ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಇಂದು ಒಟ್ಟು 11 HWC ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಜೊತೆಗೂಡಿ ಮೂಡುಪಡುಕೋಡಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. […]








