾಮಿ ವಿವೇಕಾನಂದ ತಾರಾಲಯದಲ್ಲಿ ಬಾಹ್ಯಾಕಾಶಯಾನದ ಉದಯ (Dawn of the Space Age) ಎಂಬ ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಹೊಸ 3ಡಿ ಚಲನಚಿತ್ರವನ್ನು ಮೇ 26 ರಿಂದ ಪ್ರದರ್ಶಿಸಲಾಗುವುದು. ಈ ಪ್ರದರ್ಶನವು ಚಂದ್ರನತ್ತ ಉಡಾವಣೆಗೊಂಡ ಪ್ರಥಮ ಬಾಹ್ಯಾಕಾಶ ಕೃತಕ ಉಪಗ್ರಹ ಸ್ಪುಟ್ನಿಕ್‍ನಿಂದ ಹಿಡಿದು ಇತ್ತೀಚಿನವರೆಗೆ ಮಾನವ ನಡೆಸಿದ ಬಾಹ್ಯಾಕಾಶ ಅನ್ವೇಷಣೆ ಕುರಿತ 4ಕೆ 3ಡಿ ಪ್ರದರ್ಶನ. ವಾರದ ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ

ಬಾಹ್ಯಾಕಾಶ ಅನ್ವೇಷಣೆ -ಚಲನಚಿತ್ರ ಪ್ರದರ್ಶನ Read More »

ಕರಾವಳಿ

➤➤ Breaking News ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಮೇ.25. ನೇತ್ರಾವತಿ ನದಿಗೆ ಇಳಿದಿದ್ದ ಮೂವರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಸಂಭವಿಸಿದೆ. ಮೖತ ಬಾಲಕರನ್ನು ಕೇರಳ ರಾಜ್ಯದ ಕುಂಬ್ಳೆ ನಿವಾಸಿಗಳಾದ ಮನೀಷ್ ಮತ್ತು ಅಜಿತ್ ಎಂದು ಗುರುತಿಸಲಾಗಿದೆ. ಸೂರಿಕುಮೇರು ಸಮೀಪದ ಬರಿಮಾರು ನಿವಾಸಿ ಸಂಜೀವ ಬೋವಿ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆ ಕುಂಬ್ಳೆಯಿಂದ ಬಂದಿದ್ದ ಸಂಬಂಧಿಕರ ಏಳು ಮಂದಿ ಮಕ್ಕಳು ಇಲ್ಲಿನ ನೇತ್ರಾವತಿ ನದಿಗೆ

➤➤ Breaking News ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು ➤ ಓರ್ವ ಗಂಭೀರ Read More »

ಕರಾವಳಿ
Scroll to Top