ಕರಾವಳಿ

ಬಲ್ಯ: ಕಡವೆಯನ್ನು ಹೋಲುವ ಕಾಡುಪ್ರಾಣಿ ಕೊಳೆತ ಸ್ಥಿತಿಯಲ್ಲಿ ಪತ್ತೆ ► ದುರ್ನಾತದಿಂದ ಮೂಗು ಮುಚ್ಚಬೇಕಾದ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ನ.19. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಹಾದು ಹೋಗಿರುವ ಹೊಸ್ಮಠ ಸಮೀಪ ದ ದೇರಾಜೆ ಕ್ರಾಸ್ ಬಳಿ ಕಡವೆಯನ್ನು ಹೋಲುವ ಕಾಡು ಪ್ರಾಣಿಯೊಂದು ಸತ್ತುಬಿದ್ದಿದ್ದು, ಸಾಂಕ್ರಾಮಿಕ ರೋಗದ ಭೀತಿ ಉಂಟಾಗಿದೆ. ದೇರಾಜೆ ಕ್ರಾಸ್ ಸುತ್ತಮುತ್ತ ಕಳೆದ ಎರಡು ದಿನಗಳಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಹುಡುಕಾಡಿದಾಗ ದೇರಾಜೆ ಕ್ರಾಸ್ ನಿಂದ ಸುಮಾರು ಅರ್ಧ ಕಿ.ಮೀ. ದೂರದಲ್ಲಿ ಕಡವೆಯನ್ನು ಹೊಲುವ ಕಾಡುಪ್ರಾಣಿಯೊಂದು ಕೊಳೆತ ಸ್ಥಿತಿಯಲ್ಲಿ ಸತ್ತು ಬಿದ್ದಿರುವುದು ಗಮನಕ್ಕೆ ಬಂದಿದೆ. ಈ […]

ಬಲ್ಯ: ಕಡವೆಯನ್ನು ಹೋಲುವ ಕಾಡುಪ್ರಾಣಿ ಕೊಳೆತ ಸ್ಥಿತಿಯಲ್ಲಿ ಪತ್ತೆ ► ದುರ್ನಾತದಿಂದ ಮೂಗು ಮುಚ್ಚಬೇಕಾದ ಪರಿಸ್ಥಿತಿ Read More »

ಕರಾವಳಿ

ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.18. ಸ್ನಾನಕ್ಕೆಂದು ನದಿಗೆ ತೆರಳಿದ್ದ ನಾಲ್ವರ ಪೈಕಿ ಓರ್ವ ಯುವಕ ಕಣ್ಮರೆಯಾದ ಘಟನೆ ಕುಮಾರಧಾರಾ ನದಿಯಲ್ಲಿ ಭಾನುವಾರದಂದು ನಡೆದಿದೆ. ಕಣ್ಮರೆಯಾದ ಯುವಕನನ್ನು ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ವಯರಿಂಗ್ ನಿರ್ವಹಣೆ ಮಾಡುತ್ತಿದ್ದ ಕೂರ್ನಡ್ಕ ನಿವಾಸಿ ಸೈಫಲಿ ಖಾನ್‌ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಭಾನುವಾರದಂದು ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿ ಬಳಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದು, ಕಣ್ಮರೆಯಾಗಿರುವುದಾಗಿ ತಿಳಿದುಬಂದಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ

ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನಾಪತ್ತೆ Read More »

ಕರಾವಳಿ

ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.18. ರೋಡ್ ಅಡಿಕೆ ಕೀಳುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿಯಲ್ಲಿ ಭಾನುವಾರದಂದು ನಡೆದಿದೆ. ಮೃತರನ್ನು ಹಳೆನೇರಂಕಿ ಗ್ರಾಮದ ಬರೆಂಬೆಟ್ಟು ನಿವಾಸಿ ವೀರಪ್ಪ ಪೂಜಾರಿ(66) ಎಂದು ಗುರುತಿಸಲಾಗಿದೆ. ಮೃತರು ಭಾನುವಾರದಂದು ತನ್ನದೇ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಕ್ಕೆ ಬಿದ್ದರೆನ್ನಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹಾದಿ‌ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ

ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಆರನೇ ಮಹಡಿಯಿಂದ ಕೆಳಗೆ ಹಾರಿದ ಕಾಲೇಜು ವಿದ್ಯಾರ್ಥಿ ► ಮುಂದೇನಾಯ್ತು ಗೊತ್ತೇ‌‌‍..?

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜಿನ ಆರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಗರದ ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಸುರತ್ಕಲ್ ಎನ್‌ಐಟಿಕೆ ಕಾಲೇಜಿನ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ, ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಎಂದು ಗುರುತಿಸಲಾಗಿದೆ. ಹಾಜರಾತಿ ಕಡಿಮೆ ಇದ್ದ ಹಿನ್ನೆಲೆಯಲ್ಲಿ ಉಪನ್ಯಾಸಕರೋರ್ವರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಹೀಯಾಳಿಸಿದ್ದರೆನ್ನಲಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು: ಆರನೇ ಮಹಡಿಯಿಂದ ಕೆಳಗೆ ಹಾರಿದ ಕಾಲೇಜು ವಿದ್ಯಾರ್ಥಿ ► ಮುಂದೇನಾಯ್ತು ಗೊತ್ತೇ‌‌‍..? Read More »

ಕರಾವಳಿ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.15. ಮೀನು ಹಿಡಿಯಲೆಂದು ಕುಮಾರಧಾರ ನದಿಗೆ ತೆರಳಿದ್ದ ಯುವಕರಿಬ್ಬರು ನಾಪತ್ತೆಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ದಗನಕಜೆ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ನೀರುಪಾಲಾದವರನ್ನು ದೇವಚಳ್ಳ ಗ್ರಾಮದ ದೇವರಕಾಡು ನಿವಾಸಿಗಳಾದ ರಕ್ಷಿತ್ ಮತ್ತು ಲತೀಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಮೂವರು ಸ್ನೇಹಿತರೊಂದಿಗೆ ಒಟ್ಟು ಐದು ಮಂದಿ ಮೀನು ಹಿಡಿಯಲೆಂದು ಬುಧವಾರ ಕುಮಾರಧಾರ ನದಿಗೆ ತೆರಳಿದ್ದು, ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದವರಿಗಾಗಿ ಸ್ಥಳೀಯ ಈಜುಗಾರರರು ಶೋಧ ಕಾರ್ಯದಲ್ಲಿ ತೊಡಗಿದ್ದು, ಸುಬ್ರಹ್ಮಣ್ಯ ಠಾಣಾ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಯುವಕರಿಬ್ಬರು ನೀರುಪಾಲು Read More »

ಕರಾವಳಿ

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ಸಮಸ್ಯೆಯೇ..? ► ನ.16 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಮತ್ತು ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ನವೆಂಬರ್ 12 ರಂದು ಏರ್ಪಡಿಸಲಾಗಿದ್ದ ‘ಕಂದಾಯ ಅದಾಲತ್’ನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರ ಸಚಿವ ಅನಂತ್‍ ಕುಮಾರ್ ರವರ ನಿಧನದಿಂದಾಗಿ ಮುಂದೂಡಲಾಗಿದ್ದು, ನವೆಂಬರ್ 16 ರಂದು ಪುನರ್ ನಿಗದಿಗೊಳಿಸಲಾಗಿದೆ. ಭೂಪರಿವರ್ತನೆಗೆ ಸಂಬಂಧಿಸಿದಂತೆ ವಿಳಂಬ ಅಥವಾ ಸಮಸ್ಯೆಗಳು ಇದ್ದಲ್ಲಿ, ಇತರೆ ಕಂದಾಯ ವಿಷಯಗಳಾದ ಆರ್.ಟಿ.ಸಿ. ಭೂಮಾಪನ ಮುಂತಾದ ಕಂದಾಯ ವಿಷಯಗಳಿಗೆ ಸಂಬಂಧಪಟ್ಟಂತೆ

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ಸಮಸ್ಯೆಯೇ..? ► ನ.16 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ Read More »

ಕರಾವಳಿ

ಮರ್ಧಾಳ ಜುಮ್ಮಾ ಮಸೀದಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಹಮೀದ್ ತಂಙಳ್, ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.14. ಮರ್ಧಾಳ ತಖ್ವಿಯ್ಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷರಾಗಿ ಕೆ.ಎಸ್. ಶಾಹುಲ್ ಹಮೀದ್ ತಂಙಳ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆಗೊಂಡಿದ್ದಾರೆ‌. ಅಸ್ಸಯ್ಯಿದ್ ಜಮಲುಲ್ಲೈಲಿ ತಂಙಳ್ ಕಾಜೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಮುಹಮ್ಮದ್ ಹಾಜಿ ಬಡಕೋಡಿ, ಕೋಶಾಧಿಕಾರಿಯಾಗಿ ಸಿ.ಎಂ. ಇಬ್ರಾಹಿಮ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿಗಳಾಗಿ ಅಬೂಬಕರ್ ಮಿತ್ತೋಡಿ, ಲತೀಫ್ ಖಾನ್ ಆಯ್ಕೆಗೊಂಡರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮುಹಮ್ಮದ್ ಕೆ., ಸತ್ತಾರ್ ಪನ್ಯ, ಉಮರ್

ಮರ್ಧಾಳ ಜುಮ್ಮಾ ಮಸೀದಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ಹಮೀದ್ ತಂಙಳ್, ಕಾರ್ಯದರ್ಶಿಯಾಗಿ ಹನೀಫ್ ಎಂ.ಎಸ್. ಪುನರಾಯ್ಕೆ Read More »

ಕರಾವಳಿ

ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆಗೆ ಸಂಚು ► ಹನ್ನೊಂದು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ನಗರದ ಜುವೆಲ್ಲರಿ ಮಾಲಕನ ದರೋಡೆಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ 11 ಮಂದಿ ಆರೋಪಿಗಳನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಮಂಗಳೂರು ಪರಿಸರದವರಾಗಿದ್ದು, ಬಂಧಿತರನ್ನು ಶೇಖ್ ಮಹಮ್ಮದ್ ಅನ್ಸಾರ್ ಯಾನೆ ಅನ್ಸಾರ್ (34), (21), ಮುಹಮ್ಮದ್ ತೌಸೀಫ್ ಯಾನೆ ತಚ್ಚು (24), ಉಬೈದುಲ್ಲಾ (25), ಮುಹಮ್ಮದ್ ತೌಸೀಫ್ ಯಾನೆ ತೌಸೀಫ್ (25), ಮುಹಮ್ಮದ್ ಅಲಿ (25), ಅಂತಾರಾಜ್ಯ ಆರೋಪಿಗಳಾದ ಅಹ್ಮದ್ ಕಬೀರ್ (30),

ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆಗೆ ಸಂಚು ► ಹನ್ನೊಂದು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಕಬಕ: ಗೂಡ್ಸ್ ರಿಕ್ಷಾ ಢಿಕ್ಕಿ ► ಪಾದಚಾರಿ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.13. ಗೂಡ್ಸ್ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಬಕದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಕಬಕ ಮಸೀದಿಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಗೂಡ್ಸ್ ರಿಕ್ಷಾವು ಢಿಕ್ಕಿ ಹೊಡೆದಿದ್ದು, ಪಾದಚಾರಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ರಸ್ತೆಗೆ ಮಗುಚಿ ಬಿದ್ದಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು

ಕಬಕ: ಗೂಡ್ಸ್ ರಿಕ್ಷಾ ಢಿಕ್ಕಿ ► ಪಾದಚಾರಿ ಗಂಭೀರ Read More »

ಕರಾವಳಿ

ನೆಲ್ಯಾಡಿ: ಅಕ್ರಮ ಮರಳು ಸಾಗಾಟ ► ಹಲವು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.13. ಪುತ್ತೂರು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಅಕ್ರಮ ಮರಳು ಸಾಗಾಟದ ಪಿಕಪ್ ವಾಹನಗಳನ್ನು ವಶಪಡಿಸಿಕೊಂಡ ಘಟನೆ ನೆಲ್ಯಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉದನೆಯಿಂದ ಗುಂಡ್ಯದವರೆಗೆ ಅಲ್ಲಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ಗಳನ್ನು ವಶಕ್ಕೆ ಪಡೆದುಕೊಂಡು ನೆಲ್ಯಾಡಿ ಹೊರಠಾಣೆಯಲ್ಲಿ ಇರಿಸಿದ್ದಾರೆ.

ನೆಲ್ಯಾಡಿ: ಅಕ್ರಮ ಮರಳು ಸಾಗಾಟ ► ಹಲವು ವಾಹನಗಳು ಪೊಲೀಸ್ ವಶಕ್ಕೆ Read More »

ಕರಾವಳಿ
Scroll to Top