ಕಡಬದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ➤ ಶೀಘ್ರ ಸರಿಪಡಿಸುವಂತೆ ಬಿಜೆಪಿ ನೇತೃತ್ವದ ನಿಯೋಗದಿಂದ ಆಗ್ರಹ
(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಳೆದ ಕೆಲವು ಸಮಯದಿಂದ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು. ಬಿಜೆಪಿ ಮುಖಂಡ ಸೀತಾರಾಮ ಗೌಡ ಪೊಸವಳಿಕೆಯವರ ನೇತೃತ್ವದಲ್ಲಿ ತೆರಳಿದ ಕಾರ್ಯಕರ್ತರು, ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ವಿದ್ಯುತ್ ಸಮಸ್ಯೆಯಿಂದಾಗಿ ಕಡಬ ಪರಿಸರದಲ್ಲಿನ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ […]








