ಕರಾವಳಿ

ಜಿಲ್ಲಾಡಳಿತದ ವತಿಯಿಂದ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದರ ಮೋನು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಎಂ.ಆರ್. ರವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸೇರಿದಂತೆ ಹಲವರು ಭಾಗಿಯಾದರು.

ಜಿಲ್ಲಾಡಳಿತದ ವತಿಯಿಂದ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಕಬಕ: ಕಾರು ಬೈಕ್ ಗಳಿಗೆ ಸರಣಿ ಢಿಕ್ಕಿ ► ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.20. ಕಾರೊಂದು ಮೂರು ಬೈಕ್‌ಗಳಿಗೆ ಸರಣಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕಬಕ ಸಮೀಪ ಬುಧವಾರದಂದು ನಡೆದಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಕಬಕ ಸಮೀಪದ ಪೋಳ್ಯ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಲ್ಲಡ್ಕ ನಿವಾಸಿ ಶ್ರೀಧರ ಗೌಡ (44), ವಿಟ್ಲ ಜೋಗಿಬೆಟ್ಟು ನಿವಾಸಿ

ಕಬಕ: ಕಾರು ಬೈಕ್ ಗಳಿಗೆ ಸರಣಿ ಢಿಕ್ಕಿ ► ನಾಲ್ವರಿಗೆ ಗಾಯ Read More »

ಕರಾವಳಿ

ಮೆಲ್ಕಾರ್: ಬುಡ ಸಮೇತ ನೆಲಕ್ಕುರುಳಿದ ಬೃಹತ್ ಗಾತ್ರದ ಮರ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.20. ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ಮೆಲ್ಕಾರ್ ನಲ್ಲಿ ಸಂಭವಿಸಿದೆ. ಮೃತನನ್ನು ಮೆಲ್ಕಾರ್ ನಲ್ಲಿ ಸಿಮೆಂಟ್ ಆಕೃತಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶದ ಮೂಲದ ಕಾರ್ಮಿಕ ರಾಮಸೇವಕ್(36) ಎಂದು ಗುರುತಿಸಲಾಗಿದೆ. ಜತೆಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೋರ್ವ ಕಾರ್ಮಿಕ ದಿಲೀಪ್ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬುಧವಾರ ಸಂಜೆ

ಮೆಲ್ಕಾರ್: ಬುಡ ಸಮೇತ ನೆಲಕ್ಕುರುಳಿದ ಬೃಹತ್ ಗಾತ್ರದ ಮರ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20 ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ Read More »

ಕರಾವಳಿ

ನಾಳೆಯಿಂದ ಲೋಕಾಯುಕ್ತರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್.20. ಲೋಕಾಯುಕ್ತ ನ್ಯಾಯಾಧೀಶರಾದ ನ್ಯಾ. ಪಿ. ವಿಶ್ವನಾಥ ಶೆಟ್ಟಿ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 21 ರಂದು ರಾತ್ರಿ 9 ಗಂಟೆಗೆ ಮಂಗಳೂರು ಸಕ್ರ್ಯೂಟ್ ಹೌಸ್ ಗೆ ಆಗಮಿಸಿ, ವಾಸ್ತವ್ಯ, ಜೂನ್ 22 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ, ಅಂಗನವಾಡಿ ಕೇಂದ್ರ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 6.30 ಕ್ಕೆ ಮಂಗಳೂರಿನಿಂದ

ನಾಳೆಯಿಂದ ಲೋಕಾಯುಕ್ತರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ

ನಾಳೆ ವಿ.ವಿ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್20. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2018-19ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜೂನ್ 21 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ, ಮಂಗಳಗಂಗೋತ್ರಿಯ ಆಡಳಿತ ಸೌಧದ ಹೊಸ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ.

ನಾಳೆ ವಿ.ವಿ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ – ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಜೂನ್ 21 ರಿಂದ 28 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷಾ ಕೇಂದ್ರಗಳ 200ಮೀ. ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ – ನಿಷೇಧಾಜ್ಞೆ Read More »

ಕರಾವಳಿ

ಮಂಗಳೂರು: ಸ್ವಚ್ಛ ಸಂಭ್ರಮ-ರೇಡಿಯೋ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್.20. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಬಯಲು ಬಹಿರ್ದೆಸೆ ಮುಕ್ತಗೊಂಡ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ “ನೈರ್ಮಲ್ಯ ಮತ್ತು ಶುಚಿತ್ವದಡಿ” ನಿರಂತರತೆಯನ್ನು ಕಾಯ್ದುಕೊಳ್ಳಲು “ನಮ್ಮ ತ್ಯಾಜ್ಯ ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಜನಸಾಮಾನ್ಯರಲ್ಲಿ ಜನ ಜಾಗೃತಿ ಮೂಡಿಸಲು 2017-18 ನೇ ಸಾಲನ್ನು ಸ್ವಚ್ಛತಾ ವರ್ಷಾಚರಣೆಯನ್ನಾಗಿ ಆಚರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆ/ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ/ಮಾಹಿತಿ ನೀಡಲು “ಸ್ವಚ್ಛ ಸಂಭ್ರಮ” ರೇಡಿಯೋ ಕಾರ್ಯಕ್ರಮವನ್ನು 2018 ರ ಜನವರಿ

ಮಂಗಳೂರು: ಸ್ವಚ್ಛ ಸಂಭ್ರಮ-ರೇಡಿಯೋ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಿದೆ.ಪ್ರಥಮ ಚಾವಡಿ ಸನ್ಮಾನ ಜೂನ್ 23 ರಂದು ನಡೆಯಲಿದ್ದು ತುಳು ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ಮೇರು ಕಲಾವಿದ ಶ್ರೀ ಲಕ್ಷ್ಮಣ ಕುಮಾರ್ ಮಲ್ಲೂರುರವರನ್ನು ಸನ್ಮಾನಿಸಲಾಗುವುದು. ಕಳೆದ 4 ದಶಕಗಳಿಂದ ತುಳುರಂಗಭೂಮಿಯಲ್ಲಿ ನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ

ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ Read More »

ಕರಾವಳಿ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. 2018-19 ನೇ ಸಾಲಿನ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಸಹಾಯಧನ ಮಂಜೂರಾತಿಗಾಗಿ 50 ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಗೋಶಾಲೆಯವರು ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಮಂಗಳೂರು ಕಛೇರಿಯಲ್ಲಿ ಅರ್ಜಿ ಫಾರಂಗಳನ್ನು ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 20 ರೊಳಗೆ ಪ್ರಸ್ತಾವನೆಯನ್ನು ಖುದ್ದಾಗಿ ಸಲ್ಲಿಸಬೇಕು.   ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಆಡಳಿತ), ಪಶುಪಾಲನಾ

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top