ಕರಾವಳಿ

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 1 ರಿಂದ ಅಕ್ಟೋಬರ್ 15 ರ ಅವಧಿಗೆ ನೀರಿನ ಕೊಳವೆ ಜೋಡಣೆ ಒಳಚರಂಡಿ ವ್ಯವಸ್ಥೆ, ಒ.ಎಫ್.ಸಿ ಕೇಬಲ್‍ಗಳ ಅಳವಡಿಕೆ ಹಾಗೂ ಇತರ ಕೆಲಸ ಕಾರ್ಯಗಳಿಗಾಗಿ ರಸ್ತೆ ಅಗೆತ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಈ ರೀತಿಯ ಕೆಲಸ ನಿರ್ವಹಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಆಯುಕ್ತರು ಮಹಾನಗರಪಾಲಿಕೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.  

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಗುರುಪುರ, ಅಶೋಕನಗರ, ಇಲ್ಲಿಗೆ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ನಿಲಯಗಳ ಸೇರ್ಪಡೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಉಚಿತ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು. ಅರ್ಜಿಗಳನ್ನು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ನಿರ್ದೇಶಕರಾದ ಬ್ರಿಗೇಡಿಯರ್ (ನಿವೃತ್ತ) ರವಿ ಮುನಿಸ್ವಾಮಿ ಇವರು ಮೇ 28 ರಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ನಿರ್ದೇಶಕರನ್ನು ಭೇಟಿ ಮಾಡಲು ಇಚ್ಛಿಸಿದಲ್ಲಿ ಅಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಊರ್ವಸ್ಟೋರ್ಸ್ ಹತ್ತಿರವಿರುವ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ Read More »

ಕರಾವಳಿ

‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.  ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ ಆರರವರೆಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸ್ಪಷ್ಟಪಡಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರಿಗೆ ಜಿಲ್ಲೆಯಲ್ಲಿ ಅನಾವೃಷ್ಟಿ ಮತ್ತು ಅತಿವೃಷ್ಟಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ನಗರಕ್ಕೆ ನೀರು ಪೂರೈಕೆ ಸಂಬಂಧ ಬೇಸಿಗೆಯಲ್ಲಿ ಮಳೆ ಬಾರದಿರುವುದರಿಂದ ತುಂಬೆಯಲ್ಲಿ

‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’ Read More »

ಕರಾವಳಿ

ಇನ್ಮುಂದೆ ಹೊಸ್ಮಠ ನದಿಗೆ ತ್ಯಾಜ್ಯ ಎಸೆಯುವವರಿಗೆ ಕಾದಿದೆ ಕಂಟಕ ➤ ನದಿಯ ಇಕ್ಕೆಲಗಳಲ್ಲೂ ಸಿಸಿಟಿವಿ ಅಳವಡಿಕೆ ➤ ನದಿಯಲ್ಲಿ ವಾಹನ ತೊಳೆಯುವ, ಸ್ನಾನ ಮಾಡುವವರ ಮೇಲೂ ಕಾನೂನು ಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಮೇ.20. ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುವುದರ ಬಗ್ಗೆ ಅಲ್ಲಲ್ಲಿ ನಾಮಫಲಕಗಳನ್ನು ಅಳವಡಿಸಿ ಎಚ್ಚರಿಸುತ್ತಿದ್ದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಹೊಸ್ಮಠ ನದಿಯ ಇಕ್ಕೆಲಗಳಲ್ಲೂ ಸಿ.ಸಿ.ಟಿವಿ ಅಳವಡಿಸಿದ್ದು, ತ್ಯಾಜ್ಯ ಬಿಸಾಡುವವರನ್ನು ಶಿಕ್ಷೆಗೆ ಗುರಿಪಡಿಸಲು ಮುಂದಾಗಿದೆ. ಹೊಸ್ಮಠ ನದಿಯ ನೀರನ್ನು ಹಲವರು ಕುಡಿಯಲು, ದಿನಬಳಕೆಗೆ ಉಪಯೋಗಿಸುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಸೇತುವೆಯ ಮೇಲೆ ನಿಂತು ತ್ಯಾಜ್ಯಗಳನ್ನು ನದಿ ನೀರಿಗೆ ಬಿಸಾಡುವುದಲ್ಲದೆ, ಕೆಲವರು ನದಿ ನೀರಿನಲ್ಲಿ ಸ್ನಾನ ಮಾಡುವುದು, ವಾಹನಗಳನ್ನು

ಇನ್ಮುಂದೆ ಹೊಸ್ಮಠ ನದಿಗೆ ತ್ಯಾಜ್ಯ ಎಸೆಯುವವರಿಗೆ ಕಾದಿದೆ ಕಂಟಕ ➤ ನದಿಯ ಇಕ್ಕೆಲಗಳಲ್ಲೂ ಸಿಸಿಟಿವಿ ಅಳವಡಿಕೆ ➤ ನದಿಯಲ್ಲಿ ವಾಹನ ತೊಳೆಯುವ, ಸ್ನಾನ ಮಾಡುವವರ ಮೇಲೂ ಕಾನೂನು ಕ್ರಮ Read More »

ಕರಾವಳಿ

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ಮೇ 17 ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಮೇರಿಹಿಲ್ ಇಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನೆ ಕುರಿತು ಜಿಲ್ಲಾ ಸಮಾದೇಷ್ಟರಾದ ಡಾ; ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಯುವ ಸಲುವಾಗಿ ಸೋಮೇಶ್ವರ, ಉಲ್ಲಾಳ, ಪಣಂಬೂರು, ತಣ್ಣೀರ್ ಬಾವಿ, ಸಸಿಹಿತ್ಲು, ಫಾತಿಮ ಬೀಚ್, ಮೊಗವೀರ್ ಪಟ್ನ ಸುರತ್ಕಲ್ ಬೀಚ್‍ಗಳಿಗೆ ತಲಾ 3 ಜನ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಲಾಯಿತು. ಮಳೆಗಾಲದ ಸಮಯದಲ್ಲಿ ಉಪ್ಪಿನಂಗಡಿಯ ನೇತ್ರಾವತಿ

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ Read More »

ಕರಾವಳಿ

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.2019-20 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕು ಬಿ.ಸಿ ರಸ್ತೆ, ಸಹಾಯಕ ನಿರ್ದೇಶಕರವರ ಕಚೇರಿ(ಗ್ರೇಡ್ -2), ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು 5 ನೇ ತರಗತಿಯಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು www.sw.kar.nic.in  ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www.tw.kar.nic.in 

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ಉಪ ಚುನವಾಣೆಗಳು ನಡೆಯಲಿದ್ದು, ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (1- ಕಬಕ ಮತ್ತು 5- 34 ನೆಕ್ಕಿಲಾಡಿ) ಮತ್ತು ಬೆಳ್ತಂಗಡಿ (28 ಉಜಿರೆ ಮತ್ತು 29 ಕೊಯ್ಯೂರು) ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತನ್ನ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮೇ 27 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ Read More »

ಕರಾವಳಿ

ಹಿಮೋಫೀಲಿಯಾದಿಂದ ಬಳಲುತ್ತಿರುವ ಅವಳಿ ಸಹೋದರರು ➤ ಬೇಕಾಗಿದೆ ದಾನಿಗಳ ನೆರವಿನ ಹಸ್ತ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮೇ.20. ಅದೊಂದು ಪುಟ್ಟ ಸಂಸಾರ. ಇಬ್ಬರು ಅವಳಿಗಳು ಸೇರಿದಂತೆ ಒಟ್ಟು ಮೂವರು ಗಂಡು ಮಕ್ಕಳು. ತಂದೆ ಕೂಲಿ ಕೆಲಸ ಮಾಡಿ ಕುಟುಂಬವನ್ನು ನಿರ್ವಹಿಸುತ್ತಿರುತ್ತಾರೆ. ಅದೊಂದು ದಿನ ಬೆಟ್ಟವೇ ಕುಸಿದು ಮೈಮೇಲೆ ಬಿದ್ದಂತಹ ನೋವು ಈ ಕುಟುಂಬಕ್ಕೆ ಬಂದೆರಗುತ್ತದೆ. ಅದೇನೆಂದರೆ ಇಬ್ಬರು ಅವಳಿ ಮಕ್ಕಳು ದೈಹಿಕ ಕ್ಷಮತೆಯಿಲ್ಲದೆ ಒದ್ದಾಡುತ್ತಿದ್ದರೆ, ಇಬ್ಬರಿಗೂ ಹಿಮೋಫೀಲಿಯಾ ಇದೆ ಎಂದು ಪರೀಕ್ಷಿಸಿದ ವೈದ್ಯರು ವರದಿ ನೀಡುತ್ತಾರೆ. ಹತ್ತಿರದವರಲ್ಲೆಲ್ಲಾ ಕಾಡಿ – ಬೇಡಿ ಚಿಕಿತ್ಸೆ ನೀಡಿದ ಹೆತ್ತವರಿಗೆ ಕೊನೆಗೆ

ಹಿಮೋಫೀಲಿಯಾದಿಂದ ಬಳಲುತ್ತಿರುವ ಅವಳಿ ಸಹೋದರರು ➤ ಬೇಕಾಗಿದೆ ದಾನಿಗಳ ನೆರವಿನ ಹಸ್ತ Read More »

ಕರಾವಳಿ

‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.20. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯದ ರಸ್ತೆ ಬದಿಯಲ್ಲಿ ಯಾತ್ರಾರ್ಥಿಗಳು ಬಿಸಾಡಿದ್ದ ತ್ಯಾಜ್ಯವನ್ನು ‘ನಮ್ಮ ಸುಬ್ರಹ್ಮಣ್ಯ’ ತಂಡದ ಯುವಕರು ಶ್ರಮದಾನದ ಮೂಲಕ ಸ್ವಚ್ಛ ಮಾಡಿದರು. ಶನಿವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ತಂಡದ 15 ಕ್ಕೂ ಹೆಚ್ಚು ಕಾರ್ಯಕರ್ತರು ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ರಸ್ತೆಯ ಎರಡೂ ಬದಿಗಳಲ್ಲಿ 2 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛ ಮಾಡಿ ಸುಮಾರು 3 ಪಿಕಪ್ ನಷ್ಟು ಪ್ಲಾಸ್ಟಿಕ್, ಬಿಯರ್ ಬಾಟಲಿ ಹಾಗೂ

‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ Read More »

ಕರಾವಳಿ
Scroll to Top