ಕರಾವಳಿ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿಗೆ ಚಾಲನೆ ► ಬಿ.ಎ., ಬಿ.ಕಾಂ., ಬಿ.ಬಿ.ಎ. ತರಗತಿಗಳಿಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.26. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾನಿಲಯದ ಘಟಕವು ನೆಲ್ಯಾಡಿಯಲ್ಲಿ ಆರಂಭಗೊಳ್ಳಲಿದ್ದು, ಆ ಪ್ರಯುಕ್ತ ಶುಕ್ರವಾರದಂದು ಸಂತಜಾರ್ಜ್ ವಿದ್ಯಾಸಂಸ್ಥೆ ಆವರಣದಲ್ಲಿ ಕಾಲೇಜಿನ ಕಚೇರಿ ಉದ್ಘಾಟಿಸಿ ದಾಖಲಾತಿಗೆ ಚಾಲನೆ ನೀಡಲಾಯಿತು. ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ವಿ.ವಿ.ಉಪಕುಲಪತಿ ಪ್ರೊ.ಭೈರಪ್ಪ, ಮಂಗಳೂರು ವಿಶ್ವವಿದ್ಯಾನಿಲಯವು ದೇಶದಲ್ಲಿಯೇ 31ನೇ ಸ್ಥಾನವನ್ನು ಪಡೆದುಕೊಂಡಿದೆ. ರಾಜ್ಯ ಸರಕಾರದ ನೆರವಿನೊಂದಿಗೆ ಉಡುಪಿಯಲ್ಲಿ 141 ಕೋಟಿ ರೂ.ವೆಚ್ಚದಲ್ಲಿ ವಿಜ್ಞಾನ ಸಂಶೋಧನಾ ಕೇಂದ್ರವು ಆರಂಭಗೊಳ್ಳಲಿದ್ದು ಇದು ರಾಷ್ಟ್ರದಲ್ಲೇ ಪ್ರಪ್ರಥಮ ಪ್ರಯತ್ನವಾಗಿದೆ. ನೆಲ್ಯಾಡಿಯಲ್ಲಿ ಕಾಲೇಜು ಆರಂಭಿಸಲು […]

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿಗೆ ಚಾಲನೆ ► ಬಿ.ಎ., ಬಿ.ಕಾಂ., ಬಿ.ಬಿ.ಎ. ತರಗತಿಗಳಿಗೆ ದಾಖಲಾತಿ ಆರಂಭ Read More »

ಕರಾವಳಿ

ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ಹಿನ್ನೆಲೆ ► ಇಂದು(ಮೇ.26) ಪುತ್ತೂರು, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.26. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಟಿ.ಎಲ್. ಮತ್ತು ಎಸ್.ಎಸ್. ವಿಭಾಗ ಮಂಗಳೂರು ವತಿಯಿಂದ ಹಾಲಿ 110 ಕೆವಿ ನೆಟ್ಲಮುಡ್ನೂರು – ಪುತ್ತೂರು ಏಕಮಾರ್ಗವನ್ನು ದ್ವಿಮಾರ್ಗ ರಚಿಸಿ 110 ಕೆವಿ ನೆಟ್ಲಮುಡ್ನೂರು – ಪುತ್ತೂರು ಮಾರ್ಗದಿಂದ 110/11 ಕೆವಿ ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಮೇ 26 ಶನಿವಾರ ಬೆಳಿಗ್ಗೆ 08 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು. ಆದುದರಿಂದ 110/11 ಕೆವಿ ಪುತ್ತೂರು

ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ಹಿನ್ನೆಲೆ ► ಇಂದು(ಮೇ.26) ಪುತ್ತೂರು, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಕ್ಕಳ ಅಪಹರಣ ಸುದ್ದಿ ಶುದ್ಧ ಸುಳ್ಳು ► ಯಾರೂ ಆತಂಕಪಡುವ ಅಗತ್ಯವಿಲ್ಲ: ಬೆಳ್ಳಾರೆ ಠಾಣಾ ಸಬ್ ಇನ್ಸ್‌ಪೆಕ್ಟರ್ ಈರಯ್ಯ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.25. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸ್ಅಪ್ ಗಳಲ್ಲಿ ಹರಿದಾಡುತ್ತಿರುವ ಮಕ್ಕಳ ಅಪಹರಣದ ಬಗೆಗಿನ ವೀಡಿಯೋ ಕ್ಲಿಪ್ ಗಳು ಹಾಗೂ ಸಂದೇಶಗಳು ಸುಳ್ಳಾಗಿದ್ದು ಅನಪೇಕ್ಷಣೀಯವಾಗಿರುತ್ತದೆ. ಆದುದರಿಂದ ಇಂತಹ ಪ್ರಚೋದನಕಾರಿ ಉಹಾಪೋಹಗಳಿಗೆ ಹಾಗೂ ಸಂದೇಶಗಳಿಗೆ ಕಿವಿಗೊಡದೆ ಮತ್ತು ತಮ್ಮ ಗ್ರಾಮಗಳಲ್ಲಿ ಅಪರಿಚಿತ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ಅವರ ಮೇಲೆ ಹಲ್ಲೆ ಮಾಡುವುದಾಗಲಿ, ಮತ್ಯಾವುದೇ ಕೃತ್ಯಕ್ಕೆ ಮುಂದಾಗದೇ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ 08257-271995 ಅಥವಾ 9843053901ಕ್ಕೆ ಕರೆ ಮಾಡುವ ಮೂಲಕ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಕ್ಕಳ ಅಪಹರಣ ಸುದ್ದಿ ಶುದ್ಧ ಸುಳ್ಳು ► ಯಾರೂ ಆತಂಕಪಡುವ ಅಗತ್ಯವಿಲ್ಲ: ಬೆಳ್ಳಾರೆ ಠಾಣಾ ಸಬ್ ಇನ್ಸ್‌ಪೆಕ್ಟರ್ ಈರಯ್ಯ Read More »

ಕರಾವಳಿ

ಕುಂತೂರು: ಶಾಲೆಗೆಂದು ತೆರಳಿ ನಾಪತ್ತೆಯಾಗಿದ್ದ ಬಾಲಕ ಬೆಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಶಾಲೆಗೆಂದು ತೆರಳಿ ಮನೆಯಿಂದ ತೆರಳಿ ಶಾಲೆಗೂ ತೆರಳದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ ಬಾಲಕ ಶುಕ್ರವಾರದಂದು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಜಯಂತಿ ಎಂಬವರ ಪುತ್ರ, ಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಬುಧವಾರದಂದು ಶಾಲೆಗೆಂದು ತೆರಳಿ ಆ ಬಳಿಕ ನಾಪತ್ತೆಯಾಗಿದ್ದನೆನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಕಾರಣ ಆತನ ತಾಯಿ ಕಡಬ ಠಾಣೆಗೆ ದೂರು ನೀಡಿದ್ದರು. ಶುಕ್ರವಾರದಂದು ಈತನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ

ಕುಂತೂರು: ಶಾಲೆಗೆಂದು ತೆರಳಿ ನಾಪತ್ತೆಯಾಗಿದ್ದ ಬಾಲಕ ಬೆಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಘಟ್ಟ ಪ್ರದೇಶದಲ್ಲಿ ಮಳೆ‌ ಸುರಿದ ಹಿನ್ನೆಲೆ ► ಕಡಬ – ಎಡಮಂಗಲ ಸಂಪರ್ಕ ರಸ್ತೆಯ ಪಾಲೋಳಿ ತಾತ್ಕಾಲಿಕ ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಇದರಿಂದಾಗಿ ಕಡಬ – ಎಡಮಂಗಲವನ್ನು ಸಂಪರ್ಕಿಸುವ ಪಿಜಕ್ಕಳ ಪಾಲೋಳಿ ತಾತ್ಕಾಲಿಕ ಸೇತುವೆಯು ಮುಳುಗಡೆಗೊಂಡಿದ್ದು, ಸಂಚಾರಕ್ಕೆ ಅಡಚಣೆಯುಂಟಾಗಿದೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಸಾರ್ವಜನಿಕರಿಂದಲೇ ನಿರ್ಮಾಣಗೊಂಡು ಬೇಸಿಗೆಯಲ್ಲಿ ಮಾತ್ರ ಸಂಚಾರಕ್ಕೆ ಮುಕ್ತವಾಗಿದ್ದ ಪಾಲೋಳಿ ಸೇತುವೆಯನ್ನು ಸಿಮೆಂಟ್ ಪೈಪ್ ಗಳನ್ನು ಬಳಸಿ ಊರವರೇ ಎಂಟು ಲಕ್ಷ ರೂ. ವೆಚ್ಚದಲ್ಲಿ ಶ್ರಮದಾನದ ಮೂಲಕ ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಮಳೆಗಾಲದಲ್ಲಿ ಮುಳುಗಡೆಗೊಂಡು

ಘಟ್ಟ ಪ್ರದೇಶದಲ್ಲಿ ಮಳೆ‌ ಸುರಿದ ಹಿನ್ನೆಲೆ ► ಕಡಬ – ಎಡಮಂಗಲ ಸಂಪರ್ಕ ರಸ್ತೆಯ ಪಾಲೋಳಿ ತಾತ್ಕಾಲಿಕ ಸೇತುವೆ ಮುಳುಗಡೆ Read More »

ಕರಾವಳಿ

ವಿಶ್ವಾಸಮತ ಯಾಚನೆ ಪ್ರಕ್ರಿಯೆಗೆ ಕ್ಷಣ ಗಣನೆ ► ಬಹುಮತ ಸಾಬೀತುಪಡಿಸುತ್ತಾ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ವಿಶ್ವಾಸಮತ ಯಾಚನೆ ಪ್ರಸ್ತಾಪವನ್ನು ನೂತನ ಮುಖ್ಯಮಂತ್ರಿ ಮಂಡಿಸಿದ್ದು, ವಿಶ್ವಾಸಮತ ಪ್ರಕ್ರಿಯೆ ಆರಂಭಗೊಂಡಿದೆ‌. ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಜನರ ಕಷ್ಟಗಳನ್ನು ತುಂಬಾ ಹತ್ತಿರದಿಂದ ನಾನು ನೋಡಿದ್ದು, ಯಾವುದೇ ಸಮಾಜವೂ ಪ್ರತಿಭಟನೆ ಮಾಡಲು‌ಅವಕಾಶ ನೀಡುವುದಿಲ್ಲ. ನಾನಿನ್ನೂ ಅಧಿಕೃತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಲ್ಲ. ಬಹುಮತ ಸಾಬೀತುಪಡಿಸಿದ ನಂತರ ನಾನು ಎಲ್ಲಾ ಯೋಜನೆಗಳನ್ನು ಜಾರಿ ಮಾಡುತ್ತೇನೆ ಎಂದರು. ಈ ನಡುವೆ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕೆ.ಆರ್.ರಮೇಶ್ ಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಮುಖ್ಯಮಂತ್ರಿ

ವಿಶ್ವಾಸಮತ ಯಾಚನೆ ಪ್ರಕ್ರಿಯೆಗೆ ಕ್ಷಣ ಗಣನೆ ► ಬಹುಮತ ಸಾಬೀತುಪಡಿಸುತ್ತಾ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರ..? Read More »

ಕರಾವಳಿ

ಇಚಿಲಂಪಾಡಿ: ಪರಿಸರದಲ್ಲಿ ಕಾಡಾನೆ ಹಾವಳಿ ► ಕೆಲವೆಡೆ ಕೃಷಿ ನಾಶ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಮೇ.25. ಇಲ್ಲಿನ ಇಚಿಲಂಪಾಡಿ ಪರಿಸರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸ್ತಳೀಯರನ್ನು ಭಯಭೀತರನ್ನಾಗಿಸಿದೆ. ಪರಿಸರದಲ್ಲಿ ಕಾಡಾನೆಗಳು ಹಲವರ ಕೃಷಿ ತೋಟಗಳಿಗೆ ದಾಳಿ ಮಾಡಿ ಕೃಷಿ ಹಾನಿಗೊಳಿಸಿದೆಯೆನ್ನಲಾಗಿದೆ. ಇಚ್ಲಂಪಾಡಿ ನಿವಾಸಿ ಆನಂದ ಪೂಜಾರಿ ಎಂಬವರ ತೋಟಕ್ಕೆ ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆ ಲಗ್ಗೆ ಇಡುತ್ತಿರುವ ಕಾಡಾನೆಗಳು ಬಾಳೆ, ಅಡಿಕೆ ಕೃಷಿಗಳನ್ನು ಹಾನಿಗೊಳಿಸಿದೆ. ರಾತ್ರಿ ವೇಳೆ ಆನೆ ತೋಟದಲ್ಲಿಯೇ ಇರುವುದರಿಂದ ಅಸುಪಾಸಿನ ಜನರು ಭಯಭೀತರಾಗಿದ್ದಾರೆ. ಈ ಬಗ್ಗೆ

ಇಚಿಲಂಪಾಡಿ: ಪರಿಸರದಲ್ಲಿ ಕಾಡಾನೆ ಹಾವಳಿ ► ಕೆಲವೆಡೆ ಕೃಷಿ ನಾಶ Read More »

ಕರಾವಳಿ

ನರಿಮೊಗರು: ರೈಲ್ವೇ ಮೇಲ್ಸೇತುವೆಗೆ ಆ್ಯಕ್ಟಿವಾ ಢಿಕ್ಕಿ ► ಅಂಚೆ ಪಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.25. ರೈಲ್ವೇ ಮೇಲ್ಸೇತುವೆಗೆ ದ್ವಿಚಕ್ರ ವಾಹನವೊಂದು ಢಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಗಡಿಪಿಲ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಸವಾರನನ್ನು ಪುತ್ತೂರಿನ ಅಂಚೆಪಾಲಕ ಕಾಣಿಯೂರು ಮಠತ್ತಾರು ಚೋಮ ಎಂಬವರ ಪುತ್ರ ತನಿಯ ಮಾಯಿಲ(55) ಎಂದು ಗುರುತಿಸಲಾಗಿದೆ. ಎಂದಿನಂತೆ ಕರ್ತವ್ಯ ಮುಗಿಸಿ ತನ್ನ ಮನೆಗೆ ತೆರಳುತ್ತಿದ್ದಾಗ ಗಡಿಪಿಲ ಸಮೀಪದ ರೈಲ್ವೇ ಮೇಲ್ಸೇತುವೆಗೆ ಇವರು ಚಲಾಯಿಸುತ್ತಿದ್ದ ಆ್ಯಕ್ಟಿವಾ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಇವರನ್ನು

ನರಿಮೊಗರು: ರೈಲ್ವೇ ಮೇಲ್ಸೇತುವೆಗೆ ಆ್ಯಕ್ಟಿವಾ ಢಿಕ್ಕಿ ► ಅಂಚೆ ಪಾಲಕ ಮೃತ್ಯು Read More »

ಕರಾವಳಿ

ಜೂ.01 ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.24. ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 1986 ಕರ್ನಾಟಕ ಸರ್ಕಾರದ ಅಧಿಸೂಚನೆಯ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು

ಜೂ.01 ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ Read More »

ಕರಾವಳಿ

ಉಡುಪಿ: ಬಾವಲಿ ಜ್ವರದ ಬಗ್ಗೆ ಆತಂಕದ ಮಾತು ಕೇಳಿಬರುತ್ತಿರುವ ಹಿನ್ನೆಲೆ ► ಸಾವಿರಾರು ಬಾವಲಿಗಳ ನಡುವೆ ವಾಸಿಸುತ್ತಿರುವ ಕುಟುಂಬ ನಿಫಾಃ ಭೀತಿಯಲ್ಲಿ

(ನ್ಯೂಸ್ ಕಡಬ) newskadaba.com ಉಡುಪಿ, ಮೇ.24. ಕೇರಳ ವೈದ್ಯಲೋಕವನ್ನೇ ಬೆಚ್ಚಿಬೀಳಿಸಿದ್ದ ‘ನಿಪಾಃ’ ವೈರಸ್ ಬಗ್ಗೆ ಎಲ್ಲೆಲ್ಲೂ ಆತಂಕದ ಮಾತು ಕೇಳಿ ಬರುತ್ತಿರುವುದರ ನಡುವೆ ಉಡುಪಿಯಲ್ಲಿ ಸಾವಿರಾರು ಬಾವಲಿಗಳ ಮಧ್ಯೆ ವಾಸವಿರುವ ಕುಟುಂಬಗಳ ಸದಸ್ಯರು ಇದೀಗ ಬಾವಲಿ ಜ್ವರದ ಬಗ್ಗೆ ಭಯ ಭೀತರಾಗಿದ್ದಾರೆ. ಉಡುಪಿಯ ಕಾಪು ಪೇಟೆಯಲ್ಲಿನ ವಿಶ್ವನಾಥ ಶೆಣೈ ಸಂಕೀರ್ಣದ ಹಿಂಬದಿಯಲ್ಲಿರುವ ಹಟ್ಟಿಯಲ್ಲಿ ಸುಮಾರು ಇಪ್ಪತ್ತೈದು ವರ್ಷಗಳಿಂದ ಸಾವಿರಾರು ಬಾವಲಿಗಳು ವಾಸವಾಗಿವೆ. ಇದರ ಪಕ್ಕದಲ್ಲೇ ಹಲವು‌ ಕುಟುಂಬಗಳು ಹಿಂದಿನಿಂದಲೂ ಯಾವುದೇ ತೊಂದರೆ ಇಲ್ಲದೆ ವಾಸಿಸುತ್ತಿವೆ. ಆದರೆ ಇದೀಗ

ಉಡುಪಿ: ಬಾವಲಿ ಜ್ವರದ ಬಗ್ಗೆ ಆತಂಕದ ಮಾತು ಕೇಳಿಬರುತ್ತಿರುವ ಹಿನ್ನೆಲೆ ► ಸಾವಿರಾರು ಬಾವಲಿಗಳ ನಡುವೆ ವಾಸಿಸುತ್ತಿರುವ ಕುಟುಂಬ ನಿಫಾಃ ಭೀತಿಯಲ್ಲಿ Read More »

ಕರಾವಳಿ
Scroll to Top