ಕರಾವಳಿ

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂನ್.11. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಭಾನುವಾರದಂದು ಬಂಟ್ವಾಳದ ಶಂಭೂರು ಸಮೀಪ ನದಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಸಮೀಪದ ಪಿಲಿಗೂಡು ನಿವಾಸಿ ರಮೇಶ್ ಗೌಡ (45) ಎಂದು ಗುರುತಿಸಲಾಗಿದೆ. ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದ ರಮೇಶ್ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಭಾನುವಾರದಂದು ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ಸಮೀಪ ಮೃತದೇಹಚು ದೊರೆತಿದ್ದು, ವಿಷಯ ತಿಳಿದ ಬಂಟ್ವಾಳ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ Read More »

ಕರಾವಳಿ

ಕೊಯಿಲ: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಡೆಂಗ್ಯೂ ಜ್ವರಕ್ಕೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಇಲ್ಲಿನ ಕೊಯಿಲದಲ್ಲಿ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕೊಯಿಲ ಗ್ರಾಮದ ಏಣಿತಡ್ಕ ನಿವಾಸಿ ಶಿವರಾಮ ನಾಯ್ಕ ಎಂಬವರ ಪತ್ನಿ ಅಶ್ವಿತಾ(27) ಎಂದು ಗುರುತಿಸಲಾಗಿದೆ. ಇವರಿಗೆ ಬುಧವಾರದಂದು ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯವಾಗಿ ಚಿಕಿತ್ಸೆ ಪಡೆದು ಗುಣಮುಖರಾಗದ ಕಾರಣ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಲ್ಲಿ ಡೆಂಗ್ಯೂ ಜ್ವರ ಪತ್ತೆಯಾಗಿರುವುದಲ್ಲದೆ, ಜ್ವರದ ತೀವ್ರತೆ ಹೆಚ್ಚಾಯಿತು. ಬಳಿಕ ಅವರನ್ನು ಶುಕ್ರವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ

ಕೊಯಿಲ: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ Read More »

ಕರಾವಳಿ

ಇಚಿಲಂಪಾಡಿ: ರಸ್ತೆ ಬದಿಯ ತೋಡಿಗೆ ಇಳಿದ ಲಾರಿ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ತೋಡಿಗೆ ಬಿದ್ದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಯರಡ್ಕ ಕ್ರಾಸ್ ಬಳಿ ಭಾನುವಾರದಂದು ನಡೆದಿದೆ. ನೆಲ್ಯಾಡಿಯಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದ 709 ಲಾರಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗಿಳಿದಿದ್ದು, ಲಾರಿಯಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ತೋಡಿಗೆ ನಿರ್ಮಿಸಲಾಗಿದ್ದ ತಡೆಗೋಡೆಯು ಕಳಪೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಕಾರೊಂದು ಢಿಕ್ಕಿ ಹೊಡೆದುದರಿಂದಾಗಿ ತಡೆಗೋಡೆ ಕುಸಿದಿತ್ತು ಎನ್ನಲಾಗಿದೆ. ಇಚಿಲಂಪಾಡಿ ರಸ್ತೆಯಲ್ಲಿನ ಕಾಮಗಾರಿಯು

ಇಚಿಲಂಪಾಡಿ: ರಸ್ತೆ ಬದಿಯ ತೋಡಿಗೆ ಇಳಿದ ಲಾರಿ Read More »

ಕರಾವಳಿ

ಬೊಳುವಾರು: ಕಾರು ಢಿಕ್ಕಿ ► ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.10. ಕಾರೊಂದು ಢಿಕ್ಕಿಯಾದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಬೊಳುವಾರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಸುಬ್ರಹ್ಮಣ್ಯದ ಮಹಮ್ಮಾಯಿ ಹೊಟೇಲ್‌ನಲ್ಲಿ ಸೂಪರ್ ವೈಸರ್ ಆಗಿದ್ದ ಉರ್ಲಾಂಡಿ ನಿವಾಸಿ ದಿ.ವಾಸುದೇವ ಹೆಗ್ಡೆ ಎಂಬವರ ಪುತ್ರ ಪ್ರಶಾಂತ್ ಹೆಗ್ಡೆ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಜೆ ಇದ್ದ ಕಾರಣ ಶನಿವಾರ ರಾತ್ರಿ ನಡೆದುಕೊಂಡು ಮನೆಯ ಕಡೆಗೆ ತೆರಳುತ್ತಿದ್ದಾಗ ಬೊಳುವಾರಿನ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಬಳಿ ಕಾರು ಢಿಕ್ಕಿಯಾಗಿ ಈ ದುರ್ಘಟನೆ

ಬೊಳುವಾರು: ಕಾರು ಢಿಕ್ಕಿ ► ಪಾದಚಾರಿ ಮೃತ್ಯು Read More »

ಕರಾವಳಿ

ಮಾಣಿ ಬಸ್ – ಬೈಕ್ ಢಿಕ್ಕಿ ► ಗಾಯಾಳು ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.10. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಅಪಘಾತವಾಗಿತ್ತು. ಈ ಸಂದರ್ಭದಲ್ಲಿ ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ರನ್ನು ಮಂಗಳೂರಿನ

ಮಾಣಿ ಬಸ್ – ಬೈಕ್ ಢಿಕ್ಕಿ ► ಗಾಯಾಳು ಸವಾರ ಮೃತ್ಯು Read More »

ಕರಾವಳಿ

ಕರಾವಳಿಯಲ್ಲಿ ಮಹಾ’ಮಳೆ’ ► ಕಾರು ಚರಂಡಿಗಿಳಿದು ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.09. ಕಾರೊಂದು ಚರಂಡಿಗೆ ಬಿದ್ದುದರಿಂದಾಗಿ ವೃದ್ಧ ಮಹಿಳೆಯೋರ್ವರು ಮೃತಪಟ್ಟ ಘಟನೆ ಮುಲ್ಕಿ ಸಮೀಪದ ಕೊಲ್ನಾಡು ಎಂಬಲ್ಲಿ ಶನಿವಾರದಂದು ನಡೆದಿದೆ. ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆ ಸುರಿಯುತ್ತಿರುವುದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಪ್ಪನಾಡು ನಿವಾಸಿ ಅಪ್ಪಿ ಶೇರಿಗಾರ್ತಿ(83) ಮೃತಪಟ್ಟಿದ್ದು, ಚಾಲಕ ಸೇರಿದಂತೆ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಉತ್ತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಮಹಾ’ಮಳೆ’ ► ಕಾರು ಚರಂಡಿಗಿಳಿದು ವೃದ್ಧೆ ಮೃತ್ಯು Read More »

ಕರಾವಳಿ

ಬೆಳ್ತಂಗಡಿ: ನದಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.09. ಮಹಿಳೆಯೋರ್ವರು ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಶನಿವಾರದಂದು ನಡೆದಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ರೇವತಿ(50) ಎಂದು ಗುರುತಿಸಲಾಗಿದೆ. ಕಳೆದೆರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ತುಳುಕುತ್ತಿದ್ದು, ಮಹಿಳೆಯು ನದಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ವೇಣೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ನದಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ► ಯುವತಿಯಿಂದ ಕಡಬ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.08. ಮದುವೆಯಾಗುವುದಾಗಿ ಮಾತುಕತೆ ನಡೆಸಿ ಕೊನೆಗೆ ಮದುವೆಯಾಗುವುದಿಲ್ಲವೆಂದು ವಂಚಿಸಿದ ಬಗ್ಗೆ ಯುವತಿಯೋರ್ವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪುತ್ತೂರು ತಾಲೂಕಿನ ಮುಂಡೂರು ರಾಘವೇಂದ್ರ ನಿಲಯ ನಿವಾಸಿ ಶೀನ ನಾಯ್ಕ್ ಎಂಬವರ ಪುತ್ರ ದಿವಾಕರ ನಾಯ್ಕ್ ಎಂಬಾತನಿಗೆ 2017 ಮಾರ್ಚ್ ನಲ್ಲಿ ಕಡಬ ಠಾಣಾ ವ್ಯಾಪ್ತಿಯ ಯುವತಿಯೊಂದಿಗೆ ಮದುವೆಯಾಗುವುದಾಗಿ ಮಾತುಕತೆ ನಡೆದಿತ್ತೆನ್ನಲಾಗಿದೆ. 2018 ರ ಮೇ ತಿಂಗಳಲ್ಲಿ ವಿದೇಶದಿಂದ ಬಂದ ದಿವಾಕರ ನಾಯ್ಕ್ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದು, ಈ ಬಗ್ಗೆ

ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ► ಯುವತಿಯಿಂದ ಕಡಬ ಪೊಲೀಸರಿಗೆ ದೂರು Read More »

ಕರಾವಳಿ

ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ► ಆತ್ಮಹತ್ಯೆಗೆ ಮುನ್ನ ಸ್ನೇಹಿತರಿಗೆ ವಾಟ್ಸ್ಅಪ್ ನಲ್ಲಿ ಕಳುಹಿಸಿದ ಸಂದೇಶವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಉಡುಪಿ, ಜೂ.09. ವೈಯಕ್ತಿಕ ವಿಚಾರಕ್ಕೆ ಮನನೊಂದ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡೆಕಾರ್ ಗ್ರಾಪಂ ಸದಸ್ಯ, ಮಲ್ಪೆ ಕೊಡವೂರು ಲಕ್ಷ್ಮೀನಗರ ನಿವಾಸಿ ರಾಕೇಶ್(31) ಎಂದು ಗುರುತಿಸಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಮನನೊಂದಿದ್ದ ರಾಕೇಶ್ ‘ಜೀವನದಲ್ಲಿ ನೊಂದಿದ್ದು, ನನ್ನ ಸಾವಿಗೆ ನಾನೇ ಕಾರಣ’ ಎಂದು ಆತ್ಮಹತ್ಯೆಗೆ ಮುನ್ನ ವಾಟ್ಸ್ಅಪ್ ನಲ್ಲಿ ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದರು. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ► ಆತ್ಮಹತ್ಯೆಗೆ ಮುನ್ನ ಸ್ನೇಹಿತರಿಗೆ ವಾಟ್ಸ್ಅಪ್ ನಲ್ಲಿ ಕಳುಹಿಸಿದ ಸಂದೇಶವೇನು ಗೊತ್ತೇ? Read More »

ಕರಾವಳಿ

ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರೆಗುರುಳಿದ ಮರ ► ನಾಲ್ವರಿಗೆ ಗಾಯ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.09. ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂಗಳಾದೇವಿ ದೇವಸ್ಥಾನದ ಮುಂಭಾಗದ ಮರದ ರೆಂಬೆಯೊಂದು ಮುರಿದು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಜೆಪ್ಪು ನಿವಾಸಿ ನವೀನ್(45), ಮಾರ್ನಮಿಕಟ್ಟೆ ನಿವಾಸಿಗಳಾದ ಸುರೇಖಾ ಶೆಟ್ಟಿ(53) ಹಾಗೂ ತೇಜಸ್ವಿನಿ(20), ನಂದಿಗುಡ್ಡೆ ನಿವಾಸಿ ಪ್ರಮೀಳಾ(49), ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಶುಕ್ರವಾರ ಸಂಜೆ ಬೀಸಿದ ಭಾರೀ ಗಾಳಿಗೆ ದೇವಸ್ಥಾನದ ಎದುರಿನ ಅಶೋಕ ಮರದ ರೆಂಬೆಯೊಂದು ತುಂಡಾಗಿ ಬಿದ್ದು ಈ

ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ಧರೆಗುರುಳಿದ ಮರ ► ನಾಲ್ವರಿಗೆ ಗಾಯ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ
Scroll to Top